ಬಳ್ಳಾರಿ |ಎಸ್‌ಸಿ/ಎಸ್‌ಟಿ ಅನುದಾನ ದುರ್ಬಳಕೆ ಅಕ್ಷಮ್ಯ: ಭೀಮ್ ಆರ್ಮಿ

Date:

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಅನುದಾನವನ್ನು ಗ್ಯಾರಂಟಿ ಯೋಜನೆಗೆ ಬಳಕೆ ಮಾಡುತ್ತಿರುವ ಸರ್ಕಾರದ ನಡೆ ಖಂಡನೀಯವೆಂದು ಭೀಮ್ ಆರ್ಮಿ (ಭಾರತ ಏಕಾತ್ ಮಿಷನ್) ವಿದ್ಯಾರ್ಥಿ ಘಟಕದ ರಾಜ್ಯ ಅಧ್ಯಕ್ಷ ರಘು ಸಿ ಬಳ್ಳಾರಿ ಹೇಳಿದ್ದಾರೆ.

- Advertisement -

ಈ ಕುರಿತು ಬಳ್ಳಾರಿಯಲ್ಲಿ ಮಾತಾಡಿದ ಅವರು, “ರಾಜ್ಯ ಕಾಂಗ್ರೆಸ್ ಸರ್ಕಾರ ತಮ್ಮ ಚುನಾವಣಾ ಪ್ರಣಾಳಿಕೆಯಲ್ಲಿ ಜನತೆಗೆ ನೀಡಿರುವ ಐದು ಗ್ಯಾರಂಟಿ ಯೋಜನೆಗಳನ್ನು ಅನುಷ್ಟಾನಗೊಳಿಸಲು ಎಸ್‌ಸಿ/ಎಸ್‌ಟಿ ಸಮುದಾಯದ ಅಭಿವ್ರದ್ದಿಗಾಗಿ ಮೀಸಲಿರುವ ಗಿರಿಜನ ಉಪಯೋಜನೆಯ ಎಸ್‌ಇಎಸ್‌ಪಿ/ಟಿಎಸ್‌ಪಿ ಅನುದಾನದಲ್ಲಿ 11,000 ಕೋಟಿ ಮೊತ್ತವನ್ನು ಬಳಸಿಕೊಳ್ಳಲು ಮುಂದಾಗಿರುವುದು ದುರಂತ” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

SIRನ ಒಳನೋಟ: ಸೇರ್ಪಡೆಗಿಂತ ಹೊರಗಿಡುವುದಕ್ಕೆ ಆದ್ಯತೆ ನೀಡಿದಾಗ ಏನಾಗುತ್ತದೆ?

SIR ಕರಡು ಪಟ್ಟಿಯಲ್ಲಿರುವ ಮತದಾರರ ಸಂಖ್ಯೆಯು ನೈಜ ವಯಸ್ಕ ಜನಸಂಖ್ಯೆಯ ಅಂದಾಜಿಗಿಂತ ಅಷ್ಟೊಂದು ದೊಡ್ಡ ಪ್ರಮಾಣದಲ್ಲಿ ಕಡಿಮೆಯಾಗಿರುವುದಕ್ಕೆ ಕಾರಣವೇನು? ಈ ಕಾಣೆಯಾದ ಮತದಾರರೆಲ್ಲ ಯಾರು? ಅವರು ಮತದಾರರ ಪಟ್ಟಿಯಲ್ಲಿ ಬಿಟ್ಟು ಹೋಗಿದ್ದು ಹೇಗೆ?...

“ಲಳೆದ ತಿಂಗಳಲ್ಲಿ ಸರ್ಕಾರವೇ ಎಲ್ಲ ಸಚಿವರ ಸಭೆ ಕರೆದು ಎಸ್‌ಸಿ/ಎಸ್‌ಟಿ ಸಮುದಾಯದ ಅಭಿವ್ರದ್ದಿಗಾಗಿ ಮೀಸಲಿರುವ ಗಿರಿಜನ ಉಪಯೋಜನೆಯ ಎಸ್‌ಇಎಸ್‌ಪಿ/ಟಿಎಸ್‌ಪಿ ಅನುದಾನ ಕೇವಲ ದಲಿತ ಜನಾಂಗದ ಅಭಿವ್ರದ್ದಿಗೆ ಮಾತ್ರ ಮೀಸಲಾಗಬೇಕು. ಬೇರೆ ಯೋಜನೆಗಳಿಗೆ ಬಳಕೆಯಾಗಬಾರದೆಂದು 7ಡಿ ಕಾಯ್ದೆಯನ್ನು ಜಾರಿಗೊಳಿಸಿ ಆದೇಶ ಹೊರಡಿಸಿಸಡ. ಆದರೆ, ಆದೇಶ ಹೊರಡಿಸಿದ ತಿಂಗಳಲ್ಲಿಯೇ ತನ್ನದೇ ಆದೇಶವನ್ನು ಗಾಳಿಗೆ ತೂರಿ ದಲಿತರ ಹಣವನ್ನು ದುರುಪಯೋಗಕ್ಕೆ ಸರ್ಕಾರ ಮುಂದಾಗಿರುವುದು ಸರಿಯಲ್ಲ” ಎಂದು ಕಿಡಿಕಾರಿದ್ದಾರೆ.

“ಕಳೆದ 2018ರಲ್ಲಿಯೂ ಕೂಡಾ ಕಾಂಗ್ರೆಸ್ ರೈತರ ಸಾಲ ಮನ್ನಾ ಮಾಡಲು ಎಸ್‌ಇಎಸ್‌ಪಿ/ಟಿಎಸ್‌ಪಿ ಅನುದಾನದಲ್ಲಿ ಒಟ್ಟು 929.41 ಕೋಟಿ ರೂ. ಬಳಕೆ ಮಾಡಿಕೊಂಡಿದೆ. ಅದಲ್ಲದೇ, ಅದೇ 2018ರ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ರಾಜ್ಯದ ವಿವಿಧ ಕ್ಷೇತ್ರಗಳಲ್ಲಿ ರಾಜ್ಯಕೀಯ ಪರಸ್ಥಿತಿಗಳ ಬಗ್ಗೆ ಮಾಹಿತಿ ಕಲೆ ಹಾಕಲು ಪೂರಕ ಅಂದಾಜಿನಲ್ಲಿ 10 ಕೋಟಿ ಅನುದಾನವನ್ನು ಪೋಲೀಸ್ ಇಲಾಖೆಗೆ ವರ್ಗಾಯಿಸಿ ದಲಿತರ ಮೀಸಲು ಹಣವನ್ನ ದುರ್ಬಳಕೆ ಮಾಡಿಕೊಂಡಿದೆ. ಚುನಾವಣಾ ಕರ್ತವ್ಯಕ್ಕೆ ಪೋಲೀಸರನ್ನು ನಿಯೋಜಿಸುವದಕ್ಕಾಗಿ 10 ಕೋಟಿ ದಲಿತರ ಅನುದಾನವನ್ನು ದುರ್ಬಳಕೆ ಮಾಡಿಕೊಂಡು ದಲಿತರಿಗೆ ವಂಚಿಸಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಕೂಡಲೇ ರಾಜ್ಯ ಸರ್ಕಾರ ದಲಿತರ ಅನುದಾನವನ್ನು ಬೇರೆ ಯೋಜನೆಗಳಿಗೆ ಬಳಸುವದನ್ನು ನಿಲ್ಲಿಸಬೇಕು. ದಲಿತರ ಅಭಿವ್ರದ್ದಿಗೆ ಆಧ್ಯತೆ ನೀಡಬೇಕು. ಇಲ್ಲದೇ ಹೋದಲ್ಲಿ ಸರ್ಕಾರದ ವಿರುದ್ದ ರಾಜ್ಯದಾದ್ಯಂತ ಹೋರಾಟ ಮಾಡಲಾಗುವುದು” ಎಂದು ಎಚ್ಚರಿಕೆ ನೀಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ಪಶ್ಚಿಮ ಪದವೀಧರರ ಕ್ಷೇತ್ರ ಚುನಾವಣೆ: ಕಾಂಗ್ರೆಸ್ ಬೆಂಬಲಿಸಲು ಡಿವೈಎಫ್ಐ-ಎಸ್ಎಫ್ಐ ಕರೆ

"ಅಕ್ಟೋಬರ್ 23 ರಂದು ನಡೆಯಲಿರುವ ರಾಜ್ಯ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ...

ರಾಯಚೂರು | ವಿಬಿಜಿರಾಮ್‌ಜಿ ಯೋಜನೆಯಡಿ ಕೂಲಿಕಾರ್ಮಿಕರಿಗೆ ಕಡಿಮೆ ಕೂಲಿ ಪಾವತಿ ಆರೋಪ: ತಾಂತ್ರಿಕ ಅಧಿಕಾರಿಗಳ ಅಮಾನತಿಗೆ ಆಗ್ರಹ

ರಾಯಚೂರು ತಾಲೂಕಿನ ಬಿಜನಗೇರಾ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಿಬಿಜಿರಾಮ್‌ಜಿ ಯೋಜನೆಯಡಿ ಕೆಲಸ...

ವಿಜಯಪುರ | ಹೊರಗುತ್ತಿಗೆ ನೇಮಕಾತಿಯಲ್ಲಿ ವಿಕಲಚೇತನರಿಗೆ ಉದ್ಯೋಗ ನೀಡಿ: ವಿನೋದ ಖೇಡ

ಜಿಲ್ಲೆಯ ವಿವಿಧ ಸರ್ಕಾರಿ ಇಲಾಖೆಗಳಲ್ಲಿ ಹೊರಗುತ್ತಿಗೆ ಆಧಾರದಲ್ಲಿ ನಡೆಯುವ ನೇಮಕಾತಿ ಪ್ರಕ್ರಿಯೆಯಲ್ಲಿ...

ಬಾಗಲಕೋಟೆ | ಬಡವರ ಅನ್ನಕ್ಕೂ ಕನ್ನ! ಅಹಮದಾಬಾದ್‌ಗೆ ಅನ್ನಭಾಗ್ಯದ ಅಕ್ಕಿ ಸಾಗಾಟ; 34 ಟನ್ ಅಕ್ಕಿ ತುಂಬಿದ ಲಾರಿ ಜಪ್ತಿ

ಬಡವರು ಹಸಿವಿನಿಂದ ಬಳಲಬಾರದು, ಪ್ರತಿಯೊಂದು ಕುಟುಂಬಕ್ಕೂ ಆಹಾರ ಭದ್ರತೆ ದೊರೆಯಬೇಕು ಎಂಬ...