ಬಳ್ಳಾರಿ | ಹೆಚ್‌ಐವಿ ಪೀಡಿತ ಕುಟುಂಬಗಳ ಆರ್ಥಿಕ ನೆರವಿಗೆ ಸಮಾಜ ಸೇವಾ ಕಾರ್ಯಕರ್ತರ ವೇದಿಕೆ ಆಗ್ರಹ

Date:

ಕರ್ನಾಟಕದಲ್ಲಿರುವ ಲಕ್ಷಾಂತರ ಕುಟುಂಬಗಳು ಮಾರಕವಾದ ಹೆಚ್‌ಐವಿ ಕಾಯಿಲೆಯಿಂದ ನರಳುತ್ತಿದ್ದಾರೆ. ಅವರು ಮಾನಸಿಕವಾಗಿ ಕುಗ್ಗಿದ್ದಲ್ಲದೇ ಸಮಾಜಿಕ ಭಹಿಷ್ಕಾರಕ್ಕೆ ಒಳಗಾಗಿರುತ್ತಾರೆ. ಅಂತ ಕುಟುಂಬಗಳನ್ನು ಗುರುತುಸಿ ಸರಕಾರ ಆರ್ಥಿಕ ಸಹಾಯ ಧನ ಹಾಗೂ ಮಾಸಿಕ ವೇತನ ನಿಡಬೇಕು ಎಂದು ಸಮಾಜ ಸೇವಾ ಕಾರ್ಯಕರ್ತರ ವೇದಿಕೆ ಬಳ್ಳಾರಿ ಜಿಲ್ಲಾ ಘಟಕ ಆಗ್ರಹಿಸಿತು.

- Advertisement -

ಜಿಲ್ಲೆಯ ಕಂಪ್ಲಿಯಲ್ಲಿ ಹೆಚ್‌ಐವಿ ಪೀಡಿತ ಕುಟುಂಬಗಳಿಗೆ ಅರ್ಥಿಕ ಧನ ಸಹಾಯ ಹಾಗೂ ಮಾಸಿಕ ಪಿಂಚಣಿ ನೀಡಲು ಒತ್ತಾಯಿಸಿ ತಹಶೀಲ್ದಾರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

“ಅಸುರಕ್ಷಿತ ಲೈಂಗಿಕ ಸಂಪರ್ಕದಿಂದ ಹಾಗೂ ಬೇರೆಬೇರೆ ಕಾರಣಗಳಿಂದ ಹೆಚ್‌ಐವಿ ಎಂಬ ಮಾರಣಾಂತಿಕ ಕಾಯಿಲೆಗೆ ತುತ್ತಾಗಿರುವ ಕುಟುಂಬ ಹಾಗೂ ರೋಗಿಗಳನ್ನು ಗುರುತಿಸಿ ಸರಕಾರ ಆರ್ಥಿಕವಾಗಿ ಅವರ ಧನ ಸಹಾಯ ಮಾಡಬೇಕು. ಈಗಾಗಲೇ ಗೌಪ್ಯವಾಗಿ ಸರಕಾರ ಅಂತವರಿಗೆ ಔಷಧೋಪಚಾರ ಮಾಡುತ್ತಿದ್ದು, ಸರಕಾರಕ್ಕೆ ನಮ್ಮ ಸಂಘಟನೆಯಿಂದ ಅಭಿನಂದನೆಗಳು. ವಿಶೇಷ ಚೇತನರಿಗೆ, ವೃದ್ಯಾಪ್ಯರಿಗೆ, ವಿಧವೆಯರಿಗೆ ಮಾಸಿಕ ವೇತನ ನೀಡುವಂತೆ ಈ ಕಟುಂಬಗಳಿಗೂ ಮಾಸಿಕ ವೇತನ ನೀಡಬೇಕು” ಎಂದು ಆಗ್ರಹಿಸಿದರು.

“ಹೆಚ್ಐವಿ ಪೀಡಿತ ಸಂತ್ರಸ್ತರು ಸಮಾಜದಲ್ಲಿ ತಮ್ಮ ನೋವನ್ನು ಹೇಳಿಕೊಳ್ಳದೇ ಇದ್ದರೂ ಯಾವುದೋ ಕಾರಣದ ಮೂಲಕ ಸಮಾಜಕ್ಕೆ ಗೊತ್ತಾಗಿ ಉದ್ಯೋಗ, ಕೂಲಿ ಸಿಗುವುದಿಲ್ಲ. ಭಿಕ್ಷೆ ಬೇಡುವುದಕ್ಕೂ ಸ್ವಾಭಿಮಾನ ಅಡ್ಡಿ ಬರುತ್ತದೆ. ಇಂತವರ ಜೀವನ ಬಿಸಿ ತುಪ್ಪದಂತಾಗಿರುತ್ತದೆ. ಇಂತಹ ಕುಟುಂಬಗಳಿಗೆ ಮಾಸಾಶನ ಹಾಗೂ ಮಕ್ಕಳಿಗೆ ಉಚಿತ ಶಿಕ್ಷಣ, ಬಸ್ಸು-ರೈಲ್ವೆಗಳಲ್ಲಿ ಉಚಿತ ಪ್ರಯಾಣಕ್ಕೆ ಪಾಸ್, ರೂ 10 ಲಕ್ಷಗಳು ಸೋಂಕಿತ‌ ಮಕ್ಕಳಿಗೂ ತಲುಪುವಂತೆ ಕಲ್ಪಿಸಿಕೊಡಬೇಕು” ಎಂದು ಒತ್ತಾಯಿಸಿದರು.

ಇದನ್ನೂ ಓದಿ: ಬಳ್ಳಾರಿ | ಫೋನ್ ಬದಲಿಗೆ ಚೆಸ್‌ನಲ್ಲಿ ಆಸಕ್ತಿ ಬೆಳೆಸಿಕೊಳ್ಳಿ: ತಿರುಮಲ‌ ಶಾಲೆ ಅಧ್ಯಕ್ಷ ಯಲ್ಲಪ್ಪ

ಈ ವೇಳೆ ಸಂಘಟನೆಯ ರಾಜ್ಯ ಕಾರ್ಯಾಧ್ಯಕ್ಷ ರಾಜಕುಮಾರ್, ಮರಿಗೌಡ ಸಣಾಪುರ, ಎಸ್ ಬಸವರಾಜ್, ಎ.ಎಸ್.ಯಲ್ಲಪ್ಪ, ಧನಕಾಯಿ ಬಸವರಾಜ್, ಇ.ಧನಂಜಯ್, ಲಕ್ಷ್ಮಣ, ಮಂಜು, ರವಿ ಮಣ್ಣೂರ, ರಾಮಾಂಜನಯ್ಯ, ವಸಂತ ಕಹಾಳೆ, ಎಚ್.ಬಸಪ್ಪ, ಶಾಮತಪ್ಪ, ಮಂಜು, ಗೋಪಾಲ್, ಹುಸೇನಪ್ಪ, ಪ್ರವೀಣ ಹಾಗೂ ಇತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...