ಬಳ್ಳಾರಿ | ಅ.26ರಂದು ಬೆಂಗಳೂರಿನಲ್ಲಿ ದಕ್ಷಿಣ ಭಾರತ ವಲಯ ವಿದ್ಯುತ್ ಬಳಕೆದಾರರ ಸಮಾವೇಶ

Date:

ವಿದ್ಯುತ್ ಖಾಸಗೀಕರಣ ಹಾಗೂ ಸ್ಮಾರ್ಟ್ ಮೀಟರ್ ಅಳವಡಿಕೆಗೆ ವಿರುದ್ಧವಾಗಿ ಅಖಿಲ್ ಭಾರತ ವಿದ್ಯುತ್ ಬಳಕೆದಾರರ ಸಂಘದ ವತಿಯಿಂದ ದಕ್ಷಿಣ ಭಾರತ ವಲಯ ವಿದ್ಯುತ್ ಬಳಕೆದಾರರ ಸಮಾವೇಶವನ್ನು ಅಕ್ಟೋಬರ್ 26 ರಂದು ಬೆಂಗಳೂರಿನಲ್ಲಿ‌ ಆಯೋಜಿಸಲಾಗಿದೆ ಎಂದು ಕರ್ನಾಟಕ ವಿದ್ಯುತ್ ಬಳಕೆದಾರರ ಸಂಘದ ರಾಜ್ಯ ಕಾರ್ಯದರ್ಶಿ ಜ್ಞಾನಮೂರ್ತಿ.ವಿ ತಿಳಿಸಿದರು.

- Advertisement -

ಬಳ್ಳಾರಿ ನಗರದ ಪತ್ರಿಕಾಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, “ಈ ಸಮಾವೇಶದಲ್ಲಿ ಆಂಧ್ರಪ್ರದೇಶ, ಕೇರಳ, ಕರ್ನಾಟಕ, ಪುದುಚೆರಿ, ತಮಿಳುನಾಡು ಮತ್ತು ತೆಲಂಗಾಣ ರಾಜ್ಯಗಳ ಗ್ರಾಹಕರ ಸಂಘಟನೆಗಳ ಪ್ರತಿನಿಧಿಗಳು, ಬುದ್ಧಿಜೀವಿಗಳು ಹಾಗೂ ವಿವಿಧ ಕ್ಷೇತ್ರಗಳ ಹೋರಾಟಗಾರರು ಭಾಗವಹಿಸಲಿದ್ದಾರೆ. ಸಮಾವೇಶವನ್ನು ಆಲ್ ಇಂಡಿಯಾ ಎಲೆಕ್ಟ್ರಿಸಿಟಿ ಕಂಜೂಮರ್ಸ್ ಅಸೋಸಿಯೇಷನ್ ಅಧ್ಯಕ್ಷ ಸ್ವಪನ್ ಘೋಷ್ ಅವರು ಉದ್ಘಾಟಿಸಲಿದ್ದಾರೆ. ಪ್ರಮುಖ ಅತಿಥಿಗಳಾಗಿ ಮಾಜಿ ಐಎಎಸ್ ಅಧಿಕಾರಿ ಹಾಗೂ ಹರಿಯಾಣ ವಿದ್ಯುತ್ ಮಂಡಳಿಯ ಮಾಜಿ ಅಧ್ಯಕ್ಷ ಎಂ ಜಿ ದೇವಸಹಾಯಂ ವಡ್ಡೆ, ಸಂಯುಕ್ತ ಕೃಷಿ ಮೋರ್ಚಾ ಸಂಚಾಲಕರು, ಮಾಜಿ ಸಂಸದರು ಮತ್ತು ಮಾಜಿ ಕೃಷಿ ಸಚಿವರು, ಆಂಧ್ರಪ್ರದೇಶ ಸೋಭನಾದ್ರಿಸ್ತರ ರಾವ್, ಸಲಹೆಗಾರ, ಎಐಇಸಿಎ ಅಧ್ಯಕ್ಷರು, ತಮಿಳುನಾಡು ಪವರ್ ಎಂಜಿನಿಯರ್ಸ್ ಸೊಸೈಟಿ ಎಸ್ ಗಾಂಧಿ, ಬಿ ಉಪಾಧ್ಯಕ್ಷರು, ಜನಕೀಯ ಪ್ರತಿರೋಧ ಸಮಿತಿ ಕೇರಳ ಬಿ ದಿಲೀಪನ್ ಮುಂತಾದವರು ಭಾಗವಹಿಸಲಿದ್ದಾರೆ” ಎಂದು ಮಾಹಿತಿ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಎಐಇಸಿಎನ ಕಾರ್ಯಾಧ್ಯಕ್ಷ ಸಮರ್ ಸಿನ್ಹಾ, ಉಪಾಧ್ಯಕ್ಷ ಕೆ. ಸೋಮಶೇಖರ್, ಖಜಾಂಚಿ ಅಜಯ್ ಚಟರ್ಜಿ, ರಾಜ್ಯ ಕಾರ್ಯಕಾರಿ ಸದಸ್ಯೆ ದೀಪ ಮತ್ತು ಕರ್ನಾಟಕದ ಹಿರಿಯ ಸಂಘಟಕರಾದ ಕೆ. ವೇಣುಗೋಪಾಲ್ ಭಟ್ ಪ್ರಧಾನ ಕಾರ್ಯದರ್ಶಿ, ಎಐಇಸಿಎ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ. ದಕ್ಷಿಣ ರಾಜ್ಯಗಳ ಸಂಘಟಕರು ಜ್ಞಾನಮೂರ್ತಿ, ಸುಬ್ಬಾರೆಡ್ಡಿ, ಸುರೇಂದ್ರನ್, ಅನವರತನ್, ಶಿವಕುಮಾರ್, ಹೆಚ್‌.ಪಿ. ಶಿವಪ್ರಕಾರ್ ಮುಂತಾದವರು ಇರಲಿದ್ದಾರೆ.

ಇದನ್ನೂ ಓದಿ: ಬಳ್ಳಾರಿ | ಕಲೆಗಳು ಉಳಿದರೆ ಸಂಸ್ಕೃತಿ ಉಳಿಯುತ್ತದೆ: ಬಸವರಾಜ

“ಸ್ಮಾರ್ಟ್ ಮೀಟರ್, ಪ್ರೀ-ಪೇಯ್ಡ್ ಮೀಟರ್ ಹಾಗೂ ಟಿಒಡಿ ದರ ವ್ಯವಸ್ಥೆಗಳು ಜನವಿರೋಧಿ ಕ್ರಮಗಳಾಗಿದ್ದು, ಬಡ ಗ್ರಾಹಕರ ಮೇಲೆ ಹೆಚ್ಚುವರಿ ಆರ್ಥಿಕ ಭಾರವನ್ನು ಹೆಚ್ಚಿಸುತ್ತವೆ. ವಿದ್ಯುತ್ ಜನರ ಹಕ್ಕು, ಅದು ವ್ಯಾಪಾರದ ಸರಕಾಗಲು ಬಿಡಬಾರದು, ಎಂದು ಸಂಘಟನೆಯ ಮುಖಂಡರು ಹೇಳಿದ್ದಾರೆ. ವಿದ್ಯುತ್ ಖಾಸಗೀಕರಣ ಕ್ರಮ, ದರ ಏರಿಕೆ, ನೌಕರರ ಗ್ರಾಚ್ಯುಟಿ ಹೊರೆ ಗ್ರಾಹಕರಿಗೆ ವರ್ಗಾವಣೆ ಹಾಗೂ ಸ್ಮಾರ್ಟ್ ಮೀಟರ್ ಅಳವಡಿಕೆಯಿಂದ ಉಂಟಾಗುತ್ತಿರುವ ಅಸಮಾಧಾನಗಳ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಯಲಿದೆ
ಸಂಘಟನೆಯ ಪ್ರಕಾರ, ವಿವಿಧ ರಾಜ್ಯಗಳಲ್ಲಿ ಸ್ಮಾರ್ಟ್ ಮೀಟರ್ ವಿರೋಧಿ ಚಳುವಳಿಗಳು ವೇಗ ಪಡೆದುಕೊಂಡಿದ್ದು, ಹಲವಾರು ರಾಜ್ಯ ಸರ್ಕಾರಗಳು ಜನರ ಪ್ರತಿಭಟನೆಯ ಹಿನ್ನೆಲೆಯಲ್ಲಿ ಯೋಜನೆಗಳಿಂದ ಹಿಂದೆ ಸರಿಯಬೇಕಾಗಿದೆ” ಎಂದು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ರಾಜ್ಯ ಸಂಘಟನಾಕಾರ ಸೋಮಶೇಖರ್ ಗೌಡ, ಜಿಲ್ಲಾ ಸಂಘಟನಕಾರ ಗುರಳ್ಳಿರಾಜ ರಾಜು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ | ಪ್ರತಿಭಟನೆ ಹತ್ತಿಕ್ಕುವ ಪ್ರಜಾಪ್ರಭುತ್ವ ವಿರೋಧಿ ಕ್ರಮ ಖಂಡಿಸಿ ಜನಪರ ಒಕ್ಕೂಟ ಪ್ರತಿಭಟನೆ 

ಪ್ರತಿಭಟನೆಯನ್ನು ಹತ್ತಿಕ್ಕುವ ಪ್ರಜಾಪ್ರಭುತ್ವ ವಿರೋಧಿ ಕ್ರಮವನ್ನು ಖಂಡಿಸಿ ಹಾಸನದ ಹೇಮಾವತಿ ಪ್ರತಿಮೆಯ...

ಚಿಕ್ಕಮಗಳೂರು | SIR ವಿರೋಧ: ಫಾರಂ – 7ರಲ್ಲಿ ತಪ್ಪು ಮಾಹಿತಿ ನೀಡಿ, ಮತವಂಚಿಸಲಾಗಿದೆ; ಎದ್ದೇಳು ಕರ್ನಾಟಕ 

SIR ವಿರೋಧಿಸಿ, ಚುನಾವಣಾ ಆಯುಕ್ತರಾದ ಜ್ಞಾನೇಶ್‌ಕುಮಾರ್‌ರವರನ್ನು ವಜಾಗೊಳಿಸಲು ಮತ್ತು ಫಾರಂ ನಂ.7...

ಗದಗ | ಮಾಜಿ ಗ್ರಾ. ಪಂ ಸದಸ್ಯನ ಬರ್ಬರ ಹತ್ಯೆ

ಲಕ್ಕುಂಡಿ ಗ್ರಾಮದ ಹೊರವಲಯದಲ್ಲಿ ಗ್ರಾಮ ಪಂಚಾಯಿತಿ ಮಾಜಿ ಸದಸ್ಯರೊಬ್ಬರನ್ನು ಬರ್ಬರವಾಗಿ ಹತ್ಯೆ...

ಹಾವೇರಿ‌ | ಬಾಲಕರ ವಸತಿ ನಿಲಯಕ್ಕೆ ಜಿಲ್ಲಾಧಿಕಾರಿ ಭೇಟಿ ನೀಡಿ ಪರಿಶೀಲನೆ

ಚುನಾವಣಾ ಸಂಬಂಧಿತ ಕಾರ್ಯಗಳ ಪರಿಶೀಲನೆಯ ಜೊತೆಗೆ, ಹಾವೇರಿ ಜಿಲ್ಲೆಯ ಹಾನಗಲ್ಲ ತಾಲೂಕಿನ...