ಬಳ್ಳಾರಿ | ʼಕೈಗಾರಿಕೆ ಆರಂಭಿಸಿ, ಇಲ್ಲವೇ ಭೂಮಿ ಬಿಡಿʼ; ಸಂತ್ರಸ್ತ ರೈತರ ಹೋರಾಟ

Date:

ಬಿಎಸ್‌ಎಎಲ್ ಸ್ಟೀಲ್ ಕೈಗಾರಿಕೆಗಾಗಿ 1995 ಹಾಗೂ 1998ರಲ್ಲಿ ಭೂಮಿ ಕಳೆದುಕೊಂಡು ವಂಚನೆಗೊಳಗಾಗಿರುವ ಭೂಸಂತ್ರಸ್ಥರಿಗೆ ನ್ಯಾಯ ಒದಗಿಸಿ ಎಂದು ಒತ್ತಾಯಿಸಿ ಕರ್ನಾಟಕ ಪ್ರಾಂತ ರೈತ ಸಂಘದ ವತಿಯಿಂದ ಬಳ್ಳಾರಿ ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿ ಪ್ರತಿಭಟನೆ ನಡೆಸಿದರು.

“ಬಳ್ಳಾರಿ ತಾಲೂಕಿನ ಬೇವಿನಹಳ್ಳಿ, ಕಕ್ಕಬೇವಿನಹಳ್ಳಿ, ಅಮರಾಪುರ, ತಗ್ಗಿನ ಬೂದಿಹಾಳು, ಚಗನೂರು ಗ್ರಾಮಗಳ ವ್ಯಾಪ್ತಿಯ ರೈತರ ಭೂಮಿಗಳನ್ನು ಕಿತ್ತುಕೊಳ್ಳಲಾಯಿತು. ರಾಜ್ಯ ಸರ್ಕಾರ ಕೆಐಎಡಿಬಿ, ಬಿಎಸ್‌ಎಎಲ್‌, ಗೋವಾ ಕಂಪನಿ, ಐಎಫ್‌ಸಿಐ ಸಂಸ್ಥೆಗಳೊಂದಿಗೆ ಶಾಮೀಲಾದ ಕಾರಣ ರೈತರಿಗೆ ತೀವ್ರ ಅನ್ಯಾಯವಾಯಿತು” ಎಂದು ಪ್ರತಿಭಟನಾಕಾರರು ಆರೋಪಿಸಿದರು.

“ಕೈಗಾರಿಕೆ ಸ್ಥಾಪನೆ ಮಾಡಿ ಅನ್ಯಾಯಕ್ಕೆ ಒಳಗಾಗಿರುವ ರೈತರಿಗೆ ಉದ್ಯೋಗ ನೀಡಿ. ಇಲ್ಲವೇ ನಮ್ಮ ಭೂಮಿ ನಮಗೆ ಹಿಂದಿರುಗಿಸಿ. ಇಲ್ಲವೇ ಭೂಮಿ ಖರೀದಿಯಲ್ಲಿ ಆದ ಅನ್ಯಾಯಕ್ಕೆ ಸಮರ್ಪಕ ಬೆಲೆ ನೀಡಿ ಕೂಡಲೇ ನ್ಯಾಯ ಒದಗಿಸಿ” ಎಂದು ಆಗ್ರಹಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ಶೋಷಿತ ಸಮುದಾಯಗಳ ಪ್ರಗತಿಯ ಹರಿಕಾರ ಬಿ ಕೃಷ್ಣಪ್ಪ

ಕರ್ನಾಟಕ ಪ್ರಾಂತ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಯು ಬಸವರಾಜ್, ಜಿಲ್ಲಾ ಅಧ್ಯಕ್ಷ ಶಿವಶಂಕರ್, ಸಿಐಟಿಯು ಜಿಲ್ಲಾ ಮುಖಂಡ ಜೆ ಸತ್ಯಬಾಬು, ಸಿಪಿಐಎಂ ತಾಲೂಕು ಮುಖಂಡೆ ಚಂದ್ರಕುಮಾರಿ, ಸ್ವಾಮಿ, ತಿಪ್ಪೇಸ್ವಾಮಿ ಎಂ, ಡಿವೈಎಫ್‌ಐ ಮುಖಂಡ ನವೀನ್, ಹನುಮಂತಪ್ಪ, ಗ್ರಾಮದ ರೈತರು ಸೇರಿದಂತೆ ಇತರರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಂದಾಯ ಕರ್ಮಕಾಂಡ -3 | ಲಂಚವಿಲ್ಲದೆ ಈ ಇಲಾಖೆಯಲ್ಲಿ ಒಂದು ಕಡತವೂ ಚಲಿಸುವುದಿಲ್ಲ!

'ಇತ್ತೀಚಿನ ದಿನಗಳಲ್ಲಿ ಕಂದಾಯ ಇಲಾಖೆಯಲ್ಲಿ ಉನ್ನತ ಶ್ರೇಣಿಯಿಂದ ಕೆಳಹಂತದವರೆಗೆ ಭ್ರಷ್ಟಾಚಾರ ತಾಂಡವವಾಡುತ್ತಿದೆ....

ದಕ್ಷಿಣ ಕನ್ನಡ | ಅಲೆಮಾರಿ ಶಿಳ್ಳೆಕ್ಯಾತ ಕುಟುಂಬಗಳಿಗೆ ಶಾಶ್ವತ ಸೂರು ಕಲ್ಪಿಸಲು ಡಿವೈಎಫ್ಐ ಒತ್ತಾಯ

ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಗೆ ಒಳಪಡುವ ಬೋಳಾರ...

ಬೆಳಗಾವಿ | ಹಿಡಕಲ್ ಡ್ಯಾಂನಿಂದ ನೀರು ಹರಿಸುವಂತೆ ರೈತರ ಪ್ರತಿಭಟನೆ

ಹಿಡಕಲ್‌ ಜಲಾಶಯದಿಂದ ಘಟಪ್ರಭಾ ಎಡದಂಡೆ ನಾಲೆಯ ರೈತರಿಗೆ ನೀರುಹರಿಸುವಂತೆ ಕೋರಿ ಚಿಕ್ಕೋಡಿ-ಮಿರಜ್‌...

ಗದಗ | ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿಗಿಲ್ಲ ಬೋಧಕರು; ವಿದ್ಯಾರ್ಥಿಗಳ ಭವಿಷ್ಯ ಅತಂತ್ರ

ಗದಗ ಜಿಲ್ಲೆಯ ಗಜೇಂದ್ರಗಡ ಪಟ್ಟಣದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಸುಮಾರು 380...