ಶಾಲೆಯ ವಿದ್ಯಾರ್ಥಿಗಳಿಂದ ಮನೆ ಕೆಲಸ ಮಾಡಿಸಿಕೊಳ್ಳುತ್ತಿದ್ದ ಮತ್ತು ವಿದ್ಯಾರ್ಥಿಯರೊಂದಿಗೆ ಅಸಭ್ಯವಾಗಿ ವರ್ತಿಸಿದ್ದ ಆರೋಪದ ಮೇಲೆ ಶಿಕ್ಷಕನೊಬ್ಬನನ್ನು ಅಮಾನತು ಮಾಡಲಾಗಿದೆ.
ಬಳ್ಳಾರಿ ಜಿಲ್ಲೆಯ ಕುರಗೋಡ ತಾಲೂಕಿನ ಯಲ್ಲಾಪುರ ಸರ್ಕಾರಿ ಪ್ರಾಥಮಿಕ ಶಾಲೆಯ ಶಿಕ್ಷಕ ಶಾಸ್ತ್ರಿ ಕೃಷ್ಣಮೂರ್ತಿ ಎಂಬಾತನನ್ನುಇ ಅಮಾನತುಗೊಳಿಸಿ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.
ಈ ಶಿಕ್ಷಕ ಶಾಲೆಯ ವಿದ್ಯಾರ್ಥಿಗಳಿಗೆ ಟ್ಯೂಷನ್ ಹೇಳಿಕೊಡುವ ನೆಪದಲ್ಲಿ ಮಕ್ಕಳನ್ನ ಮನೆಗೆ ಕರೆಸಿಕೊಳ್ಳುತ್ತಿದ್ದರು. ವಿದ್ಯಾರ್ಥಿಗಳಿಂದ ಮನೆ ಕೆಲಸ ಮಾಡಿಸಿಕೊಳ್ಳುತ್ತಿದ್ದರು. ಮಾತ್ರವಲ್ಲದೆ, ವಿದ್ಯಾರ್ಥಿನಿಯರೊಂದಿಗೆ ಅಸಭ್ಯವಾಗಿ ವರ್ತಿಸುತ್ತಿದ್ದರು ಎಂದು ಆರೋಪಸಲಾಗಿದೆ. ಈ ಬಗ್ಗೆ ವಿದ್ಯಾರ್ಥಿಗಳ ಖುದ್ದು ಶಿಕ್ಷಣ ಇಲಾಖೆಗೆ ದೂರು ನೀಡಿದ್ದಾರೆ.
ದೂರು ದಾಖಲಿಸಿಕೊಂಡ ಇಲಾಖೆಯ ಅಧಿಕಾರಿಗಳು ತನಿಖೆ ನಡೆಸಿದ್ದು, ಶಿಕ್ಷಕನ ದುರ್ವರ್ತನೆ ಬಯಲಾಗಿದೆ. ಬಳಿಕ, ಶಿಕ್ಷಕ ಕೃಷ್ಣಮೂರ್ತಿಯನ್ನು ಅಮಾನತುಗೊಳಿಸಲಾಗಿದೆ. ಅಮಾನತಾದ ಬೆನ್ನಲ್ಲೇ ಶಿಕ್ಷಕ ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ.