ಜೋಳದರಾಶಿ ದೊಡ್ಡನಗೌಡ ರಂಗಮಂದಿರ ಮೂರು ವರ್ಷಗಳಿಂದ ಬಾಗಿಲು ಮುಚ್ಚಿದೆ ಎಂದು ಹಿರಿಯ ಕಲಾವಿದ ಜಗದೀಶ್ ಅವರು ಬೇಸರ ವ್ಯಕ್ತಪಡಿಸಿದರು.
ವಿಜಯನಗರ ಮತ್ತು ಬಳ್ಳಾರಿ ಜಿಲ್ಲಾ ಕಲಾವಿದರ ವೇದಿಕೆ ವತಿಯಿಂದ ಜೋಳದ ರಾಶಿ ದೊಡ್ಡನಗೌಡ ರಂಗಮಂದಿರ ದುರಸ್ತಿ, ಕಲಾವಿದರಿಗೆ ಮಾಸಾಶನ, ಅತಿಥಿ ಶಿಕ್ಷಕರ ನೇಮಕ ಸೇರಿದಂತೆ ಹಲವು ಬೇಡಿಕೆ ಈಡೇರಿಸುವಂತೆ ನಡೆದ ಪ್ರತಿಭಟನೆಯಲ್ಲಿ ಮಾತನಾಡಿ, ಜಿಲ್ಲಾಧಿಕಾರಿ ಮೂಲಕ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಿಗೆ ಮನವಿ ಸಲ್ಲಿಸಿದರು.
“ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಭ್ರಷ್ಟಾಚಾರದಲ್ಲಿ ಮುಳುಗಿದ್ದು, ಸಂಬಂಧಿಸಿದ ಅಧಿಕಾರಿಗಳಿಗೆ ದೂರು ನೀಡಿದರೂ ಈವರೆಗೆ ಕ್ರಮವಹಿಸಿಲ್ಲ. ಕಲಾವಿದರಿಗೆ ಐದು ತಿಂಗಳು ಕಳೆದರೂ ಮಾಸಾಶನ ನೀಡಿಲ್ಲ. ರಂಗ ಪದವೀಧರರ ನೇಮಕಾತಿ ಮಾಡಬೇಕು” ಎಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಡಾ.ಅಣ್ಣಾಜಿ ಕೃಷ್ಣಾ ರೆಡ್ಡಿ, ಜಿಲಾನ್ ಭಾಷಾ ಸೇರಿದಂತೆ ಇತರರು ಇದ್ದರು.