ಬಳ್ಳಾರಿ | ಪ್ರವಾಸೋದ್ಯಮ ಇಲಾಖೆ ವತಿಯಿಂದ ʼಫೋಟೋ ಕಾಂಟೆಸ್ಟ್-2025ʼ ಸ್ಪರ್ಧೆ

Date:

Advertisements

ಪ್ರವಾಸೋದ್ಯಮ ಇಲಾಖೆ ವತಿಯಿಂದ ‘ಡಿಸ್ಕವರ್ ದಿ ಬ್ಯೂಟಿ ಆಫ್ ಇಂಡಿಯಾ’ ಶೀರ್ಷಿಕೆಯಡಿ ‘ದೇಖೋ ಅಪ್ನ ದೇಶ್ ಫೋಟೋ ಕಾಂಟೆಸ್ಟ್-2025’ ಸ್ಪರ್ಧೆ ಏರ್ಪಡಿಸಲಾಗಿದೆ.

ಬಳ್ಳಾರಿ ಜಿಲ್ಲೆಯ ಪ್ರಮುಖ ಧಾರ್ಮಿಕ, ಸಾಂಸ್ಕೃತಿಕ, ಪಾರಂಪರಿಕ, ಕರಕುಶಲ, ನೈಸರ್ಗಿಕ ಹಾಗೂ ವನ್ಯಜೀವಿ ಮತ್ತು ಸಾಹಸ ಚಟುವಟಿಕೆಗಳು ಹಾಗೂ ಇತರೆ ಪ್ರವಾಸಿತಾಣಗಳ ಅತ್ಯಾಕರ್ಷಕ ಛಾಯಾಚಿತ್ರಗಳನ್ನು ಸೆರೆಹಿಡಿದು ಪ್ರವಾಸಿ ತಾಣಗಳ ಕಿರು ವಿವರಣೆಯೊಂದಿಗೆ Dekhoapnadeshphotos@gmail.com ಇ-ಮೇಲ್ ಗೆ ನೇರವಾಗಿ ಕಳುಹಿಸಿಕೊಡಬಹುದಾಗಿದೆ.

ಪ್ರವಾಸೋದ್ಯಮವನ್ನು ಇನ್ನಷ್ಟು ಮೇಲ್ದರ್ಜೆಗೇರಿಸಲು ಹಾಗೂ ಎಲ್ಲಾ ವರ್ಗಗಳ ಧಾರ್ಮಿಕ, ಸಾಂಸ್ಕೃತಿಕ, ಪಾರಂಪರಿಕ, ಕರಕುಶಲ, ನೈಸರ್ಗಿಕ ಹಾಗೂ ವನ್ಯಜೀವಿ ಮತ್ತು ಸಾಹಸ ಚಟುವಟಿಕೆಗಳು ಹಾಗೂ ಇತರೆ ಪ್ರವಾಸಿತಾಣಗಳಲ್ಲಿ ಪ್ರವಾಸಿಗರ ದೃಷ್ಟಿಕೋನದಲ್ಲಿ ಪ್ರಮುಖ ಪ್ರವಾಸಿತಾಣಗಳನ್ನು ಗುರುತಿಸಿ, ವಿಶ್ವದರ್ಜೆಯಲ್ಲಿ ಅಭಿವೃದ್ಧಿಪಡಿಸಲು ಕೇಂದ್ರ ಪ್ರವಾಸೋದ್ಯಮದಿಂದ ಈ ಫೋಟೋ ಕಾಂಟೆಸ್ಟ್ ಸ್ಪರ್ಧೆ ಏರ್ಪಡಿಸಲಾಗಿದೆ.

Advertisements

ಈ ಸಂಬಂಧ ರಾಜ್ಯದ ಎಲ್ಲಾ ಜಿಲ್ಲೆಗಳು/ಕೇಂದ್ರಾಡಳಿತ ಪ್ರದೇಶಗಳಲ್ಲಿನ ವಿವಿಧ ವಿಭಾಗಗಳಲ್ಲಿ ಅತ್ಯುತ್ತಮ ಛಾಯಾಚಿತ್ರಗಳನ್ನು ಸೆರೆಹಿಡಿದು ಇ-ಮೇಲ್ ಗೆ ನೇರವಾಗಿ ಕಳುಹಿಸಲು ಏ.07 ರ ವರೆಗೆ ಅವಕಾಶ ಕಲ್ಪಿಸಲಾಗಿದೆ.

ವರ್ಗ: ಸ್ಮಾರಕ, ವನ್ಯಜೀವಿ, ಜಿಐ ಟ್ಯಾಗ್ ಕರಕುಶಲ ವಸ್ತುಗಳು ಮತ್ತು ಕೈಮಗ್ಗಗಳು, ಭೂದೃಶ್ಯ(ಲ್ಯಾಂಡ್ ಸ್ಕೇಪ್) ಮತ್ತು ಸಾಹಸ. ಈ ವರ್ಗಗಳಡಿ ಫೋಟೋ ಕಳುಹಿಸಿಕೊಡಬಹುದಾಗಿದೆ.

ಬಳ್ಳಾರಿ ಜಿಲ್ಲೆಯ ಪ್ರವಾಸಿತಾಣಗಳಿಗೆ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಹೆಚ್ಚಿನ ಪ್ರಚಾರವನ್ನು ನೀಡಲು ಜಿಲ್ಲೆಯ ಎಲ್ಲಾ ಛಾಯಾಗ್ರಾಹಕರು, ಸಾರ್ವಜನಿಕರು ಹಾಗೂ ಪ್ರವಾಸಿಗರು ಸಹಕರಿಸುವಂತೆ ಪ್ರವಾಸೋದ್ಯಮ ಇಲಾಖೆಯ ಉಪನಿರ್ದೇಶಕ ಪ್ರಭುಲಿಂಗ ತಳಕೇರಿ ಅವರು ಪ್ರಕಟಣೆಯಲ್ಲಿ ಕೋರಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

ಗದಗ | ಒಳಮೀಸಲಾತಿ ಅಂಗೀಕಾರ ಸ್ವಾಗತಾರ್ಹ: ಬಸವರಾಜ ಕಡೇಮನಿ

"ಒಳಮೀಸಲಾತಿ ಜಾರಿಗಾಗಿ ಒತ್ತಾಯಿಸಿ ಮೂವತ್ತೈದು ವರ್ಷಗಳ ನಿರಂತರ ಹೋರಾಟದ ಫಲದಿಂದ ರಾಜ್ಯ...

ಸಕಲೇಶಪುರ | ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣ ಬೆಂಬಲ ನೀಡಬೇಕು: ಬಿ ಆರ್‌ ಪಾಟೀಲ್

ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣವಾಗಿ ಬೆಂಬಲ ನೀಡಿದಾಗ ಮಾತ್ರ ವ್ಯಸನವನ್ನು...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

Download Eedina App Android / iOS

X