ಬಳ್ಳಾರಿ | ಹಳ್ಳಕ್ಕೆ ಬಿದ್ದ ಟ್ರ್ಯಾಕ್ಟರ್: ಈಜಿ ಜೀವ ಉಳಿಸಿಕೊಂಡ 14 ಮಂದಿ ಕಾರ್ಮಿಕರು

Date:

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಟ್ರ್ಯಾಕ್ಟ‌ರ್‌ವೊಂದು ಹಳ್ಳದಲ್ಲಿ ಮಗುಚಿ ಬಿದ್ದ ಘಟನೆ ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ತೋರಣಗಲ್ಲು ಸಮೀಪ ಮಂಗಳವಾರ ಬೆಳಗ್ಗೆ ನಡೆದಿದೆ. ಟ್ರ್ಯಾಕ್ಟರ್‌ನಲ್ಲಿದ್ದ ಕಾರ್ಮಿಕರು ಈಜಿಕೊಂಡು ತಮ್ಮ ಜೀವ ಉಳಿಸಿಕೊಂಡಿರುವುದಾಗಿ ವರದಿಯಾಗಿದೆ.

- Advertisement -

ತೋರಣಗಲ್ಲು ಹೋಬಳಿಯಿಂದ ಜಿಂದಾಲ್ ಕಾರ್ಖಾನೆಗೆ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಟ್ರ್ಯಾಕ್ಟ‌ರ್‌ವೊಂದು ಹಳ್ಳದಲ್ಲಿ ಮಗುಚಿ ಬಿದ್ದಿದೆ. ಟ್ರ್ಯಾಕ್ಟರ್ ಅಡಿಯಲ್ಲಿ ಹಲವರು ಸಿಲುಕಿರುವ ಶಂಕೆ ಇತ್ತಾದರೂ, ಕಾರ್ಯಾಚರಣೆ ನಡೆಸಿದ ಬಳಿಕ ಎಲ್ಲರೂ ಸುರಕ್ಷಿತವಾಗಿ ಈಜಿ ದಡ ಸೇರಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕ್ಷಿಪಣಿ ಬಿಡಿಭಾಗಗಳ ಖರೀದಿಯಲ್ಲಿ ಸ್ವಜನಪಕ್ಷಪಾತ; ಬಿಡಿಎಲ್ ಮಾಜಿ ಮುಖ್ಯಸ್ಥನ...

ಕ್ಷಿಪಣಿಯ ಆಪ್ಟಿಕಲ್ ಸೈಟ್‌ಗಳ ಪೂರೈಕೆಗಾಗಿ ಭಾರತ್ ಡೈನಾಮಿಕ್ಸ್ ಲಿಮಿಟೆಡ್ (BDL) ತನ್ನದೇ ಸಂಸ್ಥೆಯ ಮಾಜಿ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕರ (CMD) ಪತ್ನಿಯ ಒಡೆತನದ ಖಾಸಗಿ ಕಂಪನಿಗೆ 'ತುರ್ತು' ನೆಪವೊಡ್ಡಿ 56.8 ಕೋಟಿ...

ನುಡಿ ನಮನ | ಚೆರುವಯಲ್ ರಾಮನ್ – ಭತ್ತದ...

ಕೃಷಿ ಎಂದರೆ ಕೇವಲ ಬೆಳೆ ಬೆಳೆಯುವುದಲ್ಲ; ಬಿತ್ತನೆಗೆ ಸೂಕ್ತವಾದ ಬೀಜಗಳನ್ನು ಆಯ್ಕೆ ಮಾಡುವುದು, ಅವುಗಳನ್ನು ಸಂಗ್ರಹಿಸುವುದು ಹಾಗೂ ಮುಂದಿನ ಋತುವಿಗೆ ಉಳಿಸುವುದೂ ಕೃಷಿಯ ಅವಿಭಾಜ್ಯ ಅಂಗ ಎನ್ನುತ್ತಿದ್ದ ರಾಮನ್, ತಮ್ಮ ಇಡೀ ಜೀವನವನ್ನೇ...

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ ಸಮರ್ಥನೆ; ಇತಿಹಾಸದ ಹೆಸರಿನಲ್ಲಿ ವಿವಾದ, ಆಡಳಿತದ ನಡೆಗೆ ಸಾರ್ವಜನಿಕರ ಪ್ರಶ್ನೆ. ರಾಜ್ಯದ ಜನತೆ ಬರಗಾಲದ ಸಂಕಷ್ಟ ಎದುರಿಸುತ್ತಿರುವಾಗ, ರೈತರು ಮಳೆ-ಬೆಳೆಯಿಲ್ಲದೆ ಕಂಗಾಲಾಗಿರುವಾಗ,...

ತೋರಣಗಲ್ಲು ಹೋಬಳಿಯ ವಿಠಲಾಪುರ, ಮೆಟ್ರಿಕಿ, ರಾಜಾಪುರ, ಅಂತಪುರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಸೋಮವಾರ ತಡರಾತ್ರಿ ಭಾರೀ ಮಳೆಯಾಗಿದ್ದರಿಂದ ಸಮೀಪದ ಹಳ್ಳ ಕೊಳ್ಳಗಳು ತುಂಬಿ ಹರಿಯುತ್ತಿವೆ.

ಜಿಂದಾಲ್ ’10 ಎಂಟಿ’ ಗೇಟ್ ಬಳಿಯ ಹಳ್ಳದ ಪಕ್ಕದಲ್ಲಿ ವಾಸವಿರುವ ಕಾರ್ಮಿಕರು ಎಂದಿನಂತೆ ಟ್ರ್ಯಾಕ್ಟರ್‌ನಲ್ಲಿ ಕೆಲಸಕ್ಕೆ ತೆರಳುತ್ತಿದ್ದಾಗ ಬೆಳಗ್ಗೆ 9.30ರ ಸುಮಾರಿಗೆ ಈ ದುರ್ಘಟನೆ ಸಂಭವಿಸಿರುವುದಾಗಿ ವರದಿಯಾಗಿದೆ.

ಇದನ್ನು ಓದಿದ್ದೀರಾ? ಬೆಂಗಳೂರು | ಗೌರಿ ಲಂಕೇಶ್ ಹಂತಕರಿಗೆ ಸನ್ಮಾನ ಖಂಡಿಸಿ ಪ್ರತಿಭಟನೆ

ಘಟನೆಯ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆಯೇ ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ಪೊಲೀಸ್ ಇಲಾಖೆ ಹಾಗೂ ಮುಳುಗು ತಜ್ಞರು ಆಗಮಿಸಿ, ಮುಗುಚಿ ಬಿದ್ದ ಟ್ರ್ಯಾಕ್ಟರ್ ಶೋಧ ಕಾರ್ಯ ನಡೆಸಿದರು. ದುರ್ಘಟನೆಯ ವೇಳೆ ಟ್ರ್ಯಾಕ್ಟರ್‌ನಲ್ಲಿ ಸುಮಾರು 14 ಮಂದಿ ಕಾರ್ಮಿಕರು ಇದ್ದರು ಎಂದು ತಿಳಿದುಬಂದಿದೆ.

WhatsApp Image 2024 10 22 at 1.46.04 PM 1

ಘಟನೆಯ ಕುರಿತು ಈ ದಿನ.ಕಾಮ್‌ಗೆ ಪ್ರತಿಕ್ರಿಯಿಸಿರುವ ತೋರಣಗಲ್ಲು ಪೊಲೀಸ್ ಠಾಣೆಯ ಸಬ್‌ ಇನ್ಸ್‌ಪೆಕ್ಟರ್‌ ರಾಕೇಶ್, “ಘಟನೆಯ ಸಂದರ್ಭದಲ್ಲಿ ಟ್ರ್ಯಾಕ್ಟರ್‌ನಲ್ಲಿ 14 ಮಂದಿ ಕಾರ್ಮಿಕರಿದ್ದರು. ಎಲ್ಲರೂ ಈಜಿ ಹೊರಬಂದಿದ್ದಾರೆ. ಯಾರಾದರೂ ಟ್ರ್ಯಾಕ್ಟರ್ ಅಡಿಯಲ್ಲಿ ಸಿಲುಕಿರಬಹುದಾದ ಸಾಧ್ಯತೆ ಇರುವುದರಿಂದ ಹುಡುಕಾಟ ಅಗ್ನಿಶಾಮಕ, ಮುಳುಗು ತಜ್ಞರನ್ನು ಸ್ಥಳಕ್ಕೆ ಕರೆಸಿ ನಡೆಸಿದ್ದೆವು. ಎಲ್ಲರೂ ಸುರಕ್ಷಿತವಾಗಿರುವುದನ್ನು ಖಚಿತಪಡಿಸಿಕೊಂಡ ಬಳಿಕ ಕಾರ್ಯಾಚರಣೆ ಸ್ಥಗಿತಗೊಳಿಸಿದ್ದೇವೆ” ಎಂದು ತಿಳಿಸಿದರು.

“ಕಾರ್ಮಿಕರನ್ನು ಟ್ರ್ಯಾಕ್ಟರ್‌ ಟ್ರಾಲಿಯಲ್ಲಿ ಕರೆದುಕೊಂಡು ಹೋಗಿದ್ದಲ್ಲದೇ, ನೀರಿನ ಅಪಾಯವಿದ್ದರೂ ನಿರ್ಲಕ್ಷ್ಯ ವಹಿಸಿದ ಹಿನ್ನೆಲೆಯಲ್ಲಿ ಫ್ಯಾಕ್ಟರಿ ಮಾಲೀಕರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದೇವೆ” ಎಂದು ತೋರಣಗಲ್ಲು ಎಸ್ಐ ಈ ದಿನ.ಕಾಮ್‌ಗೆ ಮಾಹಿತಿ ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ‘SIR’ ವಿರುದ್ಧ ಮಾನಸಗಂಗೋತ್ರಿಯಲ್ಲಿ ಪ್ರತಿಭಟನಾ ಜಾಥಾ

ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ವಿರೋಧಿಸಿ, ಸಂವಿಧಾನದ...

ಕಂಬಳ, ತುಳುನಾಡಿನ ಟ್ಯಾಬ್ಲೋ ಈ ಬಾರಿಯ ಮೈಸೂರು ದಸರಾದ ಭಾಗವಾಗಿವೆ: ಸಿಎಂ ಡಿ ಕೆ ಶಿವಕುಮಾರ್

“ಕರಾವಳಿಯ ಕಂಬಳ, ತುಳುನಾಡಿನ ಟ್ಯಾಬ್ಲೋ ಈ ಬಾರಿಯ ಮೈಸೂರು ದಸರಾದ ಭಾಗವಾಗಿವೆ”...

ಕೋಲಾರ | ಟಾಟಾ ಎಲೆಕ್ಟ್ರಾನಿಕ್ಸ್‌ನಲ್ಲಿ ಮಹಿಳಾ ಕಾರ್ಮಿಕರ ಸಾವು: ಸಮಗ್ರ ತನಿಖೆಗೆ ಸಿಐಟಿಯು ಒತ್ತಾಯ

ನರಸಾಪುರ ಕೈಗಾರಿಕಾ ಪ್ರದೇಶದ ಟಾಟಾ ಎಲೆಕ್ಟ್ರಾನಿಕ್ಸ್ ಕಂಪನಿಯಲ್ಲಿ ಮಹಿಳಾ ಕಾರ್ಮಿಕರ ಸಾವಿನ...

ಮಹಿಳೆಯರ ಸ್ವಾವಲಂಬನೆಗೆ ಬಿ.ಎಸ್ ಡಬ್ಲ್ಯೂ ಹೊಲಿಗೆ ತರಬೇತಿ ಶಿಬಿರ ಪೂರಕ: ರಾಮಕೃಷ್ಣ

"ಮಹಿಳೆಯರು ಕೌಶಲ್ಯಾಧಾರಿತ ತರಬೇತಿಯನ್ನು ಪಡೆದು ಆರ್ಥಿಕವಾಗಿ ಸ್ವಾವಲಂಬಿಗಳಾಗಲು ಉಚಿತ ಹೊಲಿಗೆ ತರಬೇತಿ...