ಬಳ್ಳಾರಿ | ರಸ್ತೆ ಕಾಮಗಾರಿ ಮುಗಿದರೂ ಸಂಚಾರಕ್ಕೆ‌ ಅವಕಾಶವಿಲ್ಲದ ರೈಲ್ವೆ ಅಂಡರ್ ಪಾಸ್

Date:

ಬಳ್ಳಾರಿ ನಗರದ ದುರ್ಗಮ್ಮ ಗುಡಿ ಹತ್ತಿರದ ರೈಲ್ವೆ ಅಂಡರ್ ಪಾಸ್‌ ರಸ್ತೆ ಕಾಮಗಾರಿಯು, ಅಂದಾಜು ₹1.80 ಕೋಟಿ ವೆಚ್ಚದಲ್ಲಿ ಕಾಂಕ್ರೀಟ್ ರಸ್ತೆ ನಿರ್ಮಾಣವಾಗಿದೆ. ಕೇಂದ್ರವು ʼರೆಡ್ ಇನ್ಪ್ರಾʼ ಗುತ್ತಿಗೆದಾರರ ಮೂಲಕ ರಸ್ತೆ ಅಭಿವೃದ್ಧಿ ಮಾಡಿಸಿದ್ದು, ಕಾಲುದಾರಿಯೂ ನಿರ್ಮಾಣವಾಗಿದೆ. ಆದರೆ ವಿದ್ಯುತ್ ವ್ಯವಸ್ಥೆಯಾಗದೆ ಸಂಚಾರಕ್ಕೆ ತೊಂದರೆಯಾಗುತ್ತಿದೆ.

- Advertisement -

“ರಸ್ತೆ ದುರಸ್ತಿಗೋಸ್ಕರ ವಾಹನಗಳ ಸಂಚಾರ ಬಂದ್ ಮಾಡಿರುವುದರಿಂದ ಇತರೆ ರಸ್ತೆಗಳಲ್ಲಿ ಸಂಚಾರ ದಟ್ಟಣೆ ಹೆಚ್ಚಾಗಿದೆ. ಆದರೆ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು ಮಾತ್ರ ಇಂದು ಮುಗಿಯಲಿದೆ, ನಾಳೆ ಮುಗಿಯಲಿದೆಯೆಂದು ಸಬೂಬು ಹೇಳುತ್ತಿದ್ದಾರೆ. ನಾಳೆ, ನಾಳೆ ಎನ್ನುವ ಕಾರಣ ಕೊಡುವುದು ಯಾವಾಗ ನಿಲ್ಲುವುದೋ ದೇವರೇ ಬಲ್ಲ” ಎಂದು ಪಟ್ಟಣದ ನಾಗರಿಕರು ಅಧಿಕಾರಿಗಳಿಗೆ ಹಿಡಿಶಾಪ ಹಾಕುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...
ಕಾಂಕ್ರೀಟ್‌ ರಸ್ತೆ

ಈ ಕುರಿತು ಈ ದಿನ.ಕಾಮ್‌ನೊಂದಿಗೆ ಸ್ಥಳೀಯರು ಮಾತನಾಡಿ, “ರಸ್ತೆಯ ಎರಡು ಬದಿಯಲ್ಲಿನ ಗೋಡೆಗೆ ವಿವಿಧ ವರ್ಣದ ಚಿತ್ತಾರ ಬಿಡಿಸಿರುವುದು ಸ್ವಾಗತಾರ್ಹ. ಆದರೆ ಆ ರಸ್ತೆಯನ್ನು ಬಂದ್ ಮಾಡಿ 2 ತಿಂಗಳು ಕಳೆದರೂ ಸಾರ್ವಜನರು ಓಡಾಡಲು ಅನುಕೂಲ ಮಾಡಿಕೊಟ್ಟಿಲ್ಲ. ಇದರಿಂದ ವಾಹನಸವಾರರಿಗೆ, ಪಾದಚಾರಿಗಳ ಸಂಚಾರಕ್ಕೆ ಪರದಾಡುವಂತಾಗಿದೆ. ಹಾಗಾಗಿ ಅಂಡರ್ ಪಾಸ್‌ ರಸ್ತೆಯನ್ನು ಕೂಡಲೇ ಸಂಚಾರ ಯೋಗ್ಯ ಮಾಡಿಕೊಡಬೇಕು” ಎಂದು ಒತ್ತಾಯಿಸಿದರು.

ಈ ಸುದ್ಧಿ ಓದಿದ್ದಿರಾ? ಬಳ್ಳಾರಿ | ಉದ್ಯೋಗ, ಆರ್ಥಿಕ ಸಮಾನತೆ ನೀಡುವಲ್ಲಿ ಕೇಂದ್ರ ಬಜೆಟ್ ವಿಫಲ: ಡಿವೈಎಫ್‌ಐ ಆರೋಪ

ಸ್ಥಳೀಯ ನಿವಾಸಿ ವಿಜಯಕುಮಾರ್‌ ಈ ದಿನ.ಕಾಮ್‌ನೊಂದಿಗೆ ಮಾತನಾಡಿ, “ಸಾರ್ವಜನಿಕರಿಗೆ ಮುಕ್ತವಾಗಿ ಸಂಚರಿಸಲು ನಿರ್ಮಾಣ ರಸ್ತೆ ತೆರವು ಮಾಡುವುದರಲ್ಲಿಯೂ ರಾಜಕೀಯ ಮಾಡುತ್ತಿದ್ದಾರೆ. ಹೀಗೇ ಆದರೆ ನಗರದಲ್ಲಿ ವಾಹನ ಸಂಚಾರಕ್ಕೆ ಅಡೆತಡೆಯಾಗುತ್ತದೆ. ಜನರು ಸಂಚರಿಸಲು ಪರದಾಡುವಂತಾಗುತ್ತದೆ. ಆದ್ದರಿಂದ, ಶಾಸಕರು, ಸಂಸದರು, ಸಚಿವರು ಸೇರಿದಂತೆ ಸ್ಥಳೀಯ ನಾಯಕರು ರಾಜಕಾರಣ ಹೊರಗಿಟ್ಟು ನಗರದ ಅಬಿವೃದ್ಧಿ ಕಡೆ ಚಿಂತಿಸಬೇಕು” ಎಂದು ಆಗ್ರಹಿಸಿದರು.

IMG 20241219 WA0001
ಕೇಶವ ಕಟ್ಟಿಮನಿ
+ posts

ಕೃಷಿ, ಪುಸ್ತಕ ಓದುಗ,

ಫೀಲ್ಡ್ ಕೋರ್ಡಿನೇಟರ್,
ಕೊಪ್ಪಳ ಮತ್ತು ಬಳ್ಳಾರಿ, ಮಾಸ್ ಮೀಡಿಯಾ ಫೌಂಡೇಶನ್

ಪೋಸ್ಟ್ ಹಂಚಿಕೊಳ್ಳಿ:

ಕೇಶವ ಕಟ್ಟಿಮನಿ
ಕೇಶವ ಕಟ್ಟಿಮನಿ
ಕೃಷಿ, ಪುಸ್ತಕ ಓದುಗ, ಫೀಲ್ಡ್ ಕೋರ್ಡಿನೇಟರ್, ಕೊಪ್ಪಳ ಮತ್ತು ಬಳ್ಳಾರಿ, ಮಾಸ್ ಮೀಡಿಯಾ ಫೌಂಡೇಶನ್

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ₹10 ಕೋಟಿಗೂ ಅಧಿಕ ಅವ್ಯವಹಾರ ಆರೋಪ; ಕಿರಿಯ ಅಭಿಯಂತರ ಅಮಾನತು

ಸಿಂಧನೂರು ಉಪವಿಭಾಗದ ಕಿರಿಯ ಅಭಿಯಂತರ ನಾಗರಾಜ ಪ್ರಭಾ ಅವರನ್ನು ₹10 ಕೋಟಿಗೂ...

ಕರಾವಳಿಯಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆ: ಪರಿಶೀಲನೆಗೆ ಸಮಿತಿ ರಚನೆ

ಕರಾವಳಿಯಲ್ಲಿ ಹೈಕೋರ್ಟ್ ಸಂಚಾರಿ ಅಥವಾ ಶಾಶ್ವತ ಪೀಠ ಸ್ಥಾಪಿಸುವ ನಿಟ್ಟಿನಲ್ಲಿ ಪರಿಶೀಲನೆ...

ಕಲಬುರಗಿ | ಕನ್ನಡ ಅಧ್ಯಾಪಕರು ಸಂಘಟಿತರಾಗಿ ಭಾಷೆಯ ಉಳಿವಿಗೆ ಶ್ರಮಿಸಬೇಕು: ಪ್ರೊ. ಶಶಿಕಾಂತ ಉಡಿಕೇರಿ

ಕನ್ನಡ ಭಾಷೆಯ ಪೋಷಣೆ, ಉಳಿವು ಹಾಗೂ ಬೆಳವಣಿಗೆಗೆ ಕನ್ನಡ ಅಧ್ಯಾಪಕರು ಸಂಘಟಿತರಾಗಿ...

ಸಾಮಾಜಿಕ ಕಾರ್ಯಕರ್ತ ನದೀಮ್ ಖಾನ್ ಗೃಹಬಂಧನ: ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕ ಖಂಡನೆ

ಮಸೀದಿಗಳು ಮತ್ತು ಇತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿಗಳು, ಮತದಾರರ ಪಟ್ಟಿಯಲ್ಲಿನ...