ಬಳ್ಳಾರಿ | ನಕಲಿ ವೈದ್ಯರ ಎರಡು ಕ್ಲಿನಿಕ್ ಸೀಜ಼್: ಡಿಎಚ್‌ಒ ಯಲ್ಲಾ ರಮೇಶ್ ಬಾಬು ಕ್ರಮ

Date:

ಯಾವುದೇ ವೈದ್ಯಕೀಯ ಪದವಿ ಪಡೆಯದೆ ಔಷಧಿಗಳ ಮಾಹಿತಿ ಪಡೆದುಕೊಂಡು ತಾವು ವೈದ್ಯರೆಂದು ಸುಳ್ಳು ಹೇಳಿಕೊಂಡು ಕೊಳಗಲ್ಲು ಗ್ರಾಮದಲ್ಲಿ ವೈದ್ಯ ವೃತ್ತಿ ಮಾಡುತ್ತಿದ್ದ ಇಬ್ಬರು ನಕಲಿ ವೈದ್ಯರ ಕ್ಲಿನಿಕ್‌ಗಳನ್ನು ಸೀಜ಼್ ಮಾಡಲಾಗಿದೆ ಎಂದು ಬಳ್ಳಾರಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಯಲ್ಲಾ ರಮೇಶ್ ಬಾಬು ಹೇಳಿದ್ದಾರೆ.

- Advertisement -

“ಸಾರ್ವಜನಿಕರಿಂದ ದೂರು ಬಂದ ಹಿನ್ನಲೆಯಲ್ಲಿ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರ ಸೂಚನೆ ಮೇರೆಗೆ ಬಳ್ಳಾರಿ ತಾಲೂಕು ಆರೋಗ್ಯಾಧಿಕಾರಿ ಡಾ.ಅಬ್ದುಲ್ಲಾ ಆರ್ ನೇತೃತ್ವದ ತಂಡವು ಕುರುಗೋಡು ತಾಲೂಕಿನ ಕೊಳಗಲ್ಲು ಗ್ರಾಮದಲ್ಲಿ ಎರಡು ನಕಲಿ ಕ್ಲಿ‌ನಿಕ್‌ಗಳನ್ನು ಸೀಜ಼್ ಮಾಡಿದೆ” ಎಂದು ಡಿಎಚ್‌ಒ ಯಲ್ಲಾ ರಮೇಶ್ ಬಾಬು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

“ಸಾರ್ವಜನಿಕರಿಗೆ ತಾವು ವೈದ್ಯರೆಂದು ನಂಬಿಸಿ ಯಾವುದೇ ವೈದ್ಯಕೀಯ ಪದವಿ ಪಡೆಯದೆ ಕೇವಲ ಪಿಯುಸಿವರೆಗೂ ಓದಿಕೊಂಡು ಔಷಧಿಗಳ ಬಗ್ಗೆ ಮಾಹಿತಿ ಪಡೆದು, ಜನತೆಗೆ ಚಿಕಿತ್ಸೆ ನೀಡುತ್ತಿದ್ದ ಮಹೇಶ್ ಕ್ಲಿನಿಕ್, ಮೆಹಬೂಬ್ ಭಾಷಾ ಕ್ಲಿನಿಕ್‌ಗಳನ್ನು ಸೀಜ್ ಮಾಡಿ ಜಿಲ್ಲಾಧಿಕಾರಿಗಳ ಮುಂದಿನ ಕ್ರಮಕ್ಕಾಗಿ ವರದಿ ನೀಡಲಾಗಿದೆ” ಎಂದು ತಿಳಿಸಿದ್ದಾರೆ.

“ಸಾರ್ವಜನಿಕರು ತಮ್ಮ ಆರೋಗ್ಯದ ದೃಷ್ಟಿಯಿಂದ ಅಧಿಕೃತ ಎಂಬಿಬಿಎಸ್‌ ಪದವಿ ಪಡೆದ ವೈದ್ಯರ ಬಳಿ ತಪಾಸಣೆ ಮಾಡಿಸಬೇಕು. ಅವರಿಂದಲೇ ಚಿಕಿತ್ಸೆ ಪಡೆಯುವುದರಿಂದ ಆರೋಗ್ಯದ ಮೇಲೆ ಉಂಟಾಗಬಹುದಾದ ಗಂಭೀರ ಪರಿಣಾಮಗಳನ್ನು ತಡೆಯಬಹುದಾಗಿದೆ” ಎಂದು ಸಲಹೆ ನೀಡಿದರು.

ಈ ಸುದ್ದಿ ಓದಿದ್ದೀರಾ? ವಿಜಯಪುರ | ವೃಕ್ಷಥಾನ್ ಹೆರಿಟೇಜ್‌ ರನ್‌ ಸಿದ್ಧತೆಗೆ ಮಹಾಂತೇಶ ಬಿರಾದಾರ ಸೂಚನೆ

“ಗ್ರಾಮಗಳಲ್ಲಿ ವೈದ್ಯ ವೃತ್ತಿ ಮಾಡುತ್ತಿರುವವರು ಕಂಡುಬಂದಲ್ಲಿ ಅವರ ವೈದ್ಯಕೀಯ ಪದವಿ ಮಾಹಿತಿ ಪಡೆದುಕೊಂಡು ಚಿಕಿತ್ಸೆ ಪಡೆಯಬೇಕು. ಒಂದು ವೇಳೆ ನಕಲಿ ವೈದ್ಯರೆಂದು ಕಂಡುಬಂದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಾರ್ಯಾಲಯಕ್ಕೆ ದೂರು ನೀಡಿದರೆ ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ ಅಧಿನಿಯಮ 2007 ರಡಿ ಕ್ರಮ ಜರುಗಿಸಬಹುದಾಗಿದೆ” ಎಂದು ಹೇಳಿದ್ದಾರೆ.

ಕುರುಗೋಡು ವೈದ್ಯಾಧಿಕಾರಿ ಡಾ ಮಂಜುನಾಥ ಜವಳಿ, ಜಿಲ್ಲಾ ಕೆಪಿಎಂಇ ವಿಭಾಗದ ಆರೋಗ್ಯ ನಿರೀಕ್ಷಣಾಧಿಕಾರಿ ಅರುಣ್ ಕುಮಾರ್, ಗೋಪಾಲ್ ಕೆ ಹೆಚ್ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಜನಪ್ರತಿನಿಧಿಗಳನ್ನು ಕಡೆಗಣಿಸಿ ಕಾಮಗಾರಿ ನಡೆಸಿದರೆ ಸಹಿಸುವುದಿಲ್ಲ: ಶಾಸಕ ಡಾ.ಕೊತ್ತೂರು ಜಿ ಮಂಜುನಾಥ್ ಗರಂ

ಸ್ಥಳೀಯ ಜನಪ್ರತಿನಿಧಿಗಳ ಗಮನಕ್ಕೆ ತರದೆ ಹಾಗೂ ಶಿಷ್ಟಾಚಾರ ಪಾಲಿಸದೆ ಏಕಾಏಕಿ ಕಾಮಗಾರಿಗಳನ್ನು...

ಕೊಲ್ಹಾರ | ಶಾಸಕರಿಲ್ಲದ ಪ್ರಜಾಸೇವಾ ಆಂದೋಲನ: ಅಹವಾಲು ಹೊತ್ತುಬಂದವರಿಗೆ ನಿರಾಸೆ, ಅಧಿಕಾರಿಗಳಿಂದ ಪರಿಹಾರದ ಭರವಸೆ

ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ಶಾಸಕರಿಲ್ಲದೆ ಪ್ರಜಾಸೇವಾ ಆಂದೋಲನ ನಡೆಯಿತು. ಇದರಿಂದಾಗಿ...

ಬಾಗಲಕೋಟೆ | ಹಾವು ಕಚ್ಚಿದರೆ ಕ್ಷಣವೂ ತಡಮಾಡದೆ, ಸರ್ಕಾರಿ ಆಸ್ಪತ್ರೆಯತ್ತ ಧಾವಿಸಿ: ಡಾ. ಮಹೇಶ ಕೋಣಿ

ಹಾವು ಕಡಿತಕ್ಕೆ ಒಳಗಾದವರು ಆತಂಕಕ್ಕೊಳಗಾಗಿ ನಾಟಿ ಚಿಕಿತ್ಸೆ, ನಕಲಿ ವೈದ್ಯರ ಮೊರೆ...

ರಾಯಚೂರು | ಕೆ. ಶಾಂತಪ್ಪ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿರುವುದು ಸಂತಸದ ವಿಚಾರ: ಬೋಸರಾಜು

ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಕೆ. ಶಾಂತಪ್ಪ ಅವರು ಜವಾಬ್ದಾರಿ...