ಬಳ್ಳಾರಿ | ಜರ್ಮನಿಯ ಲಿಂಡೌ ನೊಬೆಲ್ ಸಭೆಗೆ ಜಿಲ್ಲೆಯ ಇಬ್ಬರು ವಿದ್ಯಾರ್ಥಿನಿಯರು ಆಯ್ಕೆ

Date:

ಜರ್ಮನಿಯ ಲಿಂಡೌನಲ್ಲಿ ಜೂನ್ 29ರಿಂದ ಜುಲೈ 4ರವರೆಗೆ ಜರುಗಲಿರುವ ಪ್ರತಿಷ್ಠಿತ ಅಂತಾರಾಷ್ಟ್ರೀಯ ಲಿಂಡೌ ನೊಬೆಲ್ ಪುರಸ್ಕೃತರ ಸಭೆಗೆ ಬಳ್ಳಾರಿಯ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ರಸಾಯನಶಾಸ್ತ್ರ ವಿಭಾಗದ ಸಂಶೋಧನಾ ವಿದ್ಯಾರ್ಥಿಗಳಾದ ಗೌತಮಿ ಪಾಟೀಲ್ ಮತ್ತು ಡಾ.ನಸೀಮ್ ಕೌಸರ್ ಆಯ್ಕೆಯಾಗಿದ್ದಾರೆ.

- Advertisement -

ಕೇಂದ್ರ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವಾಲಯದ ಡಿಎಸ್‌ಟಿ ದೇಶವ್ಯಾಪಿ ಆಯ್ಕೆ ಮಾಡಿರುವ ಒಟ್ಟು 29 ಯುವ ವಿಜ್ಞಾನಿಗಳ ಪೈಕಿ ಬಳ್ಳಾರಿಯ ಇಬ್ಬರು ವಿದ್ಯಾರ್ಥಿಗಳು ಸ್ಥಾನ ಪಡೆದಿರುವುದು ವಿಶೇಷ ಹಾಗೂ ರಾಜ್ಯದ ಹೆಮ್ಮೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

‘Quockerwodger’: ಶಶಿ ತರೂರ್ ಸೂಚಿಸಿದ ಹೊಸ ರಾಜಕೀಯ ಪದ!

ಇದು 19ನೇ ಶತಮಾನದ ಇಂಗ್ಲಿಷ್ ಭಾಷೆಯಲ್ಲಿ ಬಳಕೆಯಲ್ಲಿದ್ದ ಅಪರೂಪದ ಪದ. ಮೂಲತಃ ದಾರಗಳ ಮೂಲಕ ನಿಯಂತ್ರಿಸಲ್ಪಡುವ ಮರದ ಗೊಂಬೆಯನ್ನು ಸೂಚಿಸುತ್ತಿತ್ತು. ಗೊಂಬೆಯಾಟದಲ್ಲಿ ಸೂತ್ರಧಾರ ದಾರ ಎಳೆದಂತೆ ಗೊಂಬೆ ಕೈಕಾಲು ಆಡಿಸುತ್ತದೆ. ಗೊಂಬೆ ಚಲಿಸುತ್ತದೆಯೇ...

ರಾಷ್ಟ್ರೀಯವಾದ ಹೊಟ್ಟೆ ತುಂಬಿಸುವುದಿಲ್ಲ; ಟ್ರಂಪ್‌ಗೆ ಅಮೆರಿಕನ್ನರು ಕಲಿಸಿದ ಪಾಠ...

ಬೆಲೆ ಏರಿಕೆ, ದುಬಾರಿ ಜೀವನ, ಕುಸಿಯುತ್ತಿರುವ ಖರೀದಿ ಸಾಮರ್ಥ್ಯ ಹಾಗೂ ಆರ್ಥಿಕ ಅನಿಶ್ಚಿತತೆ—ಇವು ಇತ್ತೀಚೆಗೆ ನಡೆದ ಅಮೆರಿಕದ ಮಧ್ಯಂತರ ಚುನಾವಣಾ ವಿಷಯಗಳಾಗಿದ್ದವು. ಇದು ರಾಷ್ಟ್ರೀಯತೆಯ ಆವೇಶ, ಬಲಿಷ್ಠ ನಾಯಕತ್ವವೆಂಬ ಪ್ರಚಾರ ಹಾಗೂ ರಾಜಕೀಯ...

ಕ್ಯಾಂಪಸ್ ರಾಜಕಾರಣದ ಹರಣ: ಎಎಂಯು, ಜಾಮಿಯಾದಲ್ಲಿ ಸೊಲ್ಲಡಗಿದ್ದರ ಆಂತರ್ಯವೇನು?

ಸ್ವಾತಂತ್ರ್ಯ ಸಂಗ್ರಾಮದ ಗರಡಿಯಾಗಿ, ದೇಶಕ್ಕೆ ಕ್ರಾಂತಿಕಾರಿ ನಾಯಕರನ್ನು ನೀಡಿದ್ದ ಅಲೀಗಢ ಮತ್ತು ಜಾಮಿಯಾ ಅಂಗಳಗಳು ಇಂದು ಮೌನಕ್ಕೆ ಜಾರಿವೆ. 2006ರ ನಿರ್ಬಂಧಗಳಿಂದ ಹಿಡಿದು ಮೋದಿ ಸರ್ಕಾರದ ಅವಧಿಯ ತನಿಖೆಗಳವರೆಗೆ - ಮುಸ್ಲಿಂ ವಿಶ್ವವಿದ್ಯಾಲಯಗಳ...

ಪ್ರತಿವರ್ಷ ಜರುಗುವ ಲಿಂಡೌ ಜಾಗತಿಕ ಸಭೆಯಲ್ಲಿ ವಿಶ್ವದ ಆಯ್ದ 600 ಯುವ ವಿಜ್ಞಾನಿಗಳನ್ನು ಆಹ್ವಾನಿಸಿ ನೊಬೆಲ್ ಪ್ರಶಸ್ತಿ ಪುರಸ್ಕೃತ ದಿಗ್ಗಜರೊಂದಿಗೆ ಚರ್ಚಾಕೂಟ, ದುಂಡು ಮೇಜಿನ ಪರಿಷತ್ತುಗಳನ್ನು ನಡೆಸುತ್ತದೆ.

74ನೇ ಆವೃತ್ತಿಯ ಸಮ್ಮೇಳನವು ಈ ಬಾರಿ ರಸಾಯನಶಾಸ್ತ್ರ ವಿಷಯಕ್ಕೆ ಮೀಸಲಿಟ್ಟಿದ್ದು, ಆಯ್ಕೆಗೊಂಡಿರುವ ವಿದ್ಯಾರ್ಥಿಗಳ ಪ್ರವಾಸ ಹಾಗೂ ಇನ್ನಿತರ ಖರ್ಚು, ವೆಚ್ಚಗಳನ್ನು ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ (ಡಿಎಸ್‌ಟಿ) ನಿಭಾಯಿಸಲಿದೆ.
ಈ ಸಂಶೋಧನಾರ್ಥಿಗಳು ವಿವಿಯ ರಸಾಯನಶಾಸ್ತ್ರ ವಿಭಾಗದ ಪ್ರಾಧ್ಯಾಪಕರಾದ ಪ್ರೊ.ಕೆ.ಎಸ್ ಲೋಕೇಶ್ ಇವರ ಮಾರ್ಗದರ್ಶನದಲ್ಲಿ ಪಿಹೆಚ್‌ಡಿ ಮಾಡುತ್ತಿದ್ದಾರೆ.

ಇದನ್ನೂ ಓದಿ: ಬಳ್ಳಾರಿ | ಸರ್ಕಾರಿ ಆದರ್ಶ ವಿದ್ಯಾಲಯದ ಪ್ರವೇಶ ಪತ್ರ ಪ್ರಕಟ

ಲಿಂಡೌ ನೊಬೆಲ್ ಸಭೆಗೆ ಆಯ್ಕೆಯಾದ ವಿದ್ಯಾರ್ಥಿನಿಯರಿಗೆ ವಿವಿ ಕುಲಪತಿ ಪ್ರೊ.ಎಂ ಮುನಿರಾಜು, ಕುಲಸಚಿವ ಎಸ್.ಎನ್ ರುದ್ರೇಶ್ ಹಾಗೂ ಮೌಲ್ಯಮಾಪನ ಕುಲಸಚಿವ ಪ್ರೊ.ಎನ್.ಎಂ. ಸಾಲಿ ಹಾಗೂ ವಿಭಾಗದ ಸಿಬ್ಬಂದಿ ಶುಭಾಶಯ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಪರಶುರಾಮ ಪ್ರತಿಮೆ ವಿವಾದಕ್ಕೆ ತೆರೆ ಎಳೆಯಲು ಸರಕಾರದ ಹೆಜ್ಜೆ: ಹೊಸ ಟೆಂಡರ್‌ಗೆ ನಿರ್ಧಾರ

ಕಾರ್ಕಳ ಬೈಲೂರಿನ ಉಮ್ಮಿಕಲ್ ಬೆಟ್ಟದಲ್ಲಿರುವ ಪರಶುರಾಮ ಥೀಮ್ ಪಾರ್ಕ್ ಅಭಿವೃದ್ಧಿ ಹಾಗೂ...

ವಿಜಯಪುರ |ಮಹಿಳಾ ವಿವಿಯಲ್ಲಿ ನಾಳೆ ‘ದೂರದರ್ಶನ ನಿರೂಪಣೆ’ ಕಾರ್ಯಾಗಾರ

ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ...

ಬಾಗಲಕೋಟೆ |ಬೆಳೆ ನಷ್ಟದ ಸಂಕಷ್ಟಕ್ಕೆ ವಿಮಾ ಭದ್ರತೆ: ರೈತರಿಗೆ ಜಿಲ್ಲಾಧಿಕಾರಿ ಸಂಗಪ್ಪ ಕರೆ

ಹವಾಮಾನ ವೈಪರೀತ್ಯ ಹಾಗೂ ಪ್ರಕೃತಿ ವಿಕೋಪಗಳಿಂದ ಬೆಳೆ ನಷ್ಟ ಅನುಭವಿಸುವ ರೈತರಿಗೆ...

ಉಡುಪಿ | ಮಾದಕ ದ್ರವ್ಯಮುಕ್ತ ಭಾರತ ನಿರ್ಮಾಣಕ್ಕೆ ಯುವಜನತೆ ಕೈಜೋಡಿಸಿ : ಪ್ರೊ. ನಿಕೇತನ

ಮಾದಕ ದ್ರವ್ಯಮುಕ್ತ ಭಾರತ ನಿರ್ಮಾಣದ ಉದ್ದೇಶದಿಂದ ಯುವಜನರಲ್ಲಿ ಮಾದಕ ದ್ರವ್ಯಗಳ ದುಷ್ಪರಿಣಾಮಗಳ...