ಬಳ್ಳಾರಿ | ಎರಡು ವರ್ಷದ ಮಗುವಿಗೆ ಲಿವರ್ ಸಮಸ್ಯೆ: ದಾನಿಗಳ ನೆರವಿಗಾಗಿ ಕಾಯುತ್ತಿರುವ ಪೋಷಕರು

Date:

ಎರಡು ವರ್ಷದ ಮಗುವೊಂದು ಲಿವರ್ ಸಮಸ್ಯೆಯಿಂದ ಬಳಲುತ್ತಿದ್ದು, ಲಿವರ್ ಟ್ರಾನ್ಸ್ ಪ್ಲ್ಯಾಂಟ್ ಮಾಡಲು 18 ಲಕ್ಷ ವೆಚ್ಚ ವ್ಯಯಿಸಬೇಕಾಗಿದೆ. ಹೀಗಾಗಿ, ಮಗುವನ್ನು ಉಳಿಸಿಕೊಳ್ಳಲು ಹಣದ ನೆರವು ನೀಡುವಂತೆ ಪೋಷಕರು ದಾನಿಗಳ ಮೊರೆ ಹೋಗಿದ್ದಾರೆ.

- Advertisement -

ಲಿವರ್ ಸಮಸ್ಯೆಯಿಂದ ಬಳಲುತ್ತಿರುವ ಎರಡೂವರೆ ವರ್ಷದ ಮಗುವನ್ನು ಉಳಿಸಿಕೊಳ್ಳಲು ತಾಯಿಯೇ ತನ್ನ ಲಿವರ್ ಕೊಡಲು ಸಿದ್ಧವಾಗಿದ್ದಾಳೆ. ಆದರೆ, ಟ್ರ್ಯಾನ್ಸ್ ಪ್ಲ್ಯಾಂಟ್ ಮಾಡಲು ಹಣಕಾಸಿನ ಸಮಸ್ಯೆ ಎದುರಾಗಿದ್ದು, ಸಹಾಯ ಮಾಡುವಂತೆ ಪೋಷಕರು ಮನವಿ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಮೂಲತಃ ನಗರದಲ್ಲಿನ ಕೌಲ್ ಬಜಾರ್ ಟೈಲರ್ ಸ್ಟ್ರೀಟ್ ನಿವಾಸಿ ಮಹೇಶ್ ಅವರು ಕ್ಷೌರಿಕ ವೃತ್ತಿ ಮಾಡುತ್ತಿದ್ದು, ತಾಯಿ ಎಂ.ಮಂಜುಳಾ ಅವರು ಗೃಹಿಣಿಯಾಗಿದ್ದಾರೆ. ಈ ದಂಪತಿಗಳಿಗೆ ಇಬ್ಬರು ಮಕ್ಕಳು ಇದ್ದಾರೆ. ಹಿರಿಯ ಮಗಳು ಪ್ರಣೀತಾ, ಎರಡನೇ ಮಗು ರಿಷಿ. ಎರಡೂವರೆ ವರ್ಷದ ರಿಷಿ ಕಳೆದ ಕೆಲವು ವರ್ಷಗಳಿಂದ ಲಿವರ್ ಸಮಸ್ಯೆಯಿಂದ ಬಳಲುತ್ತಿದೆ.

ಲಿವರ್ ಸಮಸ್ಯೆಯಿಂದ ಬಳಲುತ್ತಿರುವ ತಮ್ಮ ಮಗನಿಗೆ ಚಿಕಿತ್ಸೆ ಕೊಡಿಸಲು ಈಗಾಗಲೇ ಸಾಕಷ್ಟು ಹಣ ಖರ್ಚು ಮಾಡಿದ್ದಾರೆ. ಇದೀಗ ಮಗುವಿಗೆ ಲಿವರ್ ಟ್ರಾನ್ಸ್ ಪ್ಲ್ಯಾಂಟ್  ಮಾಡಬೇಕಾಗಿದೆ. ಮಗುವಿನ ತಾಯಿ ಮಂಜುಳ ಅವರೇ ತನ್ನ ಮಗುವಿಗೆ ಲಿವರ್ ನೀಡಲು ಸಿದ್ಧವಾಗಿದ್ದಾರೆ ಎಂದು ಪತಿ ಮಹೇಶ್ ಹೇಳಿದ್ದು, ಆದರೆ ಲಿವರ್ ಟ್ರಾನ್ಸ್ ಪ್ಲ್ಯಾಂಟ್ ಮಾಡಲು ಸುಮಾರು 18 ಲಕ್ಷ ರೂಪಾಯಿ ವೆಚ್ಚವಾಗುತ್ತಿದೆ ಎಂದು ವೈದ್ಯರು ತಿಳಿಸಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

ಇದನ್ನು ಓದಿದ್ದೀರಾ? ದಾವಣಗೆರೆ | ಯುಬಿಡಿಟಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ನೇರ ನೇಮಕಾತಿಗೆ ಒತ್ತಾಯಿಸಿ ಎಐಯುಟಿಯುಸಿ ಪ್ರತಿಭಟನೆ

ಸಾವು-ಬದುಕಿನ ಮಧ್ಯೆ ಹೋರಾಡುತ್ತಿರುವ ತಮ್ಮ ಮಗನ ಉಳಿಸಿಕೊಳ್ಳಲು ಪೋಷಕರು, ದಾನಿಗಳು ನೆರವು ನೀಡುವಂತೆ ಮನವಿ ಮಾಡಿದ್ದಾರೆ. ಲಿವರ್ ಸಮಸ್ಯೆಯಿಂದ ಬಳಲುತ್ತಿರುವ ರಿಷಿ, ಕಿದ್ವಾಯಿ ಆಸ್ಪತ್ರೆ ಕಿಮೋಥೆರಪಿ ಚಿಕಿತ್ಸೆ ಕೊಡಿಸಲಾಗಿದೆ. ಇದೀಗ  ಮಣಿಪಾಲ ಆಸ್ಪತ್ರೆಯಲ್ಲಿ ಲಿವರ್ ಟ್ರಾನ್ಸ್ ಪ್ಲೆಂಟ್ ಮಾಡಬೇಕಾಗಿದ್ದು ಚಿಕಿತ್ಸೆಗೆ ಸುಮಾರು 18 ಲಕ್ಷ ರೂಪಾಯಿ ಹಣ ಖರ್ಚಾಗುತ್ತದೆ ಎಂದು ವೈದ್ಯರು ಹೇಳಿದ್ದಾರೆ ಎಂದು ಪೋಷಕರು ತಿಳಿಸಿದ್ದಾರೆ.

ದಾನಿಗಳು ಹಣಕಾಸಿನ ಸಹಾಯ ಮಾಡುವುದಾದರೆ ಈ ಕೆಳಗಿನ ವಿವರದ ಮೂಲಕ ನೆರವು ನೀಡುವಂತೆ ಮನವಿ ಮಾಡಿದ್ದಾರೆ:

ಖಾತೆಯ ಹೆಸರು:ಎಂ.ಮಂಜುಳಾ,

ಕರ್ನಾಟಕ ಗ್ರಾಮೀಣ ಬ್ಯಾಂಕ್ ಬಳ್ಳಾರಿ,

ಖಾತೆ ಸಂಖ್ಯೆ: 10584101110793

IFSC CODE:PKGB0010584

Phonepe: 7406350074

ದೂರವಾಣಿ ಸಂಖ್ಯೆ: 7406350074

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...

ಉಡುಪಿ | ಕಂಡ್ಲೂರಿನಲ್ಲಿ ಹೋಂ ಸ್ಟೇ ಎನ್‌ಒಸಿಗೆ ₹5 ಸಾವಿರ ಲಂಚ: ವಿಎ ಲೋಕಾಯುಕ್ತ ಬಲೆಗೆ

ಕಂಡ್ಲೂರಿನಲ್ಲಿ ನಿರ್ಮಾಣವಾಗಲಿರುವ ಹೋಂ ಸ್ಟೇಗೆ ನಿರಪೇಕ್ಷಣಾ ಪತ್ರ (ಎನ್‌ಒಸಿ) ನೀಡಲು ₹5...