ಬಳ್ಳಾರಿ | ಬಂಡಿಹಟ್ಟಿಯಲ್ಲಿ ಅವೈಜ್ಞಾನಿಕವಾಗಿ ಚರಂಡಿ ನಿರ್ಮಾಣ; ಸಾರ್ವಜನಿಕರಿಂದ ತಕರಾರು

Date:

ಬಳ್ಳಾರಿ ನಗರದ ಬಂಡಿಹಟ್ಟಿ ಪ್ರದೇಶದ ಸಿದ್ದರಾಮೇಶ್ವರ ಕಾಲೋನಿ, 2ನೇ ಅಡ್ಡರಸ್ತೆ, 29ನೇ ವಾರ್ಡ್‌ ಪ್ರದೇಶದಲ್ಲಿ ಅತ್ಯಂತ ಸುಸಜ್ಜಿತವಾಗಿದ್ದ ಸಿಸಿ ರಸ್ತೆಯನ್ನು ಒಡೆದು ಹಾಕಿ ಅವೈಜ್ಞಾನಿಕವಾಗಿ ತೆರೆದ ಚರಂಡಿಯನ್ನು ನಿರ್ಮಿಸುತ್ತಿದ್ದಾರೆ. ಇದರಿಂದ ರಸ್ತೆಯಲ್ಲಿ ಓಡಾಡುವುದು ಕಷ್ಟವಾಗುತ್ತದೆ ಎಂದು ಬಂಡಿಹಟ್ಟಿ ಪ್ರದೇಶದ ಸಿದ್ದರಾಮೇಶ್ವರ ಕಾಲೊನಿಯ ಸಾರ್ವಜನಿಕರು ಮಹಾನಗರ ಪಾಲಿಕೆ ವಲಯದ ಮೂರು ಕಚೇರಿ ಆಯುಕ್ತರಿಗೆ ತಕರಾರು ಅರ್ಜಿಯನ್ನು ಸಲ್ಲಿಸಿದ್ದಾರೆ.

- Advertisement -

ಪಾಲಿಕೆ ಆಯುಕ್ತರಿಗೆ ಅರ್ಜಿಯನ್ನು ಸಲ್ಲಿಸಿದ ಸಾರ್ವಜನಿಕರು, ಈ ರಸ್ತೆ ಎಂಟರಿಂದ 10 ಅಡಿ ಇದ್ದು, ಅತ್ಯಂತ ಕಿರಿದಾಗಿದೆ, ಸುಮಾರು ಸಾವಿರಾರು ಮಂದಿ ದಿನನಿತ್ಯ ಈ ರಸ್ತೆಯಲ್ಲಿ ಓಡಾಡುತ್ತಾರೆ. ಸಿದ್ಧರಾಮೇಶ್ವರ ಕಾಲೋನಿಯ ಸಾರ್ವಜನಿಕರಿಗೆ ಓಡಾಡಲು ಇದೇ ಮುಖ್ಯ ರಸ್ತೆ ಆಗಿರುತ್ತದೆ. ಅಲ್ಲದೆ, ಪ್ರತಿನಿತ್ಯ ನೂರಾರು ಶಾಲಾ ವಿದ್ಯಾರ್ಥಿಗಳು ಕೂಲಿ ಕಾರ್ಮಿಕರು ಸೇರಿದಂತೆ ಸಾವಿರಾರು ಜನ ಓಡಾಡುತ್ತಾರೆ. ಇದರಿಂದ ಓಡಾಡುವ ಸಾರ್ವಜನಿಕರು ಬಹಳಷ್ಟು ತೊಂದರೆಯನ್ನು ಅನುಭವಿಸುತ್ತಿದ್ದಾರೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಇದನ್ನು ಓದಿದ್ದೀರಾ? ಯುಪಿಐ ತೊರೆದು ನಗದು ವ್ಯವಹಾರ ಆರಂಭಿಸಿದ ವರ್ತಕರಿಗೆ ಎಚ್ಚರಿಕೆ ನೀಡಿದ ವಾಣಿಜ್ಯ ತೆರಿಗೆ ಇಲಾಖೆ

ಅದರಲ್ಲಿ ಮತ್ತೆ ತೆರೆದ ಚರಂಡಿಯನ್ನು ನಿರ್ಮಿಸಿದಲ್ಲಿ ರಸ್ತೆ ಇನ್ನೂ ಚಿಕ್ಕದಾಗಿ ಸಾರ್ವಜನಿಕರ ಓಡಾಟಕ್ಕೆ ತೊಂದರೆಯಾಗಲಿದೆ. ಕಾರಣ ಕೂಡಲೇ ಈ ಅವೈಜ್ಞಾನಿಕವಾದ ತೆರೆದ ಚರಂಡಿ ನಿರ್ಮಾಣವನ್ನು ನಿಲ್ಲಿಸಬೇಕು ಎಂದು ಸಾರ್ವಜನಿಕರು ಆಯುಕ್ತರಿಗೆ ಮನವಿ ಮಾಡಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಜಿಲ್ಲಾ ಮಟ್ಟದ ಕಬಡ್ಡಿಯಲ್ಲಿ ಮೊರಾರ್ಜಿ ಶಾಲಾ ವಿದ್ಯಾರ್ಥಿಗಳ ಗೆಲುವು

ಜಿಲ್ಲಾ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ಪ್ರೌಢಶಾಲಾ ವಿಭಾಗದ ಬಾಲಕರ ಜಿಲ್ಲಾ ಮಟ್ಟದ...

ಉಡುಪಿ | ತೈಲದ ಮೇಲಿನ ಭಾರತದ ಅವಲಂಬನೆ ಕಡಿಮೆ ಮಾಡಲು ಹಸಿರು ಹೈಡ್ರೋಜನ್ ಸಹಕಾರಿ

ಪರ್ಯಾಯ ಇಂಧನವಾಗಿ ಹಸಿರು ಹೈಡ್ರೋಜನ್ ಭಾರತಕ್ಕೆ ಅಪಾರ ಸಾಧ್ಯತೆಗಳನ್ನು ಹೊಂದಿದ್ದು, ತೈಲದ...

ಎಂಆರ್‌ಪಿಎಲ್ ಸ್ಫೋಟ: ಮೃತ ಮನೀಶ್ ಕುಟುಂಬಕ್ಕೆ ಸಾಂತ್ವನ, ಹಾನಿಗೊಳಗಾದ ಚರ್ಚ್‌ಗೆ ಪ್ರಶಾಂತ್ ಜತ್ತನ್ನ ಭೇಟಿ

ಎಂಆರ್‌ಪಿಎಲ್‌ನ ಕೋಕರ್ ಹೈಡ್ರೋಟ್ರೀಟರ್ ಯುನಿಟ್‌ (ಸಿಎಚ್‌ಟಿಯು)ನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೃತಪಟ್ಟ ಮುಲ್ಕಿ...

ರಾಯಚೂರು | ಪ್ರವಾಸಕ್ಕೆ ತೆರಳಿದ್ದ ಕಾರು ಅಪಘಾತ: ಇಬ್ಬರು ಸಾವು, ಇಬ್ಬರಿಗೆ ಗಂಭೀರ ಗಾಯ

ಪ್ರವಾಸಕ್ಕೆ ತೆರಳಿದ್ದ ಕಾರು ಅಪಘಾತಕ್ಕೀಡಾಗಿ ನಾಲ್ವರ ಪೈಕಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು,...