ಬಳ್ಳಾರಿ | ಆಕ್ರಮವಾಗಿ ಪಡಿತರ ಅಕ್ಕಿ ಸಾಗಿಸುತ್ತಿದ್ದ ವಾಹನ ಪಲ್ಟಿ; ಇಬ್ಬರ ಸಾವು, ಮೂವರ ಸ್ಥಿತಿ ಗಂಭೀರ

Date:

ಅಕ್ರಮವಾಗಿ ಪಡಿತರ ಅಕ್ಕಿ ಸಾಗಿಸುತ್ತಿದ್ದ ವಾಹನ ಪಲ್ಟಿಯಾಗಿದ್ದು, ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದರೆ, ಮೂವರು ಗಂಭೀರವಾಗಿರುವ ಘಟನೆ ಬಳ್ಳಾರಿ ತಾಲೂಕಿನ ಮದಿರೆ ಕ್ರಾಸ್ ಬಳಿ ನಡೆದಿದೆ.

- Advertisement -

ಕುರುಗೋಡು ತಾಲೂಕಿನ ಬಾದನಹಟ್ಟಿ ಗ್ರಾಮದ ರಂಗಸ್ವಾಮಿ(40), ಕಲ್ಲುಕಂಬ ಗ್ರಾಮದ ಪರಮೇಶ್(32) ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಅಕ್ರಮವಾಗಿ ಪಡಿತರ ಅಕ್ಕಿ ಸಾಗಟ ಮಾಡುತ್ತಿದ್ದ ವೇಳೆ ಅತಿ ವೇಗವಾಗಿ ವಾಹನ ಚಲಾಯಿಸಿದ ಕಾರಣ ವಾಹನ ಪಲ್ಟಿಯಾಗಿದ್ದು, ಕಾಲುವೆಗೆ ಬಿದ್ದಿದೆ. ಬೊಲೆರೋ ವಾಹನದಲ್ಲಿ ಐವರು ಪ್ರಯಾಣಿಸುತ್ತಿದ್ದರು. ಇದರಲ್ಲಿ ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟಿದ್ದು, ಓರ್ವ ವ್ಯಕ್ತಿ ಗಂಭೀರ ಗಾಯಗೊಂಡ ಹಿನ್ನೆಲೆಯಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ವಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಕುರುಗೋಡಿನ ಎರ್ರಿಗೌಡ ಮತ್ತು ಉಮೇಶ್ ಗೌಡ ಎಂಬುವವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.

ಬೊಲೆರೋ ವಾಹನ ಪಲ್ಟಿಯಾಗಿ ಕಾಲುವೆಗೆ ಬಿದ್ದ ಬಳಿಕ ಅಕ್ರಮವಾಗಿ ಸಾಗಿಸುತ್ತಿದ್ದ ಪಡಿತರ ಅಕ್ಕಿಯ ಚೀಲಗಳನ್ನು ಬೇರೊಂದು ವಾಹನದ ಮೂಲಕ ಸಾಗಾಟ ಮಾಡಲಾಗಿದೆ. ಹಲವು ವರ್ಷಗಳಿಂದ ಅಕ್ರಮವಾಗಿ ಪಡಿತರ ಅಕ್ಕಿ ಸಂಗ್ರಹಿಸಿ ಮಾರಾಟ ಮಾಡುವ ದಂಧೆಯಲ್ಲಿ ಸಕ್ರಿಯರಾಗಿದ್ದ ಕುರುಗೋಡಿನ ಉಜ್ಜಲ ಪೇಟೆ ನಿವಾಸಿಗಳಾದ ಎರ್ರಿಗೌಡ ಮತ್ತು ಉಮೇಶ್ ಎನ್ನುವ ಸಹೋದರರಿಗೆ ಸೇರಿದ ಅಕ್ಕಿ ಎಂದು ಹೇಳಲಾಗುತ್ತಿದೆ.

ಈ ಸುದ್ದಿ ಓದಿದ್ದೀರಾ? ರಾಯಚೂರು | ಬೀದಿಬದಿ ವ್ಯಾಪಾರಿಗಳ ತೆರವು ಕಾರ್ಯಾಚರಣೆ ವಿರೋಧಿಸಿ ಪ್ರತಿಭಟನೆ

“ಈ ಇಬ್ಬರು ಸಹೋದರರು ಕಡಿಮೆ ಬೆಲೆಗೆ ಅಕ್ರಮವಾಗಿ ಪಡಿತರ ಅಕ್ಕಿ ಸಂಗ್ರಹಿಸಿ ಅಧಿಕ ಬೆಲೆಗೆ ಮಾರಾಟ ಮಾಡುತ್ತಿದ್ದರು. ಇವರ ಮೇಲೆ ಹಲವು ಬಾರಿ ಠಾಣೆಯಲ್ಲಿ ಈ ಹಿಂದೆ ಅಕ್ರಮವಾಗಿ ಪಡಿತರ ಅಕ್ಕಿ ಸಾಗಾಟಕ್ಕೆ ಸಂಬಂಧಿಸಿದಂತೆ ದೂರು ದಾಖಲಾಗಿದೆ. ಪಡಿತರ ಅಕ್ಕಿಯ ಸಾಗಾಟಕ್ಕೆ ಬಳಕೆ ಮಾಡಿದ ವಾಹನದ ನಂಬರ್ ಪ್ಲೇಟ್ ಬದಲಿಸಿ ಅಕ್ಕಿಯನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದಾರೆ” ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.

ಕುರುಗೋಡು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ‌ ಘಟನೆ ಜರುಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಎರಡು ಮನೆಗಳಿಗೆ ಕನ್ನ: ₹3.65 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ನಗರದ ಹೀರಾಪುರ ಹೊಸ ಬಡಾವಣೆ ಹಾಗೂ ಚಿಂಚೋಳಿ ಲೇಔಟ್‌ನಲ್ಲಿ ಎರಡು ಪ್ರತ್ಯೇಕ...

ಯಾದಗಿರಿ | ಜಿಲ್ಲಾ ಮಟ್ಟದ ಕಬಡ್ಡಿಯಲ್ಲಿ ಮೊರಾರ್ಜಿ ಶಾಲಾ ವಿದ್ಯಾರ್ಥಿಗಳ ಗೆಲುವು

ಜಿಲ್ಲಾ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ಪ್ರೌಢಶಾಲಾ ವಿಭಾಗದ ಬಾಲಕರ ಜಿಲ್ಲಾ ಮಟ್ಟದ...

ಉಡುಪಿ | ತೈಲದ ಮೇಲಿನ ಭಾರತದ ಅವಲಂಬನೆ ಕಡಿಮೆ ಮಾಡಲು ಹಸಿರು ಹೈಡ್ರೋಜನ್ ಸಹಕಾರಿ

ಪರ್ಯಾಯ ಇಂಧನವಾಗಿ ಹಸಿರು ಹೈಡ್ರೋಜನ್ ಭಾರತಕ್ಕೆ ಅಪಾರ ಸಾಧ್ಯತೆಗಳನ್ನು ಹೊಂದಿದ್ದು, ತೈಲದ...

ಎಂಆರ್‌ಪಿಎಲ್ ಸ್ಫೋಟ: ಮೃತ ಮನೀಶ್ ಕುಟುಂಬಕ್ಕೆ ಸಾಂತ್ವನ, ಹಾನಿಗೊಳಗಾದ ಚರ್ಚ್‌ಗೆ ಪ್ರಶಾಂತ್ ಜತ್ತನ್ನ ಭೇಟಿ

ಎಂಆರ್‌ಪಿಎಲ್‌ನ ಕೋಕರ್ ಹೈಡ್ರೋಟ್ರೀಟರ್ ಯುನಿಟ್‌ (ಸಿಎಚ್‌ಟಿಯು)ನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೃತಪಟ್ಟ ಮುಲ್ಕಿ...