ಸಂಸತ್ ಭವನದಲ್ಲಿ ಅಧಿವೇಶನ ನಡೆಯುವ ಸಮಯದಲ್ಲಿ ಕಾಂಗ್ರೆಸ್ ಯುವನಾಯಕ ರಾಹುಲ್ ಗಾಂಧಿ ಅವರು ಉಪರಾಷ್ಟ್ರಪತಿ ವಿಡಿ ಜಗದೀಶ್ ಧನಕರ್ ಅವರನ್ನು ಅವಮಾನಿಸಿರುವುದು ಖಂಡನೀಯ ಎಂದು ವಿಧಾನಪರಿಷತ್ ಸದಸ್ಯ ವೈ ಎಂ ಸತೀಶ್ ಆಕ್ರೋಶ ವ್ಯಕ್ತಪಡಿಸಿದರು.
ಬಳ್ಳಾರಿ ನಗರದ ರಾಯಲ್ ವೃತ್ತದಲ್ಲಿ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಸಂಸದರ ವಿರುದ್ಧ ನಡೆಸಿದ ಪ್ರತಿಭಟನೆಯಲ್ಲಿ ಆಕ್ರೋಶ ವ್ಯಕ್ತಪಡಿಸಿದರು.
ಜಿಲ್ಲಾಧ್ಯಕ್ಷ ಮುರಹರಿ ಗೌಡ ಮಾತನಾಡಿ, “ಹಿಂದುಳಿದ ವರ್ಗದ ಉಪರಾಷ್ಟ್ರಪತಿ ವಿಡಿ ಜಗದೀಶ್ ಧನಕರ್ ಅವರನ್ನು ಕಾಂಗ್ರೆಸ್ ಯುವನಾಯಕ ರಾಹುಲ್ ಗಾಂಧಿ ಅವರು ಅವಮಾನಿಸಿದ್ದು, ಕೂಡಲೇ ರಾಹುಲ್ ಗಾಂಧಿ ಅವರು ಕ್ಷಮೆ ಕೇಳಬೇಕು” ಎಂದು ಒತ್ತಾಯಿಸಿದ್ದಾರೆ.
ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಕಾಂಗ್ರೆಸ್ ಸಂಸದರ ವಿರುದ್ಧ ಬಿಜೆಪಿ ಪ್ರತಿಭಟನೆ
ಈ ಸಂದರ್ಭದಲ್ಲಿ ಪಾಲಿಕೆ ಸದಸ್ಯರುಗಳಾದ ಇಬ್ರಾಹಿಂ ಬಾಬು, ರಾಮಾಂಜನಿ, ಪುಷ್ಪಲತಾ, ಅಂಜಿ ಕಮ್ಮರಚೇಡು, ಉಪ್ಪಾರ್ ಸಿದ್ದೇಶ್, ಮೋಹನ್ ಸೇರಿದಂತೆ ಇತರರು ಇದ್ದರು.