ಹೊಲದಲ್ಲಿ ಕೆಲಸ ಮಾಡುತಿದ್ದಾಗ ಸಿಡಿಲು ಬಡಿದು ಮಹಿಳೆಯೊಬ್ಬರು ಮೃತಪಟ್ಟ ಘಟನೆ ಬಳ್ಳಾರಿ ಜಿಲ್ಲೆಯ ಸಿರಗುಪ್ಪ ತಾಲೂಕಿನ ಕುಡುದ್ರಾಳ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಮಹಿಳೆ ಮಂಗಮ್ಮ (40) ಮೃತ ದುರ್ದೈವಿ. ಅವರು ಸೋಮವಾರ ತಮ್ಮ ಹೊಲದಲ್ಲಿ ಕೆಲಸ ಮಾಡುತ್ತಿದ್ದರು. ಈ ವೇಳೆ, ಜೋರು ಮಳೆ ಶರುವಾಗಿದೆ. ಕೂಡಲೇ ಸಿಡಿಲು ಬಡಿದಿದ್ದು, ಮಹಿಳೆ ಮೃತಪಟ್ಟಿದ್ದಾರೆ. ಅವರ ಪಕ್ಕದ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಗೂ ಗಾಯಗಳಾಗಿವೆ.
ಗಾಯಾಳುವನ್ನು ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ.