ಬಳ್ಳಾರಿ | ಅಂದ್ರಾಳ್ ಹಳ್ಳದ ಬಳಿ ಮಹಿಳೆ ಶವ ಪತ್ತೆ: ಅಸಹಜ ಸಾವಿನ ಶಂಕೆ

Date:

ಬಳ್ಳಾರಿಯ ಅಂದ್ರಾಳ್ ಹಳ್ಳದ ಬಳಿ ಮಹಿಳೆಯೊಬ್ಬರ ಮೃತದೇಹವೊಂದು ಪತ್ತೆಯಾಗಿದೆ. ಅರೆನಗ್ನ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆಯಾಗಿದ್ದು, ಅಸಹಜ ಸಾವಿನ ಸುತ್ತ ಹಲವು ಅನುಮಾನಗಳು ಹುಟ್ಟಿಕೊಂಡಿದೆ.

- Advertisement -

ರಾತ್ರಿ ನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭಾರೀ ಮಳೆಯಾಗಿತ್ತು. ಮಳೆಯ ಆರ್ಭಟಕ್ಕೆ ಅಂದ್ರಾಳ್ ಹಳ್ಳ ತುಂಬಿ ಹರಿಯುತ್ತಿತ್ತು. ಮುಂಜಾನೆ ಹಳ್ಳದ ಸಮೀಪ ಸಾರ್ವಜನಿಕರು ಹೋದಾಗ ಮಹಿಳೆಯ ಶವ ಪತ್ತೆಯಾಗಿದ್ದು , ಮೃತ ಮಹಿಳೆಯನ್ನು ಬಳ್ಳಾರಿ ಕೌಲ್ ಬಜಾರ್ ನಿವಾಸಿ ಅನುಷಾ ಫಾತಿಮಾ ಎಂದು ಗುರುತಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಪ್ರಚಾರ, ರಾಹುಲ್ ವ್ಯಕ್ತಿತ್ವ ಮತ್ತು ರೆಜಿಮ್ ಚೇಂಜ್

ಮೋದಿ ಅನುಭವಿ ನಟನಂತೆ, ಪ್ರದರ್ಶಕನಂತೆ ಕಾಣುತ್ತಾರೆ. ರಾಹುಲ್ ಗಾಂಧಿ ಪಾತ್ರದ ಒಳಹೊಕ್ಕು ನಟಿಸುವ ಕಲಾವಿದನಂತೆ ಕಾಣುತ್ತಾರೆ. ಈ ನಿಟ್ಟಿನಲ್ಲಿ ರಾಹುಲ್ ರಾಜಕೀಯ ನಡೆಗಳು ಮೋದಿಯವರ ರಾಜಕೀಯ ನಡೆಗಳೊಂದಿಗೆ ವಿಶ್ಲೇಷಣೆಗೊಳಗಾಗುತ್ತಿವೆ. ಕಳೆದ 12 ವರ್ಷಗಳ...

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

ಅನುಷಾ ಫಾತಿಮಾ ಪಿಕೆಜಿಬಿ ಬ್ಯಾಂಕ್ ಉದ್ಯೋಗಿಯಾಗಿದ್ದರು, ರಾತ್ರಿ ವೇಳೆ ಸಹದ್ಯೋಗಿಗಳ ಜೊತೆ ಪಾರ್ಟಿಗೆ ತೆರಳಿದ್ದರು ಎಂಬ ಮಾಹಿತಿ ಲಭ್ಯವಿದ್ದು, ಮುಂಜಾನೆ ಶವವಾಗಿ ಪತ್ತೆಯಾಗಿರುವುದು ಸ್ಥಳೀಯರಲ್ಲಿ ಆತಂಕಕ್ಕೆ ಕಾರಣವಾಗಿದೆ. ಮಹಿಳೆಯ ಸ್ಕೂಟಿ ಒಂದೆಡೆಯಾದರೆ, ಮೃತದೇಹ ಮತ್ತೊಂದೆಡೆ ಪತ್ತೆಯಾಗಿರುವುದರಿಂದ ಹತ್ತಾರು ಅನುಮಾನಗಳು ಉಟ್ಟುಕೊಂಡಿವೆ. ಪೊಲೀಸರು ಸೂಕ್ತ ತನಿಖೆ ನಡೆಸುವಂತೆ ಅನುಷಾ ಕುಟುಂಬಸ್ಥರು ಆಗ್ರಹಿಸಿದ್ದಾರೆ.

ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನಾ ಸಂಬಂಧ ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಕೈಗೊಳ್ಳಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಎಸ್‌ಐಆರ್ ರದ್ದತಿಗೆ ಆಗ್ರಹಿಸಿ ತಿರಂಗಾ ಯಾತ್ರೆ: ಮುಖ್ಯ ಚುನಾವಣಾ ಆಯುಕ್ತರ ವಜಾಕ್ಕೆ ಒತ್ತಾಯ

ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ರದ್ದುಗೊಳಿಸಬೇಕು, ಮುಖ್ಯ...

ಉಡುಪಿ | ಭೂಗತ ಪಾತಕಿ ಹೇಮಂತ್ ಪೂಜಾರಿ ಜೊತೆ ಸೇರಿ ಉದ್ಯಮಿಗಳಿಗೆ ಬೆದರಿಕೆ ಪ್ರಕರಣ: ಆರೋಪಿ ಸೆರೆ

ಭೂಗತ ಪಾತಕಿ ಹೇಮಂತ್ ಪೂಜಾರಿ ಜೊತೆ ಸೇರಿಕೊಂಡು ಜಿಲ್ಲೆಯ ಉದ್ಯಮಿ ಹಾಗೂ...

ಬೀದರ್ ಜಿಲ್ಲಾ ಪ್ರಥಮ ದಲಿತ-ಬಂಡಾಯ ಸಮ್ಮೇಳನ : ಸರ್ವಾಧ್ಯಕ್ಷರಾಗಿ ಮಾರುತಿ ಬೌದ್ಧೆ ಆಯ್ಕೆ

ಬೀದರ್ ಜಿಲ್ಲಾ ಪ್ರಥಮ ದಲಿತ-ಬಂಡಾಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಪ್ರಗತಿಪರ ಚಿಂತಕ ಹಾಗೂ...