ಬಳ್ಳಾರಿ | ರಜೆ ದಿನಗಳಲ್ಲೂ ಕೇಂದ್ರ ಗ್ರಂಥಾಲಯ ತೆರೆಯಲು AIDYO ಮನವಿ

Date:

ಬಳ್ಳಾರಿ ಸಾರ್ವಜನಿಕ ಕೇಂದ್ರ ಗ್ರಂಥಾಲಯವನ್ನು ಓದುಗರ ಅನುಕೂಲಕ್ಕಾಗಿ ರಜೆ ದಿನಗಳಲ್ಲೂ ತರೆಯುವಂತೆ, ಆಲ್ ಇಂಡಿಯಾ ಡೆಮಾಕ್ರೆಟಿಕ್ ಯೂತ್ ಆರ್ಗನೈಸೇಷನ್(AIDYO) ಮತ್ತು ಸಾವರ್ಜನಿಕ ಗ್ರಂಥಾಲಯ ಓದುಗರ ಬಳಗದಿಂದ ಮನವಿ ಮಾಡಲಾಗಿದೆ.

- Advertisement -

ಗ್ರಂಥಾಲಯಕ್ಕೆ ಪ್ರತಿದಿನ ವಿದ್ಯಾರ್ಥಿಗಳು ಮತ್ತು ಹಿರಿಯ ನಾಗರಿಕರು ಸೇರಿದಂತೆ ನೂರಾರು ಜನ ಓದಲು ಬರುತ್ತಾರೆ. ಅದರಲ್ಲೂ ಹೆಚ್ಚು ಉದ್ಯೋಗಾಕಾಂಕ್ಷಿಗಳು ಬರುತ್ತಾರೆ. ನೇಮಕಾತಿಗಳು ಬಹಳ ಸಮಯದಿಂದಲೂ ನಡೆದಿರಲಿಲ್ಲ. ಇತ್ತೀಚಿಗೆ ನಡೆದ ಹಲವಾರು ಯುವಜನರ ಹೋರಾಟಗಳ ಪ್ರತಿಫಲವಾಗಿ ಇಂದು ನೇಮಕಾತಿಗಳಾಗುತ್ತಿರುವುದರಿಂದ ಅಭ್ಯರ್ಥಿಗಳು ತಯಾರಿಯನ್ನು ನಡೆಸಬೇಕಿದೆ ಎಂದು ಮನವಿ ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಾಕ್ಸ್ ಆಫೀಸ್‌ನಲ್ಲಿ ರಾವಣನೇ ವಿಜೃಂಭಿಸಿರುವ ‘ರಾಮಾಯಣ’ದ ಅಬ್ಬರ: ₹1,600...

ರಾವಣನೇ ವಿಜೃಂಭಿಸಿರುವ ಬಾಲಿವುಡ್‌ ಸಿನಿಮಾ 'ರಾಮಾಯಣ: ಭಾಗ-1' ಬಿಡುಗಡೆಯಾದ ಕೇವಲ 17 ದಿನಗಳಲ್ಲಿ ಜಾಗತಿಕವಾಗಿ ₹1,600 ಕೋಟಿಗೂ ಅಧಿಕ ಕಮಾಯಿ ಮಾಡಿ ದಾಖಲೆ ಬರೆದಿದೆ. ಈ ಮೂಲಕ 'ದಂಗಲ್', 'ಧುರಂಧರ್-2', 'ಬಾಹುಬಲಿ-2' ಹಾಗೂ...

ರಾಯಚೂರು | ಉದ್ಘಾಟನೆಗಾಗಿ ಕಾಯುತ್ತಿರುವ ಶಾಲೆ; ವರಾಂಡದಲ್ಲೇ ಮಕ್ಕಳಿಗೆ...

ರಾಯಚೂರು ಜಿಲ್ಲೆ, ಜಾಲಹಳ್ಳಿಯ ಬೊಮ್ಮನಹಳ್ಳಿ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ, ಶುದ್ಧ ಕುಡಿಯುವ ನೀರಿನ ಅಭಾವ, ಕಾಂಪೌಂಡ್ ಇಲ್ಲದಿರುವುದು ಹಾಗೂ ಶಾಲಾ ಜಾಗದ ವಿವಾದ ಸೇರಿದಂತೆ ಹಲವು ಸಮಸ್ಯೆಗಳು ಮಕ್ಕಳ ಶಿಕ್ಷಣಕ್ಕೆ ಅಡ್ಡಿಯಾಗಿವೆ....

‘ಹುಟ್ಟಿಗೂ, ಸಾವಿಗೂ ನಾವೇ ಬೇಕು… ನಮ್ಮ ಜೊತೆ ನಿಲ್ಲೋಕೆ...

ಪೆಂಡಾಲಿನ ಒಂದು ಮೂಲೆಯಿಂದ ಆಶಾ ಕಾಯಕರ್ತೆಯರು " ರೂಪ ರೂಪಗಳನು ದಾಟಿ, ನಾಮ ಕೋಟಿಗಳನು ಮೀಟಿ, ಎದೆಯ ಬಿರಿಯೆ ಭಾವದೀಟಿ, ಓ ನನ್ನ ಚೇತನ... ಆಗು ಅನಿಕೇತನ" ಕವಿತೆಯ ಸಾಲುಗಳನ್ನು ಎದೆತುಂಬಿ ಹಾಡುತ್ತಿದ್ದರು....

ಅಲ್ಲದೇ ಮನೆಗಳಲ್ಲಿ ಓದುವ ವಾತಾವರಣ ಇಲ್ಲದ ಕಾರಣ, ನಗರದ ಗ್ರಂಥಾಲಯಗಳಲ್ಲಿ ಬಂದು ಓದುತ್ತಿರುವ ಉದ್ಯೋಗಾಕಾಂಕ್ಷಿಗಳ ಸಂಖ್ಯೆ ಹೆಚ್ಚಾಗಿದೆ. ಸಾರ್ವಜನಿಕ ಗ್ರಂಥಾಲಯಗಳು ಪ್ರತಿ ಸೋಮವಾರ, ಎರಡನೇ ಮಂಗಳವಾರ, ನಾಲ್ಕನೇ ಶನಿವಾರ ಮತ್ತು ಸರ್ಕಾರಿ ರಜೆಗಳು ಹೀಗೆ ಹಲವಾರು ರಜೆಗಳಿರುವುದರಿಂದ ಉದ್ಯೋಗಾಕಾಂಕ್ಷಿಗಳು ನಿರಂತರ ಓದುವ ಅಭ್ಯಾಸಕ್ಕೆ ಸಮಸ್ಯೆ ಉಂಟಾಗುತ್ತದೆ. ಇಲ್ಲವಾದಲ್ಲಿ ಖಾಸಗಿ ಗ್ರಂಥಾಲಯಕ್ಕೆ ತಿಂಗಳಿಗೆ ಸಾವಿರಾರು ರೂಪಾಯಿಗಳನ್ನು ಕೊಟ್ಟು ಓದಬೇಕಿದೆ. ಉದ್ಯೋಗವನ್ನು ಅರಸುತ್ತಿರುವ ವಿದ್ಯಾರ್ಥಿಗಳಿಗೆ ಇದು ಆರ್ಥಿಕ ಹೊರೆಯಾಗುವುದರಿಂದ ರಜೆ ದಿನಗಳಲ್ಲೂ ಸಾರ್ವಜನಿಕ ಗ್ರಂಥಾಲಯ ತೆರೆದರೆ ಸಹಾಯವಾಗುತ್ತದೆ ಎಂದು ಮನವಿ ಮಾಡಲಾಗಿದೆ.

ಬೇಡಿಕೆಗಳು

  1. ರಜೆ ದಿನಗಳಲ್ಲಿ ಸಾರ್ವಜನಿಕ ಗ್ರಂಥಾಲಯಗಳನ್ನು ತೆರೆಯಬೇಕು.
  2. ಹೊರಾಂಗಣದಲ್ಲಿ ಕೂತು ಊಟ ಮಾಡಲು ಕಲ್ಲು ಬೆಂಚುಗಳು ಮತ್ತು ಮೇಲ್ಟಾವಣಿಯ ವ್ಯವಸ್ಥೆ ಮಾಡಬೇಕು.

ಈ ಬೇಡಿಕೆಗಳನ್ನು ಕೂಡಲೇ ಈಡೇರಿಸಬೇಕೆಂದು ಆಗ್ರಹಿಸಿ ಕೇಂದ್ರ ಗ್ರಂಥಾಲಯ ಮುಖ್ಯ ಗ್ರಂಥಪಾಲಕರು ಶ್ರೀ ನರಸಣ್ಣ ಅವರಿಗೆ ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಎಐಡಿವೈಓ ಜಿಲ್ಲಾ ಕಾರ್ಯದರ್ಶಿ ಜಗದೀಶ್ ನೇಮಕಲ್, ಸದಸ್ಯರಾದ ಪ್ರಮೋದ್ E.H ಮತ್ತು ಸಿದ್ದು ಮತ್ತು ವಿದ್ಯಾರ್ಥಿಗಳಾದ ರಂಗಸ್ವಾಮಿ, ಹನುಮೇಶ, ಯುವರಾಜ್ ಕೆ, ಶಿವಶಂಕರ, ಮೋಹನ್ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಸರ್ಕಾರಿ ಕಾನೂನು ಕಾಲೇಜಿನ ಪ್ರಾಚಾರ್ಯರ ವರ್ಗಾವಣೆಗೆ ಆಗ್ರಹಿಸಿ ವಿದ್ಯಾರ್ಥಿಗಳ ಮನವಿ

ಮರತೂರಿನ ವಿಜ್ಞಾನೇಶ್ವರ ಸರ್ಕಾರಿ ಕಾನೂನು ಕಾಲೇಜಿನ ಪ್ರಾಚಾರ್ಯ ಶಿವಾನಂದ ಎಚ್. ಲೇಗಂಟಿ...

ಯಾದಗಿರಿ | ಅಸ್ಪೃಶ್ಯತೆ ನಿವಾರಣೆಗೆ ಸಾಮಾಜಿಕ ಜಾಗೃತಿ ಅಗತ್ಯ: ಭೀಮಾಶಂಕರ ಎಂ. ಯರಗೋಳ

'ಸಮಾಜದಲ್ಲಿ ಇಂದಿಗೂ ಅಸ್ಪೃಶ್ಯತೆ ಆಚರಣೆ ಕಂಡುಬರುತ್ತಿರುವುದು ವಿಷಾದನೀಯ. ಸಂವಿಧಾನ ಪ್ರತಿಯೊಬ್ಬರಿಗೂ ಸಮಾನ...

ಕಲಬುರಗಿ | 20 ವರ್ಷಗಳಿಂದ ರಸ್ತೆ ಅಭಿವೃದ್ಧಿಗೆ ನಿರ್ಲಕ್ಷ್ಯ; 4 ದಿನಗಳ ಗಡುವು; ಇಲ್ಲದಿದ್ದರೆ ಹೆದ್ದಾರಿ ಬಂದ್ ಎಚ್ಚರಿಕೆ

ಶಹಾಬಾದ್ ತಾಲೂಕಿನ ಎಸ್.ಎಸ್. ಮರಗೋಳ ಕಾಲೇಜಿನಿಂದ ತೋನಸನಹಳ್ಳಿ (ಎಸ್) ಗ್ರಾಮದವರೆಗಿನ ರಾಜ್ಯ...