ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ಆಡಳಿತ, ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಬೆಲೆ ಏರಿಕೆ ಹಾಗೂ ಆಡಳಿತ ವೈಫಲ್ಯಗಳನ್ನು ಖಂಡಿಸಿ ಬಿಜೆಪಿ ನಗರ ಮಂಡಲದ ವತಿಯಿಂದ ಬಳ್ಳಾರಿ ನಗರದ ಗಡಗಿ ಚೆನ್ನಪ್ಪ ವೃತ್ತದಲ್ಲಿ ಬುಧವಾರ ಪ್ರತಿಭಟನೆ ನಡೆಸಲಾಯಿತು.
ಕಾರ್ಯಕರ್ತರು ಕಾಂಗ್ರೆಸ್ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದ ಬಿಜೆಪಿ ಕಾರ್ಯಕರ್ತರು, ಬೆಲೆ ಏರಿಕೆಯಿಂದ ಸಾಮಾನ್ಯ ಜನರ ಬದುಕು ದುಸ್ತರವಾಗಿದ್ದು, ಸರ್ಕಾರ ಜನಸಾಮಾನ್ಯರ ಸಂಕಷ್ಟಗಳಿಗೆ ಸ್ಪಂದಿಸುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಮಾಜಿ ಶಾಸಕ ಗಾಲಿ ಸೋಮಶೇಖರ ರೆಡ್ಡಿ ಮಾತನಾಡಿ, “ಕಾಂಗ್ರೆಸ್ ಸರ್ಕಾರವು ತಾನು ಬಡವರ ಪರವಾದ ಸರ್ಕಾರ ಎಂದು ಹೇಳಿಕೊಳ್ಳುತ್ತದೆ. ಆದರೆ, ದಿನೇದಿನೇ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡುವ ಮೂಲಕ ಬಡವರ ಜೇಬು ಖಾಲಿ ಮಾಡುತ್ತಿದೆ” ಎಂದು ಆರೋಪಿಸಿದರು.
ಪ್ರತಿಭಟನೆಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಅನಿಲ್ ನಾಯ್ಡು, ನಗರ ಮಂಡಲದ ಅಧ್ಯಕ್ಷ ಜಿ. ವೆಂಕಟರಮಣ, ಮಹಾನಗರ ಪಾಲಿಕೆ ಸದಸ್ಯ ಹಾಗೂ ವಿರೋಧ ಪಕ್ಷದ ನಾಯಕ ಶ್ರೀನಿವಾಸ್ ಮೋತ್ಕಾರ್, ಮುಖಂಡರಾದ ಗಣಪಾಲ ಐನಾತ್ ರೆಡ್ಡಿ, ಎಚ್. ಹನುಮಂತಪ್ಪ ಸೇರಿದಂತೆ ಪಕ್ಷದ ಕಾರ್ಯಕರ್ತರು ಪಾಲ್ಗೊಂಡಿದ್ದರು.
ಇದನ್ನೂ ಓದಿ : ಬೀದರ್ | ಕಾಂಗ್ರೆಸ್ ಕಚೇರಿಯಲ್ಲಿ ಇಂದಿರಾ ಗಾಂಧಿ ಜಯಂತಿ ಆಚರಣೆ



