ಬಳ್ಳಾರಿ | ₹25 ಲಕ್ಷ ಸಾಲದ ಆಸೆಗೆ ಬಿದ್ದು ₹49.90 ಲಕ್ಷ ಕಳೆದುಕೊಂಡ ವ್ಯಾಪಾರಿ

Date:

ವ್ಯವಹಾರದಲ್ಲಿನ ನಷ್ಟ ಸರಿದೂಗಿಸಲು ₹25 ಲಕ್ಷ ಸಾಲ ಪಡೆಯಲು ಮುಂದಾದ 52 ವರ್ಷದ ವ್ಯಾಪಾರಿಯೊಬ್ಬರು ಸೈಬರ್ ವಂಚಕರ ಜಾಲಕ್ಕೆ ಸಿಲುಕಿ ಬರೋಬ್ಬರಿ ₹49,90,368 ಕಳೆದುಕೊಂಡಿರುವ ಘಟನೆ ಬೆಳಕಿಗೆ ಬಂದಿದೆ.

- Advertisement -

ಬಳ್ಳಾರಿಯ ಗುಗ್ಗರಹಟ್ಟಿ ನಿವಾಸಿಯಾಗಿರುವ ವ್ಯಾಪಾರಿ ವ್ಯವಹಾರದ ಉದ್ದೇಶಕ್ಕಾಗಿ ಆನ್‌ಲೈನ್‌ನಲ್ಲಿ ಸಾಲದ ಹುಡುಕಾಟ ನಡೆಸುತ್ತಿದ್ದರು. ಈ ವೇಳೆ ವಿಕಾಸ್ ಎಂಬಾತ ವಾಟ್ಸ್‌ಆ್ಯಪ್ ಮೂಲಕ ಸಂಪರ್ಕಿಸಿ ₹25 ಲಕ್ಷ ಸಾಲ ಕೊಡಿಸುವುದಾಗಿ ನಂಬಿಸಿದ್ದಾನೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಾಗಲಕೋಟೆ | ಉತ್ಪಾದನೆ ಕುಸಿತ, ಭರ್ಜರಿ ಬೇಡಿಕೆ: ದಾಖಲೆ...

ಮುಂಗಾರು ಮಳೆಯ ಕೊರತೆ, ಭೀಕರ ಬರದ ಪರಿಣಾಮ ಹೊಲಗಳಲ್ಲಿ ಮೆಕ್ಕೆಜೋಳದ ಇಳುವರಿ ಕುಸಿದಿದೆ. ಆದರೆ, ಮಾರುಕಟ್ಟೆಯಲ್ಲಿ ಮಾತ್ರ ಮೆಕ್ಕೆಜೋಳಕ್ಕೆ ಚಿನ್ನದ ಬೆಲೆ ಬಂದಿದೆ! ಕಡಿಮೆ ಬೆಲೆಯಿಂದ ವರ್ಷಗಟ್ಟಲೆ ನಷ್ಟ ಅನುಭವಿಸಿದ್ದ ಬೆಳೆಗಾರರಿಗೆ ಈ...

ಏಳು ಕೊಲೆಗಳು ಮತ್ತು ಮನುಷ್ಯ ಮೃಗ!: ಕ್ರೋಧ, ಕ್ರೌರ್ಯ,...

ಮನುಷ್ಯತ್ವದ ಮುಖವಾಡ ಕಳಚಿದಾಗಒಳಗಿನ ಮೃಗ ಎಚ್ಚರಗೊಳ್ಳುತ್ತದೆ…ವಿವೇಕದ ಬೆಳಕು ಆರಿದಾಗಕ್ರೋಧವೇ ದಾರಿದೀಪವಾಗುತ್ತದೆ… ಬುದ್ಧಿಯೇ ಅದರ ಆಯುಧವಾದಾಗಸೇಡಿನ ಯೋಚನೆ ಸಂಚಾಗುತ್ತದೆ…ಪರರ ನೋವಿನಲ್ಲಿ ಸುಖ ಕಾಣುವ ಮನಸ್ಸುಕ್ರೌರ್ಯದ ಪರಮಾವಧಿ ತಲುಪುತ್ತದೆ… ಸುತ್ತಲಿನವರ ಮೌನ, ನಿರ್ಲಕ್ಷ್ಯಕೆಲವೊಮ್ಮೆ ಅಪಾಯಕ್ಕೆ ಆಹ್ವಾನವಾಗುತ್ತದೆ…ಕಾಲ ಮಿಂಚುವ ಮುನ್ನ...

ಮೀಸಲಾತಿ ಬಗ್ಗೆ ಮಾತನಾಡುವ ಮೊದಲು ತಮ್ಮ ಕುಟುಂಬದ ರಾಜಕೀಯ...

ಮೂರು ತಲೆಮಾರುಗಳಿಂದ ರಾಜಕೀಯ ಅಧಿಕಾರ ಅನುಭವಿಸುತ್ತಿರುವ ದೇವೇಗೌಡರ ಕುಟುಂಬಕ್ಕೆ ಇತರರ ಮೀಸಲಾತಿಯ ಬಗ್ಗೆ ಮಾತನಾಡುವ ನೈತಿಕ ಅರ್ಹತೆ ಇದೆಯೇ? “ಮೀಸಲು ಅನುಕೂಲ ಪಡೆದವರೇ ಮತ್ತೆ ಮತ್ತೆ ಪಡೆಯುತ್ತಿದ್ದಾರೆ, ನನ್ನ ಜನ ಅನಾಥರಾಗಿದ್ದಾರೆ” ಎಂಬ ಕೇಂದ್ರ...

ಬಳಿಕ ಕಂಪನಿಯ ಮುಖ್ಯಸ್ಥರೆಂದು ಪರಿಚಯಿಸಿಕೊಂಡ ಗೌರವ್ ಶ್ರೀವತ್ಸ ಹಾಗೂ ದಿಯಾ ಎಂಬುವರು ನಿಯೋಫೈನಾನ್ಸ್ ಮತ್ತು ನಿಯೋಫಿನ್ವೆಕ್ ಕಂಪನಿಗಳ ಹೆಸರಿನಲ್ಲಿ ಮಾತನಾಡಿ, ಶೇ 6ರಷ್ಟು ಲಾಭಾಂಶ ನೀಡುವ ಆಮಿಷವೊಡ್ಡಿದ್ದಾರೆ.

ವಂಚಕರ ಮಾತು ನಂಬಿದ ವ್ಯಾಪಾರಿ ಯೆಸ್ ಬ್ಯಾಂಕ್‌ನಲ್ಲಿ ಖಾತೆ ತೆರೆದು, ‘ಪುಶ್‌ಬುಲೆಟ್’ ಆ್ಯಪ್ ಡೌನ್‌ಲೋಡ್ ಮಾಡಿಕೊಂಡು ಅದರಲ್ಲಿ ತಮ್ಮ ವೈಯಕ್ತಿಕ ಮಾಹಿತಿಯನ್ನು ದಾಖಲಿಸಿದ್ದಾರೆ. ಇದನ್ನೇ ದುರುಪಯೋಗಪಡಿಸಿಕೊಂಡ ವಂಚಕರು ಅಕ್ಟೋಬರ್ 15ರಿಂದ 19ರವರೆಗೆ ವಿವಿಧ ಹಂತಗಳಲ್ಲಿ ಒಟ್ಟು ₹49,90,368 ಹಣವನ್ನು ಆನ್‌ಲೈನ್ ಮೂಲಕ ವರ್ಗಾವಣೆ ಮಾಡಿಸಿಕೊಂಡಿದ್ದಾರೆ.

ಈ ಸಂಬಂಧ ಸಂತ್ರಸ್ತ ವ್ಯಾಪಾರಿ ನವೆಂಬರ್ 6ರಂದು ಬಳ್ಳಾರಿ ಸೈಬರ್ ಅಪರಾಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

ಇದನ್ನೂ ಓದಿ : ಕರ್ನಾಟಕದ ಬೆನ್ನಲ್ಲೇ ಎಚ್ಚೆತ್ತ ಕೇರಳ: ಪೆಟ್ರೋಲ್‌ನಲ್ಲಿ ಎಥೆನಾಲ್ ಪ್ರಮಾಣ ಪರೀಕ್ಷೆಗೆ ಮುಂದು

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕರ್ನಾಟಕದ ಬೆನ್ನಲ್ಲೇ ಎಚ್ಚೆತ್ತ ಕೇರಳ: ಪೆಟ್ರೋಲ್‌ನಲ್ಲಿ ಎಥೆನಾಲ್ ಪ್ರಮಾಣ ಪರೀಕ್ಷೆಗೆ ಮುಂದು

ಕರ್ನಾಟಕದಲ್ಲಿ ಪೆಟ್ರೋಲ್‌ನಲ್ಲಿ ನಿಗದಿತ ಪ್ರಮಾಣಕ್ಕಿಂತ ಅಧಿಕ ಎಥೆನಾಲ್ ಮಿಶ್ರಣ ಮಾಡಲಾಗುತ್ತಿದೆ ಎಂಬ...

ಕರ್ನಾಟಕ | ಪೆಟ್ರೋಲ್‌ಗೆ ಅಧಿಕ ಎಥನಾಲ್ ಮಿಶ್ರಣ;  67 ಕಡೆ ಪೆಟ್ರೋಲ್ ತಪಾಸಣೆಗೆ ಸಿಎಂ ಡಿಕೆಶಿ ಸೂಚನೆ! 

ಪೆಟ್ರೋಲ್‌ನಲ್ಲಿ ಅಧಿಕ ಪ್ರಮಾಣದ ಎಥನಾಲ್ ಬೆರೆಸುವುದರಿಂದ ವಾಹನಗಳ ಎಂಜಿನ್ ಕಾರ್ಯಕ್ಷಮತೆ ಕುಸಿಯುತ್ತಿದೆ...

ದೀಪಾವಳಿ ಸಂಭ್ರಮದ ಬೆನ್ನಲ್ಲೇ ದೆಹಲಿಯಲ್ಲಿ ‘ವಿಷಗಾಳಿ’: ಉಸಿರುಕಟ್ಟಿಸುವ ವಾತಾವರಣ, 1,331ಕ್ಕೆ ತಲುಪಿದ AQI!

ದೀಪಾವಳಿ ಹಬ್ಬದ ಸಂಭ್ರಮದ ಬೆನ್ನಲ್ಲೇ ದೇಶದ ರಾಜಧಾನಿ ನವದೆಹಲಿಯಲ್ಲಿ ವಾಯುಮಾಲಿನ್ಯದ ಮಟ್ಟವು...

ಬೆಂಗಳೂರಿನಲ್ಲಿ ಭವಿಷ್ಯದ ಕನಸು; ಶಾಲೆ ತೊರೆದು ಬರುತ್ತಿದ್ದಾರೆ ಬಂಗಾಳದ ಸುಂದರ್‌ಬನ್‌ ಬಾಲಕರು

ಪಶ್ಚಿಮ ಬಂಗಾಳದ ಜಾಗತಿಕ ಪ್ರಸಿದ್ಧ ಮ್ಯಾಂಗ್ರೋವ್ ಅರಣ್ಯ ಪ್ರದೇಶ ಸುಂದರ್‌ಬನ್‌ನಲ್ಲಿ ಭೀಕರ...