ಬಳ್ಳಾರಿ | ಆಂಧ್ರದ ಮಲ್ಲಯ್ಯನ ಜಾತ್ರೆಯಲ್ಲಿ ಬಡಿಗೆ ಕಾಳಗ: ಓರ್ವ ಸಾವು, 80 ಮಂದಿಗೆ ಗಾಯ

Date:

ಆಂಧ್ರದ ಆಲೂರು ಮಂಡಲದ ನೇರಣಿಕೆ ಗುಡ್ಡದ ಮಲ್ಲಯ್ಯನ ಜಾತ್ರೆಯಲ್ಲಿ ನಡೆಯುವ ಬಡಿಗೆ ಕಾಳಗದಲ್ಲಿ ಓರ್ವ ವ್ಯಕ್ತಿ ಸಾವನ್ನಪ್ಪಿದ್ದು, 80 ಜನರಿಗೆ ಗಾಯಗೊಂಡಿರುವ ಘಟನೆ ನಡೆದಿದೆ.

- Advertisement -

ಆಲೂರಿನ ಪೋತರಾಜು (30) ಸಾವನ್ನಪ್ಪಿದ ಭಕ್ತ. ಇನ್ನೂ 80 ಜನರು ಗಾಯಗೊಂಡಿದ್ದು, ಎಂಟು ಜನರ ಸ್ಥಿತಿ ಗಂಭೀರವಾಗಿದೆ. ಪ್ರತಿ ವರ್ಷ ವಿಜಯ ದಶಮಿಯಂದು ರಾತ್ರಿ ಉತ್ಸವ ಮೂರ್ತಿಯನ್ನ ತಮ್ಮ ಊರಿಗೆ ಕೊಂಡೊಯ್ಯಲು ಬಡಿಗೆ ಕಾಳಗ ನಡೆಯುತ್ತದೆ. ಈ ವೇಳೆ ರಾತ್ರಿ ಗುಡ್ಡದ ಮಲ್ಲಯನ ಜಾತ್ರೆಯಲ್ಲಿ ದಂಡ ಕಾಳಗ ನಡೆಯುವಾಗ ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾನೆ. ಇನ್ನೂ ಹಲವರು ಗಾಯಗೊಂಡಿದ್ದು, ಆಲೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಡಿಗೆ ಬಡಿದಾಟ ತಡೆಯಲು ಯತ್ನಿಸಿದ ಪೊಲೀಸರ ಮೇಲೂ ಕಲ್ಲು ತೂರಾಟ ನಡೆಸಿದ್ದು, ಕೆಲ ಪೊಲೀಸರಿಗೆ ಸಣ್ಣ-ಪುಟ್ಟ ಗಾಯಗಳಾಗಿವೆ ಎನ್ನಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

SIRನ ಒಳನೋಟ: ಸೇರ್ಪಡೆಗಿಂತ ಹೊರಗಿಡುವುದಕ್ಕೆ ಆದ್ಯತೆ ನೀಡಿದಾಗ ಏನಾಗುತ್ತದೆ?

SIR ಕರಡು ಪಟ್ಟಿಯಲ್ಲಿರುವ ಮತದಾರರ ಸಂಖ್ಯೆಯು ನೈಜ ವಯಸ್ಕ ಜನಸಂಖ್ಯೆಯ ಅಂದಾಜಿಗಿಂತ ಅಷ್ಟೊಂದು ದೊಡ್ಡ ಪ್ರಮಾಣದಲ್ಲಿ ಕಡಿಮೆಯಾಗಿರುವುದಕ್ಕೆ ಕಾರಣವೇನು? ಈ ಕಾಣೆಯಾದ ಮತದಾರರೆಲ್ಲ ಯಾರು? ಅವರು ಮತದಾರರ ಪಟ್ಟಿಯಲ್ಲಿ ಬಿಟ್ಟು ಹೋಗಿದ್ದು ಹೇಗೆ?...

OBC ಮೀಸಲಾತಿಗೆ ಮತಾಂತರದ ಬೇಲಿ: ಸುಪ್ರೀಂ ಹೊಸ ಆದೇಶದಲ್ಲಿ...

ಧರ್ಮ ಬದಲಾದರೆ ಸಾಮಾಜಿಕ ಹಿಂದುಳಿದಿರುವಿಕೆಯೂ ಅಳಿಸಿಹೋಗುತ್ತದೆಯೇ? ಮಂಡಲ್ ಆಯೋಗದ 11 ಮಾನದಂಡಗಳಲ್ಲಿ ಧರ್ಮಕ್ಕೆ ಸ್ಥಾನವಿಲ್ಲದಿದ್ದರೂ, ಮತಾಂತರವನ್ನು ಮೀಸಲಾತಿಯ ಅರ್ಹತೆಗೆ ಜೋಡಿಸಿರುವುದೇಕೆ? ಇಂದಿರಾ ಸಾಹ್ನಿ ತೀರ್ಪಿಗೆ ವಿರೋಧಾಭಾಸವಾಗಿದೆ ಸುಪ್ರೀಂ ಕೋರ್ಟ್‌ನ ಹೊಸ ತೀಪು! 1992ರಲ್ಲಿ ಸುಪ್ರೀಂ...

ಈ ಸುದ್ದಿ ಓದಿದ್ದೀರಾ? ರಾಯಚೂರು | ಭೀಕರ ರಸ್ತೆ ಅಪಘಾತ: ಶಾಸಕ ಮಾನಪ್ಪ ವಜ್ಜಲ್ ಅವರ ಸಹೋದರನ ಪುತ್ರ ಮಲ್ಲು ವಜ್ಜಲ್‌ಗೆ ಗಂಭೀರ ಗಾಯ

Advertisements

ಪ್ರತಿ ವರ್ಷ ಆಂಧ್ರದ ಆಲೂರು ಮಂಡಲದ ನೇರಣಿಕೆ ಗುಡ್ಡದ ಮಲ್ಲಯ್ಯ ಕಾರ್ಣಿಕದಲ್ಲಿ ಆಂಧ್ರ ಹಾಗೂ ಕರ್ನಾಟಕದ ಲಕ್ಷಾಂತರ ಭಕ್ತರು ಭಾಗವಹಿಸುತ್ತಾರೆ. ಪ್ರತಿ ವರ್ಷವೂ ಪ್ರಕೃತಿ ಹಾಗೂ ರೈತರ ಬಗ್ಗೆ ಗುಡ್ಡದ ಮಲ್ಲಯ್ಯ ಕಾರ್ಣಿಕ ನುಡಿಯುತ್ತಾನೆ. ಅದಾದ ಬಳಿಕ ಗುಡ್ಡದ ಮಲ್ಲಯ್ಯನ ಉತ್ಸವ ಮೂರ್ತಿಯನ್ನ ತಮ್ಮ ಊರಿಗೆ ಕೊಂಡೊಯ್ಯಲು ಭಕ್ತರು ಬಡಿದಾಡುತ್ತಾರೆ. ಈ ಹೊಡೆದಾಟದ ವೇಳೆ ರಕ್ತ ಚಿಮ್ಮಿದ ಬಳಿಕ ಕಾಳಗ ಸಂಪನ್ನ ಎನ್ನುವ ಪ್ರತೀತಿಯಿದೆ. ಅದರಂತೆ ಪ್ರತಿ ವರ್ಷವೂ ಬಡಿಗೆ ಕಾಳಗ ನಡೆದು ಕೆಲವರಿಗೆ ಗಾಯಗಳಾಗುತ್ತವೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಪ್ರತಿ ಗ್ರಾಮದಲ್ಲೂ ಗ್ರಾಮಲೆಕ್ಕಾಧಿಕಾರಿಗಳ ಕಚೇರಿ ಸ್ಥಾಪನೆಗೆ ಅಬ್ದುಲ್‌ ರಹಮಾನ್‌ ಆಗ್ರಹ

ಪ್ರತಿಯೊಂದು ಗ್ರಾಮದಲ್ಲೂ ಗ್ರಾಮಲೆಕ್ಕಾಧಿಕಾರಿಗಳ ಕಚೇರಿಗಳನ್ನು ಸ್ಥಾಪಿಸುವ ಮೂಲಕ ಸಾರ್ವಜನಿಕರು ವಿವಿಧ ಕೆಲಸಗಳಿಗಾಗಿ...

ಯಾದಗಿರಿ | ದಲಿತ ಐಕ್ಯತಾ ಸಮಾವೇಶಕ್ಕೆ ಶಾಸಕ ರಾಜಾ ವೇಣುಗೋಪಾಲ ನಾಯಕ ಚಾಲನೆ: ಕರಪತ್ರ ಬಿಡುಗಡೆ

ದಲಿತ ಸಮುದಾಯದ ಹಕ್ಕುಗಳು, ಸ್ವಾಭಿಮಾನ ಮತ್ತು ಸಾಮಾಜಿಕ ಸಮಾನತೆಯ ಪರವಾದ ಹೋರಾಟವನ್ನು...

ಕಲಬುರಗಿಯಲ್ಲಿ ಪೊಲೀಸ್ ಹುತಾತ್ಮರ ದಿನಾಚರಣೆ

ಪೊಲೀಸ್ ವೀರ ಹುತಾತ್ಮರ ದಿನಾಚರಣೆ ಅಂಗವಾಗಿ ಕಲಬುರಗಿ ನಗರದ ಜಿಲ್ಲಾ ಸಶಸ್ತ್ರ...

ರಾಯಚೂರು | ಭೀಕರ ರಸ್ತೆ ಅಪಘಾತ: ಶಾಸಕ ಮಾನಪ್ಪ ವಜ್ಜಲ್ ಅವರ ಸಹೋದರನ ಪುತ್ರ ಮಲ್ಲು ವಜ್ಜಲ್‌ಗೆ ಗಂಭೀರ ಗಾಯ

ಲಿಂಗಸುಗೂರು ತಾಲೂಕಿನ ಹೊನ್ನಹಳ್ಳಿ ಗ್ರಾಮದ ಸಮೀಪ ಬುಧವಾರ ಸಂಭವಿಸಿದ ಭೀಕರ ರಸ್ತೆ...