ಬಳ್ಳಾರಿ | ವಿದ್ಯಾರ್ಥಿನಿಗೆ ವಂಚಿಸಿ ದೌರ್ಜನ್ಯ: ಉಪನ್ಯಾಸಕನ ವಿರುದ್ಧ ಪೋಕ್ಸೊ ದಾಖಲು

Date:

ಬಳ್ಳಾರಿ ಜಿಲ್ಲೆಯ ಖಾಸಗಿ ಕಾಲೇಜಿನ ಉಪನ್ಯಾಸಕ ಮದುವೆಯಾಗುವುದಾಗಿ ನಂಬಿಸಿ ಅಪ್ರಾಪ್ತ ವಿದ್ಯಾರ್ಥಿನಿಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪ ಕೇಳಿಬಂದಿದ್ದು, ಸಸ್ಯಶಾಸ್ತ್ರ ವಿಭಾಗದ ಉಪನ್ಯಾಸಕ ರವಿಕಿರಣ್ ಎಂಬಾತನನ್ನು ಪೋಕ್ಸೊ ಪ್ರಕರಣದಡಿ ಬಂಧಿಸಲಾಗಿದೆ.

- Advertisement -

ಅಪ್ರಾಪ್ತ ವಿದ್ಯಾರ್ಥಿನಿ 2025ರಲ್ಲಿ ಪಿಯುಸಿ ವ್ಯಾಸಂಗ ಮಾಡುತ್ತಿದ್ದಾಗ ಉಪನ್ಯಾಸಕನೊಂದಿಗೆ ಸ್ನೇಹ ಬೆಳೆದಿದೆ. ನಂತರ ರವಿಕಿರಣ್‌ “ನಿನ್ನನ್ನು ಪ್ರೀತಿಸುತ್ತೇನೆ, ನಿನ್ನನ್ನೇ ಮದುವೆಯಾಗುವೆ” ಎಂದು ನಂಬಿಸಿ ಹಲವು ಬಾರಿ ವಿದ್ಯಾರ್ಥಿನಿಯೊಂದಿಗೆ ದೈಹಿಕ ಸಂಪರ್ಕ ಬೆಳೆಸಿದ್ದಾನೆ ಎಂದು ಆರೋಪಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಆರೋಪಿ ಉಪನ್ಯಾಸಕನಿಗೆ ಮದುವೆಯಾಗಿದ್ದು, ಎರಡು ಮಕ್ಕಳಿದ್ದಾರೆ ಎಂಬ ವಿಚಾರ ತಿಳಿದು ಆಘಾತಕ್ಕೊಳಗಾದ ಅಪ್ರಾಪ್ತೆ ತನ್ನ ಪೋಷಕರಿಗೆ ವಿಷಯ ತಿಳಿಸಿದ್ದಾಳೆ. ಬಳ್ಳಾರಿ ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಲಾಗಿದ್ದು, ದೂರಿನ ಆಧಾರದ ಮೇಲೆ ಬಳ್ಳಾರಿ ಮಹಿಳಾ ಪೊಲೀಸ್ ಠಾಣೆಯ ಪೊಲೀಸರು ರವಿಕಿರಣ್ ವಿರುದ್ಧ ಪೋಕ್ಸೋ ಕಾಯಿದೆ ಹಾಗೂ ಲೈಂಗಿಕ ದೌರ್ಜನ್ಯ ಸಂಬಂಧಿತ ಕಾನೂನುಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಸಾರಿಗೆ ಬಸ್ ಟಾಯರ್ ಸ್ಪೋಟ ಪರಿಣಾಮ ಕಂಡಕ್ಟರ್ ಕಾಲಿಗೆ ಗಾಯ

ಲಕ್ಷ್ಮೇಶ್ವರ ಮಾರ್ಗದಲ್ಲಿ ಸಂಚರಿಸುತ್ತಿದ್ದ ವಾಯವ್ಯ ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್ (ಸಂಖ್ಯೆ:...

ಉಡುಪಿ | ತುಳುನಾಡ ರಕ್ಷಣಾ ವೇದಿಕೆ ಮಹಿಳಾ ಘಟಕದಿಂದ ಅರ್ಥಪೂರ್ಣ ಗಾಂಧಿ ಜಯಂತಿ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿಯ ಅಂಗವಾಗಿ ತುಳುನಾಡ ರಕ್ಷಣಾ ವೇದಿಕೆ (ರಿ.)...

ಉಡುಪಿ | ಸಮುದಾಯದ ಅಭಿವೃದ್ಧಿಗೆ ಉದ್ಯಮಿಗಳ ಒಗ್ಗಟ್ಟು ಅಗತ್ಯ: ಮುಮ್ತಾಜ್ ಮನ್ಸೂರಿ

ನಮ್ಮ ಸಮುದಾಯದ ದುರ್ಬಲ ವರ್ಗಗಳನ್ನು ಮೇಲಕ್ಕೆತ್ತಲು ಎಲ್ಲರೂ ಬೆಂಬಲ ಮತ್ತು ಸಹಕಾರದೊಂದಿಗೆ...