ಬಳ್ಳಾರಿ | ಕುಡಿಯುವ ನೀರು ಕೊಡದಿದ್ರೆ ಅನಿರ್ದಿಷ್ಟವಾಗಿ ಹೋರಾಟ: ಡಿವೈಎಫ್ಐ

Date:

ಬಳ್ಳಾರಿ ತಾಲೂಕಿನ ಕೊಳಗಲ್‌ ಗ್ರಾಮದಲ್ಲಿ ಶಾಶ್ವತ ಕುಡಿಯುವ ನೀರಿಗಾಗಿ ಡಿವೈಎಫ್ಐ ಸಂಘಟನೆ ನಡೆಸುತ್ತಿರುವ ಹಗಲು ರಾತ್ರಿ ಹೋರಾಟ ಎರಡನೇ ದಿನಕ್ಕೆ ಕಾಲಿಟ್ಟಿದೆ.

- Advertisement -

ಕೊಳಗಲ್ಲು ಗ್ರಾಮಸ್ಥರು ಕುಡಿಯುವ ನೀರು ಮತ್ತು ದೈನಂದಿನ ದಿನ ಬಳಕೆಯ ನೀರಿನ ತೀವ್ರ ಅಭಾವ ಎದುರುಸುತ್ತಿದ್ದು, ಕೂಡಲೇ ಗ್ರಾಮಕ್ಕೆ ಶಾಶ್ವತ ಕುಡಿಯುವ ನೀರಿನ ಕೆರೆ ನಿರ್ಮಿಸಲು ಒತ್ತಾಯಿಸಿ ಹಾಗೂ ಮೂಲ ಸೌಕರ್ಯ ಒದಗಿಸುವಂತೆ ಪಟ್ಟು ಹಿಡಿದಿದ್ದಾರೆ.

ಸ್ಥಳಕ್ಕೆ ಸಂಬಂಧಪಟ್ಟ ಅಧಿಕಾರಿಗಳು, ಶಾಸಕರು, ಸಂಸದರು ಬಂದು ಗ್ರಾಮದ ಸಮಸ್ಯೆಗಳು ಈಡೇರಿಸಲು ಸೂಕ್ತವಾದ ಭರವಸೆ ನೀಡುವವರಿಗೂ ನಮ್ಮ ಹಗಲು ರಾತ್ರಿ ಧರಣಿ ಮುಂದುವರಿಯಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸುದ್ದಿ ವಿವರ | ಇವಿಎಂ vs ಬ್ಯಾಲೆಟ್‌ ಪೇಪರ್‌:...

ಇವಿಎಂ ಮೇಲಿನ ವಿಶ್ವಾಸದ ಪ್ರಶ್ನೆ ಮತ್ತೆ ದೇಶದ ಚುನಾವಣಾ ಚರ್ಚಾ ಕೇಂದ್ರವಾಗಿದೆ. ಪಾರದರ್ಶಕತೆ ಮತ್ತು ಮತದಾರರ ನಂಬಿಕೆಯನ್ನು ಮುಂದಿಟ್ಟುಕೊಂಡು, ಬ್ಯಾಲೆಟ್‌ ಪೇಪರ್ ವ್ಯವಸ್ಥೆಗೆ ಮರಳಬೇಕೆಂಬ ಬೇಡಿಕೆಯನ್ನು ವಿಪಕ್ಷಗಳು ಮುಂದೆ ತಂದಿವೆ. ಬುಧವಾರ (ಸೆ.30), ದೆಹಲಿಯಲ್ಲಿ...

ಪೈಲಟ್ ಗಾಯಗೊಂಡ ನಂತರ ʼಫ್ಲೈದುಬೈʼ ವಿಮಾನ ನಡೆಸಿದವರು ಯಾರು?...

ಬುಧವಾರ ದುಬೈನಿಂದ ಇಸ್ರೇಲ್‌ನ ಟೆಲ್ ಅವೀವ್‌ಗೆ ಹಾರಾಟದಲ್ಲಿದ್ದ FZ1073 ವಿಮಾನದಲ್ಲಿ ನಡೆದ ಪ್ರಕರಣವು ಕಾಕ್‌ಪಿಟ್‌ನೊಳಗಿನ ಸುರಕ್ಷತೆ ಕುರಿತು ಪ್ರಶ್ನೆಗಳನ್ನು ಹುಟ್ಟಿ ಹಾಕಿದೆ.ಈ ವಿಮಾನದ ಯೆಮೆನ್ ಮೂಲದ ಸಹ-ಪೈಲಟ್‌, ಹರಿತ ವಸ್ತುವಿನಿಂದ ಪೈಲಟ್ ಮೇಲೆ...

ಜಾಗತಿಕ ಬಿಕ್ಕಟ್ಟಿನ ನೆಪ, ಮರೆಯಾದ ದೇಶದ ಹಿತ: ಜೈಶಂಕರ್...

ಬೆಲೆ ಏರಿಕೆಯ ಬೇಗೆಯಲ್ಲಿ ಜನಸಾಮಾನ್ಯರು ನರಳುತ್ತಿದ್ದರೆ, ಗದ್ದೆಯಲ್ಲಿ ರೈತ ರಸಗೊಬ್ಬರಕ್ಕಾಗಿ ಕಣ್ಣೀರು ಸುರಿಸುತ್ತಿದ್ದಾನೆ. ಆದರೆ, ಇದಕ್ಕೆ ಸ್ಪಂದಿಸಬೇಕಾದ ಮೋದಿ ಸರ್ಕಾರ, ವಿದೇಶಾಂಗ ಸಚಿವ ಎಸ್. ಜೈಶಂಕರ್ ಮೂಲಕ ಜಾಗತಿಕ ವೇದಿಕೆಗಳಲ್ಲಿ ವಿದೇಶಿ ಯುದ್ಧಗಳತ್ತ...

ಈ ಕುರಿತು ಡಿ ವೈ ಎಫ್‌ ಐ ಸಂಘಟನೆಯ ಜಿಲ್ಲಾಧ್ಯಕ್ಷ ಯು ಎರ್ರಿಸ್ವಾಮಿ ಅವರು ಮಾತನಾಡಿ, ಬಳ್ಳಾರಿ ತಾಲೂಕಿನ ಕೊಳಗಲ್ಲು ಗ್ರಾಮದ ಜನರು ಸುಮಾರು ವರ್ಷಗಳಿಂದ ಕುಡಿಯುವ ನೀರಿನ ಕೆರೆ ಸೇರಿದಂತೆ ವಿವಿಧ ಮೂಲ ಸೌಕರ್ಯಗಳಿಂದ ವಂಚಿತರಾಗಿದ್ದಾರೆ.

ಗ್ರಾಮದಲ್ಲಿ ಕುಡಿಯುವ ನೀರಿನ ಕೆರೆ ನಿರ್ಮಿಸಲು ಸಾಕಷ್ಟು ಭೂಮಿ ಲಭ್ಯವಿದ್ದು, ಸರ್ವೆ ನಂ 557ರಲ್ಲಿ 296 ಎಕ್ಕರೆ ಕೆರೆ ಭೂಮಿಯಲ್ಲಿ ಕುಡಿಯುವ ನೀರಿನ ಕೆರೆ ನಿರ್ಮಿಸಬೇಕು. ಮತ್ತು ಗ್ರಾಮದಲ್ಲಿನ ಸುಮಾರು 300ಕ್ಕೂ ಹೆಚ್ಚು ಬಡ ಕುಟುಂಬಗಳು ನಿವೇಶನ ಮತ್ತು ವಸತಿ ಇಲ್ಲದೆ ಲಭ್ಯವಿರುವ ಚಿಕ್ಕಗುಡಿಸಲಲ್ಲಿ 3-4 ಕುಟುಂಬಗಳು ವಾಸವಿದ್ದು, ಸಂಕಷ್ಟದಲ್ಲಿ ವಾಸಿಸುತ್ತಿದ್ದಾರೆ. ಗ್ರಾಮದ ಮುಖ್ಯ ರಸ್ತೆಯನ್ನು ಅಗಲೀಕರಣ ಮಾಡಿ ಡಬಲ್ ರೋಡ್ ನಿರ್ಮಿಸಬೇಕು. ಗ್ರಾಮದಿಂದ ಅಲ್ಲಿಪುರಕ್ಕೆ ಹೋಗುವ ರೋಡ್ ಸಂಪೂರ್ಣ ಗುಂಡಿಬಿದ್ದು ಹಾಳಾಗಿ ದುಸ್ಥಿತಿಯಲ್ಲಿದೆ. ಕೂಡಲೇ ಹೊಸ ರಸ್ತೆ ನಿರ್ಮಿಸಬೇಕು.

ಇಂತಹ ಅನೇಕ ಮೂಲ ಸೌಕರ್ಯಗಳಿಂದ ಗ್ರಾಮದ ಜನರು ವಂಚಿತರಾಗಿದ್ದು, ಈ ಎಲ್ಲಾ ಸಮಸ್ಯೆಗಳನ್ನು ಕೂಡಲೇ ಸರಿಪಡಿಸಿ ವಿವಿಧ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ DYFI ಸಂಘಟನೆಯ ನೇತೃತ್ವದಲ್ಲಿ ಸ್ಥಳೀಯ ಪಂಚಾಯತ್ ಮತ್ತು ಸಂಬಂಧಪಟ್ಟ ಅಧಿಕಾರಿಗಳಿಗೆ, ಸ್ಥಳೀಯ ಜನ ಪ್ರತಿನಿಧಿಗಳಿಗೆ ಹಲಾವರು ಬಾರಿ ಗಮನಕ್ಕೆ ತರಲಾಗಿದೆ.

ಗ್ರಾಮದ ಜನರು ಕುಡಿಯುವ ನೀರಿಗಾಗಿ ಪ್ರತಿದಿನ ಜೀವನ ನಿರ್ವಹಣೆಗೆ ಅಗತ್ಯವಾದ ಕುಡಿಯುವ ನೀರಿಗೆ ಪ್ರತಿ ತಿಂಗಳು ಅನಗತ್ಯವಾಗಿ ಸಾವಿರಾರು ರೂಪಾಯಿ ಹಣ ಖರ್ಚು ಮಾಡುವಂತ ದುಸ್ಥಿತಿ ಎದುರಾಗಿದೆ.

ಸ್ವಚ್ಛತೆ ಇಲ್ಲದೆ ಇರುವ ನೀರನ್ನು 15 ದಿನಕ್ಕೊಮ್ಮೆ 20 ದಿನಕ್ಕೊಮ್ಮೆ ಕೆಲ ವಾರ್ಡ್‌ಗಳಿಗೆ ಸರಬರಾಜು ಮಾಡುತ್ತಾರೆ. ಇದರ ಸೇವನೆಯಿಂದ ಜನರು ವಿವಿಧ ರೋಗಗಳಿಗೆ ತುತ್ತಾಗುತ್ತಿದ್ದಾರೆ. ಇದು ಬಿಟ್ಟರೆ ಇಲ್ಲಿನ ಜನರಿಗೆ ಬೇರೆ ದಾರಿ ಇಲ್ಲ. ಅರೆಬರೆ ಕಾಮಗಾರಿಯಿಂದ ಸರಬರಾಜುಗೊಳ್ಳುವ ಕೆರೆಯ ನೀರು 1 ವಾರ್ಡ್‌ಗೆ ಸಾಲುತ್ತಿಲ್ಲ. ಪ್ರತಿ ವರ್ಷ ಬೇಸಿಗೆ ಕಾಲದಲ್ಲಿ ನೀರಿನ ಸಮಸ್ಯೆ ಮತ್ತಷ್ಟು ಉಲ್ಬಣಗೊಳ್ಳುತ್ತದೆ. ಗ್ರಾಮದಲ್ಲಿ ಲಭ್ಯವಿರುವ ಬೋರ್‌ವೆಲ್‌ಗಳಲ್ಲಿ ನೀರು ಸಂಪೂರ್ಣ ಫ್ಲೋರೈಡ್ ಯುಕ್ತ ನೀರು ಬರುತ್ತಿದ್ದು ಸಾರ್ವಜನಿಕರಿಗೆ ತುಂಬಾ ತೊಂದರೆಯಾಗುತ್ತಿದೆ.

ಸಂಬಂಧಪಟ್ಟ ಅಧಿಕಾರಿಗಳು ಕೊಡಲೇ ಕುಡಿಯುವ ನೀರು ಹಾಗೂ ದಿನನಿತ್ಯ ಬಳಕೆಯ ನೀರಿನ ಅಭಾವ ನೀಗಿಸಲು ಈ ಎಲ್ಲಾ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಕೂಡಲೇ ಸಂಬಂಧಪಟ್ಟ ಅಧಿಕಾರಿಗಳ ಜೊತೆ ಚರ್ಚಿಸಿ ಸುಮಾರು 296 ಎಕರೆಯಲ್ಲಿ ಶಾಶ್ವತ ಕುಡಿಯುವ ನೀರಿನ ಕೆರೆ ನಿರ್ಮಿಸಿ ವಿವಿಧ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕೆಂದು ಈ ಮೂಲಕ ತಮ್ಮಲ್ಲಿ ಕೊಳಗಲ್ಲು ಗ್ರಾಮದ ಸಮಸ್ತ ಜನರ ಪರವಾಗಿ ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಶನ್ (DYFI) ಜಿಲ್ಲಾ ಸಮಿತಿ ಈ ಮೂಲಕ ವಿನಯ ಪೂರ್ವಕ ಮನವಿ ಮತ್ತು ಒತ್ತಾಯಿಸುತ್ತಿದೆ.

ಒಂದು ವೇಳೆ ಈ ಬಗ್ಗೆ ನಿರ್ಲಕ್ಷ್ಯ ಧೋರಣೆ ಮುಂದುವರಿದರೆ ಕೊಳಗಲ್ಲು ಗ್ರಾಮದ ಎಲ್ಲಾ ರೈತರು, ಮಹಿಳೆಯರು, ಯುವ ಜನರು ಸೇರಿ ಡಿವೈಎಫ್‌ಐ ಸಂಘಟನೆ ನೇತೃತ್ವದಲ್ಲಿ ವಿವಿಧ ರೀತಿಯ ಹೋರಾಟ ಮತ್ತು ಅನಿರ್ದಿಷ್ಟಾವಾದಿ ಉಪವಾಸ ಸತ್ಯಾಗ್ರಹ ನಡೆಸುವುದು ಅನಿವಾರ್ಯವಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಹಾಲು ಉತ್ಪಾದಕರಿಗೆ ಮೇವು ಕಟಾವು ಯಂತ್ರಗಳ ವಿತರಣೆ,

ತಾಲ್ಲೂಕಿನ ವೇಮಗಲ್ ಹೋಬಳಿಯ ಹೊಳೇರಹಳ್ಳಿ ಗ್ರಾಮದಲ್ಲಿ ಗುರುವಾರ ಕೋಮುಲ್ ನಿರ್ದೇಶಕ ಚಂಜಿಮಲೆ...

ಎಲ್ ನಿನೋ ತಾಪಮಾನ: ಹೊರಾಂಗಣ ಕಾರ್ಮಿಕರ ರಕ್ಷಣೆಗೆ ತುರ್ತು ಕ್ರಮಕ್ಕೆ ಸಂಘಟನೆಗಳ ಆಗ್ರಹ

ಎಲ್ ನಿನೋ ಹವಾಮಾನ ಬದಲಾವಣೆಯ ತೀವ್ರ ಪರಿಣಾಮಗಳಿಂದ ಹೊರಾಂಗಣ ಹಾಗೂ ದಿನಗೂಲಿ...

ಏಷ್ಯನ್ ಗೇಮ್ಸ್: ಪಾಕ್ ಮಣಿಸಿ ಫೈನಲ್‌ಗೇರಿದ ಭಾರತ ಹಾಕಿ ತಂಡ; ಕುಸ್ತಿಯಲ್ಲಿ ನಿತೇಶ್‌ಗೆ ಬೆಳ್ಳಿ

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್ ಕ್ರೀಡಾಕೂಟದ 13ನೇ ದಿನವಾದ...