ಬಳ್ಳಾರಿ | ಅಣ್ಣನ ಮೇಲೆ ಮಾರಣಾಂತಿಕ ಹಲ್ಲೆ: ಆರೋಪಿಗೆ ಕಾರಾಗೃಹ ಶಿಕ್ಷೆ, ದಂಡ

Date:

ಅಕ್ರಮ ಸಂಬಂಧದ ಶಂಕೆಯ ಹಿನ್ನೆಲೆಯಲ್ಲಿ ಸ್ವಂತ ಅಣ್ಣನ ಮೇಲೆಯೇ ಮಾರಣಾಂತಿಕ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿದ ಪ್ರಕರಣದಲ್ಲಿ ಆರೋಪಿಗೆ ಬಳ್ಳಾರಿಯ ಒಂದನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಸಾದಾ ಕಾರಾಗೃಹ ಶಿಕ್ಷೆ ಹಾಗೂ ದಂಡ ವಿಧಿಸಿ ತೀರ್ಪು ನೀಡಿದೆ.

- Advertisement -

ಬಳ್ಳಾರಿ ನಗರದ ಬ್ರೂಸ್‌ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯ ಶಿವಲಿಂಗ ನಗರದ ಒಂದನೇ ಕ್ರಾಸ್ ನಿವಾಸಿ ಟಿ. ಮಂಜುನಾಥ ಶಿಕ್ಷೆಗೊಳಗಾದ ಆರೋಪಿ. ಪ್ರಕರಣದ ವಿಚಾರಣೆ ನಡೆಸಿದ ಒಂದನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಎಚ್.ಎ. ಮೋಹನ್ ಅವರು, ಆರೋಪಿಯ ಮೇಲಿನ ಅಪರಾಧ ಸಾಬೀತಾದ ಹಿನ್ನೆಲೆಯಲ್ಲಿ ಶಿಕ್ಷೆ ಪ್ರಕಟಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

“ನಾನು ಬಿಜೆಪಿಯ ಗುಲಾಮನಲ್ಲ, ಅಂಬೇಡ್ಕರ್‌ವಾದಿ”- ರಾಮದಾಸ್‌ ಅಠಾವಳೆ ಹೇಳಿಕೆಯ...

ತಾವು ಬಿಜೆಪಿಯ ಸದಸ್ಯರಲ್ಲ, ಕೇವಲ ಅಂಬೇಡ್ಕರ್‌ವಾದಿ ಎಂದು ಕೇಂದ್ರ ಸಚಿವ ರಾಮದಾಸ್ ಅಠಾವಳೆ ನೀಡಿರುವ ಹೇಳಿಕೆ ರಾಷ್ಟ್ರ ರಾಜಕಾರಣದಲ್ಲಿ ಹೊಸ ಚರ್ಚೆಗೆ ನಾಂದಿ ಹಾಡಿದೆ. ಕಾಂಗ್ರೆಸ್ ಸ್ಪಂದಿಸದ ಕಾರಣಕ್ಕೆ ಎನ್‌ಡಿಎ ಸೇರಿದೆ ಎನ್ನುತ್ತಾರೆ...

ಬರಗಾಲ | ಕಾಡಿನಿಂದ ನಾಡಿನತ್ತ ವನ್ಯಜೀವಿಗಳು: ಮನುಷ್ಯರ ಜೀವಕ್ಕೆ...

ಹಳೇ ಮೈಸೂರು ಕಾಡು ಪ್ರಾಣಿಗಳ ಆವಾಸಸ್ಥಾನ. ಆದರೆ, ಇಂದು ಆ ಕಾಡಿನಂಚಿನಲ್ಲಿ ಬದುಕುತ್ತಿರುವ ಮನುಷ್ಯರಿಗೂ ಕಾಡಿನೊಳಗಿನ ವನ್ಯಜೀವಿಗಳಿಗೂ ನಡುವಿನ ಅಂತರ ಕಡಿಮೆಯಾಗುತ್ತಿದೆ. ಆಹಾರ ಮತ್ತು ನೀರು ಅರಸಿ ಕಾಡಿನಿಂದ ನಾಡಿನತ್ತ ಬರುತ್ತಿರುವ ಆನೆ,...

ಇಂದು ಭಗತ್ ಸಿಂಗ್ ಹೆಸರು ಬಳಸುವ ಆರ್‌ಎಸ್‌ಎಸ್ ನಾಯಕರಿಗೆ...

ಜಾತ್ಯತೀತತೆ ಮತ್ತು ಸಮಾಜವಾದದ ಬಗ್ಗೆ ಗಟ್ಟಿಯಾಗಿ ಮಾತನಾಡುತ್ತಿದ್ದ, ಕೋಮುವಾದಿ ಧೋರಣೆಗಳನ್ನು ಕಟುವಾಗಿ ವಿಮರ್ಶಿಸುತ್ತಿದ್ದ ಭಗತ್ ಸಿಂಗ್ ಅವರನ್ನು ಇಂದು ಅದೇ ಸಿದ್ಧಾಂತಗಳ ವಿರುದ್ಧ ನಿಂತಿರುವ ಬಿಜೆಪಿ, ಆರ್‌ಎಸ್‌ಎಸ್, ಎಬಿವಿಪಿ ನಾಯಕರು ತಮ್ಮ 'ಸ್ವಂತ...

ಅಕ್ರಮ ಸಂಬಂಧ ಹೊಂದಿರುವ ಶಂಕೆಯ ಮೇಲೆ ಆರೋಪಿ ಮಂಜುನಾಥ ತನ್ನ ಸ್ವಂತ ಅಣ್ಣನ ಮೇಲೆ ತೀವ್ರವಾಗಿ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿದ್ದ. ಈ ಕುರಿತು ಬ್ರೂಸ್‌ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣದ ತನಿಖೆ ನಡೆಸಿದ ಪಿಎಸ್‌ಐ ಜಿ. ಮಲ್ಲಿಕಾರ್ಜುನ ಅವರು ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ವಿಚಾರಣೆ ವೇಳೆ ಒಟ್ಟು 10 ಸಾಕ್ಷಿದಾರರನ್ನು ನ್ಯಾಯಾಲಯದಲ್ಲಿ ವಿಚಾರಣೆ ನಡೆಸಲಾಗಿತ್ತು. ಉಭಯ ಪಕ್ಷಗಳ ವಾದ-ಪ್ರತಿವಾದ ಆಲಿಸಿದ ನ್ಯಾಯಾಲಯ ಆರೋಪಿಯ ಮೇಲಿನ ಅಪರಾಧ ಸಾಬೀತಾದ ಹಿನ್ನೆಲೆಯಲ್ಲಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.

ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕಿ ಲಕ್ಷ್ಮೀದೇವಿ ಪಾಟೀಲ್ ವಾದ ಮಂಡಿಸಿದ್ದರು. ಪ್ರಕರಣದ ವಿಚಾರಣೆ ಸಂದರ್ಭದಲ್ಲಿ ಸಾಕ್ಷಿದಾರರನ್ನು ಸಕಾಲದಲ್ಲಿ ನ್ಯಾಯಾಲಯಕ್ಕೆ ಹಾಜರುಪಡಿಸಲು ಬ್ರೂಸ್‌ಪೇಟೆ ಪೊಲೀಸ್ ಠಾಣೆಯ ಸಿಬ್ಬಂದಿ ಪಿ.ಬಿ. ರವಿಚಂದ್ರ, ಕೆ. ಮಂಜು ಹಾಗೂ ಪೊಂಪಯ್ಯ ಸಹಕರಿಸಿದ್ದರು.

ಇದನ್ನೂ ಓದಿ : ಸಂಭ್ರಮದ ತೆರೆ ಕಂಡ ಬೀದರ್ ಜಿಲ್ಲಾ 22ನೇ ಕನ್ನಡ ಸಾಹಿತ್ಯ ಸಮ್ಮೇಳನ: 12 ನಿರ್ಣಯ ಅಂಗೀಕಾರ

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ಅದ್ದೂರಿಯಾಗಿ ಜರುಗಿದ ಚೆನ್ನಮ್ಮ ಉತ್ಸವ

ವಿಜಯಪುರದಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ಉತ್ಸವ ಅದ್ದೂರಿಯಾಗಿ ಜರುಗಿತು. ಕರ್ನಾಟಕ ರಾಜ್ಯ ಕಿತ್ತೂರು...

ಮೋದಿ-ಶಾ ಜೋಡಿ ವಿರುದ್ಧ ಜೈರಾಮ್ ರಮೇಶ್ ಕಿಡಿ: ‘ಪೊಳ್ಳು ಮಾತು ಮತ್ತು ಆರ್ಭಟ’ ಎಂದು ಟೀಕೆ!

ಸಂಸತ್ತಿನ ಚಳಿಗಾಲದ ಅಧಿವೇಶನದ ಅನಿಶ್ಚಿತತೆ, ಮುಂಗಾರು ಅಧಿವೇಶನದ ಮುಂದುವರಿಕೆ ಹಾಗೂ ಕ್ಷೇತ್ರ...

ಅಮೆರಿಕ | AI ಕಂಪನಿಗಳ ಷೇರು ಕುಸಿತ: ಬೆಂಗಳೂರಿನ IT ಉದ್ಯೋಗಿಗಳ ಮೇಲೂ ಪರಿಣಾಮ?

ಅಮೆರಿಕದ ಷೇರು ಮಾರುಕಟ್ಟೆಯಲ್ಲಿ ಈಗ ದೊಡ್ಡದೊಂದು ತಲ್ಲಣ ಶುರುವಾಗಿದೆ. ಕಳೆದ ಎರಡು-ಮೂರು...

ಷೇರುಪೇಟೆಯಲ್ಲಿ ಭಾರಿ ಕುಸಿತ: ಕರಗಿದ ಹೂಡಿಕೆದಾರರ ₹4.65 ಲಕ್ಷ ಕೋಟಿ ಸಂಪತ್ತು

ಸತತ ಏರಿಕೆಯ ಹಾದಿಯಲ್ಲಿದ್ದ ದೇಶದ ಷೇರುಪೇಟೆಯು ಸೋಮವಾರ ಭಾರಿ ಕುಸಿತ ಕಂಡಿದ್ದು,...