ಬಳ್ಳಾರಿ | ₹15 ಸಾವಿರ ಸಂಬಳದ ಯುವಕನ ಹೆಸರಿನಲ್ಲಿ ₹350 ಕೋಟಿಗೂ ಅಧಿಕ ಜಿಎಸ್‌ಟಿ ವಂಚನೆ!

Date:

ಸಾಮಾನ್ಯ ಕುಟುಂಬದ ಯುವಕನೊಬ್ಬನ ವೈಯಕ್ತಿಕ ದಾಖಲೆಗಳನ್ನು ದುರುಪಯೋಗಪಡಿಸಿಕೊಂಡು, ಆತನ ಹೆಸರಿನಲ್ಲಿ ಬರೋಬ್ಬರಿ ₹350 ಕೋಟಿಗೂ ಅಧಿಕ ಮೊತ್ತದ ಜಿಎಸ್‌ಟಿ ವಹಿವಾಟು ನಡೆಸಿರುವ ಆಘಾತಕಾರಿ ಪ್ರಕರಣ ಬಳ್ಳಾರಿಯಲ್ಲಿ ಬೆಳಕಿಗೆ ಬಂದಿದೆ.

- Advertisement -

ಟೊಯೋಟಾ ಶೋರೂಮ್‌ನಲ್ಲಿ ಸರ್ವಿಸ್ ಅಡ್ವೈಸರ್ ಆಗಿ ತಿಂಗಳಿಗೆ ಕೇವಲ ₹15 ಸಾವಿರ ಸಂಬಳಕ್ಕೆ ಕೆಲಸ ಮಾಡುತ್ತಿರುವ ರೋಷನ್ ಎಂಬ ಯುವಕನ ಹೆಸರನ್ನು ಬಳಸಿಕೊಂಡು ಈ ವಂಚನೆ ನಡೆಸಲಾಗಿದೆ. ಪ್ರಕರಣದಿಂದ ಸಂಕಷ್ಟಕ್ಕೆ ಸಿಲುಕಿರುವ ರೋಷನ್ ಹಾಗೂ ಅವರ ಕುಟುಂಬ ನ್ಯಾಯಕ್ಕಾಗಿ ಸೈಬರ್ ಕ್ರೈಂ ಪೊಲೀಸರ ಮೊರೆ ಹೋಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಒಬಿಸಿ ಮೀಸಲಾತಿ ಮತ್ತು ಕೆನೆಪದರ: ಸುಪ್ರೀಂನ ಮಾರ್ಚ್ ತೀರ್ಪಿನ...

ಒಬಿಸಿ ಮೀಸಲಾತಿ ಸೌಲಭ್ಯ ಪಡೆಯಲು 'ಕೆನೆಪದರ' ನಿರ್ಧರಿಸುವಾಗ ಕೇವಲ ಪೋಷಕರ ವಾರ್ಷಿಕ ವೇತನವನ್ನೇ ಏಕೈಕ ಮಾನದಂಡವಾಗಿ ಪರಿಗಣಿಸುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ತನ್ನ ಮಾರ್ಚ್ ತೀರ್ಪನ್ನು ಪುನರುಚ್ಚರಿಸಿದೆ. 1993ರ ಮೂಲ ನಿಯಮಗಳೇನು? ಕೆಳಹಂತದ...

ಮೈಕ್ರೋಸಾಫ್ಟ್‌ ಸರ್ವರ್ ಕ್ರಾಶ್; ತಲ್ಲಣಗೊಂಡ ಆನ್‌ ಲೈನ್‌ ಜಗತ್ತು!

ಆಧುನಿಕ ಕಚೇರಿ ವ್ಯವಹಾರ ಮತ್ತು ಡಿಜಿಟಲ್ ಸಂವಹನದ ಬೆನ್ನೆಲುಬಂತಿರುವ ತಂತ್ರಜ್ಞಾನ ದೈತ್ಯ ಮೈಕ್ರೋಸಾಫ್ಟ್‌ನ ಸರ್ವರ್‌ಗಳಲ್ಲಿ ಕಾಣಿಸಿಕೊಂಡ ಅನಿರೀಕ್ಷಿತ ತಾಂತ್ರಿಕ ದೋಷವು ಜಾಗತಿಕ ಮಟ್ಟದಲ್ಲಿ ಭಾರಿ ಅಲ್ಲೋಲಕಲ್ಲೋಲ ಸೃಷ್ಟಿಸಿದೆ. ಗುರುವಾರ (ನವೆಂಬರ್ 12) ಸಂಜೆಯಿಂದ...

ಸ್ಮರಣೆ | ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಿಗೇ ಜೈಲುಶಿಕ್ಷೆ ವಿಧಿಸಿ,...

ನ್ಯಾಯಮೂರ್ತಿಗಳ ವಿರುದ್ಧ ಜಾತಿ ತಾರತಮ್ಯದ ಆರೋಪ ಮಾಡಿ, ನ್ಯಾಯಾಂಗದೊಂದಿಗಿನ ಸಂಘರ್ಷ ನಡೆಸಿ, ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಗೇ ಐದು ವರ್ಷಗಳ ಶಿಕ್ಷೆಯ ಆದೇಶ ಹೊರಡಿಸಿ, ಕೊನೆಗೆ ತಾವೇ ಆರು ತಿಂಗಳ ಜೈಲುವಾಸ ಅನುಭವಿಸಿದ್ದವರು,...

ಏನಿದು ಪ್ರಕರಣ?

ಬಳ್ಳಾರಿ ನಗರದ ನಿವಾಸಿ ರೋಷನ್ ಟೊಯೋಟಾ ಶೋರೂಮ್‌ನಲ್ಲಿ ಸರ್ವಿಸ್ ಅಡ್ವೈಸರ್ ಆಗಿ ಕೆಲಸ ಮಾಡುತ್ತಿದ್ದಾರೆ. ಅವರ ತಂದೆ ಪಕೃದ್ದೀನ್ ಎಸಿ ಗೋಡೌನ್‌ನಲ್ಲಿ ಹಮಾಲಿ ಕೆಲಸ ಮಾಡುತ್ತಿದ್ದು, ಕುಟುಂಬ ಸಾಮಾನ್ಯ ಆರ್ಥಿಕ ಸ್ಥಿತಿಯಲ್ಲಿದೆ.

ಆದರೆ, ವಂಚಕರು ರೋಷನ್ ಅವರ ಆಧಾರ್ ಕಾರ್ಡ್, ಪ್ಯಾನ್ ಕಾರ್ಡ್, ಬ್ಯಾಂಕ್ ಪಾಸ್‌ಬುಕ್ ಹಾಗೂ ಮನೆಯ ವಿದ್ಯುತ್ ಬಿಲ್ ಸೇರಿದಂತೆ ವೈಯಕ್ತಿಕ ದಾಖಲೆಗಳನ್ನು ದುರುಪಯೋಗಪಡಿಸಿಕೊಂಡಿದ್ದಾರೆ. ಈ ದಾಖಲೆಗಳ ಆಧಾರದಲ್ಲಿ ‘ರೋಷನ್ ಎಂಟರ್‌ಪ್ರೈಸಸ್’ ಎಂಬ ಹೆಸರಿನಲ್ಲಿ ನಕಲಿ ಸಂಸ್ಥೆ ಸ್ಥಾಪಿಸಿ, ಜಿಎಸ್‌ಟಿ ನೋಂದಣಿ ಮಾಡಿಸಿದ್ದಾರೆ.

ನೋಂದಣಿ ಪ್ರಕ್ರಿಯೆಯಲ್ಲಿ ರೋಷನ್ ಅವರ ಮೊಬೈಲ್ ಸಂಖ್ಯೆ ಮತ್ತು ಇ-ಮೇಲ್ ವಿಳಾಸದ ಬದಲಿಗೆ ಬೇರೆಯವರ ಸಂಪರ್ಕ ವಿವರಗಳನ್ನು ನಮೂದಿಸಲಾಗಿದೆ. ಹೀಗಾಗಿ ಸಂಸ್ಥೆಯ ಹೆಸರಿನಲ್ಲಿ ನಡೆದ ನೋಂದಣಿ ಹಾಗೂ ಕೋಟ್ಯಂತರ ರೂಪಾಯಿ ವಹಿವಾಟಿನ ಕುರಿತು ರೋಷನ್ ಅವರಿಗೆ ಯಾವುದೇ ಒಟಿಪಿ ಅಥವಾ ಸಂದೇಶಗಳು ಬಂದಿಲ್ಲ. ಪರಿಣಾಮವಾಗಿ, ತಮ್ಮ ಹೆಸರಿನಲ್ಲಿ ಇಷ್ಟೊಂದು ದೊಡ್ಡ ಪ್ರಮಾಣದ ವಹಿವಾಟು ನಡೆಯುತ್ತಿರುವುದು ಅವರ ಗಮನಕ್ಕೂ ಬಂದಿರಲಿಲ್ಲ.

ಪ್ಲಾಸ್ಟಿಕ್ ವ್ಯಾಪಾರದ ಹೆಸರಿನಲ್ಲಿ ಕೇವಲ ಐದು ತಿಂಗಳ ಅವಧಿಯಲ್ಲಿ ಬರೋಬ್ಬರಿ ₹350 ಕೋಟಿ ವಹಿವಾಟು ನಡೆಸಿರುವ ವಂಚಕರು, ಬಳಿಕ ಜಿಎಸ್‌ಟಿ ಖಾತೆಯನ್ನು ಏಕಾಏಕಿ ಮುಚ್ಚಿದ್ದಾರೆ.

ನವೆಂಬರ್ 12ರಂದು ಜಿಎಸ್‌ಟಿ ಅಧಿಕಾರಿಗಳು ರೋಷನ್ ಅವರ ಮನೆಗೆ ಭೇಟಿ ನೀಡಿ, ‘ಇಷ್ಟೊಂದು ದೊಡ್ಡ ಪ್ರಮಾಣದ ವಹಿವಾಟು ನಡೆಸಿ ಏಕಾಏಕಿ ಜಿಎಸ್‌ಟಿ ಖಾತೆಯನ್ನು ಏಕೆ ಮುಚ್ಚಿದ್ದೀರಿ?’ ಎಂದು ಪ್ರಶ್ನಿಸಿದಾಗ ಈ ವಂಚನೆ ಬೆಳಕಿಗೆ ಬಂದಿದೆ. ಅಧಿಕಾರಿಗಳ ಪ್ರಶ್ನೆಯಿಂದ ಆಘಾತಕ್ಕೊಳಗಾದ ರೋಷನ್ ಹಾಗೂ ಅವರ ಕುಟುಂಬಸ್ಥರು ತಕ್ಷಣವೇ ಬಳ್ಳಾರಿ ಸೈಬರ್ ಕ್ರೈಂ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಇದನ್ನೂ ಓದಿ : ʼಈದಿನʼ ವರದಿ ಫಲಶೃತಿ | ಬೀದರ್ ವಿವಿ: ಪಿಜಿ ತರಗತಿ ಪುನರಾರಂಭ ದಿನಾಂಕ ಮುಂದೂಡಿಕೆ

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ದರ್ಗಾ, ಬಹುಪಯೋಗಿ ಭವನಕ್ಕೆ ಶಂಕುಸ್ಥಾಪನೆ

ಬೆಳಗಾವಿ ಜಿಲ್ಲಾ ರಾಯಭಾಗ ತಾಲೂಕಿನ ಕುಡಚಿ ಪಟ್ಟಣದ ದರ್ಗಾ ಎಸ್ಟೇಟ್ ವಕ್ಫ್...

ಐಐಟಿ ರೂರ್ಕಿ ವಿದ್ಯಾರ್ಥಿ ಆತ್ಮಹತ್ಯೆ: 70 ಪರೀಕ್ಷೆಗಳು ನವೆಂಬರ್ 22ಕ್ಕೆ ಮುಂದೂಡಿಕೆ! 

ಪ್ರತಿಷ್ಠಿತ ಭಾರತೀಯ ತಂತ್ರಜ್ಞಾನ ಸಂಸ್ಥೆ (IIT) ರೂರ್ಕಿಯ 20 ವರ್ಷದ ವಿದ್ಯಾರ್ಥಿಯೊಬ್ಬರು...

NCP ಬಣಗಳ ವಿಲೀನ : ಸುನೇತ್ರ ಪವಾರ್‌ ವಿರೋಧ, ಸುಪ್ರಿಯಾ ಸುಳೆ ಪೂರ್ಣ ವಿರಾಮ

ಮಹಾರಾಷ್ಟ್ರದ ಎನ್‌ಸಿಪಿಯ ಎರಡು ಬಣಗಳ ವಿಲೀನದ ಬಗ್ಗೆ ಊಹಾಪೋಹಗಳಿಗೆ ಸುನೇತ್ರ ಪವಾರ್‌...

ಬಿಜೆಪಿ ಆಡಳಿತದಲ್ಲಿ ಭಾರತ ಈಗ ಪ್ರಜಾಪ್ರಭುತ್ವ ದೇಶವಾಗಿ ಉಳಿದಿಲ್ಲ: ರಾಹುಲ್ ಗಾಂಧಿ ವಾಗ್ದಾಳಿ

ಬಿಜೆಪಿ ಆಡಳಿತದಲ್ಲಿ ಭಾರತವು ಈಗ ಪ್ರಜಾಪ್ರಭುತ್ವವಾಗಿ ಉಳಿದಿಲ್ಲ ಎಂದು ಲೋಕಸಭೆಯ ವಿರೋಧ...