ಬಳ್ಳಾರಿ | ಡಿ.30ರವರೆಗೆ ಕಾಲುವೆಗಳಿಗೆ ನೀರು ಹರಿಸಲು ಆಗ್ರಹಿಸಿ ರೈತರ ಪ್ರತಿಭಟನೆ

Date:

ಎಚ್‌ಎಲ್‌ಸಿ ಮತ್ತು ಎಲ್‌ಎಲ್‌ಸಿ ಕಾಲುವೆಗಳಿಗೆ ಡಿಸೆಂಬರ್ 30ರವರೆಗೆ ನೀರು ಹರಿಸಬೇಕು ಎಂದು ಆಗ್ರಹಿಸಿ, ಎಐಕೆಕೆಎಂಎಸ್ ರೈತ ಸಂಘಟನೆಯ ನೇತೃತ್ವದಲ್ಲಿ ನೂರಾರು ರೈತರು ಶುಕ್ರವಾರ ಬಳ್ಳಾರಿ ನಗರದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು.

- Advertisement -

ನಗರದ ಗಾಂಧಿ ಭವನದಿಂದ ಆರಂಭವಾದ ಪ್ರತಿಭಟನಾ ಮೆರವಣಿಗೆಯು ಪ್ರಮುಖ ಬೀದಿಗಳ ಮೂಲಕ ಸಾಗಿ ಜಿಲ್ಲಾಧಿಕಾರಿ ಕಚೇರಿ ತಲುಪಿತು. ಬಳಿಕ ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಿತ್ತನೆ ಗುರಿ ಅರ್ಧದಷ್ಟೂ ಮುಟ್ಟದ ಕೃಷಿ ಚಟುವಟಿಕೆ; ಜೋಳದ...

ಮುಂಗಾರು ಮಳೆ ಕೈಕೊಟ್ಟು ಬೆಳೆ ನಷ್ಟದಿಂದ ಕಂಗೆಟ್ಟ ಅನ್ನದಾತರಿಗೆ ಹಿಂಗಾರು ಹಂಗಾಮಿನಲ್ಲಾದರೂ ಮಳೆ ಆಸರೆಯಾಗಬಹುದು ಎಂಬ ನಿರೀಕ್ಷೆಯಿತ್ತು. ಆದರೆ ರೈತರ ಆ ನಿರೀಕ್ಷೆಯೂ ಹುಸಿಯಾಗಿದೆ. ಮುಂಗಾರಿನ ಬೆನ್ನಲ್ಲೇ ಹಿಂಗಾರು ಹಂಗಾಮಿನಲ್ಲೂ ಮಳೆ ಕೈಕೊಟ್ಟಿರುವುದರಿಂದ...

ಧಾರವಾಡದ ‘ಲಲಿತಕಲಾ ಅಕಾಡೆಮಿ’ಗೆ ದುಸ್ಥಿತಿ: ಕಲಾವಿದರಿಂದಲೇ ದೂರವಾದ ಪ್ರಾದೇಶಿಕ...

ಕಲಾವಿದರ ಬಹುದಿನಗಳ ಬೇಡಿಕೆಯಂತೆ ಸ್ಥಾಪನೆಯಾದ ಕೇಂದ್ರಕ್ಕೆ ಮೂರೇ ವರ್ಷಗಳಲ್ಲಿ ದುಸ್ಥಿತಿ; ಸಂಚಾಲಕರ ಏಕಪಕ್ಷೀಯ ಧೋರಣೆ, ಕಲಾವಿದರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದಿರುವುದು ಹಾಗೂ ಕಲಾ ಚಟುವಟಿಕೆಗಳ ಕೊರತೆಯ ವಿರುದ್ಧ ಹಿರಿಯ ಕಲಾವಿದರ ಆಕ್ರೋಶ. ಸಲಹಾ ಸಮಿತಿ...

ಗದಗ | ವರದಕ್ಷಿಣೆ ಮುಟ್ಟದ, ಒಗ್ಗಟ್ಟು ಬಿಡದ ತುಂಬು...

ಆಧುನಿಕತೆ ಬೆಳೆದಂತೆಲ್ಲ ಸಮಾಜದಲ್ಲಿ ಅವಿಭಕ್ತ ಕುಟುಂಬಗಳು ಕಣ್ಮರೆಯಾಗಿ ವಿಭಕ್ತ ಕುಟುಂಬಗಳ ಸಂಖ್ಯೆಗಳು ಹೆಚ್ಚಾಗುತ್ತಿವೆ. ನಾವು ನಮ್ಮವರು ಎನ್ನುವ ಭಾವನೆಗಳು ಮರೆಯಾಗುತ್ತಿರುವ ಹೊತ್ತಿನಲ್ಲಿ ನಂಬಿಕೆ, ವಿಶ್ವಾಸ, ಪ್ರೀತಿಯ ತಳಗಹದಿಯ ಮೇಲೆ ಇಂದಿಗೂ ಜಾಲವಾಡಗಿ ಅವಿಭಕ್ತ...

ಸಂಘದ ಜಿಲ್ಲಾಧ್ಯಕ್ಷ ಗೋವಿಂದ ಮಾತನಾಡಿ, “ಈ ಬಾರಿ ಬೆಲೆ ಏರಿಕೆ ಹಾಗೂ ಕೃಷಿ ವೆಚ್ಚದ ಹೆಚ್ಚಳದ ನಡುವೆಯೂ ರೈತರು ಸಾಲಸೋಲ ಮಾಡಿ ಕಷ್ಟಪಟ್ಟು ಬೆಳೆ ಬೆಳೆದಿದ್ದಾರೆ. ಇದೀಗ ಬೆಳೆ ಕೈ ಸೇರುವ ನಿರ್ಣಾಯಕ ಹಂತವಾಗಿದ್ದು, ಇಂತಹ ಸಂದರ್ಭದಲ್ಲಿ ಕಾಲುವೆಗಳಿಗೆ ನೀರು ಸ್ಥಗಿತಗೊಳಿಸುವ ನಿರ್ಧಾರ ರೈತರ ಬದುಕಿನ ಮೇಲೆ ಗಂಭೀರ ಪರಿಣಾಮ ಬೀರಲಿದೆ. ಆದ್ದರಿಂದ ಡಿಸೆಂಬರ್ 30ರವರೆಗೆ ನಿರಂತರವಾಗಿ ನೀರು ಹರಿಸಬೇಕು” ಎಂದು ಒತ್ತಾಯಿಸಿದರು.

ತುಂಗಭದ್ರಾ ಜಲಾಶಯದಲ್ಲಿ ಈ ಬಾರಿ 96 ಟಿಎಂಸಿಗಿಂತ ಅಧಿಕ ನೀರು ಸಂಗ್ರಹವಾಗಿದೆ. ಇಷ್ಟೊಂದು ಪ್ರಮಾಣದ ನೀರು ಲಭ್ಯವಿದ್ದರೂ ರೈತರ ಬೆಳೆಗಳಿಗೆ ನೀರು ಹರಿಸದಿರುವ ಸರ್ಕಾರದ ನಿರ್ಧಾರ ಅಕ್ಷಮ್ಯ ಅಪರಾಧವಾಗಿದೆ. ಜಲಾಶಯದಲ್ಲಿ ಸಂಗ್ರಹವಾಗಿರುವ ಇಷ್ಟೊಂದು ನೀರನ್ನು ಯಾರಿಗಾಗಿ ಮತ್ತು ಯಾವ ಉದ್ದೇಶಕ್ಕೆ ಬಳಸಲಾಗಿದೆ ಎಂಬುದನ್ನು ಸರ್ಕಾರ ಸ್ಪಷ್ಟಪಡಿಸಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಸಂಘದ ರಾಜ್ಯ ಸಮಿತಿ ಸದಸ್ಯ ಹನುಮಂತಪ್ಪ, ಜಿಲ್ಲಾ ಉಪಾಧ್ಯಕ್ಷ ಬಸಣ್ಣ, ಜಿಲ್ಲಾ ಕಾರ್ಯದರ್ಶಿ ಗುರಳ್ಳಿ, ಬಳ್ಳಾರಿ ತಾಲೂಕು ಕಾರ್ಯದರ್ಶಿ ಧನರಾಜ್, ಕುರುಗೋಡು ತಾಲೂಕು ಅಧ್ಯಕ್ಷ ಕೋಳೂರು ಪಂಪಾಪತಿ, ಉಪಾಧ್ಯಕ್ಷ ಕಲ್ಲುಕಂಬ ಪಂಪಾಪತಿ ಸೇರಿದಂತೆ ಶಿವಪ್ಪ, ಹೊನ್ನೂರಪ್ಪ, ಲಿಂಗಪ್ಪ ಹಾಗೂ ಹೇಮಂತ್ ಉಪಸ್ಥಿತರಿದ್ದರು.

ಇದನ್ನೂ ಓದಿ : ಬೀದರ್‌ | ಕನೇರಿ ಸ್ವಾಮಿ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸಲು ಆಗ್ರಹ

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಮೆರಿಕ-ಭಾರತ ವ್ಯಾಪಾರ ಒಪ್ಪಂದ: ಸುಂಕದಲ್ಲಿ ಭಾರತಕ್ಕೆ ವಿಶೇಷ ರಿಯಾಯಿತಿ ನೀಡಲಿದೆ ಅಮೆರಿಕ; ಕೇಂದ್ರ ಸರ್ಕಾರ ಹೇಳಿಕೆ

ಭಾರತ ಮತ್ತು ಅಮೆರಿಕ ನಡುವಿನ ಮಧ್ಯಂತರ ವ್ಯಾಪಾರ ಒಪ್ಪಂದವನ್ನು ಅಂತಿಮಗೊಳಿಸುವ ನಿಟ್ಟಿನಲ್ಲಿ...

ಬಿತ್ತನೆ ಗುರಿ ಅರ್ಧದಷ್ಟೂ ಮುಟ್ಟದ ಕೃಷಿ ಚಟುವಟಿಕೆ; ಜೋಳದ ಬೆಲೆ 20,000 ಗಡಿ ದಾಟುವ ಆತಂಕ

ಮುಂಗಾರು ಮಳೆ ಕೈಕೊಟ್ಟು ಬೆಳೆ ನಷ್ಟದಿಂದ ಕಂಗೆಟ್ಟ ಅನ್ನದಾತರಿಗೆ ಹಿಂಗಾರು ಹಂಗಾಮಿನಲ್ಲಾದರೂ...

ಧಾರವಾಡದ ‘ಲಲಿತಕಲಾ ಅಕಾಡೆಮಿ’ಗೆ ದುಸ್ಥಿತಿ: ಕಲಾವಿದರಿಂದಲೇ ದೂರವಾದ ಪ್ರಾದೇಶಿಕ ಕೇಂದ್ರ!

ಕಲಾವಿದರ ಬಹುದಿನಗಳ ಬೇಡಿಕೆಯಂತೆ ಸ್ಥಾಪನೆಯಾದ ಕೇಂದ್ರಕ್ಕೆ ಮೂರೇ ವರ್ಷಗಳಲ್ಲಿ ದುಸ್ಥಿತಿ; ಸಂಚಾಲಕರ...

ಗದಗ | ವರದಕ್ಷಿಣೆ ಮುಟ್ಟದ, ಒಗ್ಗಟ್ಟು ಬಿಡದ ತುಂಬು ಸಂಸಾರ ʻಜಾಲವಾಡಗಿʼ

ಆಧುನಿಕತೆ ಬೆಳೆದಂತೆಲ್ಲ ಸಮಾಜದಲ್ಲಿ ಅವಿಭಕ್ತ ಕುಟುಂಬಗಳು ಕಣ್ಮರೆಯಾಗಿ ವಿಭಕ್ತ ಕುಟುಂಬಗಳ ಸಂಖ್ಯೆಗಳು...