ಬಳ್ಳಾರಿ | ಅಂಗನವಾಡಿ ಜಾಗ ಒತ್ತುವರಿ ಆರೋಪ; ಕ್ರಮಕ್ಕೆ ಗ್ರಾಮಸ್ಥರ ಆಗ್ರಹ

Date:

ಬಳ್ಳಾರಿ ಜಿಲ್ಲೆ ಸಂಡೂರು ತಾಲೂಕಿನ ಎಸ್. ಬಸಾಪುರ ಗ್ರಾಮದಲ್ಲಿ ಸರ್ಕಾರಿ ಅಂಗನವಾಡಿ ಜಾಗ ಒತ್ತುವರಿ ಮಾಡಿಕೊಂಡಿ ಮನೆ ನಿರ್ಮಾಣ ಮಾಡಲಾಗಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

- Advertisement -

ಸರ್ಕಾರಿ ಜಾಗದಲ್ಲಿರುವ ಮನೆ ತೆರವು ಮಾಡುವಂತೆ ಕೋರ್ಟ್ ಆದೇಶಿಸಿದ್ದರೂ, ಜಿಲ್ಲಾಡಳಿತ ನೋಟಿಸ್‌ ನೀಡಿದರೂ ತಲೆಕೆಡಿಸಿಕೊಳ್ಳದೇ ಮನೆ ಮಾಲೀಕ ನಿರ್ಲಕ್ಷ್ಯ ತೋರಿದ್ದು ಗ್ರಾಮಸ್ಥರ ಆಕ್ರೋಶಕ್ಕೆ ಕಾರಣವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೀಸಲಾತಿ ಹೆಚ್ಚಳ ಮತ್ತು ನ್ಯಾಯಾಂಗದ ಮಿತಿ: ಸಾಮಾಜಿಕ ನ್ಯಾಯಕ್ಕೆ...

ಮೀಸಲಾತಿ ಬಯಸುವ ಜಾತಿಗಳೆಲ್ಲವೂ ಕೂಡ ವರ್ತಮಾನದ ಸಾಮಾಜಿಕ ಪರಿಸ್ಥಿತಿ ಮತ್ತು ಕಾನೂನು ನಿಯಮಗಳನ್ನು ಸಾಮಾಜಿಕ ನ್ಯಾಯದ ಬೆಳಕಿನಲ್ಲಿ ಅಂತಃಕರಣ ಪೂರ್ವಕವಾಗಿ ಅರ್ಥ ಮಾಡಿಕೊಳ್ಳಬೇಕಾಗಿದೆ. ಸರ್ಕಾರ ಈ ನಿಟ್ಟಿನಲ್ಲಿ ಕಾರ್ಯೋನ್ಮುಖವಾದಾಗ ಮಾತ್ರ ಸಾಮಾಜಿಕ ನ್ಯಾಯವೆಂಬ...

ರಾಮಲೀಲೆಗಳಲ್ಲಿ ರಾಮ, ಹನುಮ, ಲಕ್ಷ್ಮಣ ಪಾತ್ರಗಳಲ್ಲಿ ದಾನಿಶ್ –...

ರಾಮನಾಗಿ ದಾನಿಶ್. ಹನುಮಂತನಾಗಿ ಯೂನುಸ್. ಲಕ್ಷ್ಮಣನಾಗಿ ಶೇರ್ ಖಾನ್. ರಾವಣನಾಗಿ ಇಕ್ಬಾಲ್ ಅಹ್ಮದ್. ಇವರೆಲ್ಲರೂ ಮುಸ್ಲಿಂ ಕಲಾವಿದರು. ಆದರೆ, ಇವರು ಅಭಿನಯಿಸಿರುವುದು ಹಿಂದುಗಳ ಮಹಾಕಾವ್ಯ ರಾಮಾಯಣದ ಪಾತ್ರಗಳಲ್ಲಿ. ಉತ್ತರ ಭಾರತದ ಹಲವು ರಾಮಲೀಲೆಗಳಲ್ಲಿ...

ಅಮೆರಿಕದ ಮಧ್ಯಂತರ ಚುನಾವಣೆ: ಬೆಲೆ ಏರಿಕೆ, ಇರಾನ್ ಯುದ್ಧದ...

ಅಮೆರಿಕದಲ್ಲಿ ಏರುತ್ತಿರುವ ಪೆಟ್ರೋಲ್ ಬೆಲೆ, ದುಬಾರಿಯಾಗುತ್ತಿರುವ ದಿನಬಳಕೆಯ ವಸ್ತುಗಳು ಹಾಗೂ ಇರಾನ್ ವಿರುದ್ಧದ ಯುದ್ಧದ ಆರ್ಥಿಕ ಪರಿಣಾಮಗಳು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಡಳಿತಕ್ಕೆ ದೊಡ್ಡ ರಾಜಕೀಯ ಸವಾಲಾಗಿವೆ. ನವೆಂಬರ್ 3ರಂದು ನಡೆಯಲಿರುವ ಮಧ್ಯಂತರ...

ಬಿ.‌ಪಂಪಾಪತಿ ಎಂಬುವವರು ಸರ್ಕಾರಿ ಜಾಗ ಒತ್ತುವರಿ ಮಾಡಿಕೊಂಡಿದ್ದಾರೆ. ಇದು ನಮ್ಮ ಪೂರ್ವಜರ ಆಸ್ತಿ ಎಂದು ಪಂಪಾಪತಿ‌ ವಾದ ಮಾಡುತ್ತಿದ್ದಾರೆ. ವಡ್ಡು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಬಸಾಪುರ ಗ್ರಾಮದ ಸರ್ಕಾರಿ ಜಾಗದಲ್ಲಿ ಅಂಗನವಾಡಿ ಕಟ್ಟಲು ಜಾಗ ನಿಗದಿ ಮಾಡಲಾಗಿತ್ತು. ಆದರೆ, ಅಂಗನವಾಡಿ ನಿರ್ಮಾಣ ಆಗ ಬೇಕಿದ್ದ ಜಾಗದಲ್ಲಿ ಮನೆ ನಿರ್ಮಾಣ ಮಾಡಲಾಗಿದೆ.

ಖಾತ ನಂ. 368 ಜಾಗ ಒತ್ತುವರಿ ಮಾಡಿ ಮನೆಗಳ ನಿರ್ಮಾಣ ಮಾಡಲಾಗಿದೆ. ಬಿ.‌ಪಂಪಾಪತಿ ಎಂಬುವವರು ಸರ್ಕಾರಿ ಜಾಗ ಒತ್ತುವರಿ ಮಾಡಿಕೊಂಡು ಮನೆ ಕಟ್ಟಿದ್ದಾರೆ. ಮನೆ ನಿರ್ಮಾಣ ಆದ ಜಾಗ ಪಂಚಾಯ್ತಿಗೆ ಸೇರಿದ್ದು ಎಂದು ಮನೆಗಳ ತೆರವಿಗೆ ಹೈಕೋರ್ಟ್ ಆದೇಶ ಮಾಡಿದರೂ ಮನೆ ಮಾಲೀಕ ಯಾವುದಕ್ಕೂ ತಲೆ ಕೆಡಿಸಿಕೊಳ್ಳುತ್ತಿಲ್ಲ.

ಜಿಲ್ಲಾಡಳಿತ ನೋಟಿಸ್‌ಗಳಿಗೂ ತಲೆಬಾಗದೆ ಒತ್ತುವರಿ ಜಾಗದಲ್ಲಿ ಹೈಪೈ ಮನೆಗಳ ನಿರ್ಮಾಣ ಮಾಡಲಾಗಿದೆ. ಅಲ್ಲದೆ ಜಾಗ ಸರ್ವೆಗೆ ಬಂದ ಅಧಿಕಾರಿಗಳ ಮೇಲೂ ಮನೆ ಮಾಲೀಕ ಪಂಪಾಪತಿ ದರ್ಪ ಮೆರೆದಿದ್ದಾರೆ. ಇದು ನಮ್ಮ ಪೂರ್ವಾಜಿತರ ಆಸ್ತಿ. ರಾಜಕೀಯ ಷಡ್ಯಂತರದಿಂದ ದೌರ್ಜನ್ಯ ಆಗ್ತಿದೆ ಎಂದು ಕಣ್ಣೀರು ಹಾಕಿದ್ದಾರೆ. ನಿನ್ನೆ ಅಂಗನವಾಡಿ ತೆರೆಯುವುದರಿಂದ ಮಕ್ಕಳ ಭವಿಷ್ಯ ಉಜ್ವಲವಾಗುತ್ತೆ. ಹೀಗಾಗಿ ಮಕ್ಕಳ ಭವಿಷ್ಯಕ್ಕಾಗಿ ಜಾಗ ಬಿಟ್ಟು ಕೊಡಲು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಉಚ್ಚಿಲ ದಸರಾ ಶೋಭಾಯಾತ್ರೆ: ಅ. 21ರಂದು ವಾಹನ ಸಂಚಾರಕ್ಕೆ ಬದಲಿ ಮಾರ್ಗ

ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ನಡೆಯುತ್ತಿರುವ ಉಡುಪಿ-ಉಚ್ಚಿಲ ದಸರಾ 2026ರ ಅಂಗವಾಗಿ...

ಬಂಡೀಪುರ ಅರಣ್ಯದಲ್ಲಿ ಹೆಣ್ಣಾನೆ ಕಳೇಬರ ಪತ್ತೆ

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮದ್ದೂರು ವಲಯದ ಮಾರಿಕಟ್ಟೆ ಕೆರೆ ಸಮೀಪದ...

ಬಂಡೀಪುರದಲ್ಲಿ ಉರುಳು ಹಾಕಿ ಹುಲಿ ಕೊಂದ ಆರೋಪ: ವ್ಯಕ್ತಿ ಬಂಧನ

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಉರುಳು ಹಾಕಿ ಹುಲಿಯನ್ನು ಕೊಂದ ಪ್ರಕರಣಕ್ಕೆ...

ವಿಚಾರವಾದಿಗಳು ಕಂಡ ಗಾಂಧೀ-ಟಿಪ್ಪು ಮತ್ತು ಕೋಮುವಾದಿಗಳ ತಿರುಚುವಿಕೆ!

ಇತಿಹಾಸದ ಕುರಿತು ಪ್ರಶ್ನೆಗಳನ್ನು ಎತ್ತುವುದು ಪ್ರಜಾಪ್ರಭುತ್ವದ ಲಕ್ಷಣ. ಆದರೆ ಪ್ರಶ್ನೆಗಳನ್ನು ಎತ್ತುವ...