ಬಳ್ಳಾರಿ | ಆಶಾ ಕಾರ್ಯಕರ್ತೆಯರ ಬೇಡಿಕೆ ಈಡೇರಿಸುವಂತೆ ಆಗ್ರಹ

Date:

ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಎಐಯುಟಿಯುಸಿಗೆ ಸಂಯೋಜನೆಗೊಂಡಿರುವ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದಿಂದ ಪ್ರತಿಭಟನೆ ನಡೆಸಿದರು.

ಬಳ್ಳಾರಿಯ ಗಾಂಧಿಭವನದಿಂದ ಜಿಲ್ಲಾಧಿಕಾರಿ ಕಚೇರಿಯವರೆಗೆ ಪ್ರತಿಭಟನಾಕಾರರು ಪ್ರತಿಭಟನಾ ಮೆರವಣಿಗೆ ಹಮ್ಮಿಕೊಂಡಿದ್ದು, ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿದರು.

ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ರಾಜ್ಯ ಕಾರ್ಯದರ್ಶಿ ಡಿ.ನಾಗಲಕ್ಷ್ಮಿ ಅವರು ಮಾತನಾಡಿ “ ಹಗಲಿರುಳು, ಜನಗಳ ಆರೋಗ್ಯಕ್ಕಾಗಿ ದುಡಿಯುತ್ತಿರುವ ಆಶಾ ಕಾರ್ಯಕರ್ತೆಯರನ್ನು ಸರ್ಕಾರಗಳು ಅತ್ಯಂತ ನಿರ್ಲಕ್ಷ್ಯದಿಂದ ಕಾಣುತ್ತಿವೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಕೊರಾನಾ ಸಂದರ್ಭದಲ್ಲಿ ತಮ್ಮ ಪ್ರಾಣ ಪಣಕ್ಕಿಟ್ಟು ದುಡಿದ ಆಶಾ ಕಾರ್ಯಕರ್ತೆಯರಿಗೆ ಸರ್ಕಾರಗಳು ನೀಡಿದ್ದಾದರೂ ಏನು? ಹಿಂದಿನ ಬಿಜೆಪಿ ಸರ್ಕಾರ ಬಜೆಟ್‌ನಲ್ಲಿ ₹1,000 ಹೆಚ್ಚಿಸಿತ್ತಾದರೂ, ಅದನ್ನು ಕಾರ್ಯಗತಗೊಳಿಸಲಿಲ್ಲ. ಆಶಾಗಳಿಗೆ ಮೋಸ ಮಾಡಿತು. ಈಗಿನ ಕಾಂಗ್ರೆಸ್ ಸರ್ಕಾರ ಚುನಾವಣಾ ಸಂದರ್ಭದಲ್ಲಿ ನಿಗದಿತ ವೇತನ ₹5000ದಿಂದ ₹8000ಕ್ಕೆ ಏರಿಸುವ ಗ್ಯಾರಂಟಿ ನೀಡಿತ್ತು. ಆದರೆ ಈವರೆಗೆ ಕಾರ್ಯಗತವಾಗಿಲ್ಲ. ಇದಲ್ಲದೆ ಆರ್‌ಸಿಹೆಚ್ ಪೋರ್ಟಲ್‌ನ ಸಮಸ್ಯೆಯಿಂದಾಗಿ ಸಾವಿರಾರು ರೂಪಾಯಿಗಳು ಆಶಾಗಳಿಗೆ ನಷ್ಟವಾಗುತ್ತಿದ್ದರೂ, ಇಲಾಖೆಯಿಂದ ಸಮರ್ಪಕ ಕ್ರಮವಿಲ್ಲ” ಎಂದು ಆರೋಪಿಸಿದರು.

ಎಐಯುಟಿಯುಸಿ ಜಿಲ್ಲಾ ಅಧ್ಯಕ್ಷ ಎ ದೇವದಾಸ್ ಮಾತನಾಡಿ, “ಒತ್ತಾಯಪೂರ್ವಕವಾಗಿ ಆಶಾಗಳಿಗೆ ಅವರದಲ್ಲದ ಕೆಲಸಗಳನ್ನು ಮಾಡಿಸಲಾಗುತ್ತಿದೆ. ಇಲಾಖೆಯ ರಾಜ್ಯ ಮಟ್ಟದ ಅಧಿಕಾರಿಗಳಿಂದ ಆಶಾಗಳ ಕೆಲಸಗಳ ಬಗ್ಗೆ ಸ್ಪಷ್ಟ ನಿರ್ದೇಶನಗಳಿದ್ದರೂ, ಪಿಹೆಚ್‌ಸಿ ಮಟ್ಟದಲ್ಲಿ ಅದು ಪಾಲನೆಯಾಗುತ್ತಿಲ್ಲ. ಅನಗತ್ಯ ಸರ್ವೆಗಳು, ಪರೀಕ್ಷೆ, ಚುನಾವಣೆ ಸೇರಿದಂತೆ ಇತರೆ ಕಾರ್ಯಕ್ರಮಗಳಿಗೆ ಅವರನ್ನು ಬಳಸಿಕೊಳ್ಳಲಾಗುತ್ತಿದೆ. ತಾಯಿ-ಶಿಶುವಿನ ಆರೋಗ್ಯಕ್ಕೆ ಸಂಬಂಧಪಟ್ಟ ಕೆಲಸಗಳು ಹಿಂದೆ ಸರಿದಿವೆ” ಎಂದರು.

“ದುಡಿದಷ್ಟು ಪ್ರೋತ್ಸಾಹ ಧನ ಸಂಪೂರ್ಣವಾಗಿ ದೊರೆಯಬೇಕು. ಆರ್‌ಸಿಹೆಚ್ ಪೋರ್ಟಲ್‌ನ ಗೊಂದಲಗಳಿಗೆ ಅಂತ್ಯ ಹಾಡಬೇಕು. ಪ್ರೋತ್ಸಾಹ ಧನ ₹15,000 ನಿಗಧಿಯಾಗಬೇಕು. ನಿಗಧಿಯಾಗದ ಅನ್ಯ ಕೆಲಸಗಳನ್ನು ಆಶಾಗಳಿಗೆ ನೀಡಬಾರದು, ಅನಗತ್ಯ ಸರ್ವೆ ಹಾಗೂ ಕಾರ್ಯಕ್ರಮಗಳಲ್ಲಿ ತೊಡಗಿಸಬಾರದು ಸೇರಿದಂತೆ ಮುಂತಾದ ಬೇಡಿಕೆಗಳನ್ನು ಈಡೇರಿಸಬೇಕು” ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ಶಿವಮೊಗ್ಗ | ಮಲೆನಾಡು ಕರಾವಳಿ ಜನಪರ ಒಕ್ಕೂಟ ಆಯೋಜಿಸಿದ್ದ ಎರಡು ದಿನಗಳ ಶಿಬಿರ ಯಶಸ್ವಿ

ಮನವಿ ಪತ್ರವನ್ನು ಸ್ವೀಕರಿಸಿದ ಜಿಲ್ಲಾಧಿಕಾರಿ ಮಾತನಾಡಿ, “ಆಶಾ ಕಾರ್ಯಕರ್ತೆಯರ ಸಮಸ್ಯೆಗಳ ಕುರಿತು ಚರ್ಚಿಸಲು, ಸಭೆ ಕರೆಯುವಂತೆ ಜಿಲ್ಲಾ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗುವುದು” ಎಂದು ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಸಂಘದ ಗೌರವಾಧ್ಯಕ್ಷ ಎ ಶಾಂತಾ, ಎಐಯುಟಿಯುಸಿ ಜಿಲ್ಲಾ ಕಾರ್ಯದರ್ಶಿ ಡಾ ಪ್ರಮೋದ್, ಮುಖಂಡರುಗಳಾದ ಗೀತಾ, ರೇಷ್ಮಾ, ರಾಮಕ್ಕ, ಜಲಜಾಕ್ಷಿ ಸೇರಿದಂತೆ ಇತರರು ಇದ್ದರು.

ವರದಿ : ರಾಧಾಕೃಷ್ಣ

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೇಸಿಗೆಯಲ್ಲಿ ಉದ್ಯಾನವನಗಳನ್ನು ಹಸಿರಾಗಿಡಲು ಸಂಸ್ಕರಿಸಿದ ನೀರುಣಿಸಲು ಮುಂದಾದ ಬಿಬಿಎಂಪಿ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕುಡಿಯಲು ನೀರಿಲ್ಲದೇ ಜನ ಪರಡಾಡುವಂತಾಗಿದೆ. ಜತೆಗೆ, ಮರಗಿಡಗಳು...

ಉಡುಪಿ | ಮನೆಯಲ್ಲಿ ಒಂಟಿಯಾಗಿದ್ದ ಯುವಕನನ್ನು ಗುಂಡಿಟ್ಟು ಕೊಂದ ದುಷ್ಕರ್ಮಿಗಳು

ಮನೆಯಲ್ಲಿ ಒಂಟಿಯಾಗಿದ್ದ ಯುವಕನನ್ನು ಪಿಸ್ತೂಲಿನಿಂದ ಗುಂಡಿಕ್ಕಿ ಹತ್ಯೆಗೈದಿರುವ ಘಟನೆ ಉಡುಪಿ ಜಿಲ್ಲೆಯ...

ʼಈದಿನ.ಕಾಮ್ʼ ನ್ಯೂಸ್ ಬೀದರ್ ಸಹಾಯವಾಣಿ ಬಿಡುಗಡೆಗೊಳಿಸಿದ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ

ಕಲುಷಿತವಾದ ವಾತಾವರಣದಲ್ಲಿ ಸಮಾಜದ ಉನ್ನತಿಗಾಗಿ ವಸ್ತುನಿಷ್ಠ, ಪ್ರಾಮಾಣಿಕತೆ, ದಕ್ಷತೆ ಹಾಗೂ ನಿರ್ಭಡೆಯಿಂದ...

ದಾವಣಗೆರೆ | ನಾಲೆಯ ಕೊನೆ ಭಾಗಕ್ಕೆ ನೀರು ಹರಿದಿಲ್ಲ; ಸಚಿವರು ರೈತರ ಹಿತ ಕಾಯುತ್ತಿಲ್ಲ: ಶಾಸಕ ಹರೀಶ್

ದಾವಣಗೆರೆ ಜಿಲ್ಲೆಯ ರೈತರಿಗೆ ಭದ್ರಾ ಜಲಾಶಯದಿಂದ ಸಮರ್ಪಕವಾಗಿ ನೀರು ಹರಿಸುವಲ್ಲಿ ಜಿಲ್ಲಾ...