ಬಳ್ಳಾರಿ | ಬರಗಾಲ ಘೋಷಿಸಿ, ರೈತರನ್ನು ರಕ್ಷಿಸಿ; ಮಾಜಿ ಶಾಸಕ ಸೋಮಶೇಖರ ರೆಡ್ಡಿ

Date:

ಕೇಂದ್ರ ಸರ್ಕಾರ ನಿಯಮಾವಳಿಗಳ ಬದಲಾವಣೆ ಮಾಡಿದೆ ಎಂದು ಉಲ್ಲೇಖಿಸಿ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬರಗಾಲ ಘೋಷಿಸದೇ ಇರುವುದು ಸರಿಯಲ್ಲ ಎಂದು ಮಾಜಿ ಶಾಸಕ ಸೋಮಶೇಖರ ರೆಡ್ಡಿ ಆಕ್ರೋಶ ವ್ಯಕ್ತಪಡಿಸಿದರು.

ಬಳ್ಳಾರಿಯ ನೂತನ ಜಿಲ್ಲಾಡಳಿತ ಭವನದ ಎದುರು ಶುಕ್ರವಾರ ಬಿಜೆಪಿ ರೈತ ಮೋರ್ಚಾ ತಾಲೂಕು, ಬಳ್ಳಾರಿ ಜಿಲ್ಲಾ ರೈತ ವಿರೋಧಿ ಕಾಂಗ್ರೆಸ್ ಸರ್ಕಾರದ ನಿಲುವು ವಿರೋಧಿಸಿ ಬಿಜೆಪಿ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು.

“ರಾಜ್ಯದಲ್ಲಿ 134 ತಾಲೂಕುಗಳನ್ನು ಬರಗಾಲ ಪೀಡಿತ ತಾಲೂಕುಗಳೆಂದು ಘೋಷಣೆ ಮಾಡಬೇಕಿತ್ತು. ಆದರೆ ಈವರೆಗೂ ಮಾಡಿಲ್ಲ. ಕೇಂದ್ರ ಸರ್ಕಾರದಿಂದ ನಿಯಮಾವಳಿಗಳ ಬದಲಾವಣೆಯಾಗಿದೆ ಎಂದು ನೆಪ ಹೇಳಿ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬರಗಾಲ ಘೋಷಿಸದೇ ಇರುವುದು ಖಂಡನೀಯ. ಕೂಡಲೇ ಬರಗಾಲ ಘೋಷಿಸಿ ರೈತರನ್ನು ರಕ್ಷಿಸಬೇಕು” ಎಂದು ಒತ್ತಾಯಿಸಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ಬೀದರ್‌ | ರೈತರ ಸಮಸ್ಯೆಗಳಿಗೆ ಸರ್ಕಾರ ಯುದ್ಧೋಪಾದಿಯಲ್ಲಿ ಕ್ರಮಕೈಗೊಳ್ಳಲಿ

“ಕಾಂಗ್ರೆಸ್ ಸರ್ಕಾರ ರಚನೆಯಾಗಿ ನೂರು ದಿನ ಪೂರೈಸಿದೆ. ರಾಜ್ಯದಲ್ಲಿ ಕಿಸಾನ್ ಸಮ್ಮಾನ್ ಯೋಜನೆಯಡಿ ಕೊಡುವ 4‌,000 ರೂಪಾಯಿಯನ್ನು ನಿಲ್ಲಿಸಲಾಗಿದೆ. ನೀರಾವರಿ ಯೋಜನೆಗಳನ್ನು ನಿರ್ಲಕ್ಷ್ಯ ಮಾಡಲಾಗಿದೆ. ಎಪಿಎಂಸಿ ಕಾಯ್ದೆ ಹಿಂಪಡೆದರೂ, ವಿದ್ಯಾಸಿರಿ ಯೋಜನೆ ನಿಲ್ಲಿಸಿದ್ದಾರೆ” ಎಂದು ಟೀಕಿಸಿದರು.

ಪ್ರತಿಭಟನೆಯ ಬಳಿಕ ತಹಶೀಲ್ದಾರ್ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ವೈ ಎಂ ಸತೀಶ್, ಜಿಲ್ಲಾ ಅಧ್ಯಕ್ಷ ಮುರಹರಿ ಗೌಡ, ಹಿರಿಯ ಮುಖಂಡರುಗಳಾದ ಹನುಮಂತಪ್ಪ, ರಾಮಲಿಂಗಪ್ಪ, ತಿಮ್ಮಾರೆಡ್ಡಿ, ರಾಜು ಸೇರಿದಂತೆ ಇತರರು ಇದ್ದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಳ್ಳಾರಿ | ಗ್ಯಾರಂಟಿ ಯೋಜನೆಗಳ ಸಮೀಕ್ಷೆಗೆ ಅಂಗನವಾಡಿ ನೌಕರರ ಬಳಕೆ; ಅಸಮಾಧಾನ

ಅಂಗನವಾಡಿ ನೌಕರರನ್ನು ಸಮಗ್ರ ಶಿಶು ಅಭಿವೃದ್ಧಿ ಯೋಜನೆ ಹೊರತುಪಡಿಸಿ ಬೇರೆ ಯಾವುದೇ...

ಬಳ್ಳಾರಿ | ಅಭಿಮಾನಿ ಕಾಲಿನ ಮೇಲೆ ಹರಿದ ಯಶ್‌ ಬೆಂಗಾವಲು ವಾಹನ

ನಟ ಯಶ್‌ ಅವರು ಬಳ್ಳಾರಿಗೆ ಭೇಟಿ ನೀಡಿದ್ದ ವೇಳೆ, ಅವರನ್ನು ನೋಡಲು...

ಬಳ್ಳಾರಿ | ರಾಜಕಾರಣಿಗಳು ಮಾತ್ರ ಗೂಂಡಾಗಳಲ್ಲ, ಅಧಿಕಾರಿಗಳೂ ಗೂಂಡಾಗಳೇ: ರವಿಕೃಷ್ಣಾ ರೆಡ್ಡಿ ಕಿಡಿ

ಬಳ್ಳಾರಿ ಜಿಲ್ಲೆಯಲ್ಲಿ ರಾಜಕಾರಣಿಗಳು ಮಾತ್ರ ಗೂಂಡಾಗಳಲ್ಲ. ಅಧಿಕಾರಿಗಳೂ ಗೂಂಡಾಗಳೇ. ಇಲ್ಲಿನ ಎಸ್‌ಪಿಗೆ...

ಬಳ್ಳಾರಿಯಲ್ಲಿ ಎಸ್‌ಸಿ/ಎಸ್‌ಟಿ, ಅಲೆಮಾರಿಗಳ ಜಾಗೃತಿ ಸಮಾವೇಶ

ಅಲೆಮಾರಿಗಳ ಅಭಿವೃದ್ಧಿಗಾಗಿ ಬಳ್ಳಾರಿ ಜಿಲ್ಲಾ ಗುಡಿಸಲು ಮುಕ್ತ, ಟೆಂಟ್ ಮುಕ್ತ ಜಿಲ್ಲೆಯನ್ನಾಗಿ...