ಬಳ್ಳಾರಿ ಜಿಲ್ಲೆಯ ಎಲ್ಲ ಸರ್ಕಾರಿ ಆಸ್ಪತ್ರೆಗಳಲ್ಲಿ ಗುತ್ತಿಗೆ ಕಾರ್ಮಿಕರಾಗಿ ಕೆಲಸ ಮಾಡುತ್ತಿರುವ ನೌಕರರಿಗೆ ಸೇವಾ ಗುರುತಿನ ಚೀಟಿ ನೀಡಬೇಕೆಂದು ಗುತ್ತಿಗೆ ಕಾರ್ಮಿಕರ ಸಂಘ ಒತ್ತಾಯಿಸಿದೆ. ಸಂಘದ ಕಾರ್ಯಕರ್ತರು ಜಿಲ್ಲಾ ವೈದ್ಯಾಧಿಕಾರಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದೆ.
ಹಕ್ಕೊತ್ತಾಯ ಪತ್ರ ಸಲ್ಲಿಸಿ ಮಾತನಾಡಿದ ಸಂಘದ ಮುಖಂಡ ಎಂ ಗೋಪಾಲ್, “ಸಿರುಗುಪ್ಪ ಸಾರ್ವಜನಿಕ ತಾಲೂಕು ಆಸ್ಪತ್ರೆಯಲ್ಲಿ ಹಲವಾರು ನೌಕರರು 2006ರಿಂದ ಹೊರಗುತ್ತಿಗೆ ಕಾರ್ಮಿಕರಾಗಿ ದುಡಿಯುತ್ತಿದ್ದಾರೆ. ಅವರೆಲ್ಲರಿಗೂ ಸೇವಾ ಪ್ರಮಾಣ ಪತ್ರ ಗುರುತಿನ ಚೀಟಿ ನೀಡಬೇಕು. ಈಗಾಗಲೇ ಹೊಸಪೇಟೆ ಆಸ್ಪತ್ರೆಯಲ್ಲಿ ಅಂತಹ ಪ್ರಮಾಣ ಪತ್ರಗಳನ್ನು ನೀಡಲಾಗಿದೆ” ಎಂದರು.
ಹಕ್ಕೊತ್ತಾಯ ಪತ್ರ ಸಲ್ಲಿಸುವ ವೇಳೆ ಸಂಘದ ಜಿಲ್ಲಾ ಉಪಾಧ್ಯಕ್ಷ ಎಂ ಹನುಮಂತ, ಆರ್ ಭಾಸ್ಕರ್ ರೆಡ್ಡಿ ಸೇರಿದಂತೆ ಅನೇಕರು ಇದ್ದರು.