ಬಳ್ಳಾರಿ |ನಿಗದಿತ ಬೆಲೆಗಿಂತ ಹೆಚ್ಚಿನ ದರಕ್ಕೆ ಗೊಬ್ಬರ ಮಾರಾಟ: ರೈತರ ಆಕ್ರೋಶ

Date:

ಬಳ್ಳಾರಿ ಜಿಲ್ಲೆಯ ಕಂಪ್ಲಿಯಲ್ಲಿ ಬಿತ್ತನೆ ಗೊಬ್ಬರವನ್ನು ನಿಗದಿತ ಬೆಲೆಗಿಂತ ಹೆಚ್ಚಿನ ದರದಲ್ಲಿ ಮಾರಾಟ ಮಾಡಲಾಗುತ್ತಿದೆ ಎಂದು ರೈತರು ಆರೋಪಿಸಿದ್ದಾರೆ. ಗೊಬ್ಬರ ಖರೀದಿಸಿದ ಬಿಲ್ ಕೇಳಿದರೆ ಧಮ್ಕಿ ಹಾಕುತ್ತಿದ್ದು, ಈ ಅನ್ಯಾಯಕ್ಕೆ ಕಡಿವಾಣ ಹಾಕುವಂತೆ ಆಗ್ರಹಿಸಿದ್ದಾರೆ.

- Advertisement -

ಬಳ್ಳಾರಿ ಭಾಗದಲ್ಲಿ ಮುಂಗಾರು ಬಿತ್ತನೆ ಪ್ರಕ್ರಿಯೆ ಚುರುಕುಗೊಂಡಿದೆ. ಇಂತಹ ಹೊತ್ತಿನಲ್ಲಿ ಬಿತ್ತನೆ ಬೀಜದ ಜೊತೆಗೆ ಗೊಬ್ಬರವನ್ನೂ ಖರೀದಿಸುತ್ತಾರೆ. ಇದನ್ನೇ ಬಂಡವಾಳ ಮಾಡಿಕೊಂಡಿರುವ ಅಂಗಡಿಗಳ ಮಾಲೀಕರು, ಮೂಲ ಬೆಲೆಗಿಂತ ಹೆಚ್ಚಿನ ಬೆಲೆಗೆ ಗೊಬ್ಬರ ಮಾರಾಟ ಮಾಡುತ್ತಿದ್ದಾರೆಂದು ರೈತರು ಆರೋಪಿಸಿದ್ದಾರೆ. ಈ ಅಕ್ರಮಕ್ಕೆ ತಡೆ ಹಾಕುವಂತೆ ವಿಜಯ ಕರುನಾಡ ರಕ್ಷಣಾ ವೇದಿಕೆ ಸಂಘಟನೆ ಜೊತೆಗೂಡಿ ರೈತರು ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಈ ಕುರಿತು ಪ್ರತಿಕ್ರಿಯೆ ನೀಡಿರುವ ವಿಜಯ ಕರುನಾಡ ರಕ್ಷಣಾ ವೇದಿಕೆಯ ರಾಜ್ಯ ಕಾರ್ಯಾಧ್ಯಕ್ಷರಾದ ವಿರೂಪಾಕ್ಷಿ ಯಾದವ್, ಕಂಪ್ಲಿ ಪಟ್ಟಣದ ಶ್ರೀ ವೆಂಕಟಕೃಷ್ಣ ಟ್ರೇಡಿಂಗ್ ಕಂಪನಿಯಲ್ಲಿ 11 ಚೀಲ ಕಾಂಪ್ಲೆಕ್ಸ್ ನಂ. 20-20-013 ಗೊಬ್ಬರ ಖರೀದಿಸಿದ್ದೇನೆ. ಅದರ ಮೂಲ ಬೆಲೆ ಒಂದು ಚೀಲಕ್ಕೆ 1525 ರೂಪಾಯಿ ಇರುತ್ತದೆ. ಆದರೆ ಈ ಅಂಗಡಿಯವರು ಪ್ರತಿ ಚೀಲಕ್ಕೆ 1700 ರೂ.ನಂತೆ ಮಾರಾಟ ಮಾಡಿರುತ್ತಾರೆ. ಬಿಲ್ ಕೇಳಿದರೆ ಬಿಳಿ ಚೀಟಿಯಲ್ಲಿ ಬರೆದು ಕೊಟ್ಟಿರುತ್ತಾರೆ. ಪ್ರಿಂಟೆಡ್ ಬಿಲ್ ಕೊಡಿ ಎಂದು ಕೇಳಿದರೆ ʼಇದೆ ಬಿಲ್‌ ಇರೋದುʼ ಎಂದು ಗದರುತ್ತಾರೆ” ಎಂಬ ಆರೋಪ ಮಾಡಿದ್ದಾರೆ. ಅಲ್ಲದೇ, ಈ ಅಕ್ರಮದ ಕುರಿತು ಮುತುವರ್ಜಿ ವಹಿಸಿ ರೈತರಿಗೆ ನ್ಯಾಯ ದೊರಿಸಿಕೊಡುವಂತೆ ಸಂಬಂಧ ಪಟ್ಟ ಅಧಿಕಾರಿಗಳನ್ನು ಆಗ್ರಹಿಸಿದ್ದಾರೆ.

WhatsApp Image 2026 05 26 at 12.21.55 PM
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್ | ಶೋಷಿತ ಸಮುದಾಯಗಳ ರಾಜಕೀಯ ಜಾಗೃತಿಗೆ ಶ್ರಮಿಸಿದ ಕಾನ್ಶಿರಾಂ

ದಲಿತರು, ಹಿಂದುಳಿದವರು ಹಾಗೂ ಅಲ್ಪಸಂಖ್ಯಾತರ ರಾಜಕೀಯ ಹಕ್ಕುಗಳಿಗಾಗಿ ಹೋರಾಟ ರೂಪಿಸಿ, ಬಹುಜನ...

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ ಅಪರೂಪದ ಕಲಾವಿದ

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ...

ವಿಜಯಪುರ | ಅಕ್ಟೋಬರ್ 4ನೇ ವಾರದಲ್ಲಿ ನಶಾ ಮುಕ್ತ ಭಾರತ ಅಭಿಯಾನ: ಜಿಲ್ಲಾಧಿಕಾರಿ ಆನಂದ ಕೆ

ಮಾದಕ ವಸ್ತುಗಳ ಸೇವನೆಯ ದುಷ್ಪರಿಣಾಮಗಳ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿ, ಯುವಜನತೆಯನ್ನು...

ಅವಳ ಕಣ್ಣೋಟ | ಡೊರೊಥಿ- ಸ್ವೀಕಾರದಾಚೆಗೆ, ಒಳಗೊಳ್ಳುವಿಕೆಯ ಕಡೆಗೆ…

ಇದೊಂದು ಪರಿಪೂರ್ಣ ಸಿನಿಮಾ ಅಲ್ಲ. ಕೆಲವು ತಿರುವುಗಳು ಸರಳವಾಗಿವೆ. ಕೆಲವು ಪಾತ್ರಗಳು...