ಬಳ್ಳಾರಿ | ಅತಿಥಿ ಶಿಕ್ಷಕರ ಬೇಡಿಕೆ ಈಡೇರಿಸುವಂತೆ ಒತ್ತಾಯ

Date:

ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಹಾಗೂ ಸಮಸ್ಯೆಗಳನ್ನು ಬಗೆಹರಿಸಬೇಕು ಎಂದು ಒತ್ತಾಯಿಸಿದ್ದ ಅತಿಥಿ ಶಿಕ್ಷಕರು ಬಳ್ಳಾರಿ ಜಿಲ್ಲೆಯ ಕುರುಗೋಡುನಲ್ಲಿ ಪ್ರತಿಭಟನೆ ನಡೆಸಿದ್ದಾರೆ. ತಹಶೀಲ್ದಾರ್‌ಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದ್ದಾರೆ.

ರಾಜ್ಯದಲ್ಲಿ ಸುಮಾರು 43,159, ಅತಿಥಿ ಶಿಕ್ಷಕರು ಸೇವೆ ಸಲ್ಲಿಸುತ್ತಿದ್ದಾರೆ. ಮಕ್ಕಳ ಮತ್ತು ಶೈಕ್ಷಣಿಕ ಹಿತದೃಷ್ಟಿಯಿಂದ ಅತಿಥಿ ಶಿಕ್ಷಕರನ್ನು ಪ್ರತಿ ವರ್ಷ ಸರ್ಕಾರ ನೇಮಕಮಾಡಿಕೊಳ್ಳುತ್ತಿದೆ. ಹತ್ತನ್ನೇರಡು ವರ್ಷಗಳಿಂದ ಕಡಿಮೆ ವೇತನಕ್ಕೆ ದುಡಿಯುತ್ತಿದ್ದಾರೆ. ವೇತನ ಹೆಚ್ಚಿಸಬೇಕು, ಸೇವಾ ಭದ್ರತೆ ಒದಗಿಸಬೇಕು ಎಂಬುದು ಸೇರಿದಂತೆ ಹಲವಾರು ಬೇಡಿಕೆಗಳನ್ನು ಸರ್ಕಾರದ ಮುಂದಿಟ್ಟಿದ್ದೇವೆ. ಆದರೂ, ಯಾವುದೇ ಪ್ರಯೋಜನವಾಗಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

“ನಮಗೆ ಯಾವುದೇ ತರಹದ ಉದ್ಯೋಗ ಭದ್ರತೆಯಾಗಲಿ, ಕನಿಷ್ಠ ವೇತನವಾಗಲಿ ಇಲ್ಲ. ಕೇವಲ 9, 10 ತಿಂಗಳು ಸೇವೆ ಸಲ್ಲಿಸಿದ ನಂತರ ಬೇರೆ ಕೆಲಸಕ್ಕೆ ಅಲೆದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಕೇವಲ ಪ್ರಾಥಮಿಕ ಶಾಲೆಯಲ್ಲಿ10,000 ರೂ. ಮತ್ತು ಪ್ರೌಢಶಾಲೆಗಳಲ್ಲಿ 10,500 ರೂ. ವೇತನ ಸಿಗುತ್ತಿದೆ. ಈ ಹಣದಿಂದ ಜೀವನ ನಿರ್ವಹಣೆ ತುಂಬಾ ಕಷ್ಟಕರವಾಗಿದೆ. ಪ್ರತಿ ವರ್ಷ ಅತಿಥಿ ಶಿಕ್ಷಕರನ್ನು ಸರ್ಕಾರವು ತಮಗೆ ಬೇಕಾದ ಸಮಯದಲ್ಲಿ ನೇಮಕ ಮಾಡಿಕೊಂಡು ಮಾರ್ಚ್ 31ಕ್ಕೆ ಬಿಡುಗಡೆ ಮಾಡುತ್ತದೆ. ಈ ಪದ್ಧತಿಯಿಂದ ನಮಗೆ ಉದ್ಯೋಗವಿಲ್ಲದೆ ತೊಂದರೆಗೆ ಒಳಗಾಗುತ್ತೇವೆ” ಎಂದು ಅಳಲು ತೋಡಿಕೊಂಡಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಸರ್ಕಾರ ನಮ್ಮ ಸಮಸ್ಯೆಗಳಿಗೆ ಸ್ಪಂದಿಸದೇ ಇರುವುದರಿಂದ ಮಾನಸಿಕವಾಗಿ ನೊಂದಿದ್ದೇವೆ. ನಮ್ಮ ಪ್ರಮುಖ ಬೇಡಿಕೆಗಳನ್ನು ಈಡೇರಿಸಬೇಕು. ಇಲ್ಲದಿದ್ದಲ್ಲಿ ಮುಂದಿನ ದಿನಗಳಲ್ಲಿ ಬೃಹತ್ ಹೋರಟ ನಡೆಸಲಾಗುವುದು” ಎಂದು ಎಚ್ಚರಿಕೆ ನೀಡಿದ್ದಾರೆ.

ಪ್ರತಿಭಟನೆಯಲ್ಲಿ ಅತಿಥಿ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ಎಸ್ ರಾಮಪ್ಪ , ಗಂಗಾ , ಮಾರೆಣ್ಣ , ಎರ್ರಿ ಸ್ವಾಮಿ ಇನ್ನಿತರರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಳ್ಳಾರಿ | ರಾಜಕಾರಣಿಗಳು ಮಾತ್ರ ಗೂಂಡಾಗಳಲ್ಲ, ಅಧಿಕಾರಿಗಳೂ ಗೂಂಡಾಗಳೇ: ರವಿಕೃಷ್ಣಾ ರೆಡ್ಡಿ ಕಿಡಿ

ಬಳ್ಳಾರಿ ಜಿಲ್ಲೆಯಲ್ಲಿ ರಾಜಕಾರಣಿಗಳು ಮಾತ್ರ ಗೂಂಡಾಗಳಲ್ಲ. ಅಧಿಕಾರಿಗಳೂ ಗೂಂಡಾಗಳೇ. ಇಲ್ಲಿನ ಎಸ್‌ಪಿಗೆ...

ಬಳ್ಳಾರಿಯಲ್ಲಿ ಎಸ್‌ಸಿ/ಎಸ್‌ಟಿ, ಅಲೆಮಾರಿಗಳ ಜಾಗೃತಿ ಸಮಾವೇಶ

ಅಲೆಮಾರಿಗಳ ಅಭಿವೃದ್ಧಿಗಾಗಿ ಬಳ್ಳಾರಿ ಜಿಲ್ಲಾ ಗುಡಿಸಲು ಮುಕ್ತ, ಟೆಂಟ್ ಮುಕ್ತ ಜಿಲ್ಲೆಯನ್ನಾಗಿ...

ಮಾಜಿ ಸಚಿವ ಶ್ರೀರಾಮುಲುಗೆ ಹೈಕೋರ್ಟ್‌ ತರಾಟೆ; ಬಂಧನ ವಾರಂಟ್ ನೀಡುವ ಎಚ್ಚರಿಕೆ

ಕಳೆದ ವಿಧಾನಸಭಾ ಚುನಾವಣೆ ವೇಳೆ ನೀತಿ ಸಂಹಿತೆ ಉಲ್ಲಂಘನೆ ಆರೋಪದ ಮೇಲೆ...

ಬಳ್ಳಾರಿ | 2022-23 ಸಾಲಿನಲ್ಲಿ 615 ಶಿಶುಗಳ ಸಾವು; ಕ್ರಮಕ್ಕೆ ಮುಂದಾದ ಜಿಲ್ಲಾಡಳಿತ

2022-23ನೇ ಸಾಲಿನಲ್ಲಿ ಬಳ್ಳಾರಿ ಜಿಲ್ಲೆಯಲ್ಲಿ 614 ಶಿಶುಗಳು ಮೃತಪಟ್ಟಿವೆ. ಅತಿಸಾರ, ತೀವ್ರ...