ಬಳ್ಳಾರಿ | ಕೆಎಸ್‌ಆರ್‌ಟಿಸಿ ಬಸ್ ಪಲ್ಟಿ; 40ಕ್ಕೂ ಅಧಿಕ ಮಂದಿಗೆ ಗಾಯ

Date:

ಬಳ್ಳಾರಿ ಜಿಲ್ಲೆ ಸಂಡೂರು ತಾಲೂಕಿನ ನಿಡುಗುರ್ತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾಟೀನ್ ಕಂಬ ಹಾಗೂ ಉತ್ತರ ಮಲೈ ನಡುವೆ ಕೆಎಸ್‌ಆರ್‌ಟಿಸಿ ಬಸ್ ನೆಲಕ್ಕುರುಳಿದ್ದು, ಅಪಘಾತದಲ್ಲಿ ಶಾಲಾ ಮಕ್ಕಳು ಸೇರಿದಂತೆ 40ಕ್ಕೂ ಅಧಿಕ ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ.

ಗಾಯಾಳುಗಳನ್ನು ಸಂಡೂರಿನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಗಂಭೀರವಾಗಿ ಗಾಯಗೊಂಡಿರುವ ಹತ್ತು ಮಕ್ಕಳನ್ನು ಆ್ಯಂಬುಲೆನ್ಸ್ ಮೂಲಕ ಬಳ್ಳಾರಿಯ ವಿಮ್ಸ್‌ಗೆ ಕರೆದೊಯ್ಯಲಾಗಿದೆ. ಅಪಘಾತದಲ್ಲಿ ಬಸ್ ಕಂಡಕ್ಟರ್‌ ಕೈ ಮುರಿದಿದೆ ಎನ್ನಲಾಗಿದೆ.

ಈ ಸುದ್ದಿ ಓದಿದ್ದೀರಾ? ವಿಜಯನಗರ | ವಿದ್ಯಾರ್ಥಿನಿ ಸಾವು; ಡೆಂಗಿ ಶಂಕೆ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಚಿಕಿತ್ಸೆ ನೀಡಲಾಗುತ್ತಿರುವ ಸಂಡೂರು ಸಾರ್ವಜನಿಕ ಆಸ್ಪತ್ರೆಗೆ ಬಳ್ಳಾರಿ ಜಿಲ್ಲಾ ಪಂಚಾಯಿತಿ ಸಿಇಒ ರಾಹುಲ್ ಭೇಟಿ ನೀಡಿದ್ದಾರೆ. ಅಪಘಾತಕ್ಕೆ ಖಚಿತ ಕಾರಣ ಇನ್ನೂ ತಿಳಿದುಬಂದಿಲ್ಲ.

ಗಿರೆನಹಳ್ಳಿ, ಉತ್ತರ ಮಲೈ ಭಾಗದಿಂದ ಸಂಡೂರಿಗೆ ಬರುತ್ತಿದ್ದ ಬಸ್‌ನಲ್ಲಿ ಶಾಲೆ-ಕಾಲೇಜು ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಪ್ರಯಾಣ ಮಾಡುತ್ತಿದ್ದರು ಎನ್ನಲಾಗಿದೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಳ್ಳಾರಿ | ರಾಜಕಾರಣಿಗಳು ಮಾತ್ರ ಗೂಂಡಾಗಳಲ್ಲ, ಅಧಿಕಾರಿಗಳೂ ಗೂಂಡಾಗಳೇ: ರವಿಕೃಷ್ಣಾ ರೆಡ್ಡಿ ಕಿಡಿ

ಬಳ್ಳಾರಿ ಜಿಲ್ಲೆಯಲ್ಲಿ ರಾಜಕಾರಣಿಗಳು ಮಾತ್ರ ಗೂಂಡಾಗಳಲ್ಲ. ಅಧಿಕಾರಿಗಳೂ ಗೂಂಡಾಗಳೇ. ಇಲ್ಲಿನ ಎಸ್‌ಪಿಗೆ...

ಬಳ್ಳಾರಿಯಲ್ಲಿ ಎಸ್‌ಸಿ/ಎಸ್‌ಟಿ, ಅಲೆಮಾರಿಗಳ ಜಾಗೃತಿ ಸಮಾವೇಶ

ಅಲೆಮಾರಿಗಳ ಅಭಿವೃದ್ಧಿಗಾಗಿ ಬಳ್ಳಾರಿ ಜಿಲ್ಲಾ ಗುಡಿಸಲು ಮುಕ್ತ, ಟೆಂಟ್ ಮುಕ್ತ ಜಿಲ್ಲೆಯನ್ನಾಗಿ...

ಮಾಜಿ ಸಚಿವ ಶ್ರೀರಾಮುಲುಗೆ ಹೈಕೋರ್ಟ್‌ ತರಾಟೆ; ಬಂಧನ ವಾರಂಟ್ ನೀಡುವ ಎಚ್ಚರಿಕೆ

ಕಳೆದ ವಿಧಾನಸಭಾ ಚುನಾವಣೆ ವೇಳೆ ನೀತಿ ಸಂಹಿತೆ ಉಲ್ಲಂಘನೆ ಆರೋಪದ ಮೇಲೆ...

ಬಳ್ಳಾರಿ | 2022-23 ಸಾಲಿನಲ್ಲಿ 615 ಶಿಶುಗಳ ಸಾವು; ಕ್ರಮಕ್ಕೆ ಮುಂದಾದ ಜಿಲ್ಲಾಡಳಿತ

2022-23ನೇ ಸಾಲಿನಲ್ಲಿ ಬಳ್ಳಾರಿ ಜಿಲ್ಲೆಯಲ್ಲಿ 614 ಶಿಶುಗಳು ಮೃತಪಟ್ಟಿವೆ. ಅತಿಸಾರ, ತೀವ್ರ...