ಬಳ್ಳಾರಿ | ಜೀವಾವಧಿ ಶಿಕ್ಷೆಗೆ ಒಳಗಾಗಿದ್ದ ಕೈದಿ ಸಾವು: ಜೈಲು ಸಿಬ್ಬಂದಿ ವಿರುದ್ಧ ಕುಟುಂಬಸ್ಥರ ಆರೋಪ

Date:

ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಕೈದಿ ಬಳ್ಳಾರಿಯ ಬಿಮ್ಸ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದು, ಘಟನೆಗೆ ವೈದ್ಯರು ಮತ್ತು ಜೈಲು ಸಿಬ್ಬಂದಿಗಳ ನಿರ್ಲಕ್ಷ್ಯವೇ ಕಾರಣವೆಂದು ಕುಟುಂಬಸ್ಥರು ಆರೋಪಿಸಿದ್ದಾರೆ.

- Advertisement -

ಕೈದಿ ಹನುಮಂತು(25) ಮೇ 6ರಂದು ಬಿಮ್ಸ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಈತ ಮೂಲತಃ ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನ ಸಂಕನಾಳು ಗ್ರಾಮದ ನಿವಾಸಿ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ...

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು ಇದೇ ಮೊದಲೇನಲ್ಲ. ಕರಾವಳಿಯ ಜನತೆ ಇಂತಹ ಪ್ರಚೋದನಾತ್ಮಕ ನಡೆಗಳನ್ನು ತಿರಸ್ಕರಿಸಿ, ಸತ್ಯ ಮತ್ತು ನ್ಯಾಯದ ಪರವಾಗಿ ನಿಲ್ಲಬೇಕಾಗಿದೆ. ಕರಾವಳಿ ಕರ್ನಾಟಕವಾಗಲಿ...

14 ಆಕ್ಷೇಪಗಳಿಂದ SIT ಬೇಡಿಕೆಯವರೆಗೆ: ಗ್ಯಾನೇಶ್‌ ಕುಮಾರ್ ಸುತ್ತ...

ಚುನಾವಣಾ ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಬಹಿರಂಗಗೊಂಡ ಬೆನ್ನಲ್ಲೇ ಎಸ್‌ಐಆರ್‌ ವಿವಾದ ಹೊಸ ತಿರುವು ಪಡೆದುಕೊಂಡಿದೆ. ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ಅವರ ನಿರ್ಧಾರಗಳ ಕುರಿತು ಚುನಾವಣಾ ಆಯುಕ್ತರಾದ ಸುಖಬೀರ್‌ ಸಿಂಗ್‌ ಸಂಧು ಮತ್ತು...

“2026ರ ಜನವರಿಯಲ್ಲಿ ರಾಯಚೂರು ಜಿಲ್ಲಾ ಕಾರಾಗೃಹದಿಂದ, ಬಳ್ಳಾರಿ ಕಾರಾಗೃಹಕ್ಕೆ ಇವರನ್ನು ಸ್ಥಳಾಂತರಿಸಲಾಗಿತ್ತು. ಏಪ್ರಿಲ್ 29ರಂದು ವಿಪರೀತ ಹೊಟ್ಟೆ ನೋವು ಕಾಣಿಸಿಕೊಂಡ ಕಾರಣ ಅವರನ್ನು ಬಳ್ಳಾರಿ ಜೈಲಿನಿಂದ ಬಿಮ್ಸ್ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆಸ್ಪತ್ರೆಗೆ ದಾಖಲಿಸಿ ಒಂದು ವಾರ ಕಳೆದರೂ ಪೋಷಕರಿಗೆ ಈ ಬಗ್ಗೆ ಮಾಹಿತಿ ನೀಡಿರಲಿಲ್ಲ” ಎಂದು ಮೃತ ಕೈದಿಯ ಕುಟುಂಬಸ್ಥರು ಆರೋಪಿಸಿದ್ದಾರೆ.

ಮೃತನ ಸಹೋದರಿ ಮರಿಯಮ್ಮ ಜೈಲಿನ ಸಿಬ್ಬಂದಿಗಳ ವಿರುದ್ಧ ಗಂಭೀರ ಆರೋಪ ಮಾಡಿದ್ದು, “ಪೊಲೀಸರು ಮೇ 6ರ ರಾತ್ರಿ 12ಕ್ಕೆ ಕರೆ ಮಾಡಿ ಆಸ್ಪತ್ರೆಯಲ್ಲಿ ನನ್ನ ಅಣ್ಣ ಮೃತಪಟ್ಟಿರುವುದಾಗಿ ತಿಳಿಸಿದರು. ನಮ್ಮ ಅಣ್ಣ ಅನಾರೋಗ್ಯಕ್ಕೆ ತುತ್ತಾಗಿ ಆಸ್ಪತ್ರೆಗೆ ದಾಖಲಾದ ಕುರಿತು ನಮಗೆ ಯಾವುದೇ ಮಾಹಿತಿ ಇರಲಿಲ್ಲ” ಎಂದು ಅಳಲು ತೋಡಿಕೊಂಡರು.

“4 ತಿಂಗಳು ಬಳ್ಳಾರಿ ಜೈಲಿನಲ್ಲಿ ಆರೋಗ್ಯವಾಗಿಯೇ ಇದ್ದವರು ಏಕಾಏಕಿ ಮೃತ ಪಟ್ಟಿರುವುದು ಮತ್ತು ಅನಾರೋಗ್ಯದ ಕುರಿತು ಕುಟುಂಬಸ್ಥರಿಗೆ ತಿಳಿಸದಿರುವುದು ಅನುಮಾನಕ್ಕೆ ಕಾರಣವಾಗಿದೆ. ನಮ್ಮ ಅಣ್ಣನ ಸಾವಿಗೆ ಪೊಲೀಸರು ಮತ್ತು ವೈದ್ಯರ ನಿರ್ಲಕ್ಷ್ಯವೇ ಕಾರಣ ನಮಗೆ ನ್ಯಾಯ ದೊರಕಿಸಿಕೊಡಿ” ಎಂದು ಒತ್ತಾಯಿಸಿದ್ದಾರೆ.

Advertisements
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಇಸಿ ಗ್ಯಾನೇಶ್ ಕುಮಾರ್ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು: ಜನವಾದಿ ಮಹಿಳಾ ಸಂಘಟನೆ ಆಗ್ರಹ

ದೇಶದ ಚುನಾವಣಾ ಪ್ರಜಾಪ್ರಭುತ್ವದ ಮೇಲಿನ ಸಾರ್ವಜನಿಕ ವಿಶ್ವಾಸವನ್ನು ಪುನಃಸ್ಥಾಪಿಸಲು ಮುಖ್ಯ ಚುನಾವಣಾ...

ಕಲೆ ಉಳಿಯಲಿ, ಕೌಶಲ್ಯ ಬೆಳೆಯಲಿ: ಕರ್ನಾಟಕ ಪರ್ವ 2026ಕ್ಕೆ ಡಿ.ಕೆ ಶಿವಕುಮಾರ್ ಚಾಲನೆ

ಬೆಂಗಳೂರಿನ ಅರಮನೆ ಮೈದಾನದಲ್ಲಿ ಶನಿವಾರ ವೈವಿಧ್ಯತೆಯಲ್ಲಿ ಏಕತೆ, ಕೌಶಲ್ಯದಲ್ಲಿ ಸ್ವಾವಲಂಬನೆ ಎಂಬ...

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ ಅಮಾನವೀಯ ಕೊಲೆಗಡುಕರ ಬೆಂಬಲಕ್ಕೆ ನಿಂತ ಸಂಘಪರಿವಾರ

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು...