ಬಳ್ಳಾರಿ | ಕಾಸು ಕೊಟ್ಟರೆ ಪಾಸು ಮಾಡುವ ದಂಧೆ ಬೆಳಕಿಗೆ

Date:

ಬಳ್ಳಾರಿಯ ಶ್ರೀ ಕೃಷ್ಣದೇವರಾಯ ವಿವಿಯ ಮತ್ತೊಂದು ಕರ್ಮಕಾಂಡ ಬಯಲಾಗಿದೆ. ಹಣ ಪಡೆದು ನಕಲಿ ಘಟಿಕೋತ್ಸವ ಸರ್ಟಿಫಿಕೇಟ್ ಕೊಡುತ್ತಿದ್ದ ಹಗರಣ ಬಯಲಾದ ಬೆನ್ನಲ್ಲೇ ಮತ್ತೊಂದು ದಂಧೆ ಬೆಳಕಿಗೆ ಬಂದಿದ್ದು, ಪದವಿ ಪರೀಕ್ಷೆಗಳಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಂದ ಹಣ ಪಡೆದು ತೇರ್ಗಡೆ ಮಾಡುತ್ತಿದ್ದ ಅವ್ಯವಹಾರ ಬೆಳಕಿಗೆ ಬಂದಿದೆ.

- Advertisement -

ಒಂದು ಪತ್ರಿಕೆಗೆ ಆರು ಸಾವಿರ ರೂಪಾಯಿ ಕೊಟ್ಟರೆ ನಪಾಸಾದ ವಿದ್ಯಾರ್ಥಿಗಳನ್ನು ವಿವಿ ಸಿಬ್ಬಂದಿ ಪಾಸ್ ಮಾಡುತ್ತಿದ್ದಾರೆ. ಈಗಾಗಲೇ ಹಲವಾರು ವಿದ್ಯಾರ್ಥಿಗಳಿಂದ ಹಣ ಪಡೆದು ಪಾಸ್ ಮಾಡಲಾಗಿದ್ದು, ಹಲವು ವರ್ಷಗಳಿಂದ ನಡೆಯುತ್ತಿದ್ದ ಈ ದಂಧೆ ಈಗ ಬಯಲಾಗಿದೆ. UCMC ವಿಭಾಗದ ರಿಯಾಜ್, ವೆಂಕಟೇಶ್ ವನದುರ್ಗ, ಯಲ್ಲಾಲಿಂಗ, ಚಂದ್ರಮೋಹನ್, ಉಮೇಶ್ ಎನ್ನುವವರ ಮೇಲೆ ಆರೋಪ ಕೇಳಿ ಬಂದಿದ್ದು, ವೆಂಕಟ್ ಹಾಗೂ ರಿಯಾಜ್ ಎನ್ನುವ ಸಿಬ್ಬಂದಿ ಆಡಿಯೋದಲ್ಲಿ ವಿದ್ಯಾರ್ಥಿಗಳ ಬಳಿ ಹಣ ಕೇಳುವ ವಿಚಾರ ಬೆಳಕಿಗೆ ಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಅಸ್ಸಾಂ, ಬಿಹಾರ ಕತ್ತಲಲ್ಲಿ ಮುಳುಗಿದಾಗ ಮೋದಿಗೆ ‘ಆಶೀರ್ವಾದ್ ಕಾ...

ದೆಹಲಿಯಲ್ಲಿ ಕಟ್ಟಡ ಕುಸಿದು ವಿದ್ಯಾರ್ಥಿಗಳು ಹೆಣವಾದಾಗ, ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಆಘಾತಗೊಂಡು ಎಳೆ ಜೀವಗಳು ಸಾವಿನ ದಾರಿ ಹಿಡಿದಾಗ, ತಮ್ಮ ಹಕ್ಕುಗಳಿಗಾಗಿ ದೇಶದ ಯುವಜನ ಬೀದಿಗಿಳಿದಾಗ, ಕೊನೆಗೆ ನೈಸರ್ಗಿಕ ವಿಕೋಪದಿಂದ ದೇಶದ ಜನ...
WhatsApp Image 2026 06 12 at 10.53.16 AM

ಈ ದಂಧೆ ಬಯಲಾದ ಬೆನ್ನಲ್ಲೇ ಎಬಿವಿಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. “ಇಂತಹ ಅಕ್ರಮ ಹಲವಾರು ವರ್ಷಗಳಿಂದ ನಡೆಯುತ್ತಿದೆ. ಅನೇಕ ಬಡ ವಿದ್ಯಾರ್ಥಿಗಳಿಗೆ ಅನ್ಯಾಯ ಮಾಡಲಾಗುತ್ತಿದೆ. ಈ ದಂಧೆಯಲ್ಲಿ ವಿವಿಯ ಪ್ರತಿಷ್ಟರು ಭಾಗಿಯಾಗಿದ್ದು, ಗಂಭೀರ ತನಿಖೆ ನಡೆಸಬೇಕು” ಎಂದು ಒತ್ತಾಯಿಸಿದ್ದಾರೆ.

ಪ್ರಕರಣ ಕುರಿತು ಪ್ರತಿಕ್ರಿಯೆ ನೀಡಿರುವ ವಿವಿಯ ಕುಲಪತಿ ಪ್ರೊ.ಎಂ.ಮುನಿರಾಜು, “ವಿಶ್ವವಿದ್ಯಾಲಯದ ಹೆಸರು ಹಾಳು ಮಾಡುವ ಹುನ್ನಾರ ನಡೆಯುತ್ತಿದೆ. ಈಗ ವೈರಲ್ ಆಗಿರುವ ಆಡಿಯೋ ಹಳೆಯದ್ದು ಎಂದಿದ್ದಾರೆ. ಆಡಿಯೋದಲ್ಲಿ ಕೇಳಿ ಬಂದ ಹೆಸರಿನ ಸಿಬ್ಬಂದಿ ವಿರುದ್ಧ ಖಂಡಿತ ಕ್ರಮ ವಹಿಸುತ್ತೇನೆ. ಠಾಣೆಯಲ್ಲಿ ದೂರು ದಾಖಲಿಸುತ್ತೇನೆ. ಯಾರೇ ಆಗಲಿ ನನಗೆ ಮುಲಾಜಿಲ್ಲ. ಈ ರೀತಿಯ ಕೃತ್ಯ ಎಸಗಿದವರನ್ನು ಕೆಲಸದಿಂದ ತೆಗೆದು ಹಾಕುತ್ತೇನೆ” ಎಂದಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಮೃತಸರದಲ್ಲಿ ಕಳೆದುಹೋಗಿ ಗಯಾದಲ್ಲಿ ಪತ್ತೆ; ಎಐ ತಂತ್ರಜ್ಞಾನದ ನೆರವಿನಿಂದ ಕುಟುಂಬವನ್ನು ಸೇರಿದ ವ್ಯಕ್ತಿ

ಪಂಜಾಬ್‌ನಿಂದ ದಾರಿ ತಪ್ಪಿ 1,200 ಕಿಲೋಮೀಟರ್‌ಗೂ ಹೆಚ್ಚು ದೂರದ ಬಿಹಾರ ತಲುಪಿದ್ದ...

ಕೋಲಾರ | ಜನಪ್ರತಿನಿಧಿಗಳನ್ನು ಕಡೆಗಣಿಸಿ ಕಾಮಗಾರಿ ನಡೆಸಿದರೆ ಸಹಿಸುವುದಿಲ್ಲ: ಶಾಸಕ ಡಾ.ಕೊತ್ತೂರು ಜಿ ಮಂಜುನಾಥ್ ಗರಂ

ಸ್ಥಳೀಯ ಜನಪ್ರತಿನಿಧಿಗಳ ಗಮನಕ್ಕೆ ತರದೆ ಹಾಗೂ ಶಿಷ್ಟಾಚಾರ ಪಾಲಿಸದೆ ಏಕಾಏಕಿ ಕಾಮಗಾರಿಗಳನ್ನು...

ಕೊಲ್ಹಾರ | ಶಾಸಕರಿಲ್ಲದ ಪ್ರಜಾಸೇವಾ ಆಂದೋಲನ: ಅಹವಾಲು ಹೊತ್ತುಬಂದವರಿಗೆ ನಿರಾಸೆ, ಅಧಿಕಾರಿಗಳಿಂದ ಪರಿಹಾರದ ಭರವಸೆ

ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ಶಾಸಕರಿಲ್ಲದೆ ಪ್ರಜಾಸೇವಾ ಆಂದೋಲನ ನಡೆಯಿತು. ಇದರಿಂದಾಗಿ...