ಬಳ್ಳಾರಿ | ಮುಜಾಫರ್‌ನಗರ ಕೃತ್ಯ ಅಕ್ಷಮ್ಯ; ಎಐಡಿಎಸ್‌ಒ ಕಿಡಿ

Date:

ಉತ್ತರ ಪ್ರದೇಶದ ಮುಜಾಫರ್‌ನಗರ ಜಿಲ್ಲೆಯ ಶಾಲೆಯೊಂದರಲ್ಲಿ ಶಿಕ್ಷಕಿಯೊಬ್ಬರು ಅಲ್ಪಸಂಖ್ಯಾತ ಸಮುದಾಯದ ಅಮಾಯಕ ವಿದ್ಯಾರ್ಥಿಗೆ ಮತ್ತೊಂದು ಧರ್ಮದ ಸಹಪಾಠಿಯಿಂದ ಕೆನ್ನೆಗೆ ಹೊಡೆಸಿದ್ದಾರೆ. ನಾಗರಿಕ ಸಮಾಜದಲ್ಲಿ ಈ ರೀತಿಯ ಕೃತ್ಯ ನಡೆದಿರುವುದು ಅತ್ಯಂತ ನಾಚಿಕೆಗೇಡಿನ ಸಂಗತಿ ಎಂದು ಎಐಡಿಎಸ್‌ಒ ಹೇಳಿದೆ.

ಘಟನೆಯಲ್ಲಿ ಖಂಡಿಸಿ ಎಐಡಿಎಸ್‌ಒ ಬಳ್ಳಾರಿ ಜಿಲ್ಲಾ ಕಾರ್ಯದರ್ಶಿ ಕಂಬಳಿ ಮಂಜುನಾಥ್ ಪತ್ರಿಕಾ ಹೇಳಿಕೆ ನೀಡಿದ್ದಾರೆ. “ಉತ್ತರಪ್ರದೇಶದಲ್ಲಿ ಬೆಳೆಯುತ್ತಿರುವ ಜಾತಿ-ಧರ್ಮ, ದ್ವೇಷ ಮತ್ತು ಅಪರಾಧದ ನೀಚ ವಿನ್ಯಾಸಗಳು ಈಗ ರಾಜಕೀಯ ಚಾವಡಿಗಳ ಮೂಲಕ ಶಿಕ್ಷಣ ಮಂದಿರವನ್ನು ತಲುಪಲು ಪ್ರಾರಂಭಿಸಿವೆ. ಇದಕ್ಕೆ ಮುಜಾಫರ್‌ನಗರದ ಅಮಾನುಷ ಘಟನೆ ಸಾಕ್ಷಿಯಾಗಿದೆ. ಇಂತಹ ಅಸಹ್ಯ ದ್ವೇಷದ ರಾಜಕಾರಣ ಉತ್ತರ ಪ್ರದೇಶದಲ್ಲಿ ಮಾತ್ರವಲ್ಲದೇ, ಇಡೀ ದೇಶದ ಶಿಕ್ಷಣ ಸಂಸ್ಥೆಗಳಲ್ಲಿಯೂ ನಡೆಯುತ್ತಿದೆ. ಇದು ಅತ್ಯಂತ ಆತಂಕಕಾರಿ ಬೆಳವಣಿಗೆಯಾಗಿದೆ” ಎಂದಿದ್ದಾರೆ.

“ಶಾಲೆಗಳು ಮತ್ತು ಶಿಕ್ಷಕರು ವಿದ್ಯಾರ್ಥಿಗಳ ಭವಿಷ್ಯದ ನಿರ್ಮಾಪಕರು ಎಂಬುದು ಎಲ್ಲರಿಗೂ ತಿಳಿದಿರುವ ವಿಚಾರ. ಶಿಕ್ಷಕ ಮತ್ತು ವಿದ್ಯಾರ್ಥಿಗಳ ನಡುವಿನ ಸಂಬಂಧವು ಪೋಷಕರಂತೆಯೇ ಇರುತ್ತದೆ. ಮಕ್ಕಳಿಗೆ ಬೋಧನೆಯೊಂದಿಗೆ ಮಾನವೀಯತೆ, ಭ್ರಾತೃತ್ವ, ನೈತಿಕತೆ ಬೆಳೆಸುವ ಮೂಲಕ ಮಾನವೀಯ ಮೌಲ್ಯಗಳನ್ನು ಬೆಳೆಸಬೇಕೇ ಹೊರತು, ಮಕ್ಕಳಲ್ಲಿ ದ್ವೇಷದ ಬೀಜವನ್ನು ಬಿತ್ತುವುದಲ್ಲ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಮುಜಾಫರ್‌ನಗರ ಜಿಲ್ಲೆಯ ಶಿಕ್ಷಕಿ ಮಾಡಿದ ಈ ಕೃತ್ಯ ಅಕ್ಷಮ್ಯವಾದದ್ದಾಗಿದೆ. ಘಟನೆಯ ಕುರಿತು ಸೂಕ್ತ ತನಿಖೆ ನಡೆಸಿ, ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸಿಬೇಕು. ಸಮಾಜದಲ್ಲಿ ಕೋಮು ಸೌಹಾರ್ದತೆ ಹಾಗೂ ಭಾವೈಕ್ಯತೆಯನ್ನು ಕಾಪಾಡಬೇಕು. ಸಮಾಜದ ಸ್ವಾಸ್ಥ್ಯವನ್ನೇ ನಾಶ‌ಮಾಡುವ ಇಂತಹ ಘಟನೆಗಳು ಮರುಕಳಿಸದಂತೆ ಕಟ್ಟುನಿಟ್ಟಿನ ಕ್ರಮಕೈಗೊಳ್ಳಬೇಕು” ಎಂದು ಅವರು ಒತ್ತಾಯಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಳ್ಳಾರಿ | ಗ್ಯಾರಂಟಿ ಯೋಜನೆಗಳ ಸಮೀಕ್ಷೆಗೆ ಅಂಗನವಾಡಿ ನೌಕರರ ಬಳಕೆ; ಅಸಮಾಧಾನ

ಅಂಗನವಾಡಿ ನೌಕರರನ್ನು ಸಮಗ್ರ ಶಿಶು ಅಭಿವೃದ್ಧಿ ಯೋಜನೆ ಹೊರತುಪಡಿಸಿ ಬೇರೆ ಯಾವುದೇ...

ಬಳ್ಳಾರಿ | ಅಭಿಮಾನಿ ಕಾಲಿನ ಮೇಲೆ ಹರಿದ ಯಶ್‌ ಬೆಂಗಾವಲು ವಾಹನ

ನಟ ಯಶ್‌ ಅವರು ಬಳ್ಳಾರಿಗೆ ಭೇಟಿ ನೀಡಿದ್ದ ವೇಳೆ, ಅವರನ್ನು ನೋಡಲು...

ಬಳ್ಳಾರಿ | ರಾಜಕಾರಣಿಗಳು ಮಾತ್ರ ಗೂಂಡಾಗಳಲ್ಲ, ಅಧಿಕಾರಿಗಳೂ ಗೂಂಡಾಗಳೇ: ರವಿಕೃಷ್ಣಾ ರೆಡ್ಡಿ ಕಿಡಿ

ಬಳ್ಳಾರಿ ಜಿಲ್ಲೆಯಲ್ಲಿ ರಾಜಕಾರಣಿಗಳು ಮಾತ್ರ ಗೂಂಡಾಗಳಲ್ಲ. ಅಧಿಕಾರಿಗಳೂ ಗೂಂಡಾಗಳೇ. ಇಲ್ಲಿನ ಎಸ್‌ಪಿಗೆ...

ಬಳ್ಳಾರಿಯಲ್ಲಿ ಎಸ್‌ಸಿ/ಎಸ್‌ಟಿ, ಅಲೆಮಾರಿಗಳ ಜಾಗೃತಿ ಸಮಾವೇಶ

ಅಲೆಮಾರಿಗಳ ಅಭಿವೃದ್ಧಿಗಾಗಿ ಬಳ್ಳಾರಿ ಜಿಲ್ಲಾ ಗುಡಿಸಲು ಮುಕ್ತ, ಟೆಂಟ್ ಮುಕ್ತ ಜಿಲ್ಲೆಯನ್ನಾಗಿ...