ಬಳ್ಳಾರಿ | ಸಂಜೀವ ರಾಯನಕೋಟೆ ಸರ್ಕಾರಿ ಶಾಲೆಯಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ

Date:

ಹಾಕಿ ಮಾಂತ್ರಿಕ ಮೇಜರ್ ಧ್ಯಾನ ಚಂದ್ ಅವರು ವೃತ್ತಿಯಿಂದ ಸೈನಿಕನಾಗಿದ್ದರೂ ಹಾಕಿ ಆಟದಲ್ಲಿ ಆಸಕ್ತಿ ಹೊಂದಿದ್ದರು. ಒಲಂಪಿಕ್ ಕ್ರೀಡಾ ಕೂಟದಲ್ಲಿ ಭಾರತವನ್ನು ಪ್ರತಿನಿಧಿಸಿ, ಸತತ ಮೂರು ಸಾರಿ ಸ್ವರ್ಣ ಪದಕ ಗಳಿಸಿದರು ಎಂದು ಕರ್ನಾಟಕ ರಾಜ್ಯ ಕ್ರಿಯಾಶೀಲ ಶಿಕ್ಷಕರ ವೇದಿಕೆ ಜಿಲ್ಲಾಧ್ಯಕ್ಷ ರವಿಚೇಳ್ಳಗುರ್ಕಿ ಹೇಳಿದರು.

- Advertisement -

ಬಳ್ಳಾರಿ ತಾಲೂಕಿನ ಸಂಜೀವರಾಯನಕೋಟೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಧ್ಯಾನ ಚಂದ್ ಹುಟ್ಟು ಹಬ್ಬದ ಪ್ರಯುಕ್ತ ಹಮ್ಮಿಕೊಂಡಿದ್ದ ರಾಷ್ಟ್ರೀಯ ಕ್ರೀಡಾ ದಿನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. “ಆಸ್ಟ್ರೇಲಿಯಾ ದೇಶದ ಕ್ರಿಕೆಟ್ ತಾರೆ ಬ್ರಾಡ್ ಮಾನ್, ಬ್ರೆಜಿಲ್ ದೇಶದ ಫೂಟ್ ಬಾಲ್ ಆಟಗಾರ ಪೀಲೆ ಅವರಂತೆ ಭಾರತ ದೇಶದ ಹಾಕಿ ಆಟದಲ್ಲಿ ಧ್ಯಾನ ಚಂದ್ ಅಪ್ರತಿಮರು” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

“ಧ್ಯಾನ್‌ ಚಂದ್ ಅವರ ಆಟಕ್ಕೆ ಜರ್ಮನಿ ದೇಶದ ಹಿಟ್ಲರ್ ಕೂಡ ಮನಸೋತಿದ್ದರು. ಆದ್ದರಿಂದ ವಿದ್ಯಾರ್ಥಿಗಳು ಕೂಡ ತಮಗೆ ಇಷ್ಟವಾದ ಆಟಗಳಲ್ಲಿ ಆಸಕ್ತಿ ತೋರಿಸಬೇಕು” ಎಂದರು.

ಕಾರ್ಯಕ್ರಮದಲ್ಲಿ ಕ್ರೀಡಾಸಕ್ತಿ ಹೊಂದಿರುವ ವಿದ್ಯಾರ್ಥಿಗಳಾದ ಸುನಿಲ್, ಪುರುಷೋತ್ತಮ, ಅಪೂರ್ವ, ಮೇಘನಾ,ಶಶಾಂಕ್, ಸುಚಿತ್ರ, ಹರೀಶ್‌ಗೆ ಬಹುಮಾನ ವಿತರಿಸಲಾಯಿತು.

ಶಿಕ್ಷಕರಾದ ಬಸವರಾಜ ಪ್ರಾಸ್ತಾವಿಕವಾಗಿ ಮಾತನಾಡಿದರು. ಶಿಕ್ಷಕರಾದ ಮೋದಿನ್ ಸಾಬ್, ಚನ್ನಮ್ಮ, ಸುಮತಿ,ಶ್ವೇತಾ, ಉಮ್ಮೆಹಾನಿ, ಶಶಮ್ಮ ಹಾಗೂ ವಿದ್ಯಾರ್ಥಿ ಪ್ರತಿನಿಧಿ ಮಹೇಶ ಮುಂತಾದವರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಳ್ಳಾರಿ | ಗಣಿನಾಡಿನಲ್ಲೂ ಅನಧಿಕೃತವಾಗಿ ಔಷಧ ಸಂಗ್ರಹ: ಕಠಿಣ ಕ್ರಮಕ್ಕೆ ಸಾರ್ವಜನಿಕರ ಆಗ್ರಹ

ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ನಕಲಿ ಔಷಧಿ ಜಾಲ ಪತ್ತೆಯಾದ ಬೆನ್ನಲ್ಲೆ ಗಣಿನಾಡು...

ಬಳ್ಳಾರಿ | ಬಿಜೆಪಿ ಮಾಜಿ ಶಾಸಕ ಸೋಮಲಿಂಗಪ್ಪ ವಿರುದ್ಧ ಜಮೀನು ಒತ್ತುವರಿ, ದೌರ್ಜನ್ಯ ಆರೋಪ

ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ಕ್ಷೇತ್ರದ ಬಿಜೆಪಿ ಮಾಜಿ ಶಾಸಕ ಎಂ.ಎಸ್. ಸೋಮಲಿಂಗಪ್ಪ...

ಬಳ್ಳಾರಿ | 7 ತಿಂಗಳ ಮಗು, ಪತ್ನಿಗೆ ಸುತ್ತಿಗೆಯಿಂದ ಹೊಡೆದು ಕೊಂದ ಕ್ರೂರಿ

ಗಣಿನಾಡು ಬಳ್ಳಾರಿಯಲ್ಲಿ ಪತ್ನಿ ಮೇಲಿನ ಅನುಮಾ‌ನಕ್ಕಾಗಿ 7 ತಿಂಗಳ ಮಗು ಹಾಗೂ...

ಬಳ್ಳಾರಿ | ವಿದ್ಯಾರ್ಥಿನಿಗೆ ವಂಚಿಸಿ ದೌರ್ಜನ್ಯ: ಉಪನ್ಯಾಸಕನ ವಿರುದ್ಧ ಪೋಕ್ಸೊ ದಾಖಲು

ಬಳ್ಳಾರಿ ಜಿಲ್ಲೆಯ ಖಾಸಗಿ ಕಾಲೇಜಿನ ಉಪನ್ಯಾಸಕ ಮದುವೆಯಾಗುವುದಾಗಿ ನಂಬಿಸಿ ಅಪ್ರಾಪ್ತ ವಿದ್ಯಾರ್ಥಿನಿಯ...