ಬಳ್ಳಾರಿ | ಎನ್‌ಐಎ ದಾಳಿ; ನಕಲಿ ನೋಟು ತಯಾರಿಸುತ್ತಿದ್ದ ವ್ಯಕ್ತಿ ಬಂಧನ

Date:

ನಕಲಿ ನೋಟು ತಯಾರಿಸುವ ಜಾಲದ ಮೇಲೆ ಎನ್‌ಐಎ ಅಧಿಕಾರಿಗಳು ಬಿಹಾರ, ಉತ್ತರ ಪ್ರದೇಶ, ಮಹಾರಾಷ್ಟ್ರ ಹಾಗೂ ಕರ್ನಾಟಕದ ಬೆಂಗಳೂರು, ಬಳ್ಳಾರಿಯಲ್ಲಿಯೂ ದಾಳಿ ನಡೆಸಿದ್ದು, ಪ್ರಮುಖ ಆರೋಪಿ ರಾಹುಲ್ ತಾನಾಜಿ ಎಂಬಾತನನ್ನು ಬಂಧಿಸಿದ್ದಾರೆ.

- Advertisement -

ಬಳ್ಳಾರಿ ಜಿಲ್ಲೆಯಲ್ಲೂ ಎನ್‌ಐಎ ದಾಳಿ ನಡೆಸಿ ಓರ್ವನನ್ನು ಬಂಧಿಸಿದ್ದಾರೆ. ಬಳ್ಳಾರಿ ಮೂಲದ ಮಹೇಂದರ್ ಬಂಧಿತ ಆರೋಪಿ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಬಂಧಿತ ಆರೋಪಿ ಮಹೇಂದರ್ ಮನೆಯಲ್ಲೇ ₹500, ₹200, ₹100 ರೂಪಾಯಿಯ ಮುಖಬೆಲೆಯ ನಕಲಿ ನೋಟು ತಯಾರಿಸುತ್ತಿದ್ದ. ಇದೀಗ ಪೊಲೀಸರು ನೋಟು ತಯಾರಿಸುವ ಪೇಪರ್, ಪ್ರಿಂಟಿಂಗ್ ಮಷಿನ್​ಗಳನ್ನು ವಶಕ್ಕೆ ಪಡೆದಿದ್ದಾರೆ.

ನಕಲಿ ನೋಟು ಸ್ಮಗ್ಲಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪರಾಧಿ ವನಿತಾ ಎಂಬುವವರಿಗೆ ಸೆಪ್ಟೆಂಬರ್‌ 16 ರಂದು ಬೆಂಗಳೂರಿನ ಎನ್ಐಎ ವಿಶೇಷ ನ್ಯಾಯಾಲಯ 6 ವರ್ಷ ಜೈಲುಶಿಕ್ಷೆ ಜೊತೆಗೆ ₹20,000 ದಂಡ ವಿಧಿಸಿತ್ತು.

2018ರಲ್ಲಿ ಬಾಂಗ್ಲಾದೇಶದಿಂದ ಅಕ್ರಮವಾಗಿ ರಾಜ್ಯಕ್ಕೆ ಖೋಟಾ ನೋಟು ಸಾಗಾಟ ಮಾಡುತ್ತಿದ್ದ ಮಾಹಿತಿ ಮೇರೆಗೆ ಎನ್ಐಎ, ಪೊಲೀಸರು ಕಾರ್ಯಾಚರಣೆ ನಡೆಸಿದ್ದರು. ಈ ವೇಳೆ ಅಪರಾಧಿ ವನಿತಾ ಅಲಿಯಾಸ್ ತಂಗಂ ಬಳಿ 2.50 ಲಕ್ಷ ರೂ. ನಕಲಿ ನೋಟುಗಳು ಪತ್ತೆಯಾಗಿದ್ದವು. ಬಳಿಕ 8 ಜನರ ವಿರುದ್ಧ ಚಾರ್ಜ್​ಶೀಟ್ ಸಲ್ಲಿಸಿದ್ದರು. ಈ ಕುರಿತು ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯಲ್ಲಿ ಪ್ರಕರಣ ದಾಖಲು ಮಾಡಲಾಗಿತ್ತು. ಬಳಿಕ ಪ್ರಕರಣದ 6ನೇ ಆರೋಪಿ ವನಿತಾ ಅವರಿಗೆ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಶಿಕ್ಷೆ ವಿಧಿಸಿದ್ದರು.

ಈ ಸುದ್ದಿ ಓದಿದ್ದೀರಾ? ವಿಜಯಪುರ | ಭ್ರೂಣಲಿಂಗ ಹತ್ಯೆ ತಡೆಗೆ ಕೆಆರ್‌ಎಸ್‌ ಪಕ್ಷ ಮನವಿ 

ಕರ್ನಾಟಕದಲ್ಲಿ ಇದೀಗ ನಕಲಿ ನೋಟುಗಳ ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಅದರಂತೆ ಇತ್ತೀಚೆಗೆ ₹100 ಮುಖಬೆಲೆಯ ಒಟ್ಟು 30 ನಕಲಿ ನೋಟುಗಳು ಉಡುಪಿ, ಮಣಿಪಾಲ, ಹುಬ್ಬಳ್ಳಿ ಹಾಗೂ ಮಲ್ಲೇಶ್ವರ ಬ್ರಾಂಚ್​ನ ಬ್ಯಾಂಕ್‌ಗಳಲ್ಲಿ ಪತ್ತೆಯಾಗಿದ್ದವು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡು ದಿನಗಳಲ್ಲಿ 4 ಎಫ್​ಐಆರ್​ಗಳು ದಾಖಲಾಗಿದ್ದು, ಆರ್​ಬಿಐಗೆ ರಿಮೀಟ್ ಮಾಡುವ ಸಂದರ್ಭದಲ್ಲಿ ಈ ನಕಲಿ ನೋಟುಗಳು ಬೆಳಕಿಗೆ ಬಂದಿದ್ದವು. ಇದೀಗ ನೋಟು ಪ್ರಿಂಟ್ ಮಾಡುವ ಜಾಲ ಪತ್ತೆಯಾಗಿದೆ ಎಂದು ತಿಳಿದುಬಂದಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ | 271 ರೈತರಿಗೆ ಪರಿಹಾರ ವಿತರಿಸುವ ಪ್ರಕ್ರಿಯೆ

ಭೂಸ್ವಾಧೀನ ಪೂರ್ಣಗೊಂಡು ಅಗತ್ಯ ಜಾಗವನ್ನು ಗುತ್ತಿಗೆದಾರರಿಗೆ ಹಸ್ತಾಂತರಿಸಿದ ಬಳಿಕ ಕಾಮಗಾರಿ ಆರಂಭಿಸಲು...

ರಾಯಚೂರು | ದೇವಸ್ಥಾನ ಕಟ್ಟೆ ಮೇಲೆ ಕುಳಿತಿದ್ದಕ್ಕೆ ಹಲ್ಲೆ ಅರೋಪ: ಐವರ ವಿರುದ್ಧ ಪ್ರಕರಣ ದಾಖಲು

ಲಿಂಗಸುಗೂರು ತಾಲೂಕಿನ ಈಚನಾಳ ಗ್ರಾಮದಲ್ಲಿ ಗದ್ದೆಮ್ಮ ದೇವಸ್ಥಾನದ ಕಟ್ಟೆ ಮೇಲೆ ಕುಳಿತಿದ್ದ...

ಸಕಲೇಶಪುರ | 25 ವರ್ಷ ನೆನಗುದಿಗೆ ಬಿದ್ದಿದ್ದ ಆಟೋ ನಿಲ್ದಾಣ ನಿರ್ಮಾಣ 

ಹಾಸನ ಜಿಲ್ಲೆ ಸಕಲೇಶಪುರ ಪಟ್ಟಣದ ಹಳೆ ಬಸ್ ನಿಲ್ದಾಣದ ಸಮೀಪ ಸ್ಥಳೀಯ...

ಕಾರವಾರ | ಗ್ರಾಮ ಆಡಳಿತ ಅಧಿಕಾರಿ ಪರೀಕ್ಷೆ ಸುಸೂತ್ರ: ಒಟ್ಟು 11,671 ಅಭ್ಯರ್ಥಿಗಳು ಹಾಜರು

ಕಾರವಾರ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ವತಿಯಿಂದ ಕಂದಾಯ ಇಲಾಖೆಯ ಗ್ರಾಮ...