ಬಳ್ಳಾರಿ | ಬೆಂಬಲ ಬೆಲೆಯಲ್ಲಿ ಕಡಲೆಕಾಳು ಖರೀದಿ: ನೋಂದಣಿಗೆ ಡಿಸಿ ನಾಗೇಂದ್ರ ಪ್ರಸಾದ್‌ ಸೂಚನೆ

Date:

ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಎಫ್‌ಎಕ್ಯೂ ಗುಣಮಟ್ಟದ ಕಡಲೆಕಾಳು ಖರೀದಿಸಲಾಗುವುದು ಎಂದು ಬಳ್ಳಾರಿ ಜಿಲ್ಲಾ ಟಾಸ್ಕ್ ಫೋರ್ಸ್ ಸಮಿತಿ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ಕೆ.ನಾಗೇಂದ್ರ ಪ್ರಸಾದ್ ತಿಳಿಸಿದ್ದಾರೆ.

- Advertisement -

ಜಿಲ್ಲಾಡಳಿತ ಭವನದಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾ ಟಾಸ್ಕ್ ಫೋರ್ಸ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, “ಪ್ರತಿ ಕ್ವಿಂಟಲ್‌ಗೆ ₹5,875 ಎಂಎಸ್‌ಪಿ ದರದಲ್ಲಿ ರೈತರಿಂದ ಕಡಲೆಕಾಳು ಖರೀದಿಸಲಾಗುತ್ತದೆ. ಖರೀದಿ ಕೇಂದ್ರಗಳನ್ನು ಸ್ಥಾಪಿಸಿ, ಫ್ರೂಟ್ಸ್ ತಂತ್ರಾಂಶದ ಆಧಾರದ ಮೇಲೆ ರೈತರಿಂದ ಕಡಲಡಕಾಳು ಉತ್ಪನ್ನ ಖರೀದಿಸಬೇಕು” ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

‘ವಿಬಿ-ಜಿ ರಾಮ್‌ ಜಿ’ ಅನುಷ್ಠಾನದಲ್ಲಿ ಎಡವಟ್ಟು! ಕೂಲಿ ಸಿಗದೆ...

ಗ್ರಾಮೀಣ ಬಡ ಕುಟುಂಬಗಳಿಗೆ ಆಸರೆಯಾಗಬೇಕಿದ್ದ ‘ವಿಬಿ-ಜಿ ರಾಮ್ ಜಿ’ (VB-G RAM G) ಯೋಜನೆ, ಅನುಷ್ಠಾನದ ಎಡವಟ್ಟುಗಳಿಂದಾಗಿ ಗೊಂದಲದ ಗೂಡಾಗಿದೆ. ಕೆಲಸ ಮಾಡಿದರೂ ತಿಂಗಳುಗಟ್ಟಲೆ ಕೂಲಿ ಸಿಗದೆ ಬಡ ಕಾರ್ಮಿಕರು ಆರ್ಥಿಕ ಸಂಕಷ್ಟಕ್ಕೆ...

ಖಾಲಿಯಾಗುತ್ತಿವೆ ಉತ್ತರ ಕನ್ನಡದ ಹಳ್ಳಿಗಳು: 40ಕ್ಕೂ ಹೆಚ್ಚು ಗ್ರಾಮಗಳಲ್ಲಿ...

ಮಕ್ಕಳ ಗದ್ದಲ, ಕೃಷಿ ಚಟುವಟಿಕೆಯ ಹಿಗ್ಗು, ಹಬ್ಬ-ಹರಿದಿನಗಳ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಹಳ್ಳಿಗಳು ಇವತ್ತು ನಿಶ್ಶಬ್ದವಾಗಿ ನಿಂತಿವೆ. ಪ್ರಕೃತಿಯ ಮಡಿಲಲ್ಲಿ ಕಟ್ಟಿಕೊಂಡಿದ್ದ ಬದುಕು ನಿಧಾನವಾಗಿ ಕರಗಿ ಹೋಗುತ್ತಿದೆ. ಊರು ತೊರೆದು ಪಟ್ಟಣ ಸೇರವುದು ಅನಿವಾರ್ಯವ...

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

“ಜಿಲ್ಲೆಯಲ್ಲಿ ಬಳ್ಳಾರಿ ಮತ್ತು ಸಿರುಗುಪ್ಪ ಪಟ್ಟಣದಲ್ಲಿ ಖರೀದಿ ಕೇಂದ್ರ ಆರಂಭಿಸಬೇಕಾಗಿದೆ. ಗೋದಾಮುಗಳನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು, ಮೂಲ ಸೌಕರ್ಯ ಒದಗಿಸಬೇಕು. ತೂಕ ಪ್ರಮಾಣಿಕತೆ ಸೇರಿದಂತೆ ಬೇಕಾದ ಎಲ್ಲ ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು” ಎಂದು ಅಧಿಕಾರಿಗಳಿಗೆ ಸೂಚಿಸಿದರು.

“ರೈತರ ನೋಂದಣಿ ಪ್ರಕ್ರಿಯೆ ಪ್ರಾರಂಭವಾಗಿದ್ದು, ಫೆ.12 ರಿಂದ ಮೇ 2ರವರೆಗೆ ಉತ್ಪನ್ನ ಖರೀದಿಸಲು ಅವಧಿ ನಿಗದಿಗೊಳಿಸಲಾಗಿದೆ. ರೈತರು ನೋಂದಣಿಗೆ ಆಧಾರ್ ಕಾರ್ಡ್, ಪಹಣಿ ಪ್ರತಿ, ಆಧಾರ್ ಲಿಂಕ್ ಆಗಿರುವ ಬ್ಯಾಂಕ್‌ ಪಾಸ್‌ಬುಕ್ ಝೆರಾಕ್ಸ್ ಪ್ರತಿ ಸಲ್ಲಿಸಬೇಕು. ಖರೀದಿ ಕೇಂದ್ರಗಳಲ್ಲಿ ಬಯೋಮೆಟ್ರಿಕ್ ಪಡೆಯುವುದು ಕಡ್ಡಾಯವಾಗಿದ್ದು, ರೈತರು ಇದಕ್ಕೆ ಸಹಕರಿಸಬೇಕು” ಎಂದರು.

ಈ ಸುದ್ದಿ ಓದಿದ್ದೀರಾ? ದಾಖಲೆ ಮುರಿದ ಸಾಬೂನು ಮತ್ತು ಮಾರ್ಜಕ ನಿಗಮ: ಜನವರಿಯಲ್ಲಿ 4,894 ಟನ್‌ ಸಾಬೂನು ಉತ್ಪಾದನೆ

ಮೆಕ್ಕೆಜೋಳ ನೋಂದಣಿ ಅವಧಿ ವಿಸ್ತರಣೆ

ಬಳ್ಳಾರಿ ಮಾರುಕಟ್ಟೆ ಮಧ್ಯಪ್ರವೇಶ ಯೋಜನೆಯಡಿ ಎಫ್‌ಎಕ್ಯೂ ಗುಣಮಟ್ಟದ ಮುಂಗಾರು ಹಂಗಾಮಿನ ಮೆಕ್ಕೆಜೋಳ ಉತ್ಪನ್ನಕ್ಕೆ ರೈತರಿಗೆ ಬೆಲೆ ವ್ಯತ್ಯಾಸದ ಮೊತ್ತವನ್ನು ಪಾವತಿಸಲು ಉದ್ದೇಶಿಸಲಾಗಿದ್ದು, ನೋಂದಣಿಗೆ ಅವಧಿಯನ್ನು ವಿಸ್ತರಿಸಲಾಗಿದೆ. ರೈತರು ನೋಂದಣಿ ಮಾಡಿಕೊಳ್ಳುವ ಅವಧಿಯನ್ನು ಫೆಬ್ರವರಿ 13ರವರೆಗೆ ಹಾಗೂ ಏಕೀಕೃತ ಮಾರುಕಟ್ಟೆ ವ್ಯವಸ್ಥೆ ವೇದಿಕೆ ಮೂಲಕ ಕೃಷಿ ಉತ್ಪನ್ನ ಮಾರುಕಟ್ಟೆ ಮೂಲಕ ಮಾರಾಟ ಮಾಡಿಕೊಳ್ಳಲು ಫೆ.21 ಕೊನೆಯ ದಿನವಾಗಿದೆ ಎಂದು ಸರ್ಕಾರ ತಿಳಿಸಿದೆ.

WhatsApp Image 2025 07 12 at 17.38.34 e1752322718567
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭೂಹೀನರ ಬೆನ್ನೆಲುಬು ಪಶುಪಾಲನೆ: ಈ ಆರ್ಥಿಕತೆಯತ್ತ ಗಮನ ಹರಿಸುವರೆ ಸಚಿವರು?

ಇಂದು ಗ್ರಾಮೀಣ ಉದ್ಯೋಗ ಮತ್ತು ಆರ್ಥಿಕತೆ ಪೊರೆಯುತ್ತಿರುವುದು ಪಶುಪಾಲನಾ ಕ್ಷೇತ್ರ. ಇದೇ...

ಜಾಗತಿಕ ತಾಪಮಾನ ಏರಿಕೆ: ಭೂಮಿಗೆ ಬಂದಿರುವ ಜ್ವರ ಕಡಿಮೆ ಮಾಡುವ ಶಕ್ತಿ ಯಾರಿಗೂ ಇಲ್ಲ- ಅವಿನಾಶ್

ಜಾಗತಿಕ ತಾಪಮಾನ ಏರಿಕೆಯಿಂದ ಭೂಮಿಯ ಪರಿಸರ ವ್ಯವಸ್ಥೆಯ ಮೇಲೆ ಗಂಭೀರ ಪರಿಣಾಮಗಳು...

ಮೂರು ವಾರಗಳಿಂದ ರಾಜ್ಯದ 122 ತಾಲೂಕುಗಳಾದ್ಯಂತ ಮಳೆ ಕೊರತೆ: ಶೇ.50ರಷ್ಟು ಬೆಳೆಹಾನಿ ಸಾಧ್ಯತೆ

ಸೆಪ್ಟೆಂಬರ್‌ನಲ್ಲಿ ಮಳೆಯಾಗುವ ಯಾವುದೇ ಲಕ್ಷಣಗಳು ಕಾಣದಿರುವುದರಿಂದ ಮುಂಬರುವ ವಾರಗಳಲ್ಲಿ ರಾಜ್ಯಾದ್ಯಂತ ಮಳೆ...

ಬರಪೀಡಿತ ತಾಲೂಕು ಘೋಷಣೆ: ಸರ್ಕಾರದ ಮಾನದಂಡಗಳು ಎಷ್ಟು ಸಮರ್ಪಕ?

ಕಳೆದ ಒಂದೆರಡು ತಿಂಗಳಿನ ಅವಧಿಯಲ್ಲಿ ಹಾವೇರಿ ಮತ್ತು ರಟ್ಟಿಹಳ್ಳಿ ತಾಲೂಕುಗಳಲ್ಲಿ  ಇಬ್ಬರು...