ಬಳ್ಳಾರಿ | ಜ.1ರಿಂದ 30ರವರೆಗೆ ರಸ್ತೆ ಸುರಕ್ಷತಾ ಜಾಗೃತಿ ಅಭಿಯಾನ: ನ್ಯಾ. ರಾಜೇಶ್ ಎನ್ ಹೊಸಮನೆ

Date:

ಬಳ್ಳಾರಿ ಜಿಲ್ಲೆಯಲ್ಲಿ 2026ರ ಜನವರಿ 1ರಿಂದ 30ರವರೆಗೆ ರಸ್ತೆ ಸುರಕ್ಷತಾ ಜಾಗೃತಿ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ರಾಜೇಶ್ ಎನ್ ಹೊಸಮನೆ ಅವರು ತಿಳಿಸಿದ್ದಾರೆ.

- Advertisement -

ಈ ಕುರಿತು ಪ್ರಕಟಣೆ ಹೊರಡಿಸಿರುವ ಅವರು, “ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯನಿರ್ವಾಹಕ ಅಧ್ಯಕ್ಷರ ನಿರ್ದೇಶನದಂತೆ, ಬಳ್ಳಾರಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಎಲ್ಲ ತಾಲೂಕು ಕಾನೂನು ಸೇವಾ ಸಮಿತಿ ಮತ್ತು ಇತರೆ ಪಾಲುದಾರ ಇಲಾಖೆಗಳ ಸಹಯೋಗದೊಂದಿಗೆ ಜಾಗೃತಿ ಅಭಿಯಾನ ನಡೆಯಲಿದೆ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಾಕ್ಸ್ ಆಫೀಸ್‌ನಲ್ಲಿ ರಾವಣನೇ ವಿಜೃಂಭಿಸಿರುವ ‘ರಾಮಾಯಣ’ದ ಅಬ್ಬರ: ₹1,600...

ರಾವಣನೇ ವಿಜೃಂಭಿಸಿರುವ ಬಾಲಿವುಡ್‌ ಸಿನಿಮಾ 'ರಾಮಾಯಣ: ಭಾಗ-1' ಬಿಡುಗಡೆಯಾದ ಕೇವಲ 17 ದಿನಗಳಲ್ಲಿ ಜಾಗತಿಕವಾಗಿ ₹1,600 ಕೋಟಿಗೂ ಅಧಿಕ ಕಮಾಯಿ ಮಾಡಿ ದಾಖಲೆ ಬರೆದಿದೆ. ಈ ಮೂಲಕ 'ದಂಗಲ್', 'ಧುರಂಧರ್-2', 'ಬಾಹುಬಲಿ-2' ಹಾಗೂ...

ರಾಯಚೂರು | ಉದ್ಘಾಟನೆಗಾಗಿ ಕಾಯುತ್ತಿರುವ ಶಾಲೆ; ವರಾಂಡದಲ್ಲೇ ಮಕ್ಕಳಿಗೆ...

ರಾಯಚೂರು ಜಿಲ್ಲೆ, ಜಾಲಹಳ್ಳಿಯ ಬೊಮ್ಮನಹಳ್ಳಿ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ, ಶುದ್ಧ ಕುಡಿಯುವ ನೀರಿನ ಅಭಾವ, ಕಾಂಪೌಂಡ್ ಇಲ್ಲದಿರುವುದು ಹಾಗೂ ಶಾಲಾ ಜಾಗದ ವಿವಾದ ಸೇರಿದಂತೆ ಹಲವು ಸಮಸ್ಯೆಗಳು ಮಕ್ಕಳ ಶಿಕ್ಷಣಕ್ಕೆ ಅಡ್ಡಿಯಾಗಿವೆ....

‘ಹುಟ್ಟಿಗೂ, ಸಾವಿಗೂ ನಾವೇ ಬೇಕು… ನಮ್ಮ ಜೊತೆ ನಿಲ್ಲೋಕೆ...

ಪೆಂಡಾಲಿನ ಒಂದು ಮೂಲೆಯಿಂದ ಆಶಾ ಕಾಯಕರ್ತೆಯರು " ರೂಪ ರೂಪಗಳನು ದಾಟಿ, ನಾಮ ಕೋಟಿಗಳನು ಮೀಟಿ, ಎದೆಯ ಬಿರಿಯೆ ಭಾವದೀಟಿ, ಓ ನನ್ನ ಚೇತನ... ಆಗು ಅನಿಕೇತನ" ಕವಿತೆಯ ಸಾಲುಗಳನ್ನು ಎದೆತುಂಬಿ ಹಾಡುತ್ತಿದ್ದರು....

“ಸಾರಿಗೆ ಇಲಾಖೆ, ಪೊಲೀಸ್, ಸಂಚಾರ ಇಲಾಖೆ, ಶಿಕ್ಷಣ ಇಲಾಖೆ, ಆರೋಗ್ಯ ಮತ್ತು ಕಲ್ಯಾಣ ಕುಟುಂಬ ಸೇವೆಗಳು, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ, ಲೋಕೋಪಯೋಗಿ ಇಲಾಖೆ, ವಕೀಲರ ಸಂಘ, ವಿಮಾ ಕಂಪನಿಗಳು ಮತ್ತು ಎನ್‌ಜಿಓ ಸಂಸ್ಥೆಗಳಲ್ಲಿ ಎಲ್ಲಾ ಶಾಲೆಗಳು, ಕಾಲೇಜುಗಳು, ಸಾರ್ವಜನಿಕ/ಖಾಸಗಿ ಸಂಸ್ಥೆಗಳು, ಸಮುದಾಯ ಕೇಂದ್ರಗಳು, ಕ್ಲಬ್, ಆಸ್ಪತ್ರೆಗಳು, ಪೊಲೀಸ್ ಮತ್ತು ಸಂಚಾರ ಕಚೇರಿಗಳಲ್ಲಿ ಪಿಎಲ್‌ವಿ ಮತ್ತು ಎನ್‌ಜಿಓ ಪ್ರತಿನಿಧಿಗಳನ್ನು ಒಳಗೊಂಡಂತೆ ರಸ್ತೆ ಸುರಕ್ಷತಾ ಕ್ರಮಗಳ ಕುರಿತು ಅಭಿಯಾನಗಳನ್ನು ಹಮ್ಮಿಕೊಂಡು ಜನರಲ್ಲಿ ಜಾಗೃತಿ ಮೂಡಿಸುವಂತೆ ರಾಜ್ಯ ಕಾನೂನು ಸೇವಾ ಪ್ರಾಧಿಕಾರದಿಂದ ನಿರ್ದೇಶಿಸಲಾಗಿದೆ” ಎಂದಿದ್ದಾರೆ.

“ರಸ್ತೆ ನಿಯಮಗಳ ಪಾಲನೆ, ಅಪಘಾತ ತಡೆಗಟ್ಟುವಿಕೆ ಮತ್ತು ಸುರಕ್ಷಿತ ರಸ್ತೆ ಸಂಚಾರದ ಕುರಿತು ಜನಸಾಮಾನ್ಯರು, ಯುವಜನರು ಸೇರಿದಂತೆ ಪ್ರತಿಯೊಬ್ಬರಿಗೂ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಜಾಗೃತಿ ಜಾಥಾ, ಬೀದಿ ನಾಟಕ ಮತ್ತು ಎಲ್ಲ ಶಾಲಾ-ಕಾಲೇಜುಗಳಲ್ಲಿ ರಸ್ತೆ ಸುರಕ್ಷತಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು” ಎಂದು ತಿಳಿಸಿದರು.

“ಸಂಚಾರಿ ನಿಯಮಗಳ ಪಾಲನೆ ಸರಿಯಾಗಿ ಆಗುತ್ತಿಲ್ಲವಾದ್ದರಿಂದ ರಸ್ತೆಯ ಅಪಘಾತಗಳ ಸಂಖ್ಯೆ ಹೆಚ್ಚಾಗುತ್ತಿವೆ. ಅಪಘಾತಗಳನ್ನು ಕಡಿಮೆ ಮಾಡಲು ಜನರಲ್ಲಿ ಸಂಚಾರಿ ನಿಯಮಗಳ ಕುರಿತು ಜಾಗೃತಿ ಮೂಡಿಸಬೇಕು. ವಿಶೇಷವಾಗಿ ಶಾಲಾ-ಕಾಲೇಜು ಮಕ್ಕಳಲ್ಲಿ ಸಂಚಾರ ನಿಯಮಗಳ ಕುರಿತು ಅರಿವು ಮೂಡಿಸಲಾಗುವುದು” ಎಂದು ಹೇಳಿದರು.

“ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಡಿ ಹಮ್ಮಿಕೊಂಡಿರುವ ರಸ್ತೆ ಸುರಕ್ಷತಾ ಜಾಗೃತಿ ಕಾರ್ಯಕ್ರಮಗಳಿಗೆ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಪೊಲೀಸ್ ಇಲಾಖೆ, ಸಾರಿಗೆ ಇಲಾಖೆ, ಶಿಕ್ಷಣ ಇಲಾಖೆ, ನಗರ ಸ್ಥಳೀಯ ಸಂಸ್ಥೆಗಳು ಸೇರಿದಂತೆ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಅಗತ್ಯ ಸಹಕಾರ ನೀಡಬೇಕು” ಎಂದು ಕೋರಿದ್ದಾರೆ.

“ಸಂಚಾರ ನಿಯಮಗಳ ಕುರಿತು ಜಾಗೃತಿ ಮೂಡಿಸಲು ಸಾರ್ವಜನಿಕರು, ಸಂಘ-ಸಂಸ್ಥೆಗಳು ಸೇರಿದಂತೆ ಪ್ರತಿಯೊಬ್ಬರೂ ಶ್ರಮಿಸಬೇಕು. ಪೊಲೀಸ್ ಇಲಾಖೆ ಮತ್ತು ಸಾರಿಗೆ ಇಲಾಖೆಯವರು ಬಸ್‌ಗಳಲ್ಲಿ ಸುರಕ್ಷತಾ ಕ್ರಮಗಳ ಪರಿಶೀಲನೆ ಹಾಗೂ ಲಗೇಜುಗಳ ತಪಾಸಣೆ ನಡೆಸಬೇಕು” ಎಂದರು.

ಈ ಸುದ್ದಿ ಓದಿದ್ದೀರಾ? ಉಡುಪಿ | ವಾರಾಹಿ, ಸಿಆರ್‌ಝೆಡ್ ಸಮಸ್ಯೆ ಪರಿಹಾರಕ್ಕೆ, ಡಿಸಿಎಂ ಕರಾವಳಿಗೆ ಬರಬೇಕು: ಮಂಜುನಾಥ ಭಂಡಾರಿ

“ಅಪ್ರಾಪ್ತರು ವಾಹನಗಳನ್ನು ಚಲಾಯಿಸುವಂತಿಲ್ಲ. ನಗರದಲ್ಲಿ ವಾಹನಗಳ ಸಂಖ್ಯೆಯು ಹೆಚ್ಚಾಗಿದ್ದು, ಅವುಗಳನ್ನು ಸರಿಯಾದ ಸ್ಥಳದಲ್ಲಿ ಪಾರ್ಕಿಂಗ್ ಮಾಡಬೇಕು. ಅದರ ಬಗ್ಗೆ ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಮತ್ತು ಸೂಕ್ತ ವಾಹನಗಳ ಪಾರ್ಕಿಂಗ್ ಸ್ಥಳಗಳನ್ನು ಗುರುತಿಸಬೇಕು. 18 ವರ್ಷದೊಳಗಿನ ಮಕ್ಕಳು ವಾಹನಗಳನ್ನು ಚಲಾಯಿಸುತ್ತಿರುವುದು ಕಂಡುಬರುತ್ತಿದ್ದು, ಅವರ ಪೋಷಕರ ಮೇಲೆ ಪ್ರಕರಣ ದಾಖಲಿಸಬೇಕು. ರಾಷ್ಟ್ರೀಯ ಹೆದ್ದಾರಿ ರಸ್ತೆಯಲ್ಲಿ ಕೆಟ್ಟುನಿಂತ ವಾಹನಗಳನ್ನು ರಸ್ತೆಯ ಮಧ್ಯದಲ್ಲಿ ನಿಲ್ಲಿಸದೇ ರಸ್ತೆ ಬದಿಗೆ ಹಾಕಿ ರಿಪೇರಿ ಮಾಡಬೇಕು” ಎಂದು ಸೂಚಿಸಿದರು.

“ಈ ಎಲ್ಲ ರಸ್ತೆ ಸುರಕ್ಷತೆಯ ಬಗ್ಗೆ ಇರುವ ಎಲ್ಲ ವಿಷಯಗಳ ಕುರಿತು ಜನವರಿ 1ರಿಂದ 30 ರವರೆಗೆ ನಡೆಯುವ ರಸ್ತೆ ಸುರಕ್ಷತಾ ಜಾಗೃತಿ ಅಭಿಯಾನದ ಮೂಲಕ ಎಲ್ಲರಿಗೂ ತಿಳುವಳಿಕೆ ನೀಡುವ ಸಂಬಂಧವಾಗಿ ಶಾಲಾ-ಕಾಲೇಜುಗಳು, ಪೊಲೀಸ್ ಠಾಣೆಗಳು, ಸರ್ಕಾರಿ ಕಚೇರಿಗಳು ಹಾಗೂ ಇತರೆ ಸಾರ್ವಜನಿಕ ಸ್ಥಳಗಳಲ್ಲಿ ಅಭಿಯಾನ ಕಾರ್ಯಕ್ರಮ, ಬೀದಿ ನಾಟಕ ಮತ್ತು ಜಾಥಾ ಹಮ್ಮಿಕೊಳ್ಳಬೇಕು. ಶಾಲಾ-ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ ಹಾಗೂ ಭಾಷಣ ಸ್ಪರ್ಧೆ ಆಯೋಜಿಸಬೇಕು” ಎಂದು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಳ್ಳಾರಿ | ತೆಕ್ಕಲಕೋಟೆ ಸರ್ಕಾರಿ ಆಸ್ಪತ್ರೆಯಲ್ಲಿ ವಿದ್ಯುತ್ ಇಲ್ಲದೆ ಕತ್ತಲಲ್ಲಿ ಬಾಣಂತಿಯರು, ಮಕ್ಕಳು

ಸಿರಗುಪ್ಪ ತಾಲ್ಲೂಕಿನ ತೆಕ್ಕಲಕೋಟೆ ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರದ ಬಾಣಂತಿ ಮತ್ತು...

ಬಳ್ಳಾರಿ | 7,561 ಮತದಾರರ ಹೆಸರು ಪರಿಷ್ಕರಣೆ: ಅಕ್ರಮದ ಆರೋಪ

ಎಸ್‌ಐಆರ್‌ ಪ್ರಕ್ರಿಯೆಯಲ್ಲಿ ಬಳ್ಳಾರಿ ನಗರ ಕ್ಷೇತ್ರದ 7,561 ಮತದಾರರ ಹೆಸರುಗಳನ್ನು ಮರುಪರಿಶೀಲನೆಗೆ...

ಬಳ್ಳಾರಿ | ಮತದಾರರ ಹೆಸರು ತೆಗೆದುಹಾಕಲು ಸಂಚು: ಕಾರ್ಪೊರೇಟರ್, ಪಾಲಿಕೆ ಅಧಿಕಾರಿಗಳ ವಿರುದ್ಧ FIR

ಬಳ್ಳಾರಿ ನಗರ ಕ್ಷೇತ್ರದ ಮತದಾರರ ಪಟ್ಟಿಯಿಂದ ಮತದಾರರ ಹೆಸರುಗಳನ್ನು ತೆಗೆದು ಹಾಕಲು...

ರಾಜ್ಯ ಸಂಪುಟದಲ್ಲಿ ಮಹಿಳಾ ಪ್ರಾತಿನಿಧ್ಯದ ಚರ್ಚೆ: ಅನ್ನಪೂರ್ಣ ಹೆಸರು ಮುನ್ನೆಲೆಗೆ!

ರಾಜ್ಯ ಸಚಿವ ಸಂಪುಟದಲ್ಲಿ ಸದ್ಯ ಎರಡು ಸಚಿವ ಸ್ಥಾನಗಳು ಖಾಲಿ ಉಳಿದಿದ್ದು,...