ಬಳ್ಳಾರಿ | ಕೆಸರು ಗದ್ದೆಯಾದ ತೊಲಮಾಮಿಡಿ ಗ್ರಾಮದ ರಸ್ತೆಗಳು

Date:

ಬಳ್ಳಾರಿ ಜಿಲ್ಲೆಯ ತೊಲಮಾಮಿಡಿ ಗ್ರಾಮದಲ್ಲಿ ಮೂಲಭೂತ ಸೌಕರ್ಯಗಳಿಗೇ ಸೌಕರ್ಯ ಒದಗಿಸಬೇಕಾದ ಪರಿಸ್ಥಿತಿ ಎದುರಾಗಿದೆ. ಸಿಸಿ ರಸ್ತೆ, ಒಳಚರಂಡಿಗಳು ಸಂಪೂರ್ಣ ಹಾಳಾಗಿವೆ. ಸ್ಮಶಾನ ಇಲ್ಲದಂತಾಗಿದೆ. ಸರ್ಕಾರಿ ಶಾಲೆಗೆ ಕಾಂಪೌಂಡ್ ಇಲ್ಲದೆ, ವಿದ್ಯಾರ್ಥಿಗಳಿಗೆ ತೊಂದರೆ ಎದುರಾಗಿದೆ.

- Advertisement -

ಗ್ರಾಮದಲ್ಲಿನ ರಸ್ತೆಗಳು ಅಕ್ಷರಶಃ ಕೆಸರು ಗದ್ದೆಯಾಗಿವೆ. ಗ್ರಾಮದಲ್ಲಿ ಯಾರಾದರೂ ಮೃತಪಟ್ಟರೆ ಅತ್ಯಸಂಸ್ಕಾರ ಮಾಡುವುದಕ್ಕೂ ಸ್ಥಳ ಇಲ್ಲದಂತಾಗಿದೆ. ಹಿಂದಿನ ಸರ್ಕಾರದ ಅವಧಿಯಲ್ಲಿ ಸಿಸಿ ರಸ್ತೆ, ಒಳಚರಂಡಿ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ಮಾಡಲಾಗಿತ್ತಾದರೂ,ಕಾಮಗಾರಿ ನಡೆದಿಲ್ಲ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಮಳೆಗಾಲದಲ್ಲಿ ರಸ್ತೆಯಲ್ಲಿ ಕೆಸರು ತುಂಬಿಕೊಂಡು, ಓಡಾಡುವುದೂ ಕಷ್ಟವಾಗಿದೆ. ಕೂಡಲೇ ಅಧಿಕಾರಿಗಳು ಎಚ್ಚೆತ್ತುಕೊಂಡು ರಸ್ತೆ ಕಾಮಗಾರಿ ಅರಂಭಿಸಿ, ಪೂರ್ಣಗೊಳಿಸಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ಸ್ಥಳೀಯ ನಿವಾಸಿ ಯುವರಾಜ್ ತಲಾಮಾಮಿಡಿ ಈದಿನ.ಕಾಮ್‌ ಜೊತೆ ಮಾತನಾಡಿದ್ದು, “ಗ್ರಾಮದಲ್ಲಿ ಮೂಲಭೂತ ಸೌಕರ್ಯಗಳ ಕೊರತೆಯಿಂದ ಸಾರ್ವಜನಿಕರು ಪರದಾಡುವಂತಾಗಿದೆ. ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ಗಮನಕ್ಕೆ ತಂದರೂ ಪ್ರಯೋಜನವಾಗಿಲ್ಲ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಗ್ರಾಮದ ಸಮಸ್ಯೆಗಳ ಬಗ್ಗೆ ಈದಿನ.ಕಾಮ್‌ಗೆ ಪ್ರತಿಕ್ರಿಯೆ ನೀಡಿದ ಶಂಕರ್ ಬಂಡೆ ಗ್ರಾಮ ಪಂಚಾಯತಿ ಪಿಡಿಒ ಸಾಬ್ ಜಹಾನ, “ಗುರುವಾರ ಶಂಕರ್ ಬಂಡೆ ಗ್ರಾಮ ಪಂಚಾಯತಿ ಅಧ್ಯಕ್ಷ, ಉಪಾಧ್ಯಕ್ಷರ ಸ್ಥಾನಕ್ಕೆ ಚುನಾವಣೆ ನಡೆಯಲಿದೆ. ಆ ಬಳಿಕ ತೊಲಮಾಮಿಡಿ ಗ್ರಾಮದಲ್ಲಿ ಸಾರ್ವಜನಿಕ ರುದ್ರ ಭೂಮಿಯನ್ನು ಮನರೇಗಾ ಯೋಜನೆಯಡಿ ಅಭಿವೃದ್ಧಿ ಮಾಡಲಾಗುವುದು” ಎಂದು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...