ಬಳ್ಳಾರಿ | ಹೊಸ ಮದ್ಯದಂಗಡಿ ಪ್ರಸ್ತಾವನೆ ವಿರೋಧಿಸಿ ಮೌನ ಪ್ರತಿಭಟನೆ

Date:

ಹೊಸದಾಗಿ 1000 ಮದ್ಯದಂಗಡಿಗಳಿಗೆ ಪರವಾನಿಗೆ ನೀಡುವ ಪ್ರಸ್ತಾವನೆಯನ್ನು ಹಿಂಪಡೆಯಬೇಕು. ಅಕ್ರಮ ಮದ್ಯ ಮಾರಾಟ ತಡೆಗಟ್ಟಬೇಕು ಎಂದು ಆಗ್ರಹಿಸಿ ಬಳ್ಳಾರಿಯ ಗಾಂಧಿ ಪ್ರತಿಮೆ ಬಳಿ ಮದ್ಯ ನಿಷೇಧ ಆಂದೋಲನದ ಪದಾಧಿಕಾರಿಗಳು ಮೌನ ಪ್ರತಿಭಟನೆ ನಡೆಸಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ನಾಗೇಂದ್ರ ಅವರಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದರು.

- Advertisement -

ಸಂಘಟನೆ ಮುಖಂಡೆ ಅಕ್ಕ ಮಹಾದೇವಿ ಅವರು ಮಾತನಾಡಿ, “ಯಾವುದೇ ಸರ್ಕಾರ ಮದ್ಯ ಮಾರಾಟದಿಂದ ಬರುವ ಆದಾಯವನ್ನು ಕಲ್ಯಾಣ ಕಾರ್ಯಕ್ರಮಗಳಿಗೆ ಬಳಸುವುದು ಅಪರಾಧ. ಅಂತಹ ಹಣವನ್ನು ದೇಶ ಕಟ್ಟಲು ಬಳಸಬಾರದೆಂದು ಗಾಂಧೀಜಿ ದೃಢವಾಗಿ ನಂಬಿದ್ದರು. ಸಂವಿಧಾನದ ಆಶಯವೂ ಅದೇ ಆಗಿರುವುದರಿಂದ ಸರ್ಕಾರಗಳು ಮದ್ಯ ನಿಷೇಧದತ್ತ ಸಾಗಬೇಕು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

“ವಿಪರ್ಯಾಸವೆಂದರೆ‌ ಸರ್ಕಾರ ಅಕ್ರಮ ಮದ್ಯ ಮಾರಾಟ ತಡೆಗಟ್ಟುವ ಬದಲಾಗಿ ಗಾಂಧಿ ಜಯಂತಿಯ ದಿನದಂದೇ 600 ಗ್ರಾಮ ಪಂಚಾಯತಿಗಳ ವ್ಯಾಪ್ತಿಯಲ್ಲಿ 1000 ಹೊಸ ಮದ್ಯದಂಗಡಿ ತೆರೆಯಲು ಪರವಾನಿಗೆ ನೀಡುವ ಪ್ರಸ್ತಾವನೆ ಮುಂದಿಟ್ಟಿದೆ. ಗ್ಯಾರಂಟಿ ಯೋಜನೆಗಳಿಂದ ಸಂತಸಗೊಂಡಿದ್ದ ನಾವು ಮದ್ಯದಂಗಡಿ ಪ್ರಸ್ತಾವನೆಯಿಂದ ಆಘಾತಗೊಂಡಿದ್ದೇವೆ” ಎಂದರು.

ಉಚ್ಛ ನ್ಯಾಯಾಲಯದ ಆದೇಶದಂತೆ ಅಕ್ರಮ ಮದ್ಯ ಮಾರಾಟ ನಿಲ್ಲಿಸಲು ಕ್ರಮ ಕೈಗೊಳ್ಳಬೇಕು. ಅಕ್ರಮ ಮಾರಾಟಗಾರರ ಮೇಲೆ ಕಠಿಣ ಕ್ರಮ ತೆಗೆದುಕೊಳ್ಳಬೇಕು. ಕರ್ನಾಟಕ ಪಂಚಾಯತ್ ರಾಜ್‌ ಕಾನೂನಿನ ಅನ್ವಯ(73ನೇ ತಿದ್ದುಪಡಿ) ಗ್ರಾಮಸಭೆಗೆ ಪರಮಾಧಿಕಾರ ನೀಡುವ ಅದೇಶ ಹೊರಡಿಸಬೇಕು” ಎಂದು ಒತ್ತಾಯಿಸಿದರು.

“ಮಹಾರಾಷ್ಟ್ರ ಮತ್ತು ಹರಿಯಾಣ ರಾಜ್ಯಗಳಂತೆ ಶೇ.10ರಷ್ಟು ಮಹಿಳೆಯರು ಆಯಾ ಪಂಚಾಯತಿ ವ್ಯಾಪ್ತಿಯಲ್ಲಿ ಮದ್ಯ ಮಾರಾಟಕ್ಕೆ ಪರವಾನಗಿ ನೀಡಬಾರದೆಂದು ಗ್ರಾಮಸಭೆಯಲ್ಲಿ ನಿರ್ಧರಿಸಿದಲ್ಲಿ ಆ ಠರಾವನ್ನು ಸರ್ಕಾರ ಎತ್ತಿ‌ ಹಿಡಿಯಬೇಕು. ಸರ್ಕಾರ ಹೊಸದಾಗಿ 1,000 ಮದ್ಯದಂಗಡಿಗಳಿಗೆ ಪರವಾನಿಗೆ ನೀಡುವ, ಮಾಲ್, ಸೂಪ‌ರ್ ಮಾರ್ಕೆಟ್‌ಗಳಲ್ಲಿ ಮಾರಾಟ ಮಾಡುವ ಪ್ರಸ್ತಾವನೆಯನ್ನು ಕೂಡಲೇ ಹಿಂತೆಗೆದುಕೊಳ್ಳಬೇಕು” ಎಂದು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ಬೀದರ್ | ಹೊಸ ಮದ್ಯದಂಗಡಿಗಳಿಗೆ ಪರವಾನಿಗೆ ನೀಡುವ ಸರ್ಕಾರದ ನಡೆಗೆ ಖಂಡನೆ

“ಮಹಿಳೆಯರಿಗೆ ಮಾತ್ರವಲ್ಲ ಸಮಾಜದ ನೆಮ್ಮದಿ, ಆರೋಗ್ಯ ಎಲ್ಲವನ್ನೂ ಹಾಳು ಮಾಡುವ ಈ ವಿಚಾರಗಳನ್ನು ಕೈ ಬಿಟ್ಟು ಗಾಂಧಿ ಆಶಯಗಳನ್ನು ಅನುಷ್ಠಾನಕ್ಕೆ ತರಬೇಕು. ನಮ್ಮ ಬೇಡಿಕೆಗಳನ್ನು ಈಡೇರಿಸುವ ಮೂಲಕ ಕಾರ್ಯರೂಪಕ್ಕೆ ತಂದು ಗೌರವದಿಂದ ನಡೆಸಿಕೊಳ್ಳಬೇಕು” ಎಂದರು.

ಈ ಸಂದರ್ಭದಲ್ಲಿ ರೇಣುಕಾ, ದೀಪಿಕಾ, ಶಾಂತಮ್ಮ, ಪಾರ್ವತಿ, ಸುಜಾತಾ ಅನಿತಾ ಬಸವರಾಜ್ ಕಾವೇರಿ ಸೇರಿದಂತೆ ಇತರರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಜನಪ್ರತಿನಿಧಿಗಳನ್ನು ಕಡೆಗಣಿಸಿ ಕಾಮಗಾರಿ ನಡೆಸಿದರೆ ಸಹಿಸುವುದಿಲ್ಲ: ಶಾಸಕ ಡಾ.ಕೊತ್ತೂರು ಜಿ ಮಂಜುನಾಥ್ ಗರಂ

ಸ್ಥಳೀಯ ಜನಪ್ರತಿನಿಧಿಗಳ ಗಮನಕ್ಕೆ ತರದೆ ಹಾಗೂ ಶಿಷ್ಟಾಚಾರ ಪಾಲಿಸದೆ ಏಕಾಏಕಿ ಕಾಮಗಾರಿಗಳನ್ನು...

ಕೊಲ್ಹಾರ | ಶಾಸಕರಿಲ್ಲದ ಪ್ರಜಾಸೇವಾ ಆಂದೋಲನ: ಅಹವಾಲು ಹೊತ್ತುಬಂದವರಿಗೆ ನಿರಾಸೆ, ಅಧಿಕಾರಿಗಳಿಂದ ಪರಿಹಾರದ ಭರವಸೆ

ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ಶಾಸಕರಿಲ್ಲದೆ ಪ್ರಜಾಸೇವಾ ಆಂದೋಲನ ನಡೆಯಿತು. ಇದರಿಂದಾಗಿ...

ಬಾಗಲಕೋಟೆ | ಹಾವು ಕಚ್ಚಿದರೆ ಕ್ಷಣವೂ ತಡಮಾಡದೆ, ಸರ್ಕಾರಿ ಆಸ್ಪತ್ರೆಯತ್ತ ಧಾವಿಸಿ: ಡಾ. ಮಹೇಶ ಕೋಣಿ

ಹಾವು ಕಡಿತಕ್ಕೆ ಒಳಗಾದವರು ಆತಂಕಕ್ಕೊಳಗಾಗಿ ನಾಟಿ ಚಿಕಿತ್ಸೆ, ನಕಲಿ ವೈದ್ಯರ ಮೊರೆ...

ರಾಯಚೂರು | ಕೆ. ಶಾಂತಪ್ಪ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿರುವುದು ಸಂತಸದ ವಿಚಾರ: ಬೋಸರಾಜು

ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಕೆ. ಶಾಂತಪ್ಪ ಅವರು ಜವಾಬ್ದಾರಿ...