ಚಿತ್ರದುರ್ಗ | ಜಿಲ್ಲೆಯ ಗಣಿಭಾದಿತ ಪ್ರದೇಶಗಳಿಗೆ ಕೆ ಆರ್ ಎಸ್ ರಾಜ್ಯಾಧ್ಯಕ್ಷ ರವಿ ಕೃಷ್ಣಾರೆಡ್ಡಿ ಭೇಟಿ

Date:

ಕಬ್ಬಿಣ, ಮ್ಯಾಂಗನೀಸ್ ಅದಿರಿನ ಅಕ್ರಮ ಗಣಿಗಾರಿಕೆಯಿಂದ ಗಣಿಭಾದಿತವಾಗಿರುವ ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ, ಹೊಳಲ್ಕೆರೆ ಹಾಗು ಚಿತ್ರದುರ್ಗ ತಾಲೂಕಿನ ಪ್ರದೇಶಗಳಿಗೆ ಕರ್ನಾಟಕ ರಾಷ್ಟ್ರ ಸಮಿತಿ(ಕೆ ಆರ್ ಎಸ್)ಪಕ್ಷದ ರಾಜ್ಯಾಧ್ಯಕ್ಷ ರವಿ ಕೃಷ್ಣಾರೆಡ್ಡಿ ಅವರ ನೇತೃತ್ವದ ತಂಡವು 2025ರ ಜುಲೈ 17ರ ಗುರುವಾರ ಭೇಟಿ ನೀಡಲಿದೆ.

- Advertisement -

ತುಮಕೂರು ಜಿಲ್ಲೆಯಲ್ಲಿನ ಗಣಿಬಾಧಿತ ಪ್ರದೇಶಗಳಿಗೆ ಭೇಟಿ ನೀಡಿ, ಚಿತ್ರದುರ್ಗ ಜಿಲ್ಲೆಗೆ ಆಗಮಿಸಲಿರುವ ತಂಡವು, ಈ ಸಂದರ್ಭದಲ್ಲಿ ಗಣಿಗಾರಿಕಾ ಪ್ರದೇಶಗಳಿಗೆ ಹಾಗು ಸುತ್ತಲಿನ ಕೆಲವು ಹಳ್ಳಿಗಳಿಗೆ ಭೇಟಿ ನೀಡಿ ಗಣಿಗಾರಿಕೆಯಿಂದ ಆಗಿರುವ ಅನಾಹುತಗಳು, ಅದರಿಂದ ಜನರಿಗಾಗುತ್ತಿರುವ ತೊಂದರೆಗಳು ಮತ್ತು ಈ ಸಮಸ್ಯೆಗಳ ನಿವಾರಣೆಗೆ ಸರ್ಕಾರ ಕೈಗೊಂಡಿರುವ ಕ್ರಮಗಳು ಹಾಗೂ ಯೋಜನೆಗಳ ಪರಿಶೀಲನೆ ನಡೆಸಲಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

2005 ರಿಂದ 2011 ರವರೆಗಿನ ಅಕ್ರಮ ಗಣಿಗಾರಿಕೆಯ ಸಂದರ್ಭದಲ್ಲಿ ನಡೆದಷ್ಟೇ ಮಟ್ಟದಲ್ಲಿ ಇಂದು ಸಕ್ರಮವಾಗಿ ಗಣಿಗಾರಿಕೆ ನಡೆಯುತ್ತಿದೆ. ಈ ಹಿಂದೆ ನಡೆದ ಗಣಿಗಾರಿಕೆಯಿಂದ ಪರಿಸರ, ಕೃಷಿ, ಆರೋಗ್ಯ ಮತ್ತು ಒಟ್ಟಾರೆ ಜನಜೀವನದ ಮೇಲೆ ವ್ಯಾಪಕ ದುಷ್ಪರಿಣಾಮ ಬೀರಿತ್ತು. ಇದನ್ನು ಸರಿಪಡಿಸಲು ಸರ್ಕಾರವು ಯಾವುದೇ ಕ್ರಮ ಕೈಗೊಂಡಿಲ್ಲ. ಸಮಸ್ಯೆಗಳು ಮತ್ತೆ ಮರುಕಳಿಸುತ್ತಿದ್ದು, ಈ ನಿಟ್ಟಿನಲ್ಲಿ.ಜನರಿಗೆ ಆಗುತ್ತಿರುವ ಸಮಸ್ಯೆಗಳನ್ನು ನಿವಾರಿಸಲು ಮಾನ್ಯ ಸರ್ವೋಚ್ಚ ನ್ಯಾಯಾಲಯದ ಆದೇಶದ ಮೇರೆಗೆ ಸಾವಿರಾರು ಕೋಟಿ ಹಣ ಇದ್ದರೂ ಸಹ ಯಾವುದೇ ಕ್ರಮ ವಹಿಸಲಾಗುತ್ತಿಲ್ಲ. ಗಣಿಗರಿಕೆಯಿಂದ ಸಂಗ್ರಹವಾಗಿರುವ ಈ ಹಣವನ್ನು ಹೇಗೆ ಕೊಳ್ಳೆಹೊಡೆಯುವುದು ಎನ್ನುವುದರ ಬಗ್ಗೆಯೆ ಈ ಭಾಗದ ಬಹುತೇಕ ಜನಪ್ರತಿನಿಧಿಗಳ ಹಾಗೂ ಅಧಿಕಾರಿಗಳ ಯೋಜನೆಯಾಗಿದ್ದು, ಜನರ ಜೀವನ ಉತ್ತಮಪಡಿಸುವ ಬಗ್ಗೆ ಕಾಳಜಿ ಕಾಣಿಸುತ್ತಿಲ್ಲ.

ಈ ಸುದ್ದಿ ಓದಿದ್ದೀರಾ? ಶಕ್ತಿ ಯೋಜನೆ | ರಾಜ್ಯಾದ್ಯಂತ 500 ಕೋಟಿ ಮಹಿಳೆಯರ ಪ್ರಯಾಣ: ಕಾರ್ಮಿಕರಿಗೆ ಸುಲಭ ಸಂಚಾರ, ಆರ್ಥಿಕ ಬಲ

ಇಂತಹ ಸಂದರ್ಭದಲ್ಲಿ, ಜನರ ಪರಿಸ್ಥಿತಿ ಮತ್ತು ಗಣಿಗಾರಿಕೆಯಿಂದ ಆಗಿರುವ ದುಷ್ಪರಿಣಾಮಗಳ ಬಗ್ಗೆ ತಿಳಿಯುವುದು ಮತ್ತು ಜನರಿಗೆ ಈ ಬಗ್ಗೆ ಅರಿವು ಮೂಡಿಸುವುದು ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ಹಲವಾರು ಸಮಾನ ಮನಸ್ಕ ಸಂಘಟನೆಗಳು ಹಾಗೂ ಪಕ್ಷಗಳು ಸೇರಿ “ಗಣಿಭಾದಿತ ಪ್ರದೇಶಗಳ ಪರಿಸರ ಮತ್ತು ಜನಬದುಕಿನ ಪುನಶ್ಚೇತನ ಹೋರಾಟ ಸಮಿತಿ” ರಚಿಸಲಾಗಿದ್ದು, ಇದರಲ್ಲಿ ಕೆ ಆರ್ ಎಸ್ ಪಕ್ಷವು ಕೂಡ ಭಾಗವಾಗಿದೆ. ಈ ಭೇಟಿಯ ಸಂದರ್ಭದಲ್ಲಿ ಬಾದಿತ ಜನರು, ಸಮಸ್ಯೆ ಎದುರಿಸುತ್ತಿರುವವರು ಅಥವಾ ಈ ಪ್ರಯತ್ನದಲ್ಲಿ ಭಾಗವಹಿಸಲು ಆಸಕ್ತಿಯುಳ್ಳವರು ರವಿ ಕೃಷ್ಣಾರೆಡ್ಡಿ ಅವರನ್ನು ಈ ಸಂದರ್ಭದಲ್ಲಿ ಭೇಟಿ ಮಾಡಬಹುದು. ಹೆಚ್ಚಿನ ವಿವರಗಳಿಗೆ ಮಹೇಶ್.ಸಿ ನಗರಂಗೆರೆ -7892600106 / ಬಾಲರಾಜ-98445 20654  ಸಂಪರ್ಕಿಸಬಹುದು ಎಂದು ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಮೂಲಗಳು ತಿಳಿಸಿವೆ.‌

IMG 20250205 WA0034
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯಕ್ಕೆ ಬಾಕಿ ಅನುದಾನ: ಶೀಘ್ರದಲ್ಲೇ ‘ಸಿಹಿ ಸುದ್ದಿ’- ಡಿ.ಕೆ. ಶಿವಕುಮಾರ್

ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಬರಬೇಕಾದ ಹಳೆಯ ಬಾಕಿ ಅನುದಾನದ ಕುರಿತಂತೆ ಶೀಘ್ರದಲ್ಲೇ...

ಸರ್ಕಾರ ಬೀಳಿಸಲು ಬಂದಿಲ್ಲ, ಅಕ್ರಮ ಪ್ರಶ್ನಿಸಲು ಬಂದಿದ್ದೇನೆ: ಖ್ಯಾತ ಯೂಟ್ಯೂಬರ್ ಧೃವ್ ರಾಠಿ

"ನಾನು ಯಾವುದೇ ಸರ್ಕಾರವನ್ನು ಕೆಡವಲು ಅಥವಾ ಬದಲಾಯಿಸಲು ಇಲ್ಲಿಗೆ ಬಂದಿಲ್ಲ. ನನಗೆ...

ಪ್ರಜಾಪ್ರಭುತ್ವದ ಹಕ್ಕು ಕಿತ್ತುಕೊಳ್ಳಲು ಮೋದಿ ಸರ್ಕಾರ ಯತ್ನಿಸುತ್ತಿದೆ, ಜೆನ್-ಝೀಗಳು ಸಹಿಸುವುದಿಲ್ಲ: ಐಶೀ ಘೋಷ್

"ನಾವು ಪ್ರಸ್ತುತ ದೇಶದಲ್ಲಿ ಏನೇನು ನಡೆಯುತ್ತಿದೆ ಎಂಬುದನ್ನು ಚೆನ್ನಾಗಿ ತಿಳಿದುಕೊಂಡಿದ್ದೇವೆ. ದೇಶದ...

ಮತ ಕಳೆದುಹೋದರೆ ಪ್ರಜಾಪ್ರಭುತ್ವ ಕಳೆದುಹೋಗುತ್ತದೆ: ಅಭಿಜೀತ್ ದೀಪ್ಕೆ

ದೇಶದಲ್ಲಿ ಮತದಾನದ ಹಕ್ಕು ಮತ್ತು ಪ್ರಜಾಪ್ರಭುತ್ವವನ್ನು ಉಳಿಸುವ ನಿಟ್ಟಿನಲ್ಲಿ ಜನರು ಎಚ್ಚೆತ್ತುಕೊಂಡು...