ದಾವಣಗೆರೆ | ಮೆಕ್ಕೆಜೋಳ ಬೆಂಬಲ ಬೆಲೆ ಖರೀದಿ ಕೇಂದ್ರಕ್ಕೆ ರೈತಸಂಘ ಧರಣಿ: ಅಸ್ವಸ್ಥಗೊಂಡ ರೈತ

Date:

ಮೆಕ್ಕೆಜೋಳಕ್ಕೆ ಬೆಂಬಲ ಬೆಲೆ, ಕಾಯ್ದೆ ಮತ್ತು ಖರೀದಿ ಕೇಂದ್ರ ತೆರೆಯಲು ಒತ್ತಾಯಿಸಿ ದಾವಣಗೆರೆ ನಗರದ ಎಸಿ ಕಚೇರಿ ಬಳಿ ನಡೆಯುತ್ತಿರುವ ರೈತ ಸಂಘದ ಅನಿರ್ದಿಷ್ಟಾವಧಿ ಪ್ರತಿಭಟನೆಯಲ್ಲಿ ಭಾಗವಹಿಸಿರುವ ಬಳ್ಳಾರಿಯ ರೈತರೊಬ್ಬರು ಅಸ್ವಸ್ಥಗೊಂಡು ಆಸ್ಪತ್ರೆ ಸೇರಿರುವ ಘಟನೆ ಗುರುವಾರ ನಡೆದಿದೆ.

- Advertisement -
1003134039
Oplus_131072

ನವೆಂಬರ್ 19 ರಿಂದ ಕರ್ನಾಟಕ ರಾಜ್ಯ ರೈತ ಸಂಘ (ಹುಚ್ಚವ್ವನಳ್ಳಿ ಮಂಜುನಾಥ ಬಣ)ದ ಪದಾಧಿಕಾರಿಗಳು, ಕಾರ್ಯಕರ್ತರು, ರೈತರು ಸೇರಿ ಮೆಕ್ಕೆಜೋಳದ ಬೆಂಬಲ ಬೆಲೆ 2400 ರೂ. ನಿಗದಿ ಮಾಡಬೇಕು ಮತ್ತು ಇದಕ್ಕೆ ಕಾಯ್ದೆ ತರಬೇಕು. ಭತ್ತಕ್ಕೆ 3000 ರೂಪಾಯಿಗಳ ಬೆಂಬಲ ಬೆಲೆ ನೀಡಬೇಕೆಂದು ಒತ್ತಾಯಿಸಿ, ಮಹಾನಗರ ಪಾಲಿಕೆ, ಎಸಿ ಕಚೇರಿ ಮುಂಭಾಗ ಬೃಹತ್ ಪ್ರತಿಭಟನೆ, ರಸ್ತೆ ತಡೆ ನಡೆಸುವ ಮೂಲಕ ಅನಿರ್ದಿಷ್ಟಾವಧಿ ಧರಣಿ ಪ್ರತಿಭಟನೆಯನ್ನು ಪ್ರಾರಂಭಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಿಕ್ಷಣ ಮಾರಾಟ ಮಾಡಿದ ಶಾಲೆಗಳೇ ಈಗ ಮಾರಾಟಕ್ಕೆ!

ಕರ್ನಾಟಕದಲ್ಲಿ ಖಾಸಗಿ ಶಾಲೆಗಳು ಮುಚ್ಚುವ ಹಂತಕ್ಕೆ ತಲುಪಿದ್ದು, ಮಾರಾಟಕ್ಕೆ ಸಜ್ಜಾಗಿವೆ. ಕೋವಿಡ್-19 ಆಕ್ರಮಣದ ನಂತರದಲ್ಲಿ ಖಾಸಗಿ ಶಾಲೆಗಳಲ್ಲಿ ದಾಖಲಾತಿಯಲ್ಲಿ ಭಾರೀ ಕುಸಿತ, ಪ್ರತಿಷ್ಠಿತ ಶಾಲೆಗಳ ಜೊತೆಗೆ ಪೈಪೋಟಿ, ಮೂಲಭೂತ ಸೌಕರ್ಯಕ್ಕೆ ತಕ್ಕಂತೆ ಲಾಭದ...

ಬಿಗಿದ ತುಟಿಯ ದೃಶ್ಯಭಾಷೆ: ನಿರ್ಬಂಧಗಳ ನೆರಳಲ್ಲಿ ರೂಪಕಗಳ ಪ್ರತಿರೋಧ

ಸಿನೆಮಾವನ್ನು ನಿಯಂತ್ರಿಸಲು ಅಧಿಕಾರಶಾಹಿ ಸದಾ ಹೊಸ ಕಟ್ಟುಪಾಡುಗಳನ್ನು ಸೃಷ್ಟಿಸುತ್ತಲೇ ಇರುತ್ತದೆ; ಆದರೆ ಕಲೆಗೆ ಇರುವ ಶಕ್ತಿಯೆಂದರೆ, ಅದು ನಿರ್ಬಂಧಗಳ ಗೋಡೆಗಳನ್ನೇ ಹೊಸ ನೋಟದ ಕಿಟಕಿಗಳನ್ನಾಗಿಸಿಕೊಳ್ಳುತ್ತದೆ. ನೇರ ಮಾತನ್ನು ಕಸಿದುಕೊಂಡಷ್ಟೂ ರೂಪಕಗಳ ನಡಿಗೆ ಬಿಗಿಯಾಗುತ್ತದೆ,...

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...
1003134063
ಅಸ್ವಸ್ಥಗೊಂಡಿದ್ದರಿಂದ ರೈತನನ್ನು ಆಂಬುಲೆನ್ಸ್ ನಲ್ಲಿ ಆಸ್ಪತ್ರೆಗೆ ಸಾಗಿಸುತ್ತಿರುವುದು

ಇಂದು ಬೆಂಬಲ ಬೆಲೆಗೆ ಆಗ್ರಹಿಸಿ ನೆಡೆಸುತ್ತಿರುವ ಅನಿರ್ದಿಷ್ಟಾವಧಿ ಧರಣಿಯು ಎರಡನೇ ದಿನಕ್ಕೆ ಕಾಲಿಟ್ಟಿದ್ದು ಮುಷ್ಕರದಲ್ಲಿ ಭಾಗವಹಿಸಿದ್ದ ರೈತ ಸಂಘದ ಮುಖಂಡ ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ಕಾಳಿನಗೇರಿ ಗ್ರಾಮದ ರೈತ 62 ವರ್ಷ ವಯಸ್ಸಿನ ಮೋಹನ ಬಾಬು ಅಸ್ವಸ್ಥಗೊಂಡಿದ್ದರಿಂದ ಆಸ್ಪತ್ರೆಗೆ ದಾಖಲಿಸಿದ ಘಟನೆ ನಡೆದಿದೆ.

ಇದು ಮಧ್ಯಾಹ್ನ 1.30 ಗಂಟೆ ಸುಮಾರಿನಲ್ಲಿ ಧರಣಿಯಲ್ಲಿ ಭಾಗವಹಿಸಿದ್ದ ರೈತ ಮೋಹನ್ ಬಾಬು
ಅಸ್ವಸ್ಥಗೊಂಡಿದ್ದರಿಂದ ಕೂಡಲೇ ತುರ್ತು ಚಿಕಿತ್ಸಾ ವಾಹನದಲ್ಲಿ ಚಿಗಟೇರಿ ಜಿಲ್ಲಾ ಸರಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಬೆಳಿಗ್ಗೆಯಿಂದಲೂ ರೈತನ ಆರೋಗ್ಯದಲ್ಲಿ ಏರು ಪೇರು ಕಂಡು ಬಂದಿತ್ತು ಎಂದು ತಿಳಿದು ಬಂದಿದೆ.‌

1003134062

ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ಎಗ್ಗಿಲ್ಲದೆ ನಡೆಯುತ್ತಿದೆ ಗಣಿಗಾರಿಕೆ: ರೈತರ ಭೂಮಿಯೂ ಕಬಳಿಕೆ, ಆರೋಗ್ಯವೂ ಹಾಳು

ಚಿತ್ರದುರ್ಗ | ಎಗ್ಗಿಲ್ಲದೆ ನಡೆಯುತ್ತಿದೆ ಗಣಿಗಾರಿಕೆ: ರೈತರ ಭೂಮಿಯೂ ಕಬಳಿಕೆ, ಆರೋಗ್ಯವೂ ಹಾಳು

ಈ ಕುರಿತು ಪ್ರತಿಕ್ರಿಯೆ ನೀಡಿದ ರೈತ ಸಂಘದ ಮುಖಂಡ ಹುಚ್ಚವ್ವನಹಳ್ಳಿ ಮಂಜುನಾಥ್ “ಬುಧವಾರ ಬೆಳಗಿನಿಂದಲೂ ಮೆಕ್ಕೆಜೋಳ ಮತ್ತು ಭತ್ತಕ್ಕೆ ಬೆಂಬಲ ಬೆಲೆ, ಕಾಯ್ದೆ ರೂಪಿಸಲು ಒತ್ತಾಯಿಸಿ ಅನಿರ್ದಿಷ್ಟ ಅವಧಿ ಧರಣಿ ಪ್ರಾರಂಭಿಸಿದ್ದೇವೆ. ಧರಣಿಯಲ್ಲಿ ಭಾಗವಹಿಸಿದ್ದ ಬಳ್ಳಾರಿ ಜಿಲ್ಲೆಯ ರೈತ ಮೋಹನ್ ಬಾಬು ತೀವ್ರ ಅಸ್ವಸ್ಥಗೊಂಡು ಆಸ್ಪತ್ರೆ ಸೇರಿದ್ದಾನೆ. ರೈತರಿಗೆ ಕನಿಷ್ಠ ಬೆಂಬಲ ಬೆಲೆ ನೀಡದೇ ರೈತರನ್ನು ಸಂಕಷ್ಟಕ್ಕೆ ನೂಕುತ್ತಿರುವ ಸರ್ಕಾರ, ರೈತರ ಬಗ್ಗೆ ನಿರ್ಲಕ್ಷ್ಯ ವಹಿಸುತ್ತಿದೆ. ಅಸ್ವಸ್ಥಗೊಂಡು ಆಸ್ಪತ್ರೆ ಸೇರಿರುವ ರೈತನಿಗೆ ಆರೋಗ್ಯ ಸಮಸ್ಯೆಗಳಾಗಿ ಅನಾಹುತ ಸಂಭವಿಸಿದರೆ ಅದಕ್ಕೆ ಸರ್ಕಾರವೇ ನೇರವಾಗಿ ಹೊಣೆಯಾಗುತ್ತದೆ. ಈಗಲಾದರೂ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡು ಕನಿಷ್ಠ ಬೆಂಬಲ ಬೆಲೆ ಘೋಷಿಸಿ. ಕಾಯ್ದೆ ರೂಪಿಸಬೇಕು. ರೈತರ ಹಿತ ಕಾಯಬೇಕು” ಎಂದು ಆಕ್ರೋಶ ವ್ಯಕ್ತಪಡಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೆಹಲಿ ಸಿಜೆಪಿ ಹೋರಾಟಕ್ಕೆ ಎಸ್‌ಐಆರ್ ವಿರೋಧಿ ಒಕ್ಕೂಟ ಬೆಂಬಲ: ರಾಜ್ಯಾದ್ಯಂತ ಪಂಜಿನ ಮೆರವಣಿಗೆಗೆ ಕರೆ

ಏಕಪಕ್ಷೀಯ ನಿರ್ಧಾರ ಕೈಗೊಂಡಿರುವ ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ರಾಜೀನಾಮೆಗೆ...

ಬೀದರ್‌ | ʼಕರೇಜ್‌ʼ ದೇಶದ ಜಲಸಂರಕ್ಷಣೆಗೆ ಮಾದರಿ : ಕೇಂದ್ರದ ಅಧಿಕಾರಿಗಳ ಮೆಚ್ಚುಗೆ

ಬೀದರ್‌ನ ಐತಿಹಾಸಿಕ ʼಕರೇಜ್‌ʼ ಜಲವ್ಯವಸ್ಥೆ ದೇಶದ ಜಲಸಂರಕ್ಷಣೆಗೆ ಮಾದರಿಯಾಗಬಲ್ಲದು ಎಂದು ಕೇಂದ್ರ...

ಪರಪ್ಪನ ಅಗ್ರಹಾರದಿಂದ ಬೆಳಗಾವಿ ಹಿಂಡಲಗಾ ಜೈಲಿಗೆ ಪ್ರಜ್ವಲ್ ರೇವಣ್ಣ ಎತ್ತಂಗಡಿ

ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಅಕ್ರಮವಾಗಿ ಮೊಬೈಲ್ ಫೋನ್ ಬಳಸಿದ...

Form 7 ಅರ್ಜಿ ವಿವಾದ; ತನಿಖೆಗೆ SIT ರಚನೆಗೆ ಸರ್ಕಾರ ಚಿಂತನೆ

ರಾಜ್ಯದಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸುವ ಉದ್ದೇಶದಿಂದ ಬೃಹತ್‌ ಪ್ರಮಾಣದಲ್ಲಿ Form...