ಬಳ್ಳಾರಿ ಘರ್ಷಣೆ ತನಿಖೆಗೆ ಗೃಹ ಸಚಿವ ಜಿ. ಪರಮೇಶ್ವರ ಸೂಚನೆ

Date:

ಮಹರ್ಷಿ ವಾಲ್ಮೀಕಿ ಬ್ಯಾನರ್ ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ಬಳ್ಳಾರಿ ಘರ್ಷಣೆಯಲ್ಲಿ ಓರ್ವ ಕಾಂಗ್ರೆಸ್ ಕಾರ್ಯಕರ್ತ ಮೃತಪಟ್ಟಿರುವ ಘಟನೆಯ ಹಿಂದೆ ರಾಜಕೀಯ ದುರುದ್ದೇಶವಿದೆ ಎಂದು ರಾಜ್ಯ ಗೃಹ ಸಚಿವ ಡಾ. ಜಿ ಪರಮೇಶ್ವರ್ ಆರೋಪಿಸಿದ್ದಾರೆ.

- Advertisement -

ತುಮಕೂರು ನಗರದಲ್ಲಿ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ್ದು, “ಮಾಜಿ ಸಚಿವ ಜನಾರ್ದನ ರೆಡ್ಡಿ ಅವರ ಮನೆಯ ರಸ್ತೆಯಲ್ಲಿ ಮಹರ್ಷಿ ವಾಲ್ಮೀಕಿ ಬ್ಯಾನರ್ ಹಾಕಲಾಗಿತ್ತು. ಇದನ್ನು ಜನಾರ್ದನ ರೆಡ್ಡಿ ಕಡೆಯವರು ವಿರೋಧಿಸಿದ್ದು, ಬ್ಯಾನರ್ ಕಿತ್ತು ಹಾಕಿ ದಾಂಧಲೆ ಮಾಡಿದ್ದಾರೆಂದು ಆರೋಪಿಸಲಾಗಿದೆ. ಇದರಿಂದಾಗಿ ಕಾಂಗ್ರೆಸ್ ಶಾಸಕರ ಬೆಂಬಲಿಗರು ತೀವ್ರ ಪ್ರತಿಭಟನೆ ನಡೆಸಿದ್ದು, ಗಲಾಟೆಗೆ ಕಾರಣವಾಗಿದೆ. ಈ ಸಂದರ್ಭದಲ್ಲಿ ಯಾರೋ ಗುಂಡು ಹಾರಿಸಿದ್ದು, ಪರಿಣಾಮವಾಗಿ ಒಬ್ಬ ಕಾಂಗ್ರೆಸ್ ಕಾರ್ಯಕರ್ತ ಮೃತಪಟ್ಟಿದ್ದಾರೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

“ಯಾರು ಗುಂಡು ಹಾರಿಸಿದ್ದಾರೆ ಎಂಬುದರ ಬಗ್ಗೆ ಸಂಪೂರ್ಣ ತನಿಖೆ ನಡೆಸಲು ಸೂಚನೆ ನೀಡಿದ್ದೇನೆ. ಮಹರ್ಷಿ ವಾಲ್ಮೀಕಿ ಪುತ್ಥಳಿ ವಿಚಾರದಲ್ಲಿ ಇಂತಹ ಕೃತ್ಯ ರಾಜಕೀಯ ದುರುದ್ದೇಶದಿಂದಾಗಿ ನಡೆದಿದೆ. ನಾವು ಇದನ್ನು ಸಹಿಸುವುದಿಲ್ಲ. ಘಟನೆಯ ಬಗ್ಗೆ ವರದಿ ಕೇಳಿದ್ದೇನೆ. ವರದಿ ಬಂದ ನಂತರ ಸೂಕ್ತ ಕ್ರಮ ಕೈಗೊಳ್ಳಲಾಗುವುದು” ಎಂದರು.

ಈ ಸುದ್ದಿ ಓದಿದ್ದೀರಾ? ಬ್ಯಾನರ್ ಅಳವಡಿಕೆ ಘರ್ಷಣೆ: ಶಾಸಕ ಜನಾರ್ದನ ರೆಡ್ಡಿ ಸೇರಿ 11 ಮಂದಿ ವಿರುದ್ಧ ಪ್ರಕರಣ ದಾಖಲು

“ಮುನ್ನೆಚ್ಚರಿಕೆಯಾಗಿ ದಾವಣಗೆರೆ ಐಜಿಪಿ ಅವರು ಸ್ಥಳಕ್ಕೆ ಭೇಟಿ ನೀಡಿದ್ದು, ಪರಿಸ್ಥಿತಿ ನಿಯಂತ್ರಣಕ್ಕೆ ತರಲು ಕ್ರಮ ಕೈಗೊಳ್ಳಲಾಗಿದೆ. ಪೊಲೀಸರು ಗುಂಪಿನ ನಡುವೆ ಗಾಳಿಯಲ್ಲಿ ಗುಂಡು ಹಾರಿಸಿ ಪರಿಸ್ಥಿತಿ ಶಾಂತಗೊಳಿಸಿದ್ದಾರೆ. ಅಲ್ಲದೆ, ಖಾಸಗಿ ಗನ್‌ಮ್ಯಾನ್‌ಗಳ ರಿವಾಲ್ವರ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಸತೀಶ್ ರೆಡ್ಡಿ ಅವರ ಗನ್‌ಮ್ಯಾನ್ ಗುಂಡು ಹಾರಿಸಿದ್ದಾರೆ ಎಂಬ ಆರೋಪವಿದ್ದು, ಇದರ ಬಗ್ಗೆಯೂ ತನಿಖೆ ನಡೆಸುವಂತೆ ಸೂಚಿಸಲಾಗಿದೆ” ಎಂದು ಸಚಿವರು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯಕ್ಕೆ ಬಾಕಿ ಅನುದಾನ: ಶೀಘ್ರದಲ್ಲೇ ‘ಸಿಹಿ ಸುದ್ದಿ’- ಡಿ.ಕೆ. ಶಿವಕುಮಾರ್

ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಬರಬೇಕಾದ ಹಳೆಯ ಬಾಕಿ ಅನುದಾನದ ಕುರಿತಂತೆ ಶೀಘ್ರದಲ್ಲೇ...

ಸರ್ಕಾರ ಬೀಳಿಸಲು ಬಂದಿಲ್ಲ, ಅಕ್ರಮ ಪ್ರಶ್ನಿಸಲು ಬಂದಿದ್ದೇನೆ: ಖ್ಯಾತ ಯೂಟ್ಯೂಬರ್ ಧೃವ್ ರಾಠಿ

"ನಾನು ಯಾವುದೇ ಸರ್ಕಾರವನ್ನು ಕೆಡವಲು ಅಥವಾ ಬದಲಾಯಿಸಲು ಇಲ್ಲಿಗೆ ಬಂದಿಲ್ಲ. ನನಗೆ...

ಪ್ರಜಾಪ್ರಭುತ್ವದ ಹಕ್ಕು ಕಿತ್ತುಕೊಳ್ಳಲು ಮೋದಿ ಸರ್ಕಾರ ಯತ್ನಿಸುತ್ತಿದೆ, ಜೆನ್-ಝೀಗಳು ಸಹಿಸುವುದಿಲ್ಲ: ಐಶೀ ಘೋಷ್

"ನಾವು ಪ್ರಸ್ತುತ ದೇಶದಲ್ಲಿ ಏನೇನು ನಡೆಯುತ್ತಿದೆ ಎಂಬುದನ್ನು ಚೆನ್ನಾಗಿ ತಿಳಿದುಕೊಂಡಿದ್ದೇವೆ. ದೇಶದ...

ಮತ ಕಳೆದುಹೋದರೆ ಪ್ರಜಾಪ್ರಭುತ್ವ ಕಳೆದುಹೋಗುತ್ತದೆ: ಅಭಿಜೀತ್ ದೀಪ್ಕೆ

ದೇಶದಲ್ಲಿ ಮತದಾನದ ಹಕ್ಕು ಮತ್ತು ಪ್ರಜಾಪ್ರಭುತ್ವವನ್ನು ಉಳಿಸುವ ನಿಟ್ಟಿನಲ್ಲಿ ಜನರು ಎಚ್ಚೆತ್ತುಕೊಂಡು...