ಉಡುಪಿ | ಕೊಂದವರು ಯಾರು? ಮಹಿಳಾ ಸಮಾವೇಶಕ್ಕೆ ವಿಕೃತ ಅಪಪ್ರಚಾರ, ಹೋರಾಟದಿಂದ ಹಿಂದೆ ಸರಿಯಲ್ಲ

Date:

ಕಳೆದ ನಾಲ್ಕೈದು ದಶಕಗಳಿಂದ ಮಹಿಳೆಯರ ಹಕ್ಕುಗಳು, ಸಮಾನತೆ ಮತ್ತು ಘನತೆಯ ಬದುಕಿಗಾಗಿ ನಿರಂತರ ಹೋರಾಟ ನಡೆಸುತ್ತಿರುವ ವಿವಿಧ ಮಹಿಳಾ ಸಂಘಟನೆಗಳು ಹಾಗೂ ಮಹಿಳಾ ಸಮಾನತೆಯನ್ನು ಬೆಂಬಲಿಸುವ ವ್ಯಕ್ತಿಗಳ ಒಕ್ಕೂಟದಿಂದ, ಡಿಸೆಂಬರ್ 16ರಂದು ಬೆಳ್ತಂಗಡಿಯಲ್ಲಿ ‘ಮಹಿಳೆಯರ ಮೌನ ಮೆರವಣಿಗೆ ಮತ್ತು ಮಹಿಳಾ ನ್ಯಾಯ ಸಮಾವೇಶ’ವನ್ನು ಆಯೋಜಿಸಲಾಗಿದೆ.

- Advertisement -

ಧರ್ಮಸ್ಥಳ ಪ್ರದೇಶದಲ್ಲಿ ಮಹಿಳೆಯರ ಮೇಲೆ ನಡೆದಿರುವ ಅತ್ಯಾಚಾರ, ಹತ್ಯೆ, ಅಸಹಜ ಸಾವುಗಳು ಹಾಗೂ ನಾಪತ್ತೆ ಪ್ರಕರಣಗಳ ಸತ್ಯಾಂಶವನ್ನು ಹೊರತರಲು ಸರ್ಕಾರ ರಚಿಸಿರುವ ವಿಶೇಷ ತನಿಖಾ ತಂಡ (SIT) ಸಮಗ್ರ ಹಾಗೂ ನಿಷ್ಪಕ್ಷಪಾತ ತನಿಖೆ ನಡೆಸಬೇಕು ಎಂಬ ಒತ್ತಾಯದೊಂದಿಗೆ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಈ ಹೋರಾಟವು ‘ಕೊಂದವರು ಯಾರು?’ ಎಂಬ ಆಂದೋಲನದ ಭಾಗವಾಗಿದ್ದು, ಆಗಸ್ಟ್ ತಿಂಗಳಿಂದಲೇ ರಾಜ್ಯದಾದ್ಯಂತ ಮಹಿಳಾ ಸಂಘಟನೆಗಳು ಸತ್ಯ ಅನಾವರಣಕ್ಕೆ ಆಗ್ರಹಿಸುತ್ತಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಬಡ ಯೆಮನ್ ಇಕ್ಕಳದಲ್ಲಿ ಶ್ರೀಮಂತ ಸೌದಿ: ವಿನಾಕಾರಣ ದಾಳಿ...

ಸುಮ್ಮನೆ ಇರಲಾರದ ಸೌದಿ ಅರೇಬಿಯಾ, ಬಡ ರಾಷ್ಟ್ರಗಳ ಮೇಲೆ ದಬ್ಬಾಳಿಕೆ ಮಾಡಲು ಹೋಗಿ, ಮರ್ಮಕ್ಕೆ ತಾಕುವಂತಹ ಹೊಡೆತ ತಿಂದು ಕೂತಿದೆ. ಈಗ ಸೌದಿ ಅರೇಬಿಯಾದ ನೆರವಿಗೆ ಅಮೆರಿಕಾ, ಇಸ್ರೇಲ್‌, ಪಾಕಿಸ್ತಾನ ಮತ್ತು ಟಿರ್ಕಿ...

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಧರ್ಮಸ್ಥಳದಲ್ಲಿ ನಡೆದಿರುವ ಅಪರಾಧಗಳಿಗೆ ಸಂಬಂಧಿಸಿದಂತೆ, ತಪ್ಪಿತಸ್ಥರನ್ನು ಗುರುತಿಸಿ ಕಾನೂನಿನಡಿ ಶಿಕ್ಷೆ ವಿಧಿಸುವುದು ಸರ್ಕಾರದ ಹೊಣೆಗಾರಿಕೆ ಎಂದು ಮಹಿಳಾ ಸಂಘಟನೆಗಳು ಸ್ಪಷ್ಟಪಡಿಸಿವೆ. ಜೊತೆಗೆ, ದಶಕಗಳಿಂದ ನ್ಯಾಯಕ್ಕಾಗಿ ಹೋರಾಟ ನಡೆಸುತ್ತಿರುವ ಸಂತ್ರಸ್ತರ ಕುಟುಂಬಗಳೊಂದಿಗೆ ನಿಲ್ಲುವುದು ಈ ಸಮಾವೇಶದ ಮುಖ್ಯ ಉದ್ದೇಶವಾಗಿದೆ.

SIT ತನಿಖೆ ಯಾವುದೇ ಧಾರ್ಮಿಕ ಅಥವಾ ರಾಜಕೀಯ ವಿಚಾರಗಳ ಸುತ್ತ ಸೀಮಿತವಾಗದೇ, ಸಂಪೂರ್ಣವಾಗಿ ಮಹಿಳೆಯರು ಹಾಗೂ ಇತರೆ ನೊಂದವರಿಗೆ ನ್ಯಾಯ ಒದಗಿಸುವ ದಿಕ್ಕಿನಲ್ಲಿ ಕೇಂದ್ರೀಕೃತವಾಗಿರಬೇಕು ಎಂದು ಸಂಘಟನೆಗಳು ಗಟ್ಟಿದನಿಯಲ್ಲಿ ಆಗ್ರಹಿಸಿವೆ. ಸರ್ಕಾರ ಹೊರಡಿಸಿರುವ ಆದೇಶದಂತೆ, ವಿಚಾರಣೆ ಕೇವಲ ಸಾಮೂಹಿಕ ಹೆಣ ಹೂಳುವಿಕೆಯ ಕುರಿತಷ್ಟೇ ಅಲ್ಲದೆ, ಆ ವ್ಯಾಪ್ತಿಯಲ್ಲಿ ದಾಖಲಾಗಿರುವ ಹಾಗೂ ಮುಂದಿನ ದಿನಗಳಲ್ಲಿ ದಾಖಲಾಗುವ ಎಲ್ಲಾ ಅಪರಾಧ ಪ್ರಕರಣಗಳ ಸಮಗ್ರ ತನಿಖೆಯಾಗಬೇಕು ಎಂಬುದು ಮಹಿಳಾ ಸಂಘಟನೆಗಳ ಸ್ಪಷ್ಟ ಬೇಡಿಕೆಯಾಗಿದೆ.

ಡಿಸೆಂಬರ್ 16ರ ದಿನಾಂಕವು ವಿಶೇಷ ಮಹತ್ವ ಹೊಂದಿದ್ದು, 2012ರಲ್ಲಿ ದೆಹಲಿಯಲ್ಲಿ ನಡೆದ ನಿರ್ಭಯ ಅತ್ಯಾಚಾರ ಪ್ರಕರಣದ ಸ್ಮರಣಾರ್ಥವಾಗಿ ದೇಶಾದ್ಯಂತ ಮಹಿಳಾ ಸಂಘಟನೆಗಳು ಈ ದಿನವನ್ನು ‘ಅತ್ಯಾಚಾರ ವಿರೋಧಿ ದಿನ’ವಾಗಿ ಆಚರಿಸುತ್ತಾ ಬಂದಿವೆ. ಭೀಕರ ಹಿಂಸೆಯ ನಡುವೆಯೂ ನಿರ್ಭಯ ತೋರಿದ ಧೈರ್ಯ ಮತ್ತು ಬದುಕಬೇಕೆಂಬ ಛಲವನ್ನು ಸ್ಮರಿಸುವ ದಿನವಾಗಿರುವುದರ ಜೊತೆಗೆ, ಮಹಿಳೆಯರು ಬಲಿಪಶುಗಳಲ್ಲ, ತಮ್ಮ ಹಕ್ಕುಗಳಿಗಾಗಿ ಹೋರಾಡಬಲ್ಲ ಶಕ್ತಿಯೆಂಬ ಸಂದೇಶವನ್ನು ಸಾರುವ ದಿನವೂ ಇದಾಗಿದೆ.

ಸಂವಿಧಾನದಲ್ಲಿ ನಂಬಿಕೆ ಇಟ್ಟುಕೊಂಡಿರುವ ನಾಗರಿಕರಾಗಿ, ಅತ್ಯಾಚಾರ, ಕೊಲೆ, ಅಸಹಜ ಸಾವು ಹಾಗೂ ನಾಪತ್ತೆ ಪ್ರಕರಣಗಳಿಗೆ ಕಾರಣರಾದವರನ್ನು ಪತ್ತೆಹಚ್ಚಿ ನ್ಯಾಯದ ಕಟ್ಟಕಡೆಯವರೆಗೆ ತಲುಪಿಸುವುದು ಜವಾಬ್ದಾರಿಯುತ ಸರ್ಕಾರಗಳ ಕರ್ತವ್ಯ ಎಂದು ಮಹಿಳಾ ಸಂಘಟನೆಗಳು ಅಭಿಪ್ರಾಯಪಟ್ಟಿವೆ. ಈ ನಿಟ್ಟಿನಲ್ಲಿ ಸರ್ಕಾರ ಹಾಗೂ SITಗೆ ಎಚ್ಚರಿಕೆಯ ಸಂದೇಶ ನೀಡುವ ಉದ್ದೇಶದಿಂದಲೇ ಡಿಸೆಂಬರ್ 16ರಂದು ಬೆಳ್ತಂಗಡಿಯಲ್ಲಿ ಮಹಿಳೆಯರ ಮೌನ ಮೆರವಣಿಗೆ ಮತ್ತು ಮಹಿಳಾ ನ್ಯಾಯ ಸಮಾವೇಶ ಆಯೋಜಿಸಲಾಗಿದೆ ಎಂದು ಸಂಘಟಕರು ತಿಳಿಸಿದ್ದಾರೆ.

WhatsApp Image 2025 12 13 at 10.18.00 PM

ಈ ಬಗ್ಗೆ ಈದಿನ.ಕಾಮ್‌ ಜೊತೆ ಮಾತನಾಡಿದ ಸಾಮಾಜಿಕ ಹೋರಾಟಗಾರ್ತಿ ಜ್ಯೋತಿ ಎ, ಧರ್ಮಸ್ಥಳ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಹೆಣ್ಣು ಮಕ್ಕಳ ಮೇಲೆ ನಡೆದಿರುವ ದೌರ್ಜನ್ಯಗಳಿಗೆ ನ್ಯಾಯ ಒದಗಿಸುವ ಉದ್ದೇಶದಿಂದ ‘ಕೊಂದವರು ಯಾರು?’ ಎಂಬ ಆಂದೋಲನದ ಮೂಲಕ ಮಹಿಳಾ ಜಾಥಾ ಹಾಗೂ ಮಹಿಳಾ ನ್ಯಾಯ ಸಮಾವೇಶವನ್ನು ಹಮ್ಮಿಕೊಂಡಿರುವುದಾಗಿ ತಿಳಿಸಿದರು. ಈ ಕಾರ್ಯಕ್ರಮದ ಮೂಲಕ ಸರ್ಕಾರದ ಮೇಲೆ ತೀವ್ರ ಒತ್ತಡವನ್ನು ತರುವುದರ ಜೊತೆಗೆ, ಈಗ ನಡೆಯುತ್ತಿರುವ ಎಸ್‌ಐಟಿ ತನಿಖೆ ನ್ಯಾಯಯುತ, ನಿಷ್ಪಕ್ಷಪಾತ ಮತ್ತು ಸಮಗ್ರವಾಗಿರಬೇಕು ಎಂದು ಅವರು ಒತ್ತಾಯಿಸಿದರು.


ಇಲ್ಲಿಯವರೆಗೆ ದೂರುದಾರರು ಹಾಗೂ ಸಾಕ್ಷಿದಾರರನ್ನೇ ಆರೋಪಿಗಳನ್ನಾಗಿ ಮಾಡುವ ಪ್ರಯತ್ನಗಳು ನಡೆಯುತ್ತಿರುವುದು ಅತ್ಯಂತ ಖಂಡನೀಯವಾಗಿದೆ. ಹೋರಾಟ ನಡೆಸುವವರನ್ನೇ ಗುರಿಯಾಗಿಸಿ ಆರೋಪಿಗಳನ್ನಾಗಿ ಮಾಡುವ ಪ್ರವೃತ್ತಿಯನ್ನು ಕೂಡಲೇ ನಿಲ್ಲಿಸಬೇಕು ಎಂದು ಹೇಳಿದರು. ನಮ್ಮ ಪ್ರಮುಖ ಆಗ್ರಹಗಳು ಸ್ಪಷ್ಟವಾಗಿವೆ. ಸಮಗ್ರ ತನಿಖೆ ನಡೆಯಬೇಕು, ಸಾಕ್ಷಿ ಹೇಳಲು ಹಾಗೂ ದೂರು ನೀಡಲು ಮುಂದೆ ಬರುವವರಿಗೆ ಭಯಮುಕ್ತ ವಾತಾವರಣ ಕಲ್ಪಿಸಬೇಕು. ಎಸ್‌ಐಟಿ ಮುಖ್ಯಸ್ಥರು ಬೆಳ್ತಂಗಡಿಯಲ್ಲೇ ನೆಲೆಸಿ ಕಾರ್ಯನಿರ್ವಹಿಸಬೇಕು. ಎಸ್‌ಐಟಿಯಲ್ಲಿ ದೂರುದಾರರು ಮತ್ತು ಸಾಕ್ಷಿದಾರರನ್ನು ಬೆದರಿಸುವ ಅಧಿಕಾರಿಗಳನ್ನು ತಕ್ಷಣವೇ ತಂಡದಿಂದ ತೆಗೆದುಹಾಕಬೇಕು. ತನಿಖೆ ಯಾವುದೇ ರೀತಿಯ ಸರ್ಕಾರದ ಒತ್ತಡಕ್ಕೆ ಮಣಿಯದೇ ನಡೆಯಬೇಕು ಎಂದು ಹೇಳಿದರು.

WhatsApp Image 2025 12 13 at 10.19.18 PM 1

ಈದಿನ.ಕಾಮ್‌ ಜೊತೆ ಮಾತನಾಡಿದ ಮಹಿಳಾ ಪರ ಹೋರಾಟಗಾರ್ತಿ ಶಶಿಕಲಾ ಶೆಟ್ಟಿ, ಮಹಿಳಾ ಸಮಾವೇಶವನ್ನು ಹಮ್ಮಿಕೊಂಡಿದ್ದು ಅದರ ಪೂರ್ವಸಿದ್ಧತೆಗಳು ನಡೆಯುತ್ತಿವೆ ಎಂದು ತಿಳಿಸಿದರು. ನಾವು ಯಾರನ್ನೂ ಆರೋಪಿಗಳೆಂದು ಹೇಳಿಲ್ಲ, ಯಾರನ್ನೂ ಗುರಿಯಾಗಿಸಿಕೊಂಡು ಈ ಸಮಾವೇಶವನ್ನು ಆಯೋಜಿಸಿಲ್ಲ. ಆದರೂ ಆರೋಪಿಗಳು ಈ ಸಮಾವೇಶ ನಮ್ಮ ವಿರುದ್ಧವೆಂದು ಭಾವಿಸಿ, ‘ಕುಂಬಳಕಾಯಿ ಕಳ್ಳ ಎಂದರೆ ಹೆಗಲು ಮುಟ್ಟಿ ನೋಡುವಂತೆ’ ಬೇರೆ ಬೇರೆ ರೀತಿಯ ಪ್ರತಿಕ್ರಿಯೆಗಳನ್ನು ನೀಡುತ್ತಿದ್ದಾರೆ ಎಂದು ಹೇಳಿದರು. ಸಮಾವೇಶದ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಮಹಿಳೆಯರ ಪೋಸ್ಟರ್‌ಗಳು ಹಾಗೂ ವೀಡಿಯೋಗಳು ಪ್ರಕಟವಾಗುತ್ತಿದ್ದಂತೆ, ಅವುಗಳನ್ನು ವಿಕೃತವಾಗಿ ಎಡಿಟ್‌ ಮಾಡಿ ಮಹಿಳೆಯರ ತೇಜೋವಧೆ ಮಾಡಲಾಗುತ್ತಿದೆ. ಆದರೆ ನಾವು ಈ ಆಂದೋಲನದಲ್ಲಿ ಭಾಗವಹಿಸಿರುವವರು ಇಂತಹ ಒತ್ತಡಗಳಿಗೆ ವಿಚಲಿತರಾಗುವವರಲ್ಲ. ಹೋರಾಟದಲ್ಲಿ ಇವೆಲ್ಲವನ್ನೂ ನೋಡಿಕೊಂಡೇ ಬಂದವರು ನಾವು. ಇದರಿಂದ ನಾವು ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ. ‘ಕೊಂದವರು ಯಾರು?’ ಎಂಬ ಅಭಿಯಾನ ಆರಂಭವಾದ ದಿನದಿಂದಲೇ ರಾಜ್ಯದಾದ್ಯಂತ ಸಂಚಲನ ಸೃಷ್ಟಿಯಾಗಿದೆ ಎಂದು ಅವರು ಹೇಳಿದರು.

ಈ ದಿನ.ಕಾಮ್‌ ಜೊತೆ ಮಾತನಾಡಿದ ದಲಿತ ಸಂಘರ್ಷ ಸಮಿತಿಯ ವಸಂತಿ, ಕಳೆದ ಕೆಲವು ದಿನಗಳಿಂದ ಸಾಮಾಜಿಕ ಜಾಲತಾಣಗಳು ಹಾಗೂ ಕೆಲವು ಮಾಧ್ಯಮಗಳ ಮೂಲಕ ಡಿ.16ರಂದು ನಡೆಯಲಿರುವ ಮಹಿಳಾ ನ್ಯಾಯ ಸಮಾವೇಶದ ಕುರಿತು ಕಿಡಿಗೇಡಿಗಳು ಅಪಪ್ರಚಾರ ನಡೆಸುತ್ತಿರುವುದು ಗಮನಕ್ಕೆ ಬಂದಿದೆ ಎಂದರು. ಸಮಾವೇಶ ರದ್ದಾಗಿದೆ ಎಂಬ ಸುಳ್ಳು ಸುದ್ದಿಯನ್ನು ಉದ್ದೇಶಪೂರ್ವಕವಾಗಿ ಹರಡಲಾಗುತ್ತಿದೆ ಎಂದು ಅವರು ಹೇಳಿದರು.

ಈ ರೀತಿಯ ತಪ್ಪು ಮಾಹಿತಿಗಳನ್ನು ಯಾರೂ ನಂಬಬಾರದು ಡಿ.16ರಂದು ಮಹಿಳಾ ನ್ಯಾಯ ಸಮಾವೇಶವು ಖಂಡಿತವಾಗಿಯೂ ನಡೆಯಲಿದೆ ಎಂದು ಸ್ಪಷ್ಟಪಡಿಸಿದರು. ಸಮಾವೇಶಕ್ಕೆ ಅಗತ್ಯವಿರುವ ಎಲ್ಲಾ ಪರವಾನಿಗೆಗಳನ್ನು ಸಂಬಂಧಪಟ್ಟ ವಿವಿಧ ಇಲಾಖೆಗಳ ಮೂಲಕ ಈಗಾಗಲೇ ಪಡೆದುಕೊಳ್ಳಲಾಗಿದೆ. ಹೀಗಾಗಿ ಯಾವುದೇ ಮೂಲಗಳಿಂದ ಇಂತಹ ಸುಳ್ಳು ಸುದ್ದಿಗಳು ಬಂದರೂ ಅದಕ್ಕೆ ಕಿವಿಗೊಡಬೇಡಿ ಎಂದರು. ಏನಾದರೂ ಬದಲಾವಣೆಗಳಿದ್ದಲ್ಲಿ ಸಂಘಟಕರಿಂದಲೇ ಅಧಿಕೃತವಾಗಿ ಮಾಹಿತಿ ನೀಡಲಾಗುತ್ತದೆ. ಆದರೆ ಅಂಥ ಯಾವುದೇ ಸಾಧ್ಯತೆ ಇಲ್ಲ. ಆದ್ದರಿಂದ ಡಿ.16ರ ಸಮಾವೇಶ ನಿಗದಿತ ವೇಳಾಪಟ್ಟಿಯಂತೆ ನಡೆದೇ ನಡೆಯುತ್ತದೆ ಎಂದು ಅವರು ತಿಳಿಸಿದರು.

WhatsApp Image 2023 08 22 at 3.23.15 PM
ಶಾರೂಕ್ ತೀರ್ಥಹಳ್ಳಿ
+ posts

ಮೂಲತಃ ತೀರ್ಥಹಳ್ಳಿಯವರಾದ ಇವರು ಪ್ರಸ್ತುತ ಈದಿನ. ಕಾಮ್ ಉಡುಪಿ ಜಿಲ್ಲಾ ವರದಿಗಾರರಾಗಿ ಮತ್ತು ಕರಾವಳಿ ಮಲೆನಾಡು ಭಾಗದ ವಲಯ ಸಂಯೋಜಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. 2017 ರಿಂದ ಪತ್ರಿಕೋದ್ಯಮದಲ್ಲಿ ತೊಡಗಿಸಿಕೊಂಡ ಇವರು ದಿನ ಪತ್ರಿಕೆ, ವಾರ ಪತ್ರಿಕೆ, ನ್ಯೂಸ್ ವೆಬ್ ಪೋರ್ಟಲ್ ನಲ್ಲಿ ಕಾರ್ಯನಿರ್ವಹಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಶಾರೂಕ್ ತೀರ್ಥಹಳ್ಳಿ
ಶಾರೂಕ್ ತೀರ್ಥಹಳ್ಳಿ
ಮೂಲತಃ ತೀರ್ಥಹಳ್ಳಿಯವರಾದ ಇವರು ಪ್ರಸ್ತುತ ಈದಿನ. ಕಾಮ್ ಉಡುಪಿ ಜಿಲ್ಲಾ ವರದಿಗಾರರಾಗಿ ಮತ್ತು ಕರಾವಳಿ ಮಲೆನಾಡು ಭಾಗದ ವಲಯ ಸಂಯೋಜಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. 2017 ರಿಂದ ಪತ್ರಿಕೋದ್ಯಮದಲ್ಲಿ ತೊಡಗಿಸಿಕೊಂಡ ಇವರು ದಿನ ಪತ್ರಿಕೆ, ವಾರ ಪತ್ರಿಕೆ, ನ್ಯೂಸ್ ವೆಬ್ ಪೋರ್ಟಲ್ ನಲ್ಲಿ ಕಾರ್ಯನಿರ್ವಹಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಅಂತರರಾಜ್ಯ ಕಳ್ಳನ ಬಂಧನ: ₹25.50 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ, ನಗದು ವಶ

ಸಿಂಧನೂರು ನಗರದ ಮನೆಗೆ ಬೀಗ ಹಾಕಿ ಹೊರಗೆ ಹೋಗಿದ್ದ ವೇಳೆ ಬೀಗ...

ಯಾದಗಿರಿ | ಗಣೇಶ ಮೆರವಣಿಗೆ ವೇಳೆ ಕಲ್ಲುತೂರಾಟ; 19 ಮಂದಿ ವಿರುದ್ಧ ಪ್ರಕರಣ ದಾಖಲು

ಗಣೇಶ ಮೂರ್ತಿ ಮೆರವಣಿಗೆ ವೇಳೆ ಎರಡು ಗುಂಪುಗಳ ನಡುವೆ ಮಾತಿನ ಚಕಮಕಿ...

ನೀರು, ತ್ಯಾಜ್ಯ, ಬೀದಿ ನಾಯಿಗಳ ಸಮಸ್ಯೆಗೆ ಕಡಿವಾಣ: ಕಲಬುರಗಿ ನೂತನ ಮಹಾಪೌರರ ಭರವಸೆ

ನಗರದ ಮೂಲಭೂತ ಸಮಸ್ಯೆಗಳಿಗೆ ತ್ವರಿತ ಪರಿಹಾರ ಕಲ್ಪಿಸುವುದರ ಜೊತೆಗೆ ಆಡಳಿತ ವ್ಯವಸ್ಥೆಯನ್ನು...

ಕಲಬುರಗಿ | ಶಿಕ್ಷಕರು ಪೀಳಿಗೆಯ ಭವಿಷ್ಯ ರೂಪಿಸುವ ಜವಾಬ್ದಾರಿ ಹೊಂದಿದ್ದಾರೆ: ಪ್ರಿಯಾಂಕ್ ಖರ್ಗೆ

ಶಿಕ್ಷಕರು ಕೇವಲ ಪಠ್ಯಕ್ರಮ ಬೋಧಿಸುವವರಲ್ಲ. ವಿದ್ಯಾರ್ಥಿಗಳ ವ್ಯಕ್ತಿತ್ವ ಹಾಗೂ ಭವಿಷ್ಯ ರೂಪಿಸುವ...