ಬೆಳ್ತಂಗಡಿ : ತಿಥಿ ಕಾರ್ಯಕ್ರಮಕ್ಕೆ ಆಮೆ ಬೇಟೆ, ನಾಲ್ವರ ಬಂಧನ

Date:

ತಿಥಿ ಕಾರ್ಯಕ್ರಮಕ್ಕಾಗಿ ಆಮೆ ಪದಾರ್ಥ ತಯಾರಿಸಲು ಅಕ್ರಮವಾಗಿ ನದಿಯಲ್ಲಿ ಆಮೆಗಳನ್ನು ಬೇಟೆಯಾಡಿದ ನಾಲ್ವರನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿ, ಬಳಿಕ ಅರಣ್ಯ ಇಲಾಖೆಗೆ ಹಸ್ತಾಂತರಿಸಿರುವ ಘಟನೆ ನಡೆದಿದೆ.

- Advertisement -

ನಗರದ ಸೋಮವತಿ ನದಿಯಲ್ಲಿ ನಾಲ್ಕು ಆಮೆಗಳನ್ನು ಬೇಟೆಯಾಡಿ ನದಿ ಬದಿಯಲ್ಲಿ ಅವುಗಳನ್ನು ಮಾಂಸ ಮಾಡಲು ಸಿದ್ಧತೆ ನಡೆಸುತ್ತಿದ್ದ ವೇಳೆ, ಖಚಿತ ಮಾಹಿತಿ ಮೇರೆಗೆ ಫೆ.14ರಂದು ಸಂಜೆ 3:30ರ ಸುಮಾರಿಗೆ ಸಬ್‌ ಇನ್ಸ್‌ಪೆಕ್ಟರ್ ಆನಂದ್ ಎಂ ನೇತೃತ್ವದ ತಂಡ ದಾಳಿ ನಡೆಸಿತು. ಈ ವೇಳೆ ನಾಲ್ವರನ್ನು ವಶಕ್ಕೆ ಪಡೆದು, ಅವರ ಬಳಿಯಿದ್ದ ನಾಲ್ಕು ಸುಟ್ಟ ಆಮೆಗಳನ್ನು ಜಪ್ತಿ ಮಾಡಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಅರಣ್ಯ ಇಲಾಖೆಯವರು ಆರೋಪಿಗಳಾದ ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯ ಬದಿಯಡ್ಕ ಅಂಚೆಯ ಪೆರ್ಡಲ್ ಗ್ರಾಮದ ನಿರ್ಜಲ್ ನಿವಾಸಿ ಮಣಿಕಂಠ (42), ಮಂಗಳೂರು ನಗರದ ಮುಲ್ಕಿ ತಾಲೂಕಿನ ನೆಲ್ಲಿಗುಡ್ಡೆ ನಿವಾಸಿ ರಾಜೇಂದ್ರ (54), ಮೂಡಬಿದಿರೆ ತಾಲೂಕಿನ ಶಿರ್ತಾಡಿ ಗ್ರಾಮದ ವಿಘ್ನೇಶ್ (32) ಹಾಗೂ ಬೆಳ್ತಂಗಡಿ ತಾಲೂಕಿನ ಬಡಗಕಾರಂದೂರು ಗ್ರಾಮದ ಪ್ರಶಾಂತ್ (35) ವಿರುದ್ಧ ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ.

ಆರೋಪಿಗಳು ಬೆಳ್ತಂಗಡಿ ತಾಲೂಕಿನ ಉಜಿರೆ ಗ್ರಾಮದ ಸಂಬಂಧಿ ಅಜ್ಜಿ ದೇವಮ್ಮ ಅವರ ಉತ್ತರಕ್ರಿಯೆ ಕಾರ್ಯಕ್ರಮಕ್ಕಾಗಿ ಫೆ.13ರಂದು ಆಗಮಿಸಿದ್ದರು. ಅಜ್ಜಿಗೆ ಇಷ್ಟವಾಗಿದ್ದ ಆಮೆ ಪದಾರ್ಥವನ್ನು ತಿಥಿ ಕಾರ್ಯಕ್ರಮದಲ್ಲಿ ಬಡಿಸಲು ಫೆ.14ರಂದು ಸೋಮವತಿ ನದಿಗೆ ಬೇಟೆಗೆ ತೆರಳಿ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ ಎಂದು ತಿಳಿದುಬಂದಿದೆ.

ಬಂಧಿತರಿಗೆ ವಿಚಾರಣೆ ನಡೆಸಿ, ನ್ಯಾಯಾಲಯಕ್ಕೆ ಹಾಜರಾಗುವಂತೆ ನೋಟಿಸ್ ನೀಡಿ ಫೆ.14ರ ರಾತ್ರಿ ಬಿಡುಗಡೆ ಮಾಡಲಾಗಿದೆ.

ಡಿವೈಎಸ್ಪಿ ರೋಹಿಣಿ ಸಿ.ಕೆ. ಹಾಗೂ ಇನ್ಸ್‌ಪೆಕ್ಟರ್ ಬಿ.ಜಿ. ಸುಬ್ಬಾಪುರ ಮಠ ಮಾರ್ಗದರ್ಶನದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಎಸ್‌ಐ ಆನಂದ್ ಎಂ, ಎಎಸ್‌ಐ ಕುಶಾಲಪ್ಪ, ಹೆಡ್ ಕಾನ್ಸ್ಟೇಬಲ್ ಪ್ರಮೋದ್, ಪಂಪಾಪತಿ, ಪ್ರಕಾಶ್, ಶ್ವೇತಾ, ಸವಿತಾ ಹಾಗೂ ಅರಣ್ಯ ಇಲಾಖೆಯ ಅಧಿಕಾರಿಗಳು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಆರೋಗ್ಯ ಸುರಕ್ಷತೆಗೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಕೊಡಗು ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ...

ಉಡುಪಿ | ಯುವಜನರೇ, ನಿರಂತರ ಪರಿಶ್ರಮದಿಂದ ಯಶಸ್ಸಿನ ಮೆಟ್ಟಿಲೇರಿ: ಪ್ರಕಾಶ್ ಶೆಟ್ಟಿ

ಯುವಜನರು ನಿರಂತರ ಪ್ರಯತ್ನದ ಮೂಲಕ ಜೀವನದಲ್ಲಿ ಒಂದೊಂದೇ ಮೆಟ್ಟಿಲು ಏರುತ್ತಾ ಸಾಗಿದರೆ...