ಬೆಳ್ತಂಗಡಿ | ‘ಸೌಜನ್ಯ ಪರ’ ಹಾಕಿರುವ ಫ್ಲೆಕ್ಸ್‌ಗಳನ್ನು ತೆರವುಗೊಳಿಸಲು ಪೊಲೀಸ್‌‌ ಇಲಾಖೆ ಸೂಚನೆ

Date:

Advertisements
  • ಬೆಳ್ತಂಗಡಿ ತಾ. ಪಂ. ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗೆ ಸೂಚನೆ ನೀಡಿದ ಪೊಲೀಸರು
  • ಸಾರ್ವಜನಿಕರಲ್ಲಿ ಅನುಮಾನ, ಅಸಮಾಧಾನಕ್ಕೆ ಕಾರಣವಾದ ನಡೆ

ಧರ್ಮಸ್ಥಳದಲ್ಲಿ ಕಳೆದ 11 ವರ್ಷಗಳ ಹಿಂದೆ ನಡೆದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಮತ್ತೆ ರಾಜ್ಯಾದ್ಯಂತ ಚರ್ಚೆಯಲ್ಲಿರುವಾಗಲೇ ಒಂದೊಂದು ದಿನ ಒಂದೊಂದು ಬೆಳವಣಿಗೆಗಳಾಗುತ್ತಿದೆ.

ಪ್ರಕರಣದಲ್ಲಿ ಆರೋಪಿಯಾಗಿದ್ದ ಸಂತೋಷ್ ಕುಮಾರ್‌ನನ್ನು ಸಿಬಿಐ ನ್ಯಾಯಾಲಯವು ನಿರ್ದೋಷಿ ಎಂದು ತೀರ್ಪು ನೀಡಿದ ಬಳಿಕ, ಹಾಗಾದರೆ ಅತ್ಯಾಚಾರಗೈದು ಕೊಲೆ ನಡೆಸಿದವರು ಯಾರು ಎಂಬ ಪ್ರಶ್ನೆ ಎಲ್ಲೆಡೆ ಭುಗಿಲೆದ್ದಿದೆ.

ಈ ನಡುವೆ ಧರ್ಮಸ್ಥಳ ಮತ್ತು ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಕುಟುಂಬದ ಹೆಸರನ್ನು ಸೌಜನ್ಯ ಪ್ರಕರಣದಲ್ಲಿ ಎಳೆದುತಂದು ಹಾಳುಗೆಡವಲಾಗುತ್ತಿದೆ ಎಂದು ಆರೋಪಿಸಿ ಕಳೆದ ಶುಕ್ರವಾರ ಧರ್ಮಸ್ಥಳದ ಪರ ಇರುವವರು ಪ್ರತಿಭಟನೆಯೂ ನಡೆಸಿದ್ದರು. ಈ ವೇಳೆ ಸೌಜನ್ಯಳಿಗೆ ನ್ಯಾಯ ಕೊಡಿ ಎಂದು ಪ್ಲೆಕಾರ್ಡ್‌ ಇಟ್ಟು ವೇದಿಕೆಯ ಮುಂಭಾಗದಲ್ಲಿ ಕಾಣಿಸಿಕೊಂಡಿದ್ದ ಸೌಜನ್ಯಳ ಕುಟುಂಬದ ಮೇಲೆ ಹಲ್ಲೆಗೆ ಯತ್ನಿಸಿ, ಬೆದರಿಕೆಯೊಡ್ಡಿದ್ದ ಘಟನೆಯೂ ನಡೆದಿತ್ತು.

Advertisements

ಎಲ್ಲ ಬೆಳವಣಿಗೆಗಳು ಚರ್ಚೆಯಲ್ಲಿರುವಾಗಲೇ ಸೌಜನ್ಯ ಪರ ಹಾಕಿರುವ ಫ್ಲೆಕ್ಸ್‌ಗಳನ್ನು ತೆರವುಗೊಳಿಸುವಂತೆ ಪೊಲೀಸ್‌‌ ಇಲಾಖೆಯು ಬೆಳ್ತಂಗಡಿ ತಾಲೂಕು ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗೆ ಸೂಚನೆ ನೀಡಿರುವ ಪತ್ರವು ಸೋಷಿಯಲ್ ಮೀಡಿಯಾಗಳಲ್ಲಿ ಹರಿದಾಡುತ್ತಿದೆ.

ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಸಂತ್ರಸ್ತೆಗೆ ನ್ಯಾಯ ಸಿಗಬೇಕು ಎಂದು ಹಾಕಿರುವ ಬ್ಯಾನರ್‌ಗಳ ತೆರವಿಗೆ ಪೊಲೀಸ್ ಇಲಾಖೆ ಆದೇಶ ಹೊರಡಿಸಿದೆ.

ಬೆಳ್ತಂಗಡಿ ಪೊಲೀಸ್ ವೃತ್ತ ನಿರೀಕ್ಷಕರ ಮನವಿಯ ಹಿನ್ನೆಲೆಯಲ್ಲಿ ಬೆಳ್ತಂಗಡಿ ತಾಲೂಕಿನ ಎಲ್ಲ ಗ್ರಾಮ ಪಂಚಾಯತ್‌ನ ಪಿಡಿಓಗಳಿಗೆ ತಾ ಪಂ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ತಾಲೂಕಿನಾದ್ಯಂತ ಹಾಕಲಾದ ಸೌಜನ್ಯ ಪರ ಹಾಕಿರುವ ಎಲ್ಲ ಬ್ಯಾನರ್, ಫ್ಲೆಕ್ಸ್‌ಗಳನ್ನು ತೆರವುಗೊಳಿಸುವಂತೆ ಆದೇಶ ಹೊರಡಿಸಿದ್ದಾರೆ. ಈ ನಿರ್ಧಾರ ಸಾರ್ವಜನಿಕರಲ್ಲಿ ಸಾಕಷ್ಟು ಅನುಮಾನ ಮತ್ತು ಅಸಮಾಧಾನ ಉಂಟು ಮಾಡಿದೆ.

flex letter 1

ಆಗಸ್ಟ್ 3ರಂದು ಹೊರಡಿಸಿರುವ ಆದೇಶದ ಪ್ರತಿಯು ಈ ದಿನ.ಕಾಮ್‌ಗೂ ಲಭ್ಯವಾಗಿದ್ದು, ಆದೇಶದಲ್ಲಿ, ‘ಪ್ರಜ್ಞಾವಂತ ನಾಗರಿಕರು, ಬೆಳ್ತಂಗಡಿ ಎಂಬ ಹೆಸರಿನಲ್ಲಿ ತಾಲೂಕಿನಾದ್ಯಂತ ಹಾಕಲಾದ ಸೌಜನ್ಯ ಪರ ಬ್ಯಾನರ್ ತೆರವು ಮಾಡುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ದೂರು‌ ನೀಡಲಾಗಿತ್ತು. ದೂರಿನಲ್ಲಿ ಕು. ಸೌಜನ್ಯ ಪ್ರಕರಣದ ತೀರ್ಪನ್ನು ಬಹಿರಂಗವಾಗಿ ಟೀಕಿಸುತ್ತಿದ್ದಾರೆ. ‘ಸಮಾಜದಲ್ಲಿ ಶಾಂತಿ ಸುವ್ಯವಸ್ಥೆಯನ್ನು ಕದಡುವ ನಿಟ್ಟಿನಲ್ಲಿ, ಯಾರು ಯಾರನ್ನೋ ಆರೋಪಿತರನ್ನಾಗಿ ಬಿಂಬಿಸಿಕೊಂಡು, ಧರ್ಮ ಧರ್ಮಗಳ ನಡುವೆ ಒಡಕು ಉಂಟುಮಾಡಲಾಗುತ್ತಿದೆ. ಇದರಿಂದಾಗಿ ಸಮಾಜದಲ್ಲಿ, ಅಶಾಂತಿ ಉಂಟಾಗಿ, ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗುವ ಸಾಧ್ಯತೆ ಹೆಚ್ಚಾಗಿರುತ್ತದೆ. ಆದುದರಿಂದ ಸಾರ್ವಜನಿಕ ಸ್ಥಳಗಳಲ್ಲಿ, ರಸ್ತೆ ಬದಿಗಳಲ್ಲಿ ಅನಧಿಕೃತವಾಗಿ, ಕಾನೂನುಬಾಹಿರವಾಗಿ ಅಳವಡಿಸಿರುವ ಸೌಜನ್ಯ ಪ್ರಕರಣಗಳಿಗೆ ಸಂಬಂಧಿಸಿದ ಫ್ಲೆಕ್ಸ್‌ಗಳನ್ನು ಕೂಡಲೇ ತೆರವುಗೊಳಿಸಬೇಕು’ ಎಂದು ದ‌.ಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ದೂರು ಸಲ್ಲಿಸಲಾಗಿತ್ತು’ ಎಂದು ಉಲ್ಲೇಖಿಸಲಾಗಿದೆ.

soujanya

ಈ ಹಿನ್ನೆಲೆಯಲ್ಲಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬೆಳ್ತಂಗಡಿ ಸರ್ಕಲ್ ಇನ್ಸ್ ಪೆಕ್ಟರ್ ಅವರಿಗೆ ಪತ್ರ ಬರೆದಿದ್ದಾರೆ. ಈ ಸೂಚನೆಯ ಹಿನ್ನೆಲೆಯಲ್ಲಿ ಬೆಳ್ತಂಗಡಿ ಪೊಲೀಸ್ ವೃತ್ತ ನಿರೀಕ್ಷಕರು, ಬೆಳ್ತಂಗಡಿ ತಾಲೂಕು ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಯವರಿಗೂ ನಿರ್ದೇಶನ ನೀಡಿದ್ದರು. ಹೀಗಾಗಿ, ತಾಲೂಕಿನ ಎಲ್ಲ ಗ್ರಾಮ ಪಂಚಾಯಿತಿಯ ಪಿಡಿಓಗಳು ‘ಸೌಜನ್ಯಪರ’ ಬ್ಯಾನರ್ ತೆರವು ಮಾಡುವಂತೆ ಆದೇಶ ಹೊರಡಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | ಮಿತಿ ಮೀರಿರುವ ಮಾದಕ ವಸ್ತು ಸೇವನೆ ಆಧುನಿಕತೆಗೆ ಮಾರಕವಾಗಿದೆ: ಗಾಂಧಿವಾದಿ ಪ್ರಸನ್ನ

ಮಾದಕ ವಸ್ತು ಮುಕ್ತ ಭಾರತವನ್ನು ಕಟ್ಟುವ ಸಕಲೇಶಪುರದ ಜನತೆಯ ಜತೆಗೆ ನಾನೂ...

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

Download Eedina App Android / iOS

X