ಬೆಳ್ತಂಗಡಿ ಸುಡುಮದ್ದು ಸ್ಫೋಟ ಪ್ರಕರಣ: ಮಾಲೀಕನ ವಶಕ್ಕೆ ಪಡೆದ ಎಸ್‌ಪಿ ಹೇಳಿದ್ದೇನು?

Date:

Advertisements

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ವೇಣೂರು ಸಮೀಪದ ಗೋಳಿಯಂಗಡಿ ಎಂಬಲ್ಲಿ ರವಿವಾರ ಸಂಜೆ ಸುಡುಮದ್ದು ತಯಾರಿಕಾ ಘಟಕದಲ್ಲಿ ಸ್ಫೋಟ ನಡೆದು, ಮೂವರು ಮೃತಪಟ್ಟ ಘಟನೆಗೆ ಸಂಬಂಧಿಸಿ ಮಾಲೀಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಿಷ್ಯಂತ್ ಸಿ ಬಿ ಮಾಹಿತಿ ನೀಡಿದ್ದಾರೆ.

ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿರುವ ಅವರು, “ಸಾಲಿಡ್ ಫಯರ್ ವರ್ಕ್ಸ್ ಎಂಬ ಸುಡುಮದ್ದು ತಯಾರಿಕಾ ಘಟಕದಲ್ಲಿ ಈ ಘಟನೆ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಸಂಸ್ಥೆಯ ಮಾಲೀಕರಾಗಿರುವ ಸೈಯ್ಯದ್ ಬಶೀರ್​ ಅವರನ್ನು ವಶಕ್ಕೆ ಪಡೆದಿದ್ದೇವೆ. ನಮಗೆ ದೊರೆತಿರುವ ದಾಖಲೆಗಳ ಪ್ರಕಾರ 2011ರಿಂದ ಪಟಾಕಿ ತಯಾರಿಕೆಗೆ ಪರವಾನಗಿ ಪಡೆದುಕೊಂಡಿದ್ದಾರೆ. ಅದನ್ನು ಕಂದಾಯ ಇಲಾಖೆ ನೀಡಿದೆ. 2019ರಲ್ಲಿ ಅದನ್ನು ಮತ್ತೆ ನವೀಕರಿಸಿಕೊಂಡಿದ್ದು, 2022ರಲ್ಲಿ ಅದನ್ನು ಅಧಿಕಾರಿಗಳು ದೃಢೀಕರಣ ಕೂಡ ಮಾಡಿಕೊಂಡಿದ್ದಾರೆ. ಈ ಲೈಸೆನ್ಸ್ 2024ರವರೆಗೂ ಚಾಲ್ತಿಯಲ್ಲಿದೆ ಎಂಬುದು ಗೊತ್ತಾಗಿದೆ” ಎಂದು ತಿಳಿಸಿದ್ದಾರೆ.

sp dakshina kannada
ಘಟನಾ ಸ್ಥಳಕ್ಕೆ ಬೆಳ್ತಂಗಡಿಯ ಕಾಂಗ್ರೆಸ್ ಮುಖಂಡ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ ನೀಡಿ ಎಸ್‌ಪಿಯವರೊಂದಿಗೆ ಮಾಹಿತಿ ಪಡೆದುಕೊಂಡರು

“ಬಶೀರ್​ ಅವರು ತನ್ನದೇ ಹೆಸರಿನಲ್ಲಿರುವ ಜಾಗದಲ್ಲಿ ಪಟಾಕಿ ತಯಾರಿಸುತ್ತಿದ್ದರು. ಘಟನೆಯ ವೇಳೆ ಸ್ಥಳದಲ್ಲಿದ್ದ ಮೂವರು ಸಾವನ್ನಪ್ಪಿದ್ದಾರೆ. ಸಾವನ್ನಪ್ಪಿರುವ ಕಾರ್ಮಿಕರನ್ನು ಹಾಸನ ಜಿಲ್ಲೆಯ ಅರಸೀಕೆರೆ ನಿವಾಸಿ ಚೇತನ್(24), ಕೇರಳ ಮೂಲದ ವರ್ಗೀಸ್(60) ಮತ್ತು ಕುನ್ಹಿ(60) ಎಂದು ಗುರುತಿಸಲಾಗಿದೆ. ಸ್ಥಳಕ್ಕೆ ಫಾರೆನ್ಸಿಕ್ ತಂಡವನ್ನು ಕರೆಸಲಾಗಿದೆ. ಎಲ್ಲ ವಸ್ತುಗಳನ್ನು ಸಂಗ್ರಹಿಸಿ ಲ್ಯಾಬ್‌ಗೆ ಕಳುಹಿಸಲಾಗುವುದು. ಯಾವ ಕಾರಣಕ್ಕೆ ಈ ಸ್ಫೋಟ ಆಗಿದೆ ಎಂಬುದರ ಬಗ್ಗೆ ಪತ್ತೆ ಹಚ್ಚುತ್ತೇವೆ” ಎಂದು ತಿಳಿಸಿದ್ದಾರೆ.

Advertisements

fire 1

“ಸುಡುಮದ್ದಿಗೆ ಗ್ರಾಹಕರಿಂದ ಬೇಡಿಕೆ ಬಂದಾಗ ಅದನ್ನು ತಯಾರಿಸಿಕೊಡಲಾಗುತ್ತಿತ್ತು. ಸ್ಥಳೀಯರಿಂದ ಮಾಹಿತಿ ಪಡೆದುಕೊಂಡಾಗ ಸೈಯದ್ ಬಶೀರ್ ಅವರ ಕುಟುಂಬ ತುಂಬಾ ವರ್ಷದಿಂದ ಇದನ್ನು ಮಾಡಿಕೊಂಡು ಬರುತ್ತಿದೆ. ಅವರಿಂದಾನೇ ಸ್ಥಳೀಯ ಜನರು ತಮ್ಮ ಸಮಾರಂಭಗಳಲ್ಲಿ ಸಿಡಿಸಲು ಖರೀದಿಸುತ್ತಿದ್ದರು ಎಂದು ಗೊತ್ತಾಗಿದೆ. ಮೈಸೂರಿನ ವ್ಯಕ್ತಿಯೋರ್ವರು ಪಟಾಕಿ ಬೇಕು ಎಂದು ತಿಳಿಸಿದ್ದರಿಂದ ಇಲ್ಲಿನ ಕಾರ್ಮಿಕರು ತಯಾರಿಸುತ್ತಿದ್ದರು. ಈ ವೇಳೆ ಸ್ಫೋಟ ಸಂಭವಿಸಿದೆ. ಸ್ಪೋಟಕ್ಕೆ ಕಾರಣ ಏನು ಎಂಬುದರ ಬಗ್ಗೆ ತನಿಖೆ ನಡೆಸಲಾಗುವುದು” ಎಂದು ಎಸ್‌ಪಿ ತಿಳಿಸಿದರು.

‘ಬಾಂಬ್’ ಆರೋಪಕ್ಕೆ ಎಸ್‌ಪಿ ಹೇಳಿದ್ದು ಹೀಗೆ..

ಬಾಂಬ್ ಸ್ಫೋಟದಂತಹ ಶಬ್ದ ಕೇಳಿಬಂದಿದೆ. ಹಾಗಾಗಿ ಇಲ್ಲಿ ಬಾಂಬ್ ತಯಾರಿಸಲಾಗುತ್ತಿತ್ತು ಎಂಬ ಬಗ್ಗೆ ಸ್ಥಳೀಯರು ಆರೋಪಿಸುತ್ತಿರುವ ಬಗ್ಗೆ ಸ್ಪಷ್ಟೀಕರಣ ನೀಡಿರುವ ಪೊಲೀಸ್ ವರಿಷ್ಠಾಧಿಕಾರಿ, “ಸ್ಥಳೀಯರಲ್ಲಿ ವಿಚಾರಣೆ ನಡೆಸಿದಾಗ ಈ ಭಾಗದಲ್ಲಿ ಕೆಲವೊಂದು ದೊಡ್ಡ ಪಟಾಕಿ(ಸ್ಥಳೀಯವಾಗಿ ಗರ್ನಲ್ ಎಂದು ಹೆಸರಿದೆ) ಬಳಕೆ ಮಾಡುತ್ತಿದ್ದ ಬಗ್ಗೆ ಮಾಹಿತಿ ದೊರಕಿದೆ. ದೊಡ್ಡ ಪಟಾಕಿಗೆ ಅರ್ಧ ಸುಡುಮದ್ದು ಹಾಕಿ, ಅದಕ್ಕೆ ಬತ್ತಿ ಸೇರಿಸಲಾಗುತ್ತಿತ್ತು. ಅದನ್ನು ಇಲ್ಲಿ ತಯಾರು ಮಾಡುತ್ತಿದ್ದರು. ತಯಾರಿಸುತ್ತಿದ್ದಕ್ಕೆ ಪೂರಕವಾಗಿ ಕೆಲವೊಂದು ಖಾಲಿ ಶೆಲ್‌ಗಳು, ಬತ್ತಿಗಳು ಹಾಗೂ ಈಗಾಗಲೇ ತಯಾರಿಸಿದ್ದ ಸುಡುಮದ್ದುಗಳು ಕೂಡ ಪತ್ತೆಯಾಗಿದೆ. ಈ ದೊಡ್ಡ ಪಟಾಕಿಯನ್ನು ಸ್ಥಳೀಯ ಜಾತ್ರೆ, ಶಿವರಾತ್ರಿ ಹಬ್ಬ, ದೊಡ್ಡ ದೊಡ್ಡ ಸಮಾರಂಭಗಳಲ್ಲಿ ಹೊಡೆಯಲಾಗುತ್ತಿತ್ತು” ಎಂದು ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? ದಕ್ಷಿಣ ಕನ್ನಡ | ಪಟಾಕಿ ತಯಾರಿಕಾ ಘಟಕದಲ್ಲಿ ಸ್ಫೋಟ; ಇಬ್ಬರು ಸಾವು, ಹಲವರಿಗೆ ಗಾಯ

“ಇಂತಹಾ ಪಟಾಕಿ ತಯಾರಿಕಾ ಘಟಕದಲ್ಲಿ ಸುರಕ್ಷಿತೆ ಬಹಳ ಅಗತ್ಯವಾದುದು. ಪರಿಶೀಲನೆ ನಡೆಸಿದ ಸಂದರ್ಭದಲ್ಲಿ ಸುರಕ್ಷತೆಗೆ ಆದ್ಯತೆ ಕೊಟ್ಟಿಲ್ಲ ಎಂದು ಗೊತ್ತಾಗಿದೆ. ಹಾಗಾಗಿ, ಇದೇ ಹಿನ್ನೆಲೆಯಲ್ಲಿ ಈಗಾಗಲೇ ಎಫ್‌ಐಆರ್ ದಾಖಲಿಸಿಕೊಂಡಿದ್ದೇವೆ. ತನಿಖೆ ನಡೆಸುತ್ತೇವೆ” ಎಂದು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಿಷ್ಯಂತ್ ಸಿ ಬಿ ತಿಳಿಸಿದ್ದಾರೆ.

solid

rak

 

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X