ಬೆಳ್ತಂಗಡಿ | ಕೆರೆಯಲ್ಲಿ ಬಾಲಕನ ಮೃತದೇಹ ಪತ್ತೆ ಪ್ರಕರಣ: ತನಿಖೆ ಚುರುಕುಗೊಳಿಸಿದ ಪೊಲೀಸರು

Date:

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಓಡಿಲ್ನಾಳ ಗ್ರಾಮದ ಸಂಬೋಳ್ಯ ಸಮೀಪ ದೇವಸ್ಥಾನಕ್ಕೆಂದು ಹೊರಟು ಅಸಹಜವಾಗಿ ಸಾವನ್ನಪ್ಪಿದ ಬಾಲಕನ ಸಾವು ಪ್ರಕರಣದ ತನಿಖೆ ಚುರುಕುಗೊಂಡಿದೆ.

- Advertisement -

ಓಡಿಲ್ನಳ ಗ್ರಾಮದ ಸಂಬೋಳ್ಯ ನಿವಾಸಿ ಸುಮಂತ್ (15)ನ ಮೃತದೇಹದ ಮರಣೋತ್ತರ ಪರೀಕ್ಷೆಯನ್ನು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ಈಗಾಗಲೇ ನಡೆಸಲಾಗಿದ್ದು, ಮರಣೋತ್ತರ ಪರೀಕ್ಷೆಯಲ್ಲಿ ಆತನ ತಲೆಗೆ ಮೂರು ಬಲವಾದ ಪೆಟ್ಟು ಬಿದ್ದಿರುವುದು ಕಂಡು ಬಂದಿರುವುದಾಗಿ ತಿಳಿದು ಬಂದಿದೆ. ಈ ಹಿನ್ನೆಲೆಯಲ್ಲಿ ವೋಲೀಸರು ಪ್ರಕರಣದ ಬಗ್ಗೆ ಸಮಗ್ರವಾದ ತನಿಖೆಯನ್ನು ಆರಂಭಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ...

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...

ಮರಣೋತ್ತರ ಪರೀಕ್ಷೆಯ ಪ್ರಾಥಮಿಕ ವರದಿಯ ಬಗೆಗಿನ ಮಾಹಿತಿಗಳು ಲಭ್ಯವಾಗುತ್ತಿದ್ದು ಬಾಲಕನ ತಲೆಗೆ ಕತ್ತಿ ಅಥವಾ ಇನ್ಯಾವುದೋ ಆಯುಧದಿಂದ ಬಲವಾದ ಮೂರು ಹೊಡೆತಗಳು ಬಿದ್ದಿದೆ. ಅರೆಪ್ರಜ್ಞಾವಸ್ಥೆಯಲ್ಲಿ ಈತ ನೀರಿಗೆ ಬಿದ್ದಿರುವ ಸಾಧ್ಯತೆಯಿದೆ ಎನ್ನಲಾಗಿದ್ದು, ಶ್ವಾಸಕೋಶದಲ್ಲಿ ನೀರು ತುಂಬಿರುವುದಾಗಿಯೂ ಮರಣೋತ್ತರ ಪರೀಕ್ಷೆಯಲ್ಲಿ ಕಂಡು ಬಂದಿರುವುದಾಗಿ ತಿಳಿದು ಬಂದಿದೆ.

belthangady 2

ಎಫ್‌ಎಸ್‌ಎಲ್ ಹಾಗೂ SOCO ಪೊಲೀಸರ ತಂಡದಿಂದ ತನಿಖೆ ಚುರುಕುಗೊಂಡಿದ್ದು, ರಕ್ತದ ಕಲೆಗಳು ಬಿದ್ದ ಜಾಗಗಳಲ್ಲಿ ಕೆಮಿಕಲ್ ಮೂಲಕ ಗುರುತಿಸುವ ‘ಲೂಮಿನಿಯನ್ ಟೆಸ್ಟ್’ ಕೂಡ ನಡೆಸಿದ್ದಾರೆ.

ಇದನ್ನು ಓದಿದ್ದೀರಾ? ಬಂಟ್ವಾಳ | ತಡೆಬೇಲಿಯಲ್ಲಿ ಸಿಲುಕಿಕೊಂಡಿದ್ದ ಚಿರತೆಯ ಮರಿ: ಅರಿವಳಿಕೆ ನೀಡಿ ರಕ್ಷಿಸಿದ ಅರಣ್ಯಾಧಿಕಾರಿಗಳು

ಇದೊಂದು ಕೊಲೆ ಪ್ರಕರಣ ಎಂಬ ಬಗ್ಗೆ ಪೊಲೀಸರ ಪ್ರಾಥಮಿಕ ತನಿಖೆಯಿಂದಲೇ ದೃಢಪಟ್ಟಿದ್ದು ಇದೇ ಹಿನ್ನಲೆಯಲ್ಲಿ ಪೊಲೀಸರು ಸಮಗ್ರವಾದ ತನಿಖೆ ಮುಂದುವರಿದಿದೆ. ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳದಲ್ಲಿಯೇ ಬೀಡುಬಿಟ್ಟಿದ್ದಾರೆ. ತನಿಖೆಗೆ ನಾಲ್ಕು ವಿಶೇಷ ತಂಡಗಳ ರಚನೆ ಮಾಡಿರುವುದಾಗಿ ದಕ್ಷಿಣ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಾಹಿತಿ ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

​ಚಿಂತಾಮಣಿ | ಎನ್‌ಡಿಎ ಅಭ್ಯರ್ಥಿ ಪರ ಜೆಡಿಎಸ್-ಬಿಜೆಪಿ ಕಾರ್ಯಕರ್ತರ ಮತಬೇಟೆ;ವಕೀಲರ ಭೇಟಿ ಮಾಡಿದ ಜೆ.ಕೆ. ಕೃಷ್ಣಾರೆಡ್ಡಿ

ಚಿಂತಾಮಣಿ ನಗರದ ನ್ಯಾಯಾಲಯದಲ್ಲಿ ಪದವೀಧರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯ ಎನ್‌ಡಿಎ...

ರಾಯಚೂರು | ರೈತರ ವಿವಿಧ ಬೇಡಿಕೆಗಳ ಈಡೇರಿಕೆಗೆ ಅ.24ರಿಂದ ಬೃಹತ್ ಪಾದಯಾತ್ರೆ

ರೈತರು, ಕೃಷಿ ಕೂಲಿಕಾರರು ಹಾಗೂ ಗ್ರಾಮೀಣ ಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ...

ಹಾವೇರಿ ವಿವಿಯಲ್ಲಿ ಆಯುಧಪೂಜೆ ಕಡ್ಡಾಯ; ಸಾಹಿತಿಗಳು, ಶಿಕ್ಷಣ ತಜ್ಞರು ಖಂಡನೆ

ಹಾವೇರಿ ವಿಶ್ವವಿದ್ಯಾಲಯದ ಕುಲಸಚಿವರು ಎಲ್ಲ ಅಧ್ಯಯನ ವಿಭಾಗಗಳ ಶಿಕ್ಷಕ/ ಶಿಕ್ಷಕೇತರ ಸಿಬ್ಬಂದಿ...

ಬಲೂನ್ ಮಾರುವ 9 ವರ್ಷದ ಬಾಲಕಿ ಅತ್ಯಾಚಾರ, ಕೊಲೆ ಪ್ರಕರಣ: ಅಪರಾಧಿ ಕಾರ್ತಿಕ್‌ಗೆ ಗಲ್ಲು ಶಿಕ್ಷೆ

ಕಳೆದ ವರ್ಷದ ದಸರಾ ಮಹೋತ್ಸವದ ಸಂದರ್ಭದಲ್ಲಿ ಕುಟುಂಬದೊಂದಿಗೆ ಟೆಂಟ್‌ನಲ್ಲಿ ಮಲಗಿದ್ದ 9...